ICMR Dietary Guidelines Part 6: ಈ ಆಹಾರಗಳನ್ನು ದಿನನಿತ್ಯ ಸೇವಿಸಿದರೆ ನೀವೇ ಆರೋಗ್ಯವಂತರು, ಐಸಿಎಂಆರ್ ಆಹಾರ ಮಾರ್ಗಸೂಚಿಯಲ್ಲಿ ಏನಿದೆ?

ದಿನನಿತ್ಯ ಸೇವಿಸುವ ಆಹಾರ ಪದಾರ್ಥಗಳು ಪೌಷ್ಟಿಕಾಂಶಯುಕ್ತವಾಗಿದ್ದಷ್ಟು ಆರೋಗ್ಯವಂತರಾಗಿರಬಹುದು. ಸೊಪ್ಪು, ಹಸಿರು ತರಕಾರಿಗಳು, ಹಣ್ಣು ಹಂಪಲು ಹಾಗೂ ಬೇಳೆಕಾಳುಗಳ ಸೇವನೆಯಿಂದ ಅರೋಗ್ಯಕ್ಕೆ ಏನೆಲ್ಲಾ ಲಾಭದಾಯಕ ಅಂಶಗಳಿವೆ ಹಾಗೂ ಯಾವೆಲ್ಲಾ ಆಹಾರಗಳನ್ನು ಎಷ್ಟು ಪ್ರಮಾಣದಲ್ಲಿ ಸೇವಿಸಬೇಕೆಂದು ಐಸಿಎಂಆರ್ ಭಾರತೀಯರಿಗೆ ಪರಿಷ್ಕೃತ ಆಹಾರ ಮಾರ್ಗಸೂಚಿಯಲ್ಲಿ ತಿಳಿಸಿದೆ.

ICMR Dietary Guidelines Part 6: ಈ ಆಹಾರಗಳನ್ನು ದಿನನಿತ್ಯ ಸೇವಿಸಿದರೆ ನೀವೇ ಆರೋಗ್ಯವಂತರು, ಐಸಿಎಂಆರ್ ಆಹಾರ ಮಾರ್ಗಸೂಚಿಯಲ್ಲಿ ಏನಿದೆ?
ICMR Dietary Guidelines
Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on: May 16, 2024 | 6:11 PM

ನಾವು ಸೇವಿಸುವ ಆಹಾರಗಳಲ್ಲಿ ಸೊಪ್ಪು ಹಸಿರು ತರಕಾರಿಗಳು ಹಾಗೂ ಹಣ್ಣು ಹಂಪಲು ಹಾಗೂ ಬೇಳೆಕಾಳನ್ನು ತಿನ್ನಬೇಕೆಂದು ಹಿರಿಯರು ಹೇಳಿರುವುದನ್ನು ಕೇಳಿರಬಹುದು. ಆದರೆ ಇದೀಗ ಐಸಿಎಂಆರ್ ಮಾರ್ಗಸೂಚಿಯಲ್ಲಿ ನಿತ್ಯವು ಸೇವಿಸುವ ಪ್ರತಿಯೊಂದು ತರಕಾರಿಗಳಿಗೆ ಪರಿಧಮನಿಯ ಹೃದಯ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ತಿಳಿಸಿದೆ.

ತರಕಾರಿಗಳು ಮತ್ತು ದ್ವಿದಳ ಧಾನ್ಯಗಳನ್ನು ಹೆಚ್ಚು ಏಕೆ ಸೇವಿಸಬೇಕು?

ತರಕಾರಿಗಳು ಅಹಾಗೂ ದ್ವಿದಳ ಧಾನ್ಯಗಳಲ್ಲಿ ಅಗತ್ಯವಾದ ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ. ಮಿನರಲ್ಸ್-ಕಬ್ಬಿಣ, ಪೋಟ್ಯಾಷಿಯಂ, ಮೆಗ್ನೆಷಿಯಂ, ಸತು, ವಿಟಮಿನ್ಸ್, ಫೋಲೆಟ್, ಥೈಯಾಮಿನ್ ಮತ್ತು ನಿಯಾಸಿನ್‌ಗಳನ್ನು ಒಳಗೊಂಡಿದೆ. ದ್ವಿದಳ ಧಾನ್ಯಗಳು ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಅದಲ್ಲದೇ, ತರಕಾರಿಗಳು, ಧಾನ್ಯಗಳು, ಬೀನ್ಸ್ ಕಾಳುಗಳು, ಬೀಜಗಳ ಸೇವನೆಯಿಂದ ಹೃದ್ರೋಗ, ಅಧಿಕ ರಕ್ತದೊತ್ತಡ, ಪಾರ್ಶ್ವವಾಯು ಮತ್ತು ಟೈಪ್ 2 ಡಯಾಬಿಟಿಸ್ ಅಪಾಯಗಳ ಮಟ್ಟವು ಕಡಿಮೆಯಾಗುತ್ತದೆ.

ಪ್ರತಿನಿತ್ಯ ಎಷ್ಟು ಪ್ರಮಾಣದಲ್ಲಿ ಹಣ್ಣುಗಳು ಮತ್ತು ತರಕಾರಿಗಳನ್ನು ತಿನ್ನಬೇಕು?

ಪೌಷ್ಟಿಕಾಂಶಯುಕ್ತ ಆಹಾರಗಳನ್ನು ಗಮನದಲ್ಲಿಟ್ಟುಕೊಂಡು ಪ್ರತಿಯೊಬ್ಬ ವ್ಯಕ್ತಿಯು ದಿನಕ್ಕೆ 400 ಗ್ರಾಂನಷ್ಟು ತರಕಾರಿಗಳು, 100 ಗ್ರಾಂನಷ್ಟು ತಾಜಾ ಹಣ್ಣುಗಳು, 100 ಗ್ರಾಂ ಹಸಿರು ಸೊಪ್ಪು ತರಕಾರಿಗಳು, ಗೆಡ್ಡೆಗಳನ್ನು ಸೇವಿಸಬೇಕು. ಗರ್ಭಾವಸ್ಥೆಯಲ್ಲಿ, ಕಬ್ಬಿಣ ಮತ್ತು ಫೋಲಿಕ್ ಆಮ್ಲದ ಅವಶ್ಯಕತೆಗಳು ಹೆಚ್ಚಿರುವ ಕಾರಣ ಹಣ್ಣು ಹಂಪಲು ಹಾಗೂ ತರಕಾರಿಗಳನ್ನು ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳಿ ಎಂದು ಶಿಫಾರಸು ಮಾಡಲಾಗಿದೆ.

ಇದನ್ನೂ ಓದಿ: ಈ ರೀತಿಯ ಆಹಾರ ಪದ್ಧತಿ ಬಂಜೆತನಕ್ಕೆ ಕಾರಣವಾಗಬಹುದು; ಸಂಶೋಧನೆ

ಯಾವ ತರಕಾರಿಗಳು ಮತ್ತು ಹಣ್ಣುಗಳಿಗೆ ಆದ್ಯತೆ ನೀಡುವುದು ಉತ್ತಮ?

ತಾಜಾ, ಸ್ಥಳೀಯವಾಗಿ ಲಭ್ಯವಿರುವ ಹಣ್ಣುಗಳು ಹಾಗೂ ತರಕಾರಿಗಳತ್ತ ಗಮನ ಕೊಡುವುದು ಒಳ್ಳೆಯದು. ಅದರಲ್ಲಿ ಋತುಮಾನದ ತರಕಾರಿಗಳು ಮತ್ತು ಹಣ್ಣುಗಳು ದೇಹಕ್ಕೆ ಅಗತ್ಯವಿರುವ ಎಲ್ಲಾ ಪೋಷಕಾಂಶಗಳನ್ನು ಒದಗಿಸುತ್ತದೆ. ಟೊಮೆಟೊ, ಹಸಿರು ಸೊಪ್ಪು ತರಕಾರಿಗಳು, ಮೂಲಂಗಿ, ಬೀಟ್ರೂಟ್, ಆಲೂಗಡ್ಡೆ, ಗೆಣಸು, ನೇರಳೆ, ಕಿತ್ತಳೆ ಹಣ್ಣುಗಳನ್ನು ಹೆಚ್ಚು ಸೇವಿಸಿದರೆ ಆರೋಗ್ಯಕ್ಕೆ ಹಿತಕರ ಎಂದು ಮಾರ್ಗ ಸೂಚಿಯಲ್ಲಿ ತಿಳಿಸಲಾಗಿದೆ.

ಅಡುಗೆಯ ನಷ್ಟವನ್ನು ತಡೆಯುವುದು ಹೇಗೆ?

ಒಂದು ವೇಳೆ ಕತ್ತರಿಸಿದ ನಂತರ ತರಕಾರಿಗಳನ್ನು ತೊಳೆದರೆ, ದೇಹಕ್ಕೆ ಅಗತ್ಯವಾಗಿ ಬೇಕಾಗುವ ಪೋಷಕಾಂಶಗಳು ಸಿಗುವುದಿಲ್ಲ. ಹೀಗಾಗಿ ಕತ್ತರಿಸುವ ಅಥವಾ ಸಿಪ್ಪೆಸುಲಿಯುವ ಮೊದಲು ತರಕಾರಿಗಳನ್ನು ತೊಳೆದುಕೊಳ್ಳುವುದರಿಂದ ಇದು ಪೋಷಕಾಂಶಗಳ ನಷ್ಟವನ್ನು ತಡೆಯುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ