AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health tips: ಬಿಳಿ ಉಪ್ಪು ಅಥವಾ ಕಪ್ಪು ಉಪ್ಪು! ಆರೋಗ್ಯಕ್ಕೆ ಯಾವುದು ಹೆಚ್ಚು ಪ್ರಯೋಜನಕಾರಿ

ಅಡುಗೆ ಮನೆಯಲ್ಲಿ ಎರಡು ರೀತಿಯ ಉಪ್ಪು ಕಂಡು ಬರುವುದನ್ನು ನೀವು ಗಮನಿಸಿರಬಹುದು. ಒಂದು ಬಿಳಿ ಉಪ್ಪು ಇನ್ನೊಂದು ಕಪ್ಪು ಉಪ್ಪು. ಆದರೆ ಇತ್ತೀಚಿನ ವರ್ಷಗಳಲ್ಲಿ ಬಿಳಿ ಉಪ್ಪನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಲಾಗುತ್ತದೆ. ನಿಮಗೆ ಗೊತ್ತೆ? ಬಿಳಿ ಉಪ್ಪಿಗಿಂತ ಕಪ್ಪು ಉಪ್ಪು ಉತ್ತಮ. ಹಾಗಾದರೆ ಈ ಉಪ್ಪು ಹೇಗೆ ಪ್ರಯೋಜನಕಾರಿ ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ.

Health tips: ಬಿಳಿ ಉಪ್ಪು ಅಥವಾ ಕಪ್ಪು ಉಪ್ಪು! ಆರೋಗ್ಯಕ್ಕೆ ಯಾವುದು ಹೆಚ್ಚು ಪ್ರಯೋಜನಕಾರಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jan 02, 2025 | 6:19 PM

Share

ಅಡುಗೆ ಮನೆಯಲ್ಲಿ ಉಪ್ಪಿಲ್ಲದೆ ಆಹಾರ ತಯಾರಾಗುವುದಿಲ್ಲ. ರುಚಿಗೆ ತಕ್ಕಷ್ಟು ಉಪ್ಪು ಬಿದ್ದಾಗಲೇ ಆ ಅಡುಗೆಗೆ ರುಚಿ ಬರುವುದು. ಹಾಗಾಗಿ ಪ್ರತಿಯೊಬ್ಬರ ಮನೆಗಳಲ್ಲಿಯೂ ಉಪ್ಪನ್ನು ಬಳಕೆ ಮಾಡಲಾಗುತ್ತದೆ. ಆದರೆ ಸಾಮಾನ್ಯವಾಗಿ ಅಡುಗೆ ಮನೆಯಲ್ಲಿ ಎರಡು ರೀತಿಯ ಉಪ್ಪು ಕಂಡು ಬರುವುದನ್ನು ನೀವು ಗಮನಿಸಿರಬಹುದು. ಒಂದು ಬಿಳಿ ಉಪ್ಪು ಇನ್ನೊಂದು ಕಪ್ಪು ಉಪ್ಪು. ಆದರೆ ಇತ್ತೀಚಿನ ವರ್ಷಗಳಲ್ಲಿ ಬಿಳಿ ಉಪ್ಪನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಲಾಗುತ್ತದೆ. ನಿಮಗೆ ಗೊತ್ತೆ? ಬಿಳಿ ಉಪ್ಪಿಗಿಂತ ಕಪ್ಪು ಉಪ್ಪು ಉತ್ತಮ. ಹಾಗಾದರೆ ಈ ಉಪ್ಪು ಹೇಗೆ ಪ್ರಯೋಜನಕಾರಿ ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ.

  • ಸಾಮಾನ್ಯವಾಗಿ ಕಪ್ಪು ಉಪ್ಪುಗಳನ್ನು ಚಾಟ್ ಅಥವಾ ಇನ್ನಿತರ ಪದಾರ್ಥಗಳನ್ನು ತಯಾರಿಸಲು ಹೆಚ್ಚಾಗಿ ಬಳಸಲಾಗುತ್ತದೆ.
  • ಇದರಲ್ಲಿ ಕಬ್ಬಿಣ, ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ ನಂತಹ ಖನಿಜಗಳು ಅಧಿಕವಾಗಿರುವುದರಿಂದ ಸಾಮಾನ್ಯ ಉಪ್ಪಿಗಿಂತ ಹೆಚ್ಚು ಪ್ರಯೋಜನಕಾರಿಯಾಗಿರುತ್ತದೆ.
  • ಇದರಲ್ಲಿ ಕಡಿಮೆ ಸೋಡಿಯಂ ಅಂಶವಿರುವುದರಿಂದ, ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ಉಲ್ಬಣ ಗೊಳಿಸುವುದಿಲ್ಲ ಎಂದು ತಜ್ಞರು ಹೇಳುತ್ತಾರೆ.
  • ಅಲ್ಲದೆ ಕಪ್ಪು ಉಪ್ಪು ಪೊಟ್ಯಾಸಿಯಮ್ ನ ಅತ್ಯುತ್ತಮ ಮೂಲವಾಗಿದೆ. ಇದು ಸ್ನಾಯುಗಳಲ್ಲಿ ಸಂಕೋಚನ ಮತ್ತು ಬಿಗಿತವನ್ನು ಕಡಿಮೆ ಮಾಡುತ್ತದೆ. ಇದರಿಂದಾಗಿ ಸ್ನಾಯುಗಳು ಸಹ ಬಲಗೊಳ್ಳುತ್ತವೆ.
  • ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರು ತಪ್ಪದೆ ತಮ್ಮ ಆಹಾರಗಳಲ್ಲಿ ಈ ಉಪ್ಪನ್ನು ಅಲ್ಪ ಪ್ರಮಾಣದಲ್ಲಿಯಾದರೂ ಸೇವನೆ ಮಾಡಬೇಕು.
  • ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಮತ್ತು ಖನಿಜಗಳು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ.
  • ಅಲ್ಲದೆ ಕಪ್ಪು ಉಪ್ಪಿನ ಸೇವನೆಯು, ದೇಹವು ಸೋಂಕು ಮತ್ತು ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್