Health tips: ಕಲಬೆರಕೆ ವಸ್ತುಗಳನ್ನು ಮಾರಾಟ ಮಾಡುವ ವ್ಯಕ್ತಿಗೆ ಶಿಕ್ಷೆ ಏನು? ನಿಯಮ ಹೇಳುವುದೇನು?

ಆಹಾರದಲ್ಲಿ ಕಲಬೆರಕೆ ಮಾಡುವುದು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದನ್ನು ಅರಿಯದ ಜನರು ಅದನ್ನು ಪ್ರತಿನಿತ್ಯ ಒಂದಲ್ಲಾ ಒಂದು ರೀತಿಯಲ್ಲಿ ಸೇವನೆ ಮಾಡುತ್ತಾರೆ. ಇದರಿಂದ ಆರೋಗ್ಯ ಹದಗೆಡುವುದಲ್ಲದೆ ನಾನಾ ರೀತಿಯ ಕಾಯಿಲೆಗಳಿಗೆ ಆಹ್ವಾನ ನೀಡಿದಂತಾಗುತ್ತದೆ. ಕಾನೂನಿನ ಅಡಿಯಲ್ಲಿ ಆಹಾರ ಪದಾರ್ಥಗಳ ಕಲಬೆರಕೆಯನ್ನು ನಿಷೇಧಿಸಲಾಗಿದೆ ಮತ್ತು ಕಲಬೆರಕೆ ಸರಕುಗಳನ್ನು ಮಾರಾಟ ಮಾಡುವ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ಹಾಗಾದರೆ ಕಲಬೆರಕೆ ಮಾಡುವ ವ್ಯಕ್ತಿ ಸಿಕ್ಕಿಬಿದ್ದರೆ ಶಿಕ್ಷೆ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ.

Health tips: ಕಲಬೆರಕೆ ವಸ್ತುಗಳನ್ನು ಮಾರಾಟ ಮಾಡುವ ವ್ಯಕ್ತಿಗೆ ಶಿಕ್ಷೆ ಏನು? ನಿಯಮ ಹೇಳುವುದೇನು?
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 22, 2024 | 3:20 PM

ಇತ್ತೀಚಿನ ದಿನಗಳಲ್ಲಿ ಎಲ್ಲಾ ರೀತಿಯ ಆಹಾರಗಳಲ್ಲಿಯೂ ಕಲಬೆರಕೆ ಮಾಡಲಾಗುತ್ತಿದೆ. ಅದರಲ್ಲಿಯೂ ಆಹಾರ ಪದಾರ್ಥಗಳ ವಿಷಯಕ್ಕೆ ಬಂದಾಗ, ಕಲಬೆರಕೆ ಅತ್ಯಂತ ಸಾಮಾನ್ಯವಾಗಿದೆ ಅದಲ್ಲದೆ ಅಂತಹ ಘಟನೆಗಳು ಮುನ್ನೆಲೆಗೆ ಬರುತ್ತಲೇ ಇರುತ್ತವೆ. ಕಲಬೆರಕೆ ಮತ್ತು ಆಹಾರ ಸುರಕ್ಷತೆಗೆ ಸಂಬಂಧಿಸಿದ ವಿಷಯಗಳಿಗಾಗಿ ಭಾರತದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಇದಲ್ಲದೆ, ಅದರ ಅಡಿಯಲ್ಲಿ ಮಾಡಲಾದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್ಎಸ್ಎಸ್ಎಐ) ನಿಯಮಗಳನ್ನು ಸಹ ಅನುಸರಿಸಲಾಗುತ್ತದೆ.

ಇಷ್ಟೆಲ್ಲಾ ಕಠಿಣ ಕ್ರಮಗಳಿದ್ದಾಗಲೂ ಜನರು ಆಹಾರದಲ್ಲಿ ಕಲಬೆರಕೆ ಮಾಡುತ್ತಿದ್ದಾರೆ. ಇದನ್ನು ಅರಿಯದ ಜನರು ಅದನ್ನು ಪ್ರತಿನಿತ್ಯ ಒಂದಲ್ಲಾ ಒಂದು ರೀತಿಯಲ್ಲಿ ಸೇವನೆ ಮಾಡುತ್ತಾರೆ. ಇದರಿಂದ ಆರೋಗ್ಯ ಹದಗೆಡುವುದಲ್ಲದೆ ನಾನಾ ರೀತಿಯ ಕಾಯಿಲೆಗಳಿಗೆ ಆಹ್ವಾನ ನೀಡಿದಂತಾಗುತ್ತದೆ. ಕಾನೂನಿನ ಅಡಿಯಲ್ಲಿ ಆಹಾರ ಪದಾರ್ಥಗಳ ಕಲಬೆರಕೆಯನ್ನು ನಿಷೇಧಿಸಲಾಗಿದೆ ಮತ್ತು ಕಲಬೆರಕೆ ಸರಕುಗಳನ್ನು ಮಾರಾಟ ಮಾಡುವ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ಹಾಗಾದರೆ ಕಲಬೆರಕೆ ಮಾಡುವ ವ್ಯಕ್ತಿ ಸಿಕ್ಕಿಬಿದ್ದರೆ ಶಿಕ್ಷೆ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಕಲಬೆರಕೆ ಮಾಡುವ ವ್ಯಕ್ತಿ ಸಿಕ್ಕಿಬಿದ್ದರೆ ಶಿಕ್ಷೆ ಏನು?

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, 2006 ರ ಪ್ರಕಾರ, ಒಬ್ಬ ವ್ಯಕ್ತಿಯು ಕಲಬೆರಕೆ ಆಹಾರ ಪದಾರ್ಥಗಳನ್ನು ಉತ್ಪಾದಿಸುವುದು, ಮಾರಾಟ ಮಾಡುವುದು ಅಥವಾ ವಿತರಿಸುವುದು ಕಂಡುಬಂದರೆ, ಅದನ್ನು ಗಂಭೀರ ಅಪರಾಧವೆಂದು ಪರಿಗಣಿಸಲಾಗುತ್ತದೆ. ತಪ್ಪಿತಸ್ಥರೆಂದು ಕಂಡುಬಂದರೆ ದಂಡ ಮತ್ತು ಶಿಕ್ಷೆ ಎರಡನ್ನೂ ವಿಧಿಸಲು ಅವಕಾಶವಿದೆ. ಕಲಬೆರಕೆ ಆಹಾರ ಪದಾರ್ಥಗಳನ್ನು ತಯಾರಿಸಿ ಮಾರಾಟ ಮಾಡಿದರೆ 1 ಲಕ್ಷ ರೂ.ವರೆಗೆ ದಂಡ ವಿಧಿಸಬಹುದು. ಅಪರಾಧದ ಗಂಭೀರತೆಯನ್ನು ಪರಿಗಣಿಸಿ, ಅಂತಹ ಪ್ರಕರಣಗಳಿಗೆ 6 ತಿಂಗಳಿನಿಂದ 7 ವರ್ಷಗಳ ವರೆಗೆ ಶಿಕ್ಷೆ ವಿಧಿಸಬಹುದು. ಕಲಬೆರಕೆ ಆಹಾರ ಪದಾರ್ಥಗಳನ್ನು ಸೇವಿಸಿ ವ್ಯಕ್ತಿಯು ಸಾವನ್ನಪ್ಪಿದರೆ, ಕಲಬೆರಕೆ ಮಾಡುವವರಿಗೆ ಜೀವಾವಧಿ ಶಿಕ್ಷೆ ಅಥವಾ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು.

ಇದನ್ನೂ ಓದಿ; ಆರೋಗ್ಯ ಕಾಪಾಡಿಕೊಳ್ಳಲು 6-6-6 ವಾಕಿಂಗ್ ದಿನಚರಿ

ಕಲಬೆರಕೆ ಆಹಾರಗಳಿಂದ ದೂರವಿರುವುದು ಹೇಗೆ?

ಆರೋಗ್ಯ ಕಾಪಾಡಿಕೊಳ್ಳಲು ವ್ಯಾಯಾಮ ಮತ್ತು ಉತ್ತಮ ಜೀವನ ಶೈಲಿ ರೂಢಿಸಿಕೊಳ್ಳುವುದರ ಜೊತೆಗೆ ಆಹಾರದ ಆಯ್ಕೆಯು ಸಹ ತುಂಬಾ ಮುಖ್ಯವಾಗುತ್ತದೆ. ಸಾಧ್ಯವಾದಷ್ಟು ಕಲಬೆರಕೆ ಆಗದಂತಹ ಪದಾರ್ಥಗಳನ್ನು ಸೇವನೆ ಮಾಡಿ. ನಿಮಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದಿದ್ದಾಗ ನೈಸರ್ಗಿಕ ಪದಾರ್ಥಗಳ ಮೊರೆ ಹೋಗಿ. ಇದನ್ನು ಬಳಕೆ ಮಾಡುವುದರಿಂದ ಆರೋಗ್ಯವೂ ಚೆನ್ನಾಗಿರುತ್ತದೆ. ಅದಲ್ಲದೆ ನೀವು ಮನೆಯಲ್ಲಿಯೇ ನಿಮಗೆ ಅಗತ್ಯವಿರುವ ಹಣ್ಣು, ತರಕಾರಿ, ಧಾನ್ಯಗಳನ್ನು ಬೆಳೆಯಬಹುದು. ಹಿಟ್ಟುಗಳನ್ನು ಗಿರಣಿಗಳಿಂದ ತರಬಹುದು. ಈ ರೀತಿ ಸಣ್ಣ ಪುಟ್ಟ ಬದಲಾವಣೆಗಳನ್ನು ಮಾಡಿಕೊಳ್ಳುವುದರಿಂದ ಕಲಬೆರಕೆ ಆಹಾರಗಳಿಂದ ಸಾಧ್ಯವಾದಷ್ಟು ದೂರವಿರಬಹುದು. ಅಲ್ಲದೆ ಹೊರಗಡೆ ಸಿಗುವ ಆಹಾರ ಮತ್ತು ರೆಡಿಮೇಡ್ ತಿನಿಸುಗಳಿಂದ ದೂರವಿರುವುದು ಉತ್ತಮ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು