Immunity Boosting Foods: ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ 5 ಆಹಾರ ಪದಾರ್ಥಗಳಿವು

ಪ್ರತಿರಕ್ಷಣಾ ವ್ಯವಸ್ಥೆಯು ನಮ್ಮ ದೇಹವನ್ನು ಸೋಂಕುಗಳು ಮತ್ತು ರೋಗಗಳಿಂದ ರಕ್ಷಿಸುತ್ತದೆ. ಅದಕ್ಕಾಗಿ ನಾವು ಸೇವಿಸುವ ಆಹಾರದ ಕಡೆಯೂ ಗಮನ ಹರಿಸಬೇಕು. ಭಾರತದಲ್ಲಿ H3N2 ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ಪ್ರತಿರಕ್ಷಣಾ ವ್ಯವಸ್ಥೆಯನ್ನು ಉತ್ತಮ ಸ್ಥಿತಿಯಲ್ಲಿಡಲು ಇದು  ಸೂಕ್ತ ಸಮಯ

Immunity Boosting Foods: ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ 5 ಆಹಾರ ಪದಾರ್ಥಗಳಿವು
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on: Mar 16, 2023 | 8:00 AM

ಹವಾಮಾನ ಬದಲಾಗುತ್ತದೆ. ಉರಿ ಬಿಸಿಲು ಒಂದೆಡೆಯಾದರೆ ಬಿಸಿಲ ನಡುವೆ ಸುರಿವ ಮಳೆ. ಇಂಥಾ ಹೊತ್ತಲ್ಲಿ ಶೀತ, ಕೆಮ್ಮು ಮತ್ತು ಜ್ವರದಿಂದ ಬಳಲುತ್ತಿದ್ದೀರಾ? ರೋಗ ಬಂದಾಗ ಔಷಧಿ ಸೇವಿಸುವುದು ಬೇರೆ, ರೋಗ ಬರದಂತೆ ತಡೆಯುವುದು ಬೇರೆ. ರೋಗ ಬರದಂತೆ ತಡೆಯಲು ದೇಹದಲ್ಲಿ  ರೋಗನಿರೋಧಕ ಬೇಕೇ ಬೇಕು. ಪ್ರತಿರಕ್ಷಣಾ ವ್ಯವಸ್ಥೆಯು (Immune system) ನಮ್ಮ ದೇಹವನ್ನು ಸೋಂಕುಗಳು ಮತ್ತು ರೋಗಗಳಿಂದ ರಕ್ಷಿಸುತ್ತದೆ. ಅದಕ್ಕಾಗಿ ನಾವು ಸೇವಿಸುವ ಆಹಾರದ(Immunity-Boosting Foods) ಕಡೆಯೂ ಗಮನ ಹರಿಸಬೇಕು. ಭಾರತದಲ್ಲಿ H3N2 ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ಪ್ರತಿರಕ್ಷಣಾ ವ್ಯವಸ್ಥೆಯನ್ನು ಉತ್ತಮ ಸ್ಥಿತಿಯಲ್ಲಿಡಲು ಇದು  ಸೂಕ್ತ ಸಮಯ. ನಮ್ಮ ಆಹಾರ ಮತ್ತು ಜೀವನಶೈಲಿಯು ನಿಮ್ಮ ಪ್ರತಿರಕ್ಷಣಾ ವ್ಯವಸ್ಥೆಯ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಆರೋಗ್ಯಕರ ಆಹಾರವನ್ನು ಸೇವಿಸುವುದು, ನಿಯಮಿತವಾಗಿ ವ್ಯಾಯಾಮ ಮಾಡುವುದು, ಸರಿಯಾದ ನಿದ್ರೆಯನ್ನು ಪಡೆಯುವುದು, ಧೂಮಪಾನವನ್ನು ತ್ಯಜಿಸುವುದು, ಆರೋಗ್ಯಕರ ದೇಹವನ್ನು ಕಾಪಾಡಿಕೊಳ್ಳುವುದು ಮತ್ತು ಮದ್ಯ ಸೇವನೆಯನ್ನು ನಿರ್ಬಂಧಿಸುವುದು ರೋಗನಿರೋಧಕ ಶಕ್ತಿಯನ್ನು ನಿರ್ಮಿಸಲು ಸಹಾಯ ಮಾಡುವ ಕೆಲವು ವಿಧಾನಗಳು. ಕೆಲವು ಆಹಾರಗಳು ರೋಗನಿರೋಧಕ ಶಕ್ತಿಯನ್ನು ನಿರ್ಮಿಸಲು ಸಹಾಯ ಮಾಡುತ್ತವೆ. ಅಂಥಾ ಆಹಾರಗಳು ಯಾವುದೆಂದು ನೋಡೋಣ

1. ಸಿಟ್ರಸ್ ಆಹಾರಗಳು

ಸಿಟ್ರಸ್ ಕುಟುಂಬಕ್ಕೆ ಸೇರಿದ ನಿಂಬೆಹಣ್ಣು, ಕಿತ್ತಳೆ, ದ್ರಾಕ್ಷಿಹಣ್ಣುಗಳಲ್ಲಿ ಹೆಚ್ಚಿನ ಆಂಟಿಓಕ್ಸಿಡೆಂಟ್ ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

2. ಬಾದಾಮಿ

ಬಾದಾಮಿ ಅಗತ್ಯ ಪೋಷಕಾಂಶಗಳನ್ನು ಹೊಂದಿದ್ದು ಹೃದಯದ ಆರೋಗ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ನಿಮ್ಮ ರೋಗನಿರೋಧಕ ಶಕ್ತಿ ನೀಡುತ್ತದೆ. ಬಾದಾಮಿಯು ವಿಟಮಿನ್ ಇ, ಸತು, ಮೆಗ್ನೀಸಿಯಮ್ ಮತ್ತು ಪ್ರೋಟೀನ್‌ಗಳಂತಹ ಅಗತ್ಯ ಪೋಷಕಾಂಶಗಳ ಮೂಲವಾಗಿದೆ.

3. ಅರಿಶಿನ

ಅರಿಶಿನವು ಅದ್ಭುತವಾದ ಮಸಾಲೆಯಾಗಿದ್ದು ಇದನ್ನು ನಿಮ್ಮ ಆಹಾರದಲ್ಲಿ ಹಲವಾರು ವಿಧಗಳಲ್ಲಿ ಸೇರಿಸಬಹುದು. ಅರಿಶಿನದ ಮುಖ್ಯ ಅಂಶವಾದ ಕರ್ಕ್ಯುಮಿನ್ ಪ್ರತಿರಕ್ಷಣಾ ಕಾರ್ಯವನ್ನು ಬೆಂಬಲಿಸುವ ಆಂಟಿ ಇನ್ಫ್ಲಮೇಟರಿ ಗುಣಲಕ್ಷಣಗಳಿಂದ ತುಂಬಿರುತ್ತದೆ. ನೀವು ಅರಿಶಿನ ಹಾಲು ಅಥವಾ ಚಹಾವನ್ನು ಕುಡಿಯಬಹುದು. ನಿಮ್ಮ ದೈನಂದಿನ ಆಹಾರದಲ್ಲಿ ಅರಶಿನವನ್ನು ಬಳಸುವುದು ಒಳ್ಳೆಯದು.

4. ಗ್ರೀನ್ ಚಹಾ

ಗ್ರೀನ್ ಟೀ ಕುಡಿಯುವುದರಿಂದ ಮ್ಯಾಜಿಕ್ ನಂತೆ ತೂಕ ಇಳಿಸಲು ಸಾಧ್ಯವಿಲ್ಲ. ಆದರೆ ಗ್ರೀನ್ ಟೀ ಹಲವಾರು ಇತರ ಪ್ರಯೋಜನಗಳನ್ನು ನೀಡುತ್ತದೆ. ಇದು ಎಪಿಗಲ್ಲೊಕಾಟೆಚಿನ್ ಗ್ಯಾಲೇಟ್ ಅನ್ನು ಹೊಂದಿರುತ್ತದೆ, ಇದು ರೋಗ ನಿರೋಧಕ ಶಕ್ತಿಯನ್ನು ಹೊಂದಲು ಸಹಾಯ ಮಾಡುತ್ತದೆ.

5. ಮಜ್ಜಿಗೆ

ಮಜ್ಜಿಗೆ ಕ್ಯಾಲ್ಸಿಯಂ ತುಂಬಿದ ದೇಸಿ ಪಾನೀಯವಾಗಿದೆ. ಮಜ್ಜಿಗೆಯಲ್ಲಿರುವ ಲ್ಯಾಕ್ಟಿಕ್ ಆಮ್ಲವು ಪ್ರತಿರಕ್ಷಣಾ ವ್ಯವಸ್ಥೆಯ ಸರಾಗವಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ. ನಿಮ್ಮ ಮಜ್ಜಿಗೆ ಅಥವಾ ಸಂಬಾರಂಗೆ ಕಲ್ಲು ಉಪ್ಪು, ಮೆಣಸು, ಪುದೀನ ಎಲೆಗಳು ಮತ್ತು ಇತರ ಮಸಾಲೆಗಳನ್ನು ಸೇರಿಸಬಹುದು.

ಬೆಳ್ಳುಳ್ಳಿ, ಶುಂಠಿ, ಕಿವಿ, ಪಪ್ಪಾಯ, ಕೋಸುಗಡ್ಡೆ, ಪಾಲಕ್, ಮೊಸರು, ಬೆಲ್ ಪೆಪರ್ ಮತ್ತು ಬೀಜಗಳು ಕೂಡಾ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಆಹಾರಗಳಾಗಿವೆ.

ಮತ್ತಷ್ಟು ಆರೋಗ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ