Immunity Booster: ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ನೆಲ್ಲಿಕಾಯಿಯನ್ನು ಈ ರೀತಿ ಸೇವಿಸಿ

ನಿಮ್ಮಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ನೆಲ್ಲಿಕಾಯಿ ಪ್ರಯೋಜನಕಾರಿ. ಹಾಗಿರುವಾಗ ನೆಲ್ಲಿಕಾಯಿ ಸೇವನೆಯಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿದುಕೊಳ್ಳಿ.

Immunity Booster: ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ನೆಲ್ಲಿಕಾಯಿಯನ್ನು ಈ ರೀತಿ ಸೇವಿಸಿ
ಸಂಗ್ರಹ ಚಿತ್ರ
Follow us
| Updated By: shruti hegde

Updated on: Nov 02, 2021 | 8:20 AM

ರೋಗಗಳ ವಿರುದ್ಧ ಹೋರಾಡಲು ನಿಮ್ಮಲ್ಲಿ ರೋಗ ನಿರೋಧಕ ಶಕ್ತಿ ಇರಬೇಕು. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ನೀವು ವಿಟಮಿನ್ ಸಿ ಅಂಶವಿರುವ ಆಹಾರವನ್ನು ಸೇವಿಸಬೇಕು. ಹೀಗಿರುವಾಗ ನೆಲ್ಲಿಕಾಯಿ ಕಿತ್ತಳೆ ಹಣ್ಣು ಇಂತಹ ವಿಟಮಿನ್ ಸಿ ಯುಕ್ತ ಆಹಾರವನ್ನು ಸೇವಿಸುವ ಮೂಲಕ ನೀವು ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು. ನೆಲ್ಲಿಕಾಯಿಯಲ್ಲಿ ಉತ್ಕರ್ಷಣ ನಿರೋಧಕ, ಕ್ಯಾನ್ಸರ್ ವಿರೋಧಿ ಗುಣ ಮತ್ತು ಉರಿಯೂತದ ಗುಣಲಕ್ಷಣಗಳನ್ನು ಹೊಂದಿರುತ್ತದೆ. ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿರುವ ನೆಲ್ಲಿಕಾಯಿಯನ್ನು ಅಡುಗೆಯಲ್ಲಿ ಬಳಸಿ ಸೇವಿಸುವ ಮೂಲಕ ಪ್ರಯೋಜನಗಳನ್ನು ಪಡೆದುಕೊಳ್ಳಿ.

ನೆಲ್ಲಿಕಾಯಿ ಸೇವನೆಯು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ನೆಲ್ಲಿಕಾಯಯಲ್ಲಿರುವ ಔಷಧೀಯ ಗುಣಗಳಿಂದ ಔಷಧ ತಯಾರಿಕೆಗಳಲ್ಲಿ ಹೆಚ್ಚು ಬಳಸಲಾಗುತ್ತದೆ. ಸೋಂಕು, ಶೀತ, ಕೆಮ್ಮು ಸಮಸ್ಯೆ ನಿವಾರಣೆಯ ಜೊತೆಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಮಧುಮೇಹ, ಕ್ಯಾನ್ಸರ್, ಹೃದ್ರೋಗ, ಅಧಿಕ ರಕ್ತದೊತ್ತಡ ಮತ್ತು ಮೂತ್ರಪಿಂಡದ ಸಮಸ್ಯೆಗಳಿಂದ ಪರಿಹಾರ ಕಂಡುಕೊಳ್ಳಲು ಇದು ಸಹಾಯಕವಾಗಿದೆ.

ನೆಲ್ಲಿಕಾಯಿ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಕ್ರೋಮಿಯಂನ ಹೆಚ್ಚಿನ ಅಂಶದಿಂದಾಗಿ ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಸ್ಪೈಕ್​ಗಳನ್ನು ತಡೆಯುತ್ತದೆ. ತಾಜಾ ಆಮ್ಲ ಸೇವನೆಯು ಇನ್ಸುಲಿನ್ ಅನ್ನು ಸುಧಾರಿಸುತ್ತದೆ. ಈ ರೀತಿಯಾಗಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯಕವಾಗಿದೆ.

ಮಲಬದ್ದತೆ ಸಮಸ್ಯೆಯಿಂದ ಅನೇಕ ಜನರು ತೊಂದರೆಗೊಳಗಾಗುತ್ತಾರೆ. ಇದು ಹೆಚ್ಚಿನ ಪ್ರಮಾಣದ ಫೈಬರ್​ಅನ್ನು ಹೊಂದಿರುತ್ತದೆ. ಆಮ್ಲಾ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಇದಲ್ಲದೇ ತೂಕ ನಷ್ಟಕ್ಕೆ ನೆಲ್ಲಿಕಾಯಿ ಸೇವನೆ ಸಹಾಯಕಾರಿ.

ನೀವು 1 ಚಮಚ ಆಮ್ಲಾ ಪುಡಿಯನ್ನು 1 ಚಮಚ ಜೇನುತುಪ್ಪ ಅಥವಾ ನೀರಿನೊಂದಿಗೆ ಮಿಶ್ರಣ ಮಾಡಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳಬಹುದು. ನೀವು ದಿನಕ್ಕೆ ಒಂದು ಅಥವಾ ಎರಡು ನೆಲ್ಲಿಕಾಯಿಯನ್ನು ಸೇವಿಸಬಹುದು. ನಿಯಮಿತವಾಗಿ ಸೇವಿಸುವ ಮೂಲಕ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಿ.

ಇದನ್ನೂ ಓದಿ:

Skin Care: ಆರೋಗ್ಯಕರ ಚರ್ಮವನ್ನು ಪಡೆಯಲು ವ್ಯಾಯಾಮ ಸಹಾಯಕವೇ? ತಜ್ಞರ ಸಲಹೆಗಳಿವು

Health Tips: ದಾಲ್ಚಿನ್ನಿ ನೀರು ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸಲು ಸಹಾಯಕ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ