ICMR Study : ಸ್ತನ ಕ್ಯಾನ್ಸರ್​​​ನಲ್ಲಿ ಕರ್ನಾಟಕ ನಂಬರ್​​ ಒನ್, 2025 ವೇಳೆಗೆ ಇದರ ಪ್ರಮಾಣ ಹೆಚ್ಚಳ

ಕರ್ನಾಟಕ, ತೆಲಂಗಾಣ, ತಮಿಳುನಾಡು ಮತ್ತು ದೆಹಲಿಯಲ್ಲಿ ಸ್ತನ ಕ್ಯಾನ್ಸರ್ ಪ್ರಮಾಣವು ಈಶಾನ್ಯ ಹಾಗೂ ಪೂರ್ವ ಭಾಗದ ರಾಜ್ಯಗಳಲ್ಲಿನ ಪ್ರಮಾಣಕ್ಕಿಂತ ಹೆಚ್ಚಳವಾಗಿದೆ ಎಂದು ಐಸಿಎಂಆರ್ ನಡೆಸಿರುವ ಅಧ್ಯಯನವೊಂದು ಬಹಿರಂಗವಾಗಿದೆ.

ICMR Study : ಸ್ತನ ಕ್ಯಾನ್ಸರ್​​​ನಲ್ಲಿ ಕರ್ನಾಟಕ ನಂಬರ್​​ ಒನ್, 2025 ವೇಳೆಗೆ ಇದರ ಪ್ರಮಾಣ ಹೆಚ್ಚಳ
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Mar 25, 2024 | 12:20 PM

ಇತ್ತೀಚೆಗಿನ ದಿನಗಳಲ್ಲಿ ಸ್ತನ ಕ್ಯಾನ್ಸರ್ ಎನ್ನುವುದು ಮಹಿಳೆಯರನ್ನು ಕಾಡುತ್ತಿರುವ ಮಹಾಮಾರಿ ಕಾಯಿಲೆಗಳಲ್ಲಿ ಒಂದಾಗಿದೆ. ಇದೀಗ, ಕರ್ನಾಟಕ, ತೆಲಂಗಾಣ, ತಮಿಳುನಾಡು ಮತ್ತು ದೆಹಲಿಯಲ್ಲಿ ಸ್ತನ ಕ್ಯಾನ್ಸರ್ ಪ್ರಮಾಣವು ಹೆಚ್ಚಳವಾಗಿದೆ ಎಂದು ವರದಿಯಲ್ಲಿ ಬಹಿರಂಗ ಪಡಿಸಿದೆ. ಸ್ತನ ಕ್ಯಾನ್ಸರ್ ಕಾಯಿಲೆಯ ಪ್ರಮಾಣವು ದೇಶದಲ್ಲಿ 2025ರ ಸುಮಾರಿಗೆ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಲಿದೆ ಎಂದು ತಿಳಿಸಿದೆ. ಭಾರತದಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಪ್ರಮಾಣವು ಸಮಗ್ರ ಜಾಗೃತಿ ಅಭಿಯಾನಗಳು ಹಾಗೂ ಸ್ಕ್ರೀನಿಂಗ್ ಕಾರ್ಯಕ್ರಮಗಳ ಅಗತ್ಯಗಳನ್ನು ಒತ್ತಿ ಹೇಳುತ್ತಿದೆ.

ಜನಸಂಖ್ಯೆ ಆಧಾರಿತ 28 ಕ್ಯಾನ್ಸರ್ ಮಾಹಿತಿ ಕೇಂದ್ರಗಳಿಂದ ಪಡೆದ ದತ್ತಾಂಶವನ್ನು ಬಳಸಿಕೊಂಡು ಅಧ್ಯಯನವನ್ನು ನಡೆಸಲಾಗಿದೆ. ಈ ಅಧ್ಯಯನಕ್ಕೆ 2012ರಿಂದ 2016ರ ನಡುವಿನ ಅವಧಿಯಲ್ಲಿ ರಾಜ್ಯಗಳ ಮಟ್ಟದಲ್ಲಿ ವರದಿಯಾದ ಸ್ತನ ಕ್ಯಾನ್ಸರ್ ಪ್ರಕರಣಗಳನ್ನು ತೆಗೆದುಕೊಳ್ಳಲಾಗಿದೆ. ವ್ಯಕ್ತಿಯು ಕಳೆದುಕೊಂಡ ಜೀವಿತಾವಧಿ (ವೈಎಲ್‌ಎಲ್‌), ವೈಕಲ್ಯಕ್ಕೆ ತುತ್ತಾಗಿ ಕಳೆದ ಜೀವಿತಾವಧಿ (ವೈಎಲ್‌ಡಿ) ಮತ್ತು ಅಂಗವೈಕಲ್ಯ ಹಾಗೂ ಸಾವಿನಿಂದಾಗಿ ಕಳೆದುಕೊಂಡ ಆಯಸ್ಸನ್ನು (ಡಿಎಎಲ್‌ವೈ) ಆಧರಿಸಿ, 2025ರ ವೇಳೆಗೆ ಎದುರಾಗುವ ಕಾಯಿಲೆಯ ಪ್ರಮಾಣವು ಹೆಚ್ಚಾಗಲಿದೆ ಎಂದು ಅಂದಾಜು ಮಾಡಲಾಗಿದೆ. ಅದಲ್ಲದೇ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಅಪಾಯದ ಪ್ರಮಾಣವು ಹೆಚ್ಚಳವಾಗಲಿದೆ ಎಂದು ತಿಳಿಸಿದೆ.

2016ರಲ್ಲಿ ಭಾರತೀಯ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್‌ನ ಪ್ರಮಾಣವು ಪ್ರತಿ ಒಂದು ಲಕ್ಷ ಮಂದಿಗೆ 515.6 ಡಿಎಎಲ್‌ವೈ ಎನ್ನಲಾಗಿದೆ. ತಮಿಳುನಾಡು, ತೆಲಂಗಾಣ, ಕರ್ನಾಟಕ ಮತ್ತು ದೆಹಲಿಯಲ್ಲಿ ಕ್ಯಾನ್ಸರ್ ಪ್ರಮಾಣವು ಈಶಾನ್ಯ ಭಾಗದ ಮತ್ತು ಪೂರ್ವ ಭಾಗದ ರಾಜ್ಯಗಳಿಗಿಂತ ಹೆಚ್ಚಾಗಿದೆ. 2025ರ ವೇಳೆಗೆ ಕ್ಯಾನ್ಸರ್ ಹೊರೆಯು 56 ಲಕ್ಷ ಡಿಎಎಲ್‌ವೈಗೆ ಹೆಚ್ಚಳವಾಗಲಿದೆ ಎಂದು ಐಸಿಎಂಆರ್ ಅಧ್ಯಯನದ ಬಳಿಕ ಆಘಾತಕಾರಿ ಮಾಹಿತಿಯು ಹೊರಬಿದ್ದಿದೆ.

ಇದನ್ನೂ ಓದಿ: ವೈದ್ಯರ ಸಲಹೆಯಿಲ್ಲದೆ ಬಿಪಿ ಟ್ಯಾಬ್ಲೆಟ್ ಸೇವಿಸುವುದು ಚರ್ಮದ ಕ್ಯಾನ್ಸರ್​​ಗೆ ಕಾರಣವಾಗಬಹುದು: ಸಂಶೋಧನೆ

ಈಗಾಗಲೇ ಈ ಪಟ್ಟಿಯಲ್ಲಿ ಹೈದರಾಬಾದ್, ಚೆನ್ನೈ, ಬೆಂಗಳೂರು ಮತ್ತು ದೆಹಲಿವು ಅಗ್ರಸ್ಥಾನದಲ್ಲಿವೆ. ಗ್ರಾಮೀಣ ಮಹಿಳೆಯರು ತಮ್ಮ ನಗರ ಮಹಿಳೆಯರಿಗಿಂತ ಸ್ತನ ಕ್ಯಾನ್ಸರ್ ಗೆ ತುತ್ತಾಗುವ ಸಾಧ್ಯತೆ ತೀರಾ ಕಡಿಮೆಯಿದೆ. ಆದರೆ ನಗರ ಮತ್ತು ಮೆಟ್ರೋ ಪ್ರದೇಶಗಳಲ್ಲಿ ವಾಸಿಸುತ್ತಿರುವ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಬರುವ ಪ್ರಮಾಣವು ಹೆಚ್ಚಾಗಿದೆ ಎನ್ನಲಾಗಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:19 pm, Mon, 25 March 24

ತಾಜಾ ಸುದ್ದಿ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ