Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಟ್ಟೆಗಿಂತ ಹೆಚ್ಚು ಪ್ರೋಟೀನ್ ಹೊಂದಿರುವ 7 ಆಹಾರಗಳು ಯಾವುವು ಗೊತ್ತಾ?

ಮೊಟ್ಟೆಗಳನ್ನು ಸೂಪರ್‌ಫುಡ್‌ಗಳು ಎಂದು ವರ್ಗೀಕರಿಸಲಾಗುತ್ತದೆ. ಅವು ಬಹಳಷ್ಟು ಪೋಷಕಾಂಶಗಳಿಂದ ತುಂಬಿವೆ. ಅನಾದಿ ಕಾಲದಿಂದಲೂ ಮೊಟ್ಟೆಗಳು ಆಹಾರದ ಪ್ರಧಾನ ಅಂಶವಾಗಿದೆ. ಮೊಟ್ಟೆಗಳು ಪ್ರೋಟೀನ್, ಕ್ಯಾಲ್ಸಿಯಂ ಮತ್ತು ಹಲವಾರು ವಿಟಮಿನ್​ ಮತ್ತು ಪೋಷಕಾಂಶಗಳ ಮೂಲವಾಗಿದೆ. ಆದರೆ, ಮೊಟ್ಟೆಗಿಂತಲೂ ಹೆಚ್ಚು ಪ್ರೋಟೀನ್ ಅಂಶವನ್ನು ಹೊಂದಿರುವ ಕೆಲವು ಆಹಾರಗಳಿವೆ. ಅವು ಯಾವುದು ಎಂಬುದು ನಿಮಗೆ ಗೊತ್ತಾ?

ಮೊಟ್ಟೆಗಿಂತ ಹೆಚ್ಚು ಪ್ರೋಟೀನ್ ಹೊಂದಿರುವ 7 ಆಹಾರಗಳು ಯಾವುವು ಗೊತ್ತಾ?
ಮೊಟ್ಟೆImage Credit source: iStock
Follow us
ಸುಷ್ಮಾ ಚಕ್ರೆ
|

Updated on: Mar 12, 2024 | 4:10 PM

ಒಂದು ಮೊಟ್ಟೆಯು (Eggs Benefits) ಎಲ್ಲಾ ಒಂಬತ್ತು ಅಗತ್ಯ ಅಮೈನೋ ಆಮ್ಲಗಳೊಂದಿಗೆ 6 ಗ್ರಾಂ ಸ್ಟಫ್ ಅನ್ನು ಹೊಂದಿರುತ್ತದೆ. ಮೊಟ್ಟೆಗಳು ಪೌಷ್ಟಿಕಾಂಶದಿಂದ ಕೂಡಿರುತ್ತವೆ. ಮೊಟ್ಟೆಗಳಲ್ಲಿ ವಿಟಮಿನ್, ಖನಿಜಗಳು, ಅಮೈನೋ ಆಮ್ಲಗಳು ಪ್ರತಿ ಕ್ಯಾಲೋರಿಗೆ ಇತರ ಆಹಾರಗಳಿಗಿಂತ ಹೆಚ್ಚಾಗಿರುತ್ತವೆ. ಮೊಟ್ಟೆಗಳನ್ನು ಪ್ರೋಟೀನ್‌ನ ಅತ್ಯುತ್ತಮ ಮೂಲಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಇಡೀ ಮೊಟ್ಟೆಯಲ್ಲಿ 5-7 ಗ್ರಾಂ ಪ್ರೋಟೀನ್ ಇರುತ್ತದೆ. ಮೊಟ್ಟೆಯ ಬಿಳಿಭಾಗವು ಸುಮಾರು 4 ಗ್ರಾಂ ಪ್ರೋಟೀನ್ ಅನ್ನು ಹೊಂದಿರುತ್ತದೆ. ಆದರೂ ಮೊಟ್ಟೆಗಿಂತ ಹೆಚ್ಚು ಪ್ರೋಟೀನ್ ಹೊಂದಿರುವ 7 ಆಹಾರಗಳು ಇಲ್ಲಿವೆ.

ಕುಂಬಳಕಾಯಿ ಬೀಜಗಳು:

ಇವು ಪ್ರೋಟೀನ್‌ನಿಂದ ತುಂಬಿರುತ್ತವೆ. 30 ಗ್ರಾಂ ಕುಂಬಳಕಾಯಿ ಬೀಜಗಳಲ್ಲಿ 9 ಗ್ರಾಂ ಪ್ರೋಟೀನ್ ಇರುತ್ತದೆ.

ಬಾದಾಮಿ:

ಇದು ಆರೋಗ್ಯಕರ ಕೊಬ್ಬಿನ ಮೂಲವಾಗಿದೆ. 1/4 ಕಪ್ ಬಾದಾಮಿ ಕೂಡ ಸುಮಾರು 7.5 ಗ್ರಾಂ ಪ್ರೋಟೀನ್ ಅನ್ನು ಹೊಂದಿರುತ್ತದೆ.

ಇದನ್ನೂ ಓದಿ: ಚಿಕನ್ ವರ್ಸಸ್ ಮೊಟ್ಟೆ; ಯಾವುದರಲ್ಲಿ ಪ್ರೋಟೀನ್ ಹೆಚ್ಚು?

ಶೇಂಗಾ:

1 ಕಪ್ ಬೇಯಿಸಿದ ಶೇಂಗಾದಲ್ಲಿ 12 ಗ್ರಾಂ ಪ್ರೋಟೀನ್ ಇರುತ್ತದೆ.

ಕ್ವಿನೋವಾ ಬೀಜಗಳು:

ಇವು ಎಲ್ಲಾ 9 ಅಗತ್ಯ ಅಮೈನೋ ಆಮ್ಲಗಳನ್ನು ಹೊಂದಿರುತ್ತವೆ. 1 ಕಪ್ ಬೇಯಿಸಿದ ಕ್ವಿನೋವಾ ಬೀಜಗಳು ಸುಮಾರು 8 ಗ್ರಾಂ ಪ್ರೋಟೀನ್ ಅನ್ನು ಹೊಂದಿರುತ್ತದೆ.

ಗ್ರೀಕ್ ಮೊಸರು:

ಇದು ಪೋಷಕಾಂಶಗಳಿಂದ ತುಂಬಿರುತ್ತದೆ. ಇದರ ಸರಾಸರಿ ಅಂಶ 12ರಿಂದ 17.3 ಗ್ರಾಂ ಪ್ರೋಟೀನ್ ಅನ್ನು ಹೊಂದಿರುತ್ತದೆ.

ಇದನ್ನೂ ಓದಿ: Protein Side Effects: ಅತಿಯಾಗಿ ಪ್ರೋಟೀನ್ ಸೇವಿಸಿದರೆ ಏನೆಲ್ಲ ತೊಂದರೆಯಾಗುತ್ತದೆ?

ಕಡಲೆಕಾಯಿ:

ಕಡಲೆಕಾಯಿಯಲ್ಲಿ ಸುಮಾರು 7 ಗ್ರಾಂ ಪ್ರೋಟೀನ್ ಇರುತ್ತದೆ.

ಕಾಟೇಜ್ ಚೀಸ್:

100 ಗ್ರಾಂ ಪನೀರ್ ಅಥವಾ ಕಾಟೇಜ್ ಚೀಸ್ ಸುಮಾರು 23 ಗ್ರಾಂ ಪ್ರೋಟೀನ್ ಅನ್ನು ಹೊಂದಿರುತ್ತದೆ. ಇದು ಮೊಟ್ಟೆಗಿಂತ ಹೆಚ್ಚು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ