Sign In

By signing in or creating an account, you agree with Associated Broadcasting Company's Terms & Conditions and Privacy Policy.

Hair Care Tips: ನಿಮಗೆ ಉದ್ದ ಕೂದಲು ಇಷ್ಟನಾ? ಆಲಿವ್ ಎಣ್ಣೆಯನ್ನು ಹೀಗೆ ಬಳಸಿ

ಆರೋಗ್ಯಕರ ಎಣ್ಣೆಗಳಲ್ಲಿ ಆಲಿವ್ ಎಣ್ಣೆಯೂ ಒಂದು. ಇದನ್ನು ಅಡುಗೆಗೆ ಬಳಸಲಾಗುತ್ತದೆ. ಜೊತೆಗೆ ದಟ್ಟ ಕೂದಲಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಕೂದಲು ಉದುರುವುದು, ಹೆಚ್ಚು ಒಣಗುವುದು, ಸ್ಪ್ಲಿಟ್ಸ್ ಹೇರ್ ಸೇರಿದಂತೆ ಹಲವು ಸಮಸ್ಯೆಗಳಿಗೆ ಇದು ಪರಿಹಾರವಾಗಿದೆ.

Hair Care Tips: ನಿಮಗೆ ಉದ್ದ ಕೂದಲು ಇಷ್ಟನಾ? ಆಲಿವ್ ಎಣ್ಣೆಯನ್ನು ಹೀಗೆ ಬಳಸಿ
ಆಲಿವ್ ಎಣ್ಣೆ
Follow us
TV9 Web
| Updated By: preethi shettigar

Updated on: Jul 09, 2021 | 7:57 AM

ತಲೆ ಕೂದಲು ಹೆಣ್ಣಿನ ಸೌಂದರ್ಯವನ್ನು ಹೆಚ್ಚಿಸುವುದರಲ್ಲಿ ಅನುಮಾನವಿಲ್ಲ. ಹೀಗಾಗಿ ಉದ್ದ ಕೂದಲಿಗೆ ಹೆಣ್ಣು ಮಕ್ಕಳು ಹರಸಾಹಸ ಪಡುತ್ತಾರೆ. ಉದ್ದ ಕೂದಲನ್ನು ನೋಡಿದಾಗ ನನಗೂ ಆ ರೀತಿ ಕೂದಲು ಬೇಕು ಅಂತ ನಾನಾ ಎಣ್ಣೆ, ಶಾಂಪೂಗಳನ್ನ ಬಳಸುತ್ತಾರೆ. ಕೂದಲಿಗೆ ಆರೈಕೆ ಚೆನ್ನಾಗಿ ಆದಾಗ ಉದ್ದ ಮತ್ತು ದಟ್ಟವಾಗಿ ಬೆಳೆಯುತ್ತದೆ. ಕೆಲವರಿಗೆ ಕೂದಲು ಉದ್ದವಾಗಿರುತ್ತದೆ. ಆದರೆ ದಪ್ಪವಾಗಿರಲ್ಲ. ಇನ್ನು ಕೆಲವರಿಗೆ ಕೂದಲು ದಪ್ಪವಾಗಿದ್ದರೂ, ಬೆಳವಣಿಗೆ ಹೆಚ್ಚು ಕುಂಠಿತವಾಗಿರುತ್ತದೆ. ಈ ಎಲ್ಲ ಸಮಸ್ಯೆಗಳು ಮಹಿಳೆಯರ ಸೌಂದರ್ಯಕ್ಕೆ ಅಡ್ಡಿಯಾಗುತ್ತದೆ. ಹೀಗಾಗಿ ಕೂದಲಿನ ಆರೈಕೆ ಅನಿವಾರ್ಯವಾಗಿದೆ.

ಆರೋಗ್ಯಕರ ಎಣ್ಣೆಗಳಲ್ಲಿ ಆಲಿವ್ ಎಣ್ಣೆಯೂ ಒಂದು. ಇದನ್ನು ಅಡುಗೆಗೆ ಬಳಸಲಾಗುತ್ತದೆ. ಜೊತೆಗೆ ದಟ್ಟ ಕೂದಲಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಕೂದಲು ಉದುರುವುದು, ಹೆಚ್ಚು ಒಣಗುವುದು, ಸ್ಪ್ಲಿಟ್ಸ್ ಹೇರ್ ಸೇರಿದಂತೆ ಹಲವು ಸಮಸ್ಯೆಗಳಿಗೆ ಇದು ಪರಿಹಾರವಾಗಿದೆ. ಈ ಎಣ್ಣೆ ಎಲ್ಲರಿಗೂ ಸರಿಹೊಂದುತ್ತದೆ. ಹೀಗಾಗಿ ಯಾವುದೇ ಭಯವಿಲ್ಲದೆ ಇದನ್ನು ಎಲ್ಲರು ಬಳಸಬಹುದು.

ಬೆಳ್ಳುಳ್ಳಿ ಮತ್ತು ಆಲಿವ್ ಎಣ್ಣೆ ಬೆಳ್ಳುಳ್ಳಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಶಿಲೀಂಧ್ರ ವಿರೋಧಿ ಗುಣಗಳನ್ನು ಹೊಂದಿದೆ. ಹೀಗಾಗಿ ಬೆಳ್ಳುಳ್ಳಿ ಮತ್ತು ಆಲಿವ್ ಎಣ್ಣೆಯನ್ನು ಬೆರೆಸಿ ಬಳಸಬಹುದು. ಆಲಿವ್ ಎಣ್ಣೆಯೊಂದಿಗೆ ಬೆಳ್ಳುಳ್ಳಿ ಸೇರಿಸಿ ಪೇಸ್ಟ್​ನ ತಯಾರಿಸಬೇಕು. ರೆಡಿಯಿರುವ ಮಿಶ್ರಣವನ್ನು ತಲೆಯ ನೆತ್ತಿ ಮತ್ತು ಕೂದಲಿಗೆ ಚೆನ್ನಾಗಿ ಹಚ್ಚಬೇಕು. ಈ ಪೇಸ್ಟ್ ಸುಮಾರು 30 ನಿಮಿಷ ತಲೆಯಲ್ಲಿ ಇರಬೇಕು. 30 ನಿಮಿಷಗಳ ಬಳಿಕ ನೀವು ಬಳಸುವ ಶಾಂಪೂವಿನಿಂದ ಕೂದಲನ್ನು ಚೆನ್ನಾಗಿ ತೊಳೆಯಿರಿ. ಇದನ್ನು ವಾರಕ್ಕೆ ಎರಡು ಬಾರಿ ಮಾಡಬೇಕು. ಹೀಗೆ ಮಾಡಿದರೆ ಕೂದಲು ಉದುರುವುದು ಕಡಿಮೆಯಾಗುತ್ತದೆ. ಅಲ್ಲದೇ ಕೂದಲು ರೇಷ್ಮೆಯಂತಾಗುತ್ತದೆ.

ಮೊಟ್ಟೆ ಮತ್ತು ಆಲಿವ್ ಎಣ್ಣೆ  ಮೊಟ್ಟೆ ಕೂದಲಿನ ಆರೋಗ್ಯವನ್ನು ಕಾಪಾಡುತ್ತದೆ. ಮೊಟ್ಟೆಯನ್ನು ಆಲಿವ್ ಎಣ್ಣೆಯೊಂದಿಗೆ ಬೆರೆಸಿದಾಗ ಇದು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ. ಮೊಟ್ಟೆಯ ಹಳದಿ ಭಾಗ ಮತ್ತು ಆಲಿವ್ ಎಣ್ಣೆಯನ್ನು ಚೆನ್ನಾಗಿ ಮಿಶ್ರಣ ಮಾಡಬೇಕು. ಸಿದ್ಧವಾಗಿರುವ ಮಿಶ್ರಣವನ್ನು ತಲೆಗೆ ಚೆನ್ನಾಗಿ ಹಚ್ಚಿ, ಮಸಾಜ್ ಮಾಡಿ. ಒಂದು ಗಂಟೆ ನಂತರ ತಲೆ ಸ್ನಾನ ಮಾಡಿ. ಇದು ಕೂದಲಿಗೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಕೂದಲು ಮೃದುವಾಗುತ್ತದೆ.

ಇದನ್ನೂ ಓದಿ

Viral Video: ಮಿಡತೆಯನ್ನು ಹೆದರಿಸಲು ಪ್ರಯತ್ನಿಸಿದ ಹುಡುಗ! ಮುಂದೆ ಏನಾಗುತ್ತದೆ ಎಂಬುದನ್ನು ನೀವೇ ನೋಡಿ

Health Tips: ಸೈನಸ್ ಸಮಸ್ಯೆಯಿಂದ ಪರಿಹಾರ ಪಡೆಯಲು ಈ ಯೋಗ ಭಂಗಿಗಳು ಮುಖ್ಯ

(If olive oil is used, the hair will be long)

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ