AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲ್ಕೋಹಾಲ್​​ ಜತೆ ಸೋಡಾ, ತಂಪು ಪಾನೀಯ ಬೆರೆಸಿ ಕುಡಿಯುತ್ತೀರಾ? ಈ ಅಪಾಯ ತಪ್ಪಿದ್ದಲ್ಲ

ಅನೇಕರು ಆಲ್ಕೋಹಾಲ್ ಜೊತೆಗೆ ನೀರು, ತಂಪು ಪಾನೀಯಗಳು ಅಥವಾ ಸೋಡಾ ಬೆರೆಸಿಕೊಂಡು ಕುಡಿಯುತ್ತಾರೆ. ಈ ರೀತಿ ಮಾಡುವುದು ಆರೋಗ್ಯಕ್ಕೆ ತುಂಬಾ ಅಪಾಯಕಾರಿ. ಇದರಿಂದಾಗಿ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಈ ರೀತಿ ಮಾಡುವುದರಿಂದ ಯಾವ ರೀತಿಯ ಸಮಸ್ಯೆಗಳು ಉಂಟಾಗುತ್ತವೆ? ಇಲ್ಲಿದೆ ಸಂಪೂರ್ಣ ಮಾಹಿತಿ.

ಆಲ್ಕೋಹಾಲ್​​ ಜತೆ ಸೋಡಾ, ತಂಪು ಪಾನೀಯ ಬೆರೆಸಿ ಕುಡಿಯುತ್ತೀರಾ? ಈ ಅಪಾಯ ತಪ್ಪಿದ್ದಲ್ಲ
ಮದ್ಯಪಾನ ಆರೋಗ್ಯಕ್ಕೆ ಹಾನಿಕರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Aug 16, 2024 | 4:36 PM

Share

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಇತ್ತೀಚಿನ ದಿನಗಳಲ್ಲಿ ಮದ್ಯ ವ್ಯಸನಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದರ ಸೇವನೆ ಆರೋಗ್ಯಕ್ಕೆ ಅಪಾಯಕಾರಿ ಎಂದು ತಿಳಿದಿದ್ದರೂ, ಆ ಅಭ್ಯಾಸವನ್ನು ಬಿಡಲು ಸಾಧ್ಯವಾಗುವುದಿಲ್ಲ. ಇಂತಹವರಲ್ಲಿ ಅನೇಕರು ಆಲ್ಕೋಹಾಲ್ ಜೊತೆಗೆ ನೀರು, ತಂಪು ಪಾನೀಯಗಳು ಅಥವಾ ಸೋಡಾ ಬೆರೆಸಿಕೊಂಡು ಕುಡಿಯುತ್ತಾರೆ. ಈ ರೀತಿ ಮಾಡುವುದು ಆರೋಗ್ಯಕ್ಕೆ ತುಂಬಾ ಅಪಾಯಕಾರಿ. ಇದರಿಂದಾಗಿ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಈ ರೀತಿ ಮಾಡುವುದರಿಂದ ಯಾವ ರೀತಿಯ ಸಮಸ್ಯೆಗಳು ಉಂಟಾಗುತ್ತವೆ? ಇಲ್ಲಿದೆ ಸಂಪೂರ್ಣ ಮಾಹಿತಿ.

ಹೃದ್ರೋಗದಂತಹ ಕಾಯಿಲೆ ಹೆಚ್ಚುತ್ತದೆ

ತಂಪು ಪಾನೀಯವು ಪರಿಮಳಯುಕ್ತವಾಗಿದ್ದು ಇದರಲ್ಲಿ ಬಳಸುವ ರುಚಿಗಳು ನೈಸರ್ಗಿಕ ಅಥವಾ ಕೃತಕವಾಗಿರುತ್ತವೆ, ಸಾಮಾನ್ಯವಾಗಿ ಹೆಚ್ಚುವರಿ ಸಿಹಿಕಾರಕವನ್ನು ಒಳಗೊಂಡಿರುತ್ತವೆ. ವಾಸ್ತವದಲ್ಲಿ, ಸೋಡಾ ಮತ್ತು ತಂಪು ಪಾನೀಯಗಳು ಸಾಕಷ್ಟು ಕ್ಯಾಲೊರಿಗಳನ್ನು ಹೊಂದಿರುತ್ತವೆ. ಆಲ್ಕೋಹಾಲ್ ನೊಂದಿಗೆ ಸೋಡಾ ಅಥವಾ ತಂಪು ಪಾನೀಯಗಳನ್ನು ಕುಡಿಯುವುದರಿಂದ, ದೇಹಕ್ಕೆ ಹೆಚ್ಚುವರಿ ಕ್ಯಾಲೊರಿ ಸೇರಿಕೊಳ್ಳುತ್ತದೆ. ಇದರ ಪರಿಣಾಮವಾಗಿ ತೂಕ ಹೆಚ್ಚಾಗುತ್ತದೆ. ಅಧಿಕ ತೂಕವು ಹೃದ್ರೋಗದಂತಹ ಅನೇಕ ಕಾಯಿಲೆಗಳ ಅಪಾಯವನ್ನು ಕೂಡ ಹೆಚ್ಚಿಸುತ್ತದೆ.

ಜೀರ್ಣಾಂಗ ವ್ಯವಸ್ಥೆಯನ್ನು ಹಾನಿಗೊಳಿಸುತ್ತದೆ

ಸೋಡಾದಲ್ಲಿರುವ ಸೋಡಿಯಂ ಕಾರ್ಬೋನೇಟ್ ಮತ್ತು ಆಮ್ಲಗಳು ಜೀರ್ಣಾಂಗ ವ್ಯವಸ್ಥೆಯನ್ನು ಹಾನಿಗೊಳಿಸುತ್ತವೆ. ಇದು ಅಜೀರ್ಣ ಮತ್ತು ಆಮ್ಲೀಯತೆ ಗೆ ಕಾರಣವಾಗಬಹುದು. ಕೆಲವು ಸೋಡಾಗಳು ಕೆಫೀನ್ ಅನ್ನು ಹೊಂದಿರುತ್ತವೆ. ಇದು ದೇಹವನ್ನು ಸಕ್ರಿಯವಾಗಿರಿಸುತ್ತದೆ. ಆದರೆ ಎರಡನ್ನೂ ಒಟ್ಟಿಗೆ ಕುಡಿದರೆ, ದೀರ್ಘಕಾಲ ಎಚ್ಚರವಾಗಿರುತ್ತೀರಿ. ಇದು ತುಂಬಾ ಅಪಾಯಕಾರಿ. ಏಕಂದರೆ ಇದರಿಂದ ದೇಹದಲ್ಲಿ ನಿರ್ಜಲೀಕರಣ ಉಂಟಾಗುತ್ತದೆ ನಂತರ ತಲೆನೋವು, ವಾಂತಿಯಂತಹ ಸಮಸ್ಯೆಗಳು ಬರುತ್ತದೆ.

ಇದನ್ನೂ ಓದಿ: ಒಗ್ಗರಣೆಗೆ ಬಳಸೋ ಸಾಸಿವೆಯಲ್ಲಿದೆ ಅನೇಕ ಆರೋಗ್ಯ ಪ್ರಯೋಜನಗಳು

ಮಧುಮೇಹ ಹೆಚ್ಚಾಗುತ್ತದೆ

ಸೋಡಾದಲ್ಲಿ ಫಾಸ್ಪರಿಕ್ ಆಮ್ಲವಿದೆ. ಇದು ಮೂಳೆಗಳನ್ನು ದುರ್ಬಲಗೊಳಿಸುತ್ತದೆ, ಮೂತ್ರಪಿಂಡಗಳನ್ನು ಹಾನಿಗೊಳಿಸುತ್ತದೆ ಮತ್ತು ಹಲ್ಲುಗಳಿಗೂ ಒಳ್ಳೆಯದಲ್ಲ. ಸೋಡಾ ಮತ್ತು ತಂಪು ಪಾನೀಯಗಳು ಹೈ ಫ್ರಕ್ಟೋಸ್ ಕಾರ್ನ್ ಸಿರಪ್ ಎಂಬ ಸಕ್ಕರೆಯನ್ನು ಹೊಂದಿರುತ್ತವೆ. ಇದು ದೇಹಕ್ಕೆ ತುಂಬಾ ಹಾನಿಕಾರಕವಾಗಿದ್ದು ತೂಕ ಹೆಚ್ಚಳ ಮತ್ತು ಮಧುಮೇಹದಂತಹ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಸೋಡಾದೊಂದಿಗೆ ಮದ್ಯಪಾನ ಮಾಡುವುದರಿಂದ ಈ ಸಮಸ್ಯೆಗಳು ಇನ್ನಷ್ಟು ಹದಗೆಡುತ್ತವೆ.

ಇದೆಲ್ಲದರ ಹೊರತಾಗಿ ಆಲ್ಕೋಹಾಲ್ ಗೆ ಸೋಡಾವನ್ನು ಸೇರಿಸುವುದರಿಂದ ದೇಹದಲ್ಲಿ ಕೆಲವು ಬದಲಾವಣೆಗಳು ಉಂಟಾಗುತ್ತವೆ ಜೊತೆಗೆ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತವೆ. ಸೋಡಾ ಕಾರ್ಬೊನೇಟೆಡ್ ಅಂಶವಿರುವ ಪಾನೀಯವಾಗಿದ್ದು ಸಾಕಷ್ಟು ನೊರೆಯನ್ನು ಹೊಂದಿರುತ್ತದೆ. ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಆದರೆ ಸೋಡಾ ಅಥವಾ ಪಾನೀಯಗಳ ಬದಲು, ಸ್ವಲ್ಪ ನೀರು ಅಥವಾ ಕಡಿಮೆ ಕ್ಯಾಲೊರಿ ಇರುವ ಸೋಡಾವನ್ನು ಬಳಸಬಹುದು.

ಸೂಚನೆ: ಆಲ್ಕೋಹಾಲ್ ಆರೋಗ್ಯಕ್ಕೆ ಅಪಾಯಕಾರಿ. ಈ ಅಭ್ಯಾಸ ಎಂದಿಗೂ ಒಳ್ಳೆಯದಲ್ಲ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್