Infertility: ಬಂಜೆತನ ಸಮಸ್ಯೆಗೆ ಈ ಸರಳ ಮನೆಮದ್ದನ್ನು ಪ್ರಯತ್ನಿಸಿ

ಬಂಜೆತನ ಕೇವಲ ಮಹಿಳೆಯರ ಸಮಸ್ಯೆ ಅಲ್ಲ ಪುರುಷರಲ್ಲಿಯೂ ಕಾಡುತ್ತದೆ. ಅಸಮರ್ಪಕ ಆಹಾರ, ಜಡ ಜೀವನಶೈಲಿ, ಅತಿಯಾದ ಒತ್ತಡ ಸೇರಿದಂತೆ ಹಲವು ಕಾರಣಗಳು ಬಂಜೆತನ ಸಮಸ್ಯೆ ಹೆಚ್ಚಲು ಕಾರಣವಾಗುತ್ತಿದೆ. ಈ ಸಮಸ್ಯೆಯಿಂದಾಗಿ ಮಹಿಳೆಯರಲ್ಲಿ ಗರ್ಭ ಧರಿಸಲು ತೊಂದರೆ ಉಂಟಾಗುತ್ತಿದೆ. ಹಲವಾರು ದಂಪತಿ ಮಕ್ಕಳಿಲ್ಲದ ಕೊರಗನ್ನು ಅನುಭವಿಸುತ್ತಿದ್ದಾರೆ. ಆದರೆ ಬಂಜೆತನ ಸಮಸ್ಯೆ ತಪ್ಪಿಸಲು ಹಲವಾರು ರೀತಿಯ ಮನೆಮದ್ದುಗಳಿವೆ. ಇವುಗಳನ್ನು ಸರಿಯಾಗಿ ಪಾಲನೆ ಮಾಡಿದರೆ ನಿಮ್ಮ ಪ್ರಯತ್ನ ಮತ್ತು ದೈವ ನಿರ್ಣಯ ಒಂದೇ ಆಗಿದ್ದರೆ ಹಲವು ವರ್ಷಗಳಿಂದ ಮಕ್ಕಳಾಗಿಲ್ಲ ಎಂಬ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಹಾಗಾದರೆ ಇದಕ್ಕೆ ಯಾವ ರೀತಿಯ ಮನೆಮದ್ದು ಉತ್ತಮ? ಇಲ್ಲಿದೆ ಮಾಹಿತಿ.

Infertility: ಬಂಜೆತನ ಸಮಸ್ಯೆಗೆ ಈ ಸರಳ ಮನೆಮದ್ದನ್ನು ಪ್ರಯತ್ನಿಸಿ
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 09, 2024 | 4:08 PM

ಬಂಜೆತನ ಅಥವಾ ಸಂತಾನಹೀನತೆ ಇಂದಿನ ದಿನಗಳಲ್ಲಿ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಇದು ಕೇವಲ ಮಹಿಳೆಯರ ಸಮಸ್ಯೆ ಅಲ್ಲ ಪುರುಷರಲ್ಲಿಯೂ ಕಾಡುತ್ತದೆ. ಅಸಮರ್ಪಕ ಆಹಾರ, ಜಡ ಜೀವನಶೈಲಿ, ಅತಿಯಾದ ಒತ್ತಡ ಸೇರಿದಂತೆ ಹಲವು ಕಾರಣಗಳು ಬಂಜೆತನ ಸಮಸ್ಯೆ ಹೆಚ್ಚಲು ಕಾರಣವಾಗುತ್ತಿದೆ. ಈ ಸಮಸ್ಯೆಯಿಂದಾಗಿ ಮಹಿಳೆಯರಲ್ಲಿ ಗರ್ಭ ಧರಿಸಲು ತೊಂದರೆ ಉಂಟಾಗುತ್ತಿದೆ. ಹಲವಾರು ದಂಪತಿ ಮಕ್ಕಳಿಲ್ಲದ ಕೊರಗನ್ನು ಅನುಭವಿಸುತ್ತಿದ್ದಾರೆ. ಆದರೆ ಬಂಜೆತನ ಸಮಸ್ಯೆ ತಪ್ಪಿಸಲು ಹಲವಾರು ರೀತಿಯ ಮನೆಮದ್ದುಗಳಿವೆ. ಇವುಗಳನ್ನು ಸರಿಯಾಗಿ ಪಾಲನೆ ಮಾಡಿದರೆ ನಿಮ್ಮ ಪ್ರಯತ್ನ ಮತ್ತು ದೈವ ನಿರ್ಣಯ ಒಂದೇ ಆಗಿದ್ದರೆ ಹಲವು ವರ್ಷಗಳಿಂದ ಮಕ್ಕಳಾಗಿಲ್ಲ ಎಂಬ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಹಾಗಾದರೆ ಇದಕ್ಕೆ ಯಾವ ರೀತಿಯ ಮನೆಮದ್ದು ಉತ್ತಮ? ಇಲ್ಲಿದೆ ಮಾಹಿತಿ.

ಬಂಜೆತನ ನಿವಾರಣೆಗೆ ಆಯುರ್ವೇದದಲ್ಲಿಯೂ ಕೆಲವು ಗಿಡಮೂಲಿಕೆಗಳನ್ನು ಸೂಚಿಸಲಾಗಿದೆ. ಇವುಗಳ ಸೇವನೆಯಿಂದ ಬಂಜೆತನಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. ಬಂಜೆತನ ನಿವಾರಣೆಗೆ ಅಶ್ವಗಂಧ ಬಹಳ ಮುಖ್ಯ ಎಂದು ಹೇಳಲಾಗುತ್ತದೆ. ಮಹಿಳೆಯರಲ್ಲಿ ಬಂಜೆತನ ಸಮಸ್ಯೆ ಕಾಡಲು ಹಲವಾರು ಕಾರಣಗಳಿರಬಹುದು. ಅದೆಷ್ಟೇ ಸಮಸ್ಯೆಗಳಿರಲಿ ಕೆಲವೊಮ್ಮೆ ನಿಮಗೆ ಮಕ್ಕಳಾಗಲು ಸಾಧ್ಯವೇ ಇಲ್ಲ ಎಂಬ ಪರಿಸ್ಥಿತಿ ಇದ್ದರೂ ಕೂಡ ಅಶ್ವಗಂಧ ಸೇವನೆ ಮಾಡುವುದರಿಂದ ಬಂಜೆತನ ನಿವಾರಣೆ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ತಾಮ್ರದ ಪಾತ್ರೆಯಲ್ಲಿ ನೀರು ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಪುರುಷರಿಗೂ ಒಳ್ಳೆಯದು:

ಈ ಗಿಡಮೂಲಿಕೆ ಮಹಿಳೆಯರಿಗೆ ಮಾತ್ರವಲ್ಲ ಪುರುಷುರಲ್ಲಿನ ಬಂಜೆತನ ನಿವಾರಣೆಗೂ ಪ್ರಯೋಜನಕಾರಿಯಾಗಿದೆ. ಪುರುಷರು ಅಶ್ವಗಂಧ ಸೇವನೆ ಮಾಡುವುದರಿಂದ ಲೈಂಗಿಕಾಸಕ್ತಿ ಹೆಚ್ಚುತ್ತದೆ, ದೇಹದಲ್ಲಿ ಟೆಸ್ಟೋಸ್ಟೆರಾನ್‌ ಹಾರ್ಮೋನ್‌ ಮಟ್ಟ ಸುಧಾರಿಸುತ್ತದೆ. ಜೊತೆಗೆ ಫಲವಂತಿಕೆ ಹೆಚ್ಚಲು ಸಹಕಾರಿಯಾಗಿದೆ.

ಸೇವನೆ ಹೇಗೆ?

ಬಂಜೆತನ ಸಮಸ್ಯೆಯನ್ನು ನಿವಾರಿಸಿಕೊಳ್ಳಲು ಅಶ್ವಗಂಧವನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಮೊದಲಿಗೆ ಚಿಕ್ಕದಾದ ಅಶ್ವಗಂಧದ ಬೇರನ್ನು ಚೆನ್ನಾಗಿ ಕುದಿಸಿಕೊಳ್ಳಿ ಬಳಿಕ ಹಸುವಿನ ಹಾಲಿನಲ್ಲಿ ಕುದಿಸಿರುವ ಕಷಾಯವನ್ನು ಮಿಶ್ರಣ ಮಾಡಿ. ತಪ್ಪದೇ ಬೆಳಗಿನ ಸಮಯದಲ್ಲಿ ಗಂಡ, ಹೆಂಡತಿ ಇಬ್ಬರೂ ಕುಡಿಯಿರಿ. ಅಥವಾ ಪ್ರತಿದಿನ ರಾತ್ರಿ ಮಲಗುವ ಮುನ್ನ ಒಂದು ಲೋಟ ಬೆಚ್ಚಗಿನ ಹಾಲಿಗೆ 1 ಚಮಚ ಅಶ್ವಗಂಧ ಪುಡಿ, ಜೇನುತುಪ್ಪ ಹಾಗೂ ಚಿಟಿಕೆ ದಾಲ್ಚಿನ್ನಿ ಪುಡಿಯೊಂದಿಗೆ ಬೆರೆಸಿ ಕುಡಿಯಿರಿ. ಇದನ್ನು ಕೆಲವು ದಿನಗಳವರೆಗೆ ಸೇವಿಸುವುದರಿಂದ ಪುರುಷರು ಹಾಗೂ ಮಹಿಳೆಯರು ಇಬ್ಬರಿಗೂ ಸಾಕಷ್ಟು ಪ್ರಯೋಜನಗಳಿವೆ. ಈ ಮನೆಮದ್ದನ್ನು ಋತುಚಕ್ರದ 5ನೇ ದಿನದಿಂದ 15 ದಿನ ಕುಡಿಯಬೇಕು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು