AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್ ಲಸಿಕೆ ತಯಾರಿಸಲು ಸಹಾಯ ಮಾಡುವ ಸಿಂಥೆಟಿಕ್ ಸಂಯುಕ್ತ ಅಭಿವೃದ್ಧಿಪಡಿಸಿದ IISc

ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಕ್ಯಾನ್ಸರ್ ಕೋಶಗಳ ವಿರುದ್ಧ ಪ್ರತಿಕಾಯಗಳ ಉತ್ಪಾದನೆಯನ್ನು ಉತ್ತೇಜಿಸುವ ಸಂಯುಕ್ತವನ್ನು ಅಭಿವೃದ್ಧಿಪಡಿಸಿದೆ. ಕ್ಯಾನ್ಸರ್ ಮತ್ತು ಇತರ ಕ್ಲಿನಿಕಲ್ ಪ್ರಯೋಗಗಳಿಗೆ ಲಸಿಕೆಗಳ ಅಭಿವೃದ್ಧಿಗೆ ಸಂಯುಕ್ತವನ್ನು ಮತ್ತಷ್ಟು ಬಳಸಬಹುದು ಎಂದು ಸಂಶೋಧಕರು ಹೇಳುತ್ತಾರೆ. ಈ ಕುರಿತು ಮಾಹಿತಿ ಇಲ್ಲಿದೆ.

ಕ್ಯಾನ್ಸರ್ ಲಸಿಕೆ ತಯಾರಿಸಲು ಸಹಾಯ ಮಾಡುವ ಸಿಂಥೆಟಿಕ್ ಸಂಯುಕ್ತ ಅಭಿವೃದ್ಧಿಪಡಿಸಿದ IISc
ಕ್ಯಾನ್ಸರ್ ಲಸಿಕೆ Image Credit source: istock
ಸುಷ್ಮಾ ಚಕ್ರೆ
|

Updated on: Apr 24, 2024 | 12:36 PM

Share

ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc)ವಿಜ್ಞಾನಿಗಳು ಸಿಂಥೆಟಿಕ್ ಸಂಯುಕ್ತವನ್ನು ಅಭಿವೃದ್ಧಿಪಡಿಸಿದ್ದಾರೆ. ಇದು ಕ್ಯಾನ್ಸರ್ ಕೋಶಗಳ (Cancer Cells) ವಿರುದ್ಧ ಪ್ರತಿಕಾಯಗಳ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಈ ಸಂಯುಕ್ತವು ಪ್ರೋಟೀನ್‌ಗೆ ಅಂಟಿಕೊಳ್ಳುತ್ತದೆ ಮತ್ತು ದುಗ್ಧರಸ ಗ್ರಂಥಿಗಳಿಗೆ ಚಲಿಸುತ್ತದೆ. ದುಗ್ಧರಸ ಗ್ರಂಥಿಗಳಲ್ಲಿ ಇದು ಕ್ಯಾನ್ಸರ್ ಕೋಶಗಳ ವಿರುದ್ಧ ಪ್ರತಿಕಾಯಗಳ ಉತ್ಪಾದನೆಯನ್ನು ಹೆಚ್ಚಿಸುತ್ತದೆ.

ಐಐಎಸ್‌ಸಿ ಸಂಶೋಧಕರ ತಂಡದ ಪ್ರಕಾರ, ಅಡ್ವಾನ್ಸ್‌ಡ್ ಹೆಲ್ತ್‌ಕೇರ್ ಮೆಟೀರಿಯಲ್ಸ್‌ನಲ್ಲಿ ಪ್ರಕಟವಾದ ಅಧ್ಯಯನವು ಕ್ಯಾನ್ಸರ್ ಕೋಶಗಳು ದೇಹದೊಳಗಿನ ಪ್ರತಿಕಾಯಗಳ ಉತ್ಪಾದನೆಯನ್ನು ದುರ್ಬಲಗೊಳಿಸಬಹುದು ಅಥವಾ ಸ್ಥಗಿತಗೊಳಿಸಬಹುದು ಎಂದು ತಿಳಿಸಿದೆ. ಇತ್ತೀಚಿನ ವರ್ಷಗಳಲ್ಲಿ ವಿಜ್ಞಾನಿಗಳು ಈ ಪ್ರತಿಜನಕಗಳನ್ನು ಅಭಿವೃದ್ಧಿಪಡಿಸಲು ಕ್ಯಾನ್ಸರ್ ಕೋಶದ ಮೇಲ್ಮೈಗಳಲ್ಲಿ ಕಂಡುಬರುವ ಕಾರ್ಬೋಹೈಡ್ರೇಟ್‌ಗಳತ್ತ ಗಮನವನ್ನು ಕೇಂದ್ರೀಕರಿಸಿದ್ದಾರೆ.

ಇದನ್ನೂ ಓದಿ: Breast Cancer: ಭಾರತದಲ್ಲಿ ಇದ್ದಕ್ಕಿದ್ದಂತೆ ಸ್ತನ ಕ್ಯಾನ್ಸರ್ ಹೆಚ್ಚಾಗಿರುವುದೇಕೆ?

ಪ್ರತಿರಕ್ಷಣಾ ವ್ಯವಸ್ಥೆಯ ಮೇಲೆ ಅದರ ಪರಿಣಾಮಗಳನ್ನು ಅರ್ಥಮಾಡಿಕೊಳ್ಳಲು ಸಂಶೋಧಕರು ಸಂಯುಕ್ತವನ್ನು ಇಲಿಗಳ ಮಾದರಿಗಳಿಗೆ ಇಂಜೆಕ್ಟ್ ಮಾಡಿದ್ದಾರೆ. ಈ ವೇಳೆ ಪ್ರತಿಜನಕ ಸಂಯುಕ್ತವು ದುಗ್ಧರಸ ಗ್ರಂಥಿಗಳಲ್ಲಿ ಹೆಚ್ಚಾಗಿ ಸಂಗ್ರಹವಾಗಿದೆ ಎಂದು ಅವರು ಕಂಡುಕೊಂಡರು. ಸಂಯುಕ್ತದ ಕಡಿಮೆ ಪ್ರಮಾಣದಲ್ಲಿ ಪ್ರತಿರಕ್ಷಣೆ ಪಡೆದ ಇಲಿಗಳು ಹೆಚ್ಚಿನ ಪ್ರತಿಕಾಯ ಮಟ್ಟವನ್ನು ಉತ್ಪತ್ತಿ ಮಾಡುತ್ತವೆ ಎಂಬುದು ಈ ವೇಳೆ ಸಾಬೀತಾಗಿದೆ.

ಕ್ಯಾನ್ಸರ್ ಮತ್ತು ಇತರ ಕ್ಲಿನಿಕಲ್ ಪ್ರಯೋಗಗಳಿಗೆ ಲಸಿಕೆಗಳ ಅಭಿವೃದ್ಧಿಗೆ ಸಂಯುಕ್ತವನ್ನು ಮತ್ತಷ್ಟು ಬಳಸಬಹುದು ಎಂದು ಸಂಶೋಧಕರು ಹೇಳಿದ್ದಾರೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ