International Yoga Day 2021: ಅಂತಾರಾಷ್ಟ್ರೀಯ ಯೋಗ ದಿನದ ಪ್ರಾಮುಖ್ಯತೆ, ದಿನಾಂಕ ಮತ್ತು ಈ ವರ್ಷದ ಥೀಮ್​ ತಿಳಿಯಿರಿ

ಅಂತಾರಾಷ್ಟ್ರೀಯ ಯೋಗ ದಿನ: ಯೋಗ ಎಂಬ ಪದವು ಸಂಸ್ಕೃತ ಪದವಾಗಿದೆ. ದೇಹ ಮತ್ತು ಪ್ರಜ್ಞೆಯನ್ನು ಒಟ್ಟುಗೂಡಿಸು ಎಂಬ ಅರ್ಥವನ್ನು ಹೊಂದಿದೆ. ಪ್ರತಿನಿತ್ಯ ಜೀವನದಲ್ಲಿ ಉತ್ಸಾಹದಿಂದ ಇರಲು ಹಾಗೂ ಚೈತನ್ಯದಿಂದ ಕೂಡಿರುವಂತೆ ನೋಡಿಕೊಳ್ಳುತ್ತದೆ.

International Yoga Day 2021: ಅಂತಾರಾಷ್ಟ್ರೀಯ ಯೋಗ ದಿನದ ಪ್ರಾಮುಖ್ಯತೆ, ದಿನಾಂಕ ಮತ್ತು ಈ ವರ್ಷದ ಥೀಮ್​ ತಿಳಿಯಿರಿ
ಸಾಂದರ್ಭಿಕ ಚಿತ್ರ
Follow us
| Updated By: shruti hegde

Updated on:Jun 17, 2021 | 10:13 AM

ಯೋಗ ಅಭ್ಯಾಸದಿಂದ ಆರೋಗ್ಯದ ಸುಧಾರಣೆಯ ಕುರಿತಾಗಿ ಜನರಿಗೆ ಜಾಗೃತಿ ಮೂಡಿಸಿಉವ ನಿಟ್ಟಿನಲ್ಲಿ ಯೋಗ ದಿನವನ್ನು ಆಚರಿಸಲಾಗುತ್ತದೆ. ಯೋಗದ ಭಂಗಿಗಳಿಂದ ಆಗುವ ಪ್ರಯೋಜನಗಳನ್ನು ತಿಳಿಸಲು ಅಂತರಾಷ್ಟ್ರೀಯ ಯೋಗ ದಿನವನ್ನು ಜೂನ್​ 21ರಂದು ಪ್ರತೀ ವರ್ಷ ಆಚರಿಸಲಾಗುತ್ತದೆ. ಈ ದಿನವನ್ನು ಪ್ರಧಾನಿ ನರೇಂದ್ರ ಮೋದಿಯವರು ಪ್ರಾರಂಭಿಸಿದರು. ಯೋಗ ಆಭ್ಯಾಸದಿಂದ ಆರೋಗ್ಯದ ಸುಧಾರಣೆಯ ಕುರಿತಾಗಿ ಜಾಗತಿಕವಾಗಿ ಜನರಿಗೆ ಅರಿವು ಮೂಡಿಸಲು ಯೋಗ ದಿನವನ್ನು ಆಚರಿಸಲಾಗುತ್ತದೆ.

ಪಸ್ತುತದಲ್ಲಿ ಕೊರೊನಾ ಸಾಂಕ್ರಾಮಿಕದ ವಿರುದ್ಧ ಇಡೀ ದೇಶವೇ ಹೋರಾಡುತ್ತಿದೆ. ವೈರಸ್​ ಹರಡುವಿಕೆಯ ನಿಯಂತ್ರಣಕ್ಕಾಗಿ ಅದೆಷ್ಟೋ ಪ್ರಯತ್ನಗಳು ದಿನದಿಂದ ದಿನಕ್ಕೆ ನಡೆಯುತ್ತಲೇ ಇದೆ. ಹೀಗಿರುವಾಗ ಜನರು ತಮ್ಮ ಆರೋಗ್ಯದ ಸುರಕ್ಷತೆಯ ಕುರಿತಾಗಿ ಗಮನ ಹರಿಸಲೇ ಬೇಕಾಗಿದೆ. ಯೋಗ ಅಭ್ಯಾಸದಿಂದ, ರೋಗಗಳ ಹರಡುವಿಕೆ ಹಾಗೂ ಅವುಗಳು ದೇಹದ ಮೇಲೆ ಬೀರುವ ಪರಿಣಾಮಗಳಿಂದ ದೂರವಿರಬಹುದು. ಪ್ರತಿನಿತ್ಯ ಯೋಗ ಮಾಡುವ ಅಭ್ಯಾಸವನ್ನು ರೂಢಿಯಲ್ಲಿ ಇಟ್ಟುಕೊಳ್ಳಿ.

ಯೋಗ ಎಂಬ ಪದವು ಸಂಸ್ಕೃತ ಪದವಾಗಿದೆ. ದೇಹ ಮತ್ತು ಪ್ರಜ್ಞೆಯನ್ನು ಒಟ್ಟುಗೂಡಿಸು ಎಂಬ ಅರ್ಥವನ್ನು ಹೊಂದಿದೆ. ಪ್ರತಿನಿತ್ಯ ಜೀವನದಲ್ಲಿ ಉತ್ಸಾಹದಿಂದ ಇರಲು ಹಾಗೂ ಚೈತನ್ಯದಿಂದ ಕೂಡಿರುವಂತೆ ನೋಡಿಕೊಳ್ಳುತ್ತದೆ.

ಅಂತರಾಷ್ಟ್ರಿಯ ಯೋಗ ದಿನ 2021 ಥೀಮ್​ ಹಿಂದಿನ ವರ್ಷ ‘ಮನೆಯಲ್ಲಿ ಕುಟುಂಬದ ಸದಸ್ಯರೊಂದಿಗೆ ಯೋಗ’ ಎಂಬ ಥೀಮ್​ ಮೂಲಕ ಯೋಗ ದಿನವನ್ನು ಆಚರಿಸಲಾಯಿತು. ಆರೋಗ್ಯದಲ್ಲಿ ಚೇತರಿಕೆಯ ಜನತೆಗೆ ಜೀವನದಲ್ಲಿ ಆರಾಮವಾಗಿರಲು ಭರವಸೆಯನ್ನು ನೀಡುತ್ತದೆ. ಅದೇ ರೀತಿ ಈ ವರ್ಷದ ಅಂತರಾಷ್ಟ್ರೀಯ ಯೋಗ ದಿನ 2021 ಥೀಮ್​ ‘ಯೋಗಕ್ಕಾಗಿ ಯೋಗ’. ಪ್ರಸ್ತುತದಲ್ಲಿನ ಸಾಂಕ್ರಾಮಿಕ ಸಮಯದಲ್ಲಿ ಯೋಗವು ಮಾನಸಿಕ ಸದೃಢತೆಯನ್ನು ತಂದುಕೊಡುತ್ತದೆ.

ಸಾಂಕ್ರಾಮಿಕದಿಂದ ಬಳಲಿದವರಿಗೆ ಖಿನ್ನತೆ, ಸುಸ್ತು ಈಗಲೂ ಇದೆ. ಹಾಗಿರುವಾಗ ‘ಯೋಗಕ್ಷೇಮಕ್ಕಾಗಿ ಯೋಗ’ ಎಂಬ ಉದ್ದೇಶದೊಂದಿಗೆ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಕೊವಿಡ್​-19 ಸಾಂಕ್ರಾಮಿಕದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ನಮ್ಮ ದೇಹ ಸಹಕರಿಸಬೇಕು. ವೈರಸ್​ ವಿರುದ್ಧ ಹೋರಾಡಬೇಕು. ಹೀಗಿರುವಾಗ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಯೋಗ ಭಂಗಿಗಳು ಸಹಾಯ ಮಾಡುತ್ತವೆ. ಪ್ರತಿನಿತ್ಯವು ಕೂಡಾ ಯೋಗ ಮಾಡುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳುವುದು ಉತ್ತಮ.

ಇದನ್ನೂ ಓದಿ:

International Yoga Day 2021: ರೋಗನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಸಹಾಯ ಮಾಡುವ ಐದು ಯೋಗಾಸನ

Health Tips: ಆಸಿಡಿಟಿ ನಿವಾರಣೆಗೆ ಯೋಗಾಭ್ಯಾಸ; ಯಾವ ಯೋಗ ಭಂಗಿ ಸೂಕ್ತ?

Published On - 10:12 am, Thu, 17 June 21

ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್