AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Day of Yoga 2025 : ​ಜೂನ್‌ 21 ರಂದೇ ಯೋಗ ದಿನಾಚರಣೆ ಆಚರಿಸುವುದರ ಹಿಂದಿದೆ ಅಚ್ಚರಿಯ ಕಾರಣ

ಯೋಗ ನಮ್ಮ ಪ್ರಾಚಿನ ಕಲೆಯಾಗಿದ್ದು, 6000 ವರ್ಷಕ್ಕೂ ಹಳೆಯದಾದ ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ. ಯೋಗ ನಮ್ಮ ಮನಸ್ಸು, ದೇಹ ಮತ್ತು ಆತ್ಮ ಸೇರಿದ ಎಲ್ಲ ಮೂರು ಅಂಶಗಳನ್ನು ಶುದ್ದೀಕರಿಸಲು ನೆರವಾಗುತ್ತದೆ. ಅದಕ್ಕಾಗಿಯೇ ನಮ್ಮ ಯುವ ಜನತೆ, ತಮ್ಮ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಮತ್ತು ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗದ ಮೊರೆ ಹೋಗುತ್ತಿದ್ದಾರೆ. ಯೋಗದ ಪ್ರಾಮುಖ್ಯತೆಯನ್ನು ಪ್ರತಿಯೊಬ್ಬರಿಗೂ ತಿಳಿಸುವ ಉದ್ದೇಶದಿಂದ ಪ್ರತಿ ವರ್ಷ ಜೂನ್‌ 21 ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತದೆ.

International Day of Yoga 2025 : ​ಜೂನ್‌ 21 ರಂದೇ ಯೋಗ ದಿನಾಚರಣೆ ಆಚರಿಸುವುದರ ಹಿಂದಿದೆ ಅಚ್ಚರಿಯ ಕಾರಣ
ಅಂತರಾಷ್ಟ್ರೀಯ ಯೋಗ ದಿನಾಚರಣೆ
TV9 Web
| Edited By: |

Updated on: Jun 20, 2025 | 1:46 PM

Share

ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಮತ್ತು ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗದ ಮೊರೆ ಹೋಗುತ್ತಿದ್ದಾರೆ. ಇದೊಂದು ಪ್ರಾಚಿನ ಕಲೆಯಾಗಿದ್ದು, 6000 ವರ್ಷಕ್ಕೂ ಹಳೆಯದಾದ ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದ್ದು, ಭಾರತವು ಜಗತ್ತಿಗೆ ನೀಡಿದ ಒಂದು ದೊಡ್ಡ ಕೊಡುಗೆ ಎಂದರೆ ತಪ್ಪಾಗಲಾರದು. ಸಾಮಾನ್ಯವಾಗಿ ಒಬ್ಬ ವ್ಯಕ್ತಿಗೆ ಬಾಹ್ಯ ಸೌಂದರ್ಯ ಎಷ್ಟು ಮುಖ್ಯವಾಗಿರುತ್ತದೆಯೋ ಅಷ್ಟೇ ಆಂತರಿಕ ಸೌಂದರ್ಯ, ಆರೋಗ್ಯ ಎರಡು ಕೂಡ ಬಹಳ ಅವಶ್ಯಕವಾಗಿರುತ್ತದೆ. ಇವೆರಡನ್ನು ಸಮನಾಗಿ ಇಟ್ಟುಕೊಳ್ಳುವುದಕ್ಕೆ ಯೋಗ ಸಹಾಯ ಮಾಡುತ್ತದೆ. ಪ್ರತಿನಿತ್ಯ ತಪ್ಪದೆ ಯೋಗ (Yoga) ಮಾಡುವುದರಿಂದ ಆರೋಗ್ಯ (health) ಚೆನ್ನಾಗಿರುತ್ತದೆ. ಅದಕ್ಕಾಗಿಯೇ ಯೋಗದ ಪ್ರಾಮುಖ್ಯತೆಯನ್ನು ಪ್ರತಿಯೊಬ್ಬರಿಗೂ ತಿಳಿಸುವ ಉದ್ದೇಶದಿಂದ ಪ್ರತಿ ವರ್ಷ ಜೂನ್‌ 21 ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತದೆ.

ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಇತಿಹಾಸ:

2014 ಡಿಸೆಂಬರ್‌ನಲ್ಲಿ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ, ಭಾರತದ ಖಾಯಂ ಪ್ರತಿನಿಧಿಯಾಗಿರುವ ಅಶೋಕ್‌ ಕುಮಾರ್ ಅವರು ಕರಡು ಪ್ರಸ್ತಾವನೆಯನ್ನು ಮಂಡಿಸಿದ್ದರು. ವಿಶ್ವಸಂಸ್ಥೆಗೆ ಇದು ಐತಿಹಾಸಿಕ ಕ್ಷಣವಾಗಿದ್ದು, ಅದರ ಸದಸ್ಯ ರಾಷ್ಟ್ರಗಳು ಅಭೂತಪೂರ್ವ ಬೆಂಬಲ ಸೂಚಿಸಿದ್ದರು. ವಿಶ್ವ ಸಂಸ್ಥೆಯ 193 ರಾಷ್ಟ್ರಗಳ ಪೈಕಿ 177 ದೇಶಗಳು ಅನುಮೋದನೆಯನ್ನು ನೀಡಿದ್ದವು. ಬಳಿಕ 2015 ಜೂನ್ 21ರಂದು ರಾಜಪಥದಲ್ಲಿ ಆಯುಶ್ ಸಚಿವಾಲಯದ ನೇತೃತ್ವದಲ್ಲಿ ಮೊದಲ ಬಾರಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಹಾಗೂ 84 ರಾಷ್ಟ್ರಗಳ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, 21 ಯೋಗ ಆಸನಗಳನ್ನು ಮಾಡಿದ್ದರು.

ಈ ದಿನವನ್ನು ಜೂನ್‌ 21ರಂದು ಏಕೆ ಆಚರಿಸಬೇಕು?

ವರ್ಷದ ದಕ್ಷಿಣ ಗೋಳಾರ್ಧದ ಅತಿ ಚಿಕ್ಕ ದಿನವನ್ನು ಮತ್ತು ಉತ್ತರ ಗೋಳಾರ್ಧದ ಅತಿ ಉದ್ದದ ದಿನವನ್ನು ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಆಯ್ಕೆ ಮಾಡಲಾಗಿದೆ. ಈ ದಿನವನ್ನು ಬೇಸಿಗೆ ಆಯನ ಸಂಕ್ರಾತಿ ದಿನವೆಂದು ಅಂದರೆ ವರ್ಷದಲ್ಲಿನ ಅತ್ಯಂತ ಹೆಚ್ಚು ಹಗಲುಳ್ಳ ದಿನವೆಂದು ಕರೆಯಲಾಗುತ್ತದೆ. ಯೋಗದ ದೃಷ್ಟಿಕೋನದಲ್ಲಿ ಇದು ಅತ್ಯಂತ ಹೆಚ್ಚು ಮಹತ್ವ ಪಡೆದಿದ್ದು, ಈ ದಿನ ದಕ್ಷಿಣಯಾನಕ್ಕೆ ಪರಿವರ್ತನೆ ಎಂದು ಗುರುತಿಸಲಾಗುತ್ತದೆ. ಹಾಗಾಗಿ ಯೋಗ ಆರಂಭ ಮಾಡುವವರಿಗೆ ಈ ದಿನ ಬಹಳ ಪ್ರಶಸ್ತ ಎಂದು ನಂಬಲಾಗಿದೆ.

ಇದನ್ನೂ ಓದಿ
Image
ಬಿ12 ಅಂಶ ಕಡಿಮೆ ಆಗಿದ್ಯಾ? ಈ ಒಂದು ಹಣ್ಣನ್ನು ಸೇವನೆ ಮಾಡಿ
Image
ಈ ಆಹಾರ ಹೃದಯಕ್ಕೆ ಒಳ್ಳೆಯದಲ್ಲ ಎಷ್ಟೇ ಇಷ್ಟವಾಗಿದ್ದರೂ ತಿನ್ನಬೇಡಿ
Image
ನಗುವಾಗ ಡಿಂಪಲ್ ಬೀಳೋದು ಅದೃಷ್ಟ ಅಲ್ಲ, ಇದಕ್ಕೆ ಈ ಆರೋಗ್ಯ ಸಮಸ್ಯೆಯೇ ಕಾರಣ
Image
ರಾತ್ರಿ ಪದೇ ಪದೇ ಎಚ್ಚರವಾಗುತ್ತಾ? ಈ ರೀತಿ ಆಗುವುದಕ್ಕೆ ಇದೇ ಕಾರಣ

ಇದನ್ನೂ ಓದಿ: International Yoga Day :ಮೊದಲ ಬಾರಿಗೆ ಯೋಗ ಮಾಡ್ತಾ ಇದ್ದೀರಾ? ತಜ್ಞರು ಹೇಳಿರುವ ಈ ವಿಷಯಗಳನ್ನು ಮರಿಬೇಡಿ

ಯೋಗವು ಒಂದು ವ್ಯಾಯಮ ಮಾತ್ರವಲ್ಲ. ಅದು ವಿಶ್ವ ಹಾಗೂ ಪ್ರಕೃತಿಯ ಜೊತೆಗೆ ಏಕತೆಯ ಅರ್ಥವನ್ನು ಕಂಡುಹಿಡಿಯಲು ನೆರವಾಗುವ ಒಂದು ಸಾಧನ. ಜೊತೆಗೆ ನಮ್ಮ ಯೋಗಕ್ಷೇಮವನ್ನು ಸುಧಾರಿಸಲು, ಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸಲು ಕೂಡ ಸಹಾಯ ಮಾಡುತ್ತದೆ. ಮನಸ್ಸು ಮತ್ತು ದೇಹ, ಚಿಂತನೆ ಮತ್ತು ಕ್ರಿಯೆ, ಸಂಯಮ ಮತ್ತು ಸಾರ್ಥಕತೆಯನ್ನು ಒಗ್ಗೂಡಿಸುತ್ತದೆ. ಹಾಗೇಯೇ ಪ್ರಕೃತಿ ಮತ್ತು ಮನುಷ್ಯನ ನಡುವೆ ಸಾಮರಸ್ಯವನ್ನುಂಟು ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್