AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Food Poisoning: ಮಳೆಗಾಲದಲ್ಲಿ ಕಾಡುವ ಫುಡ್​ಪಾಯ್ಸನ್​ನಿಂದ ತಪ್ಪಿಸಿಕೊಳ್ಳುವುದು ಹೇಗೆ? ಇಲ್ಲಿವೆ ಟಿಪ್ಸ್​

ಮಳೆಗಾಲ ಶುರುವಾದಾಕ್ಷಣ ರೋಗಗಳ ಸರಮಾಲೆಯೇ ಆರಂಭವಾಗುತ್ತದೆ. ಏನೇ ತಿಂದರೂ ಜೀರ್ಣವಾಗದೇ ಇರುವುದು, ಪದೇ ಪದೇ ವಾಂತಿ, ಹೊಟ್ಟೆನೋವು, ಅತಿಸಾರದಂತಹ ಹಲವು ಸಮಸ್ಯೆಗಳು ನಿಮ್ಮನ್ನು ಕಾಡಬಹುದು

Food Poisoning: ಮಳೆಗಾಲದಲ್ಲಿ ಕಾಡುವ ಫುಡ್​ಪಾಯ್ಸನ್​ನಿಂದ ತಪ್ಪಿಸಿಕೊಳ್ಳುವುದು ಹೇಗೆ? ಇಲ್ಲಿವೆ ಟಿಪ್ಸ್​
ಫುಡ್ ಪಾಯ್ಸನ್
ನಯನಾ ರಾಜೀವ್
|

Updated on: Jun 29, 2023 | 12:55 PM

Share

ಮಳೆಗಾಲ ಶುರುವಾದಾಕ್ಷಣ ರೋಗಗಳ ಸರಮಾಲೆಯೇ ಆರಂಭವಾಗುತ್ತದೆ. ಏನೇ ತಿಂದರೂ ಜೀರ್ಣವಾಗದೇ ಇರುವುದು, ಪದೇ ಪದೇ ವಾಂತಿ, ಹೊಟ್ಟೆನೋವು, ಅತಿಸಾರದಂತಹ ಹಲವು ಸಮಸ್ಯೆಗಳು ನಿಮ್ಮನ್ನು ಕಾಡಬಹುದು. ಅದರಲ್ಲಿ ಫುಡ್​ ಪಾಯ್ಸನ್​ ಕೂಡ ಒಂದು. ಮಳೆಗಾಲ ಬಾಯಾರಿಕೆಯಾಗುವುದಿಲ್ಲ ಎಂದು ನೀರು ಕಡಿಮೆ ಕುಡಿದರೆ ಖಾರವಾದ ಪದಾರ್ಥಗಳನ್ನು ಸೇವಿಸಿದರೆ ಗ್ಯಾಸ್ಟ್ರಿಕ್ ಸಮಸ್ಯೆ ಉದ್ಭವಿಸಬಹುದು.

ಮಳೆಗಾಲದಲ್ಲಿ ಬಿಸಿ ಬಿಸಿ ಏನಾದರೂ ತಿನ್ನಬೇಕೆಂಬ ಆಸೆ ಹುಟ್ಟುವುದು ಸಹಜ ಆಗ ಬೀದಿ ಬದಿಗಳಲ್ಲಿ ಸಿಗುವ ಆಹಾರವನ್ನು ತಿನ್ನುವ ಬದಲು ಮನೆಯಲ್ಲೇ ಏನಾದರೂ ಮಾಡಿಕೊಂಡು ತಿಂದರೆ ಒಳಿತು. ವಾಸ್ತವವಾಗಿ ಫುಡ್​ ಪಾಯ್ಸನ್ ಸಮಸ್ಯೆಯು ಕಲುಷಿತ ಆಹಾರವನ್ನು ಸೇವಿಸುವುದರಿಂದ ಉಂಟಾಗುತ್ತದೆ. ಅದೇ ಮಳೆಗಾಲದಲ್ಲಿ ವಾತಾವರಣದಲ್ಲಿ ತೇವಾಂಶ ಹೆಚ್ಚಾಗಿದ್ದು ಬ್ಯಾಕ್ಟೀರಿಯಾ ಸುಲಭವಾಗಿ ಹರಡುತ್ತದೆ.

ಈ ಬ್ಯಾಕ್ಟೀರಿಯಾಗಳು ಆಹಾರವನ್ನು ಕಲುಷಿತಗೊಳಿಸುತ್ತವೆ ಮತ್ತು ಆಹಾರವು ನಿಮ್ಮ ಹೊಟ್ಟೆಗೆ ಹೋಗುತ್ತದೆ ಮತ್ತು ನಿಮ್ಮ ಅನಾರೋಗ್ಯಕ್ಕೆ ಕಾರಣವಾಗುತ್ತದೆ.

ಮತ್ತಷ್ಟು ಓದಿ: ನೆರೆ ರಾಜ್ಯ ಕೇರಳದಲ್ಲಿ ಆತಂಕ ಸೃಷ್ಟಿಸಿದ ಜ್ವರ: ಕರ್ನಾಟಕದ ಶಾಲಾ-ಕಾಲೇಜುಗಳಿಗೆ ಆರೋಗ್ಯ ಇಲಾಖೆ ಅಲರ್ಟ್

ಹಿಂದಿನ ದಿನ ಮಾಡಿದ ಊಟವನ್ನು ತಿನ್ನಬೇಡಿ  ಮಳೆಗಾಲದಲ್ಲಿ ಹಳಸಿದ ಆಹಾರವನ್ನು ಎಂದಿಗೂ ಸೇವಿಸಬಾರದು. ಏಕೆಂದರೆ ಹಳಸಿದ ಆಹಾರದಲ್ಲಿ ಬ್ಯಾಕ್ಟೀರಿಯಾಗಳು ವೇಗವಾಗಿ ಬೆಳೆಯುತ್ತವೆ. ಅದರಲ್ಲೂ ಮಳೆಗಾಲದಲ್ಲಿ ಪರಿಸರದಲ್ಲಿನ ತೇವಾಂಶದಿಂದ ಬ್ಯಾಕ್ಟೀರಿಯಾಗಳು ಆಹಾರಕ್ಕೆ ಅಂಟಿಕೊಳ್ಳುತ್ತವೆ. ಇದರಿಂದಾಗಿ ಹಿಂದಿನ ದಿನ ಮಾಡಿದ ಪದಾರ್ಥಗಳನ್ನು ತಿನ್ನುವುದನ್ನು ತಪ್ಪಿಸಿ.

ಅರ್ಧ ಬೇಯಿಸಿದ ಆಹಾರವನ್ನು ಸೇವಿಸುವುದನ್ನು ತಪ್ಪಿಸಿ ಅರ್ಧ ಬೇಯಿಸಿದ ಆಹಾರವನ್ನು ಎಂದಿಗೂ ತಿನ್ನಬೇಡಿ. ಏಕೆಂದರೆ ಹೊರಗಿನಿಂದ ತಂದ ತರಕಾರಿ ಅಥವಾ ಮಾಂಸಾಹಾರಿ ವಸ್ತುಗಳ ಮೇಲೆ ಬ್ಯಾಕ್ಟೀರಿಯಾಗಳು ಈಗಾಗಲೇ ಇರುತ್ತವೆ. ನೀವು ಅದನ್ನು ಸರಿಯಾಗಿ ಬೇಯಿಸದಿದ್ದರೆ, ಈ ಸೂಕ್ಷ್ಮಜೀವಿಗಳು ಸಾಯುವುದಿಲ್ಲ ಮತ್ತು ಆದ್ದರಿಂದ ಫುಡ್​ ಪಾಯ್ಸನ್ ಉಮಟಾಗಬಹುದು. ಯಾವಾಗಲೂ ಹೆಚ್ಚಿನ ತಾಪಮಾನದಲ್ಲಿ ಆಹಾರವನ್ನು ಬೇಯಿಸಿ ತಿನ್ನುವುದು ಉತ್ತಮ.

ಹಣ್ಣುಗಳು ಮತ್ತು ತರಕಾರಿಗಳನ್ನು ಸರಿಯಾಗಿ ಸ್ವಚ್ಛಗೊಳಿಸಿ ನೀವು ಹಣ್ಣುಗಳು ಅಥವಾ ತರಕಾರಿಗಳನ್ನು ಸೇವಿಸುವ ಮೊದಲು ಅವುಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ. ಏಕೆಂದರೆ ಮಳೆಗಾಲದಲ್ಲಿ ವೈರಾಣುಗಳು ಮತ್ತು ಬ್ಯಾಕ್ಟೀರಿಯಾಗಳು ಸುಲಭವಾಗಿ ಅವುಗಳನ್ನು ಸೇರುತ್ತವೆ. ಹಣ್ಣುಗಳು ಅಥವಾ ತರಕಾರಿಗಳನ್ನು ತೊಳೆಯದೆ ತಿಂದರೆ ಆ ಬ್ಯಾಕ್ಟೀರಿಯಾಗಳು ನಿಮ್ಮ ದೇಹದೊಳಗೆ ಹೋಗಬಹುದು. ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿರುವ ತರಕಾರಿ ತೊಳೆಯುವ ದ್ರವವನ್ನು ನೀವು ಬೇಕಾದರೆ ಬಳಸಬಹುದು.

ಅಡುಗೆ ಮನೆಯ ಸ್ವಚ್ಛತೆ ಅವಶ್ಯ ಮಳೆಗಾಲದಲ್ಲಿ ಅಡುಗೆ ಮನೆಯ ಸ್ವಚ್ಛತೆಗೆ ವಿಶೇಷ ಗಮನ ಕೊಡಿ. ತರಕಾರಿಗಳನ್ನು ಕತ್ತರಿಸುವ ಹಲಗೆಗಳು, ಚಾಕುಗಳು ಮತ್ತು ಪಾತ್ರೆಗಳನ್ನು ತೊಳೆಯುತ್ತಿರಿ.

ಇದು ನಿಮ್ಮ ಅಡುಗೆ ಬ್ಯಾಕ್ಟೀರಿಯಾ ಮತ್ತು ವೈರಸ್‌ಗಳಿಂದ ಮುಕ್ತವಾಗಿರುತ್ತದೆ. ಮೊದಲೇ ಕತ್ತರಿಸಿದ ಹಣ್ಣುಗಳನ್ನು ತಿನ್ನಬೇಡಿ ಮಳೆಗಾಲದಲ್ಲಿ ಮೊದಲೇ ಕತ್ತರಿಸಿದ ಹಣ್ಣುಗಳನ್ನು ತಿನ್ನಬೇಡಿ. ಏಕೆಂದರೆ ಬ್ಯಾಕ್ಟೀರಿಯಾಗಳು ಹಣ್ಣುಗಳ ಮೇಲೆ ಅಂಟಿಕೊಳ್ಳಬಹುದು, ಇದರಿಂದಾಗಿ ಅವು ನಿಮ್ಮ ಹೊಟ್ಟೆಗೆ ಹೋಗಿ ಅನಾರೋಗ್ಯಕ್ಕೆ ಕಾರಣವಾಗಬಹುದು. ನೀವು ಹಣ್ಣುಗಳನ್ನು ಸೇವಿಸಲು ಬಯಸಿದಾಗ, ತಾಜಾ ಹಣ್ಣುಗಳನ್ನು ಕತ್ತರಿಸಿ ತಿಂದುಬಿಡಿ.

ಸ್ಟ್ರೀಟ್ ಫುಡ್ ತಿನ್ನುವುದನ್ನು ತಪ್ಪಿಸಿ ಬೀದಿ ಆಹಾರದಿಂದ ದೂರವಿರಿ ಏಕೆಂದರೆ ಈ ಆಹಾರಗಳು ತೆರೆದಿರುವುದರಿಂದ ಅವುಗಳ ಮೇಲೆ ಬ್ಯಾಕ್ಟೀರಿಯಾ ಇರುವ ಸಾಧ್ಯತೆ ಹೆಚ್ಚು, ನೀವು ಈ ಆಹಾರವನ್ನು ಸೇವಿಸಿದರೆ ನಿಮ್ಮ ಹೊಟ್ಟೆ ಹಾಳಾಗುವುದು ಖಂಡಿತ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್