ICMR Dietary Guidelines Part 12: ನಾನ್‌ಸ್ಟಿಕ್ ಪಾತ್ರೆಯಲ್ಲಿ ಅಡುಗೆ ಮಾಡಬೇಡಿ, ನಿಮ್ಮ ಆರೋಗ್ಯಕ್ಕೆ ನೀವೇ ಹೊಣೆ ಎಚ್ಚರಿಕೆ ನೀಡಿದ ಸರ್ಕಾರ

ಇತ್ತೀಚೆಗಿನ ದಿನಗಳಲ್ಲಿ ಸಣ್ಣ ವಯಸ್ಸಿನಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿದೆ. ನಮ್ಮ ಜೀವನ ಶೈಲಿ ಮತ್ತು ಆಹಾರ ಪದ್ಧತಿಯಿಂದಲೇ ಆರೋಗ್ಯ ಸಮಸ್ಯೆಗಳು ಸದ್ದಿಲ್ಲದೇ ಒಕ್ಕರಿಸಿಕೊಂಡು ಬಿಡುತ್ತಿದೆ. ಹೀಗಾಗಿ ದೈಹಿಕ, ಮಾನಸಿಕ, ಬೌದ್ಧಿಕ ಹಾಗೂ ಸರ್ವತೋಮುಖ ಬೆಳವಣಿಗೆಯು ಸರಿಯಾಗಿರಬೇಕಾದರೆ ಸುರಕ್ಷಿತ ಆಹಾರ ಅತೀ ಅಗತ್ಯ. ಆದರೆ ಕಲುಷಿತ ಹಾಗೂ ಕಲಬೆರಕೆ ಆಹಾರಗಳ ಸೇವನೆಯು ಸಾಂಕ್ರಾಮಿಕ ರೋಗಗಳು ಹಾಗೂ ದೀರ್ಘಕಾಲಿಕ ಕಾಯಿಲೆಗಳನ್ನು ಉಂಟು ಮಾಡುತ್ತದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು (ಐಸಿಎಂಆರ್‌) ಆಹಾರ ಮಾರ್ಗಸೂಚಿಯಲ್ಲಿ ತಿಳಿಸಿದೆ.

ICMR Dietary Guidelines Part 12: ನಾನ್‌ಸ್ಟಿಕ್ ಪಾತ್ರೆಯಲ್ಲಿ ಅಡುಗೆ ಮಾಡಬೇಡಿ, ನಿಮ್ಮ ಆರೋಗ್ಯಕ್ಕೆ ನೀವೇ ಹೊಣೆ ಎಚ್ಚರಿಕೆ ನೀಡಿದ ಸರ್ಕಾರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: May 24, 2024 | 10:38 AM

ಇತ್ತೀಚೆಗಿನ ದಿನಗಳಲ್ಲಿ ಕಲಬೆರಕೆಪೂರಿತ ಆಹಾರಗಳು ಹೆಚ್ಚಾಗಿದೆ. ಈ ಆಹಾರ ಪದಾರ್ಥಗಳ ಸೇವನೆಯು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಆಹಾರ ಖರೀದಿ ಹಾಗೂ ಆಹಾರ ತಯಾರಿಸುವಾಗಲೂ ಎಚ್ಚರಿಕೆ ವಹಿಸಬೇಕು ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಇತ್ತೀಚೆಗೆ ಹೊರಡಿಸಿದ ಆಹಾರ ಮಾರ್ಗಸೂಚಿಗಳಲ್ಲಿ ತಿಳಿಸಿದೆ.

ಸುರಕ್ಷಿತ ಆಹಾರವನ್ನು ಹೇಗೆ ಆರಿಸಿಕೊಳ್ಳಬೇಕು?

ಆರೋಗ್ಯಕರ ಮತ್ತು ಉತ್ತಮ ಗುಣಮಟ್ಟದ ಆಹಾರವನ್ನು ಖಚಿತಪಡಿಸಿಕೊಳ್ಳಲು ಸುರಕ್ಷಿತ ಆಹಾರದ ಆಯ್ಕೆಯು ಮೊದಲ ಹಂತವಾಗಿದೆ. ವಿಶ್ವಾಸಾರ್ಹ ಮೂಲಗಳಿಂದ ಖರೀದಿಸಿದ ಆಹಾರ ಪದಾರ್ಥಗಳು ಉತ್ತಮ ಗುಣಮಟ್ಟದ ಮತ್ತು ತಾಜಾ ಆಹಾರವಾಗಿರುತ್ತದೆ. ಈಗಾಗಲೇ ಪ್ಯಾಕ್ ಮಾಡಿದ ಆಹಾರಗಳು ಉತ್ತಮ ಗುಣಮಟ್ಟ ಮತ್ತು ಶುದ್ಧತೆಯನ್ನು ಖಾತರಿಪಡಿಸುವ ಪ್ರಮಾಣೀಕರಣದ ಗುರುತುಗಳನ್ನು ಹೊಂದಿರುತ್ತವೆ. ಪ್ಯಾಕ್ ಮಾಡಿದ ಆಹಾರಗಳನ್ನು ಖರೀದಿಸುವಾಗ ಈ ಬಗ್ಗೆ ಗಮನಿಸುವುದು ಅಗತ್ಯ ಎಂದು ತಿಳಿಸಿದೆ.

ಮನೆಯಲ್ಲಿ ಆಹಾರ ಸಂಗ್ರಹಣೆಯು ಹೇಗಿರಬೇಕು?

ಆಹಾರ ಧಾನ್ಯಗಳನ್ನು ತೇವಾಂಶದಿಂದ ರಕ್ಷಿಸಲು, ಬ್ಯಾಕ್ಟೀರಿಯಾ ಹಾಗೂ ಸೂಕ್ಷ್ಮಜೀವಿಗಳಿಂದ ಹಾನಿಯಾಗದಂತೆ ತಡೆಯಲು ಗಾಳಿಯಾಡದ ಪಾತ್ರೆಗಳಲ್ಲಿ ಸಮರ್ಪಕವಾಗಿ ಒಣಗಿಸಿ ಶೇಖರಿಸಿಡಬೇಕು. ಆಹಾರ ಸಂಗ್ರಹಣಾ ಪ್ರದೇಶಗಳ ಸ್ವಚ್ಛತೆಯ ಬಗ್ಗೆ ಗಮನ ಹರಿಸುವುದು ಮುಖ್ಯ. ಶೇಖರಣಾ ತೊಟ್ಟಿಗಳಲ್ಲಿ ಒಣಗಿದ ಬೇವಿನ ಎಲೆಗಳನ್ನು ಇಡುವಂತಹ ಕೆಲವು ಸಾಂಪ್ರದಾಯಿಕ ವಿಧಾನಗಳಿಂದ ಅಕ್ಕಿ, ದ್ವಿದಳ ಧಾನ್ಯಗಳನ್ನು ಸಂಗ್ರಹಿಸಿಡಬಹುದಾಗಿದೆಗಿದೆ. ಅದಲ್ಲದೇ ಅಸಮರ್ಪಕ ಸಂಸ್ಕರಣೆ, ನಿರ್ವಹಣೆ ಮತ್ತು ಬೇಯಿಸಿದ ಆಹಾರವನ್ನು ಪದೇ ಪದೇ ಬೇಯಿಸುವುದು ಬ್ಯಾಕ್ಟೀರಿಯಾದ ಬೆಳವಣಿಗೆ ಮತ್ತು ಬ್ಯಾಕ್ಟೀರಿಯಾದ ಟಾಕ್ಸಿನ್ ಉತ್ಪಾದನೆಯನ್ನು ಕಾರಣವಾಗುತ್ತದೆ. ಈ ಆಹಾರಗಳನ್ನು ಸೇವಿಸುವುದರಿಂದ ಆರೋಗ್ಯ ಸಮಸ್ಯೆಗೆ ದಾರಿ ಮಾಡಿಕೊಡುತ್ತದೆ.

ಆಹಾರ ತಯಾರಿಸುವಾಗ ವೈಯಕ್ತಿಕ ನೈರ್ಮಲ್ಯವು ಮುಖ್ಯ

ಭಾರತೀಯರು ಆಹಾರವನ್ನು ತಯಾರಿಸುವಾಗ ಮತ್ತು ಬಡಿಸುವಾಗ ಬರಿ ಕೈಗಳಿಂದ ಸ್ಪರ್ಶಿಸಲಾಗುತ್ತದೆ. ಆಹಾರವನ್ನು ಬಡಿಸುವಾಗ ಸ್ವಚ್ಛವಾದ ಬಟ್ಟಲು ಹಾಗೂ ಚಮಚಗಳು ಬಳಸಬೇಕು. ಆಹಾರವನ್ನು ತಯಾರಿಸುವವರು ಆಹಾರ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ಉತ್ತಮ ವೈಯಕ್ತಿಕ ನೈರ್ಮಲ್ಯದೆಡೆಗೆ ಗಮನಹರಿಸಬೇಕು. ಅಡುಗೆ ಮಾಡುವ ಪಾತ್ರೆಗಳನ್ನು ಹಾಗೂ ಆಹಾರವನ್ನು ಮಾಡುವ, ಬಡಿಸುವ ವ್ಯಕ್ತಿಯು ಕನಿಷ್ಠ 20 ಸೆಕೆಂಡುಗಳ ಕಾಲ ಕೈಗಳನ್ನು ಸಾಬೂನು ಮತ್ತು ನೀರಿನಿಂದ ಚೆನ್ನಾಗಿ ತೊಳೆಯುವುದು ಅತ್ಯಗತ್ಯ ಎಂದು ಐಸಿಎಂಆರ್ ತಿಳಿಸಿದೆ.

ಇದನ್ನೂ ಓದಿ; ಅತಿಯಾಗಿ ಉಪ್ಪು ಸೇವಿಸಿದರೆ ಆರೋಗ್ಯಕ್ಕೆ ಅಪಾಯ ಖಂಡಿತ, ಎಚ್ಚರಿಸಿದ ಐಸಿಎಂಆರ್

ನಾನ್-ಸ್ಟಿಕ್ ಕುಕ್‌ವೇರ್ ಆರೋಗ್ಯಕ್ಕೆ ಅಪಾಯಕಾರಿ

ನಾನ್‌ಸ್ಟಿಕ್ ಕುಕ್‌ವೇರ್ ಬೇಯಿಸಲು ಮತ್ತು ಸ್ವಚ್ಛಗೊಳಿಸಲು ಸುಲಭವಾಗಿದೆ ಹಾಗೂ ಕನಿಷ್ಠ ಎಣ್ಣೆಯ ಅಗತ್ಯವಿರುತ್ತದೆ. ಆದರೆ ಗೀರುಗಳಾಗಿದ್ದಾಗ ಹೆಚ್ಚು ಅಪಾಯಕಾರಿಯಾಗುತ್ತವೆ. 170 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನದಲ್ಲಿ ಈ ಪಾತ್ರೆಗಳಲ್ಲಿ ಬೇಯಿಸಿದಾಗ ಸಣ್ಣ ಗೀರುಗಳು ಅಥವಾ ಚಿಪ್‌ಗಳನ್ನು ಹೊಂದಿರುವ ಟೆಫ್ಲಾನ್ ಕುಕ್‌ವೇರ್ ದೊಡ್ಡ ಮಟ್ಟದ ಅಪಾಯಕಾರಿ ಹೊಗೆ ಮತ್ತು ಸಂಯುಕ್ತಗಳನ್ನು ಆಹಾರಕ್ಕೆ ಹೊರಸೂಸುತ್ತದೆ. ಇದರಿಂದಾಗಿ ಶ್ವಾಸಕೋಶದ ಕಾಯಿಲೆಗಳು ಮತ್ತು ಕ್ಯಾನ್ಸರ್‌ಗೆ ಕಾರಣವಾಗಬಹುದು ಎಂದು ಎಚ್ಚರಿಸಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್