AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇಪದೇ ತಲೆನೋವು ಬರುತ್ತಾ? ಈ ರೀತಿಯಾಗುವುದಕ್ಕೂ ಹೈ ಬಿಪಿಗೂ ಸಂಬಂಧವಿದೆಯೇ?

ಅನೇಕರಿಗೆ ಆಗಾಗ ತಲೆನೋವು ಕಾಣಿಸಿಕೊಳ್ಳುತ್ತದೆ. ಇದನ್ನು ಸಾಮಾನ್ಯ ಸಮಸ್ಯೆ ಎಂದು ಪರಿಗಣಿಸಿ ನಿರ್ಲಕ್ಷಿಸಬಾರದು. ಹಲವು ಬಾರಿ, ಇದು ಆರೋಗ್ಯ ಸಮಸ್ಯೆಯ ಸೂಚನೆಯೂ ಆಗಿರಬಹುದು. ಇದು ಬಿಪಿ ಬಂದಿರುವ ಸೂಚನೆಯಾಗಿರಬಹುದು. ಹಾಗಾದರೆ ಹೈ ಬಿಪಿ ಮತ್ತು ತಲೆನೋವಿಗಿರುವ ಸಂಬಂಧವೇನು, ಯಾವ ಲಕ್ಷಣಗಳು ಕಂಡುಬಂದಾಗ ತಕ್ಷಣ ಬಿಪಿ ಪರೀಕ್ಷೆ ಮಾಡಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಪದೇಪದೇ ತಲೆನೋವು ಬರುತ್ತಾ? ಈ ರೀತಿಯಾಗುವುದಕ್ಕೂ ಹೈ ಬಿಪಿಗೂ ಸಂಬಂಧವಿದೆಯೇ?
High Bp And HeadachesImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jun 01, 2026 | 6:17 PM

Share

ಇತ್ತೀಚಿನ ದಿನಗಳಲ್ಲಿ ಹೈ ಬ್ಲಡ್ ಪ್ರೆಶರ್ (High Blood Pressure) ಸಮಸ್ಯೆ ಯುವಕರಲ್ಲಿಯೂ ಹೆಚ್ಚಾಗುತ್ತಿದೆ. ಅದರಲ್ಲಿಯೂ ಅನೇಕರಲ್ಲಿ ತಲೆನೋವು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು ಇದನ್ನು ಹಲವರು ಸಾಮಾನ್ಯ ದಣಿವು, ಒತ್ತಡ ಅಥವಾ ನಿದ್ರಾಹೀನತೆಯ ಪರಿಣಾಮ ಎಂದು ನಿರ್ಲಕ್ಷಿಸುತ್ತಾರೆ. ಆದರೆ ನಿಮಗೆ ತಿಳಿದಿರಲಿ ಈ ರೀತಿ ಪದೇಪದೇ ಕಾಣಿಸಿಕೊಳ್ಳುವ ತಲೆನೋವು ಆರೋಗ್ಯ ಸಮಸ್ಯೆಯ ಎಚ್ಚರಿಕೆಯ ಸಂಕೇತವೂ ಆಗಿರಬಹುದು. ಹೌದು, ಇದು ದೇಹ ನೀಡುವ ಸೂಚನೆಯಾಗಿರಬಹುದು. ಇದು ಬಿಪಿ ಬಂದಿರುವ ಸೂಚನೆಯಾಗಿರಬಹುದು. ಹಾಗಾದರೆ ಹೈ ಬಿಪಿ ಮತ್ತು ತಲೆನೋವಿಗಿರುವ ಸಂಬಂಧವೇನು, ಯಾವ ಲಕ್ಷಣಗಳು ಕಂಡುಬಂದಾಗ ತಕ್ಷಣ ಬಿಪಿ ಪರೀಕ್ಷೆ ಮಾಡಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹೈ ಬಿಪಿ ಮತ್ತು ತಲೆನೋವಿಗೂ ಇರುವ ಸಂಬಂಧವೇನು?

ವೈದ್ಯರ ಪ್ರಕಾರ, ಪ್ರತಿ ಬಾರಿ ಕಂಡುಬರುವ ತಲೆನೋವಿಗೂ ಹೈ ಬಿಪಿಗೂ ಸಂಬಂಧವಿರುವುದಿಲ್ಲ. ಮೈಗ್ರೇನ್, ಮಾನಸಿಕ ಒತ್ತಡ, ನೀರಿನ ಕೊರತೆ, ಸರಿಯಾದ ನಿದ್ರೆಯ ಅಭಾವ ಸೇರಿದಂತೆ ಹಲವು ಕಾರಣಗಳಿಂದ ತಲೆನೋವು ಕಾಣಿಸಬಹುದು. ಆದರೆ ರಕ್ತದೊತ್ತಡ ಅತಿಯಾಗಿ ಏರಿದಾಗ ಕೆಲವರಲ್ಲಿ ತಲೆನೋವು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿ ಕೇವಲ ತಲೆನೋವಿನ ಆಧಾರದ ಮೇಲೆ ಹೈ ಬಿಪಿ ಇದೆ ಎಂದು ನಿರ್ಧರಿಸುವುದು ಸರಿಯಲ್ಲ. ಪದೇಪದೇ ತಲೆನೋವು ಕಾಣಿಸುತ್ತಿದ್ದರೆ ರಕ್ತದೊತ್ತಡ ಪರೀಕ್ಷೆ ಮಾಡಿಸಿಕೊಳ್ಳುವುದು ಮುಖ್ಯ.

ಯಾವ ಲಕ್ಷಣಗಳು ಕಂಡುಬಂದರೆ ತಕ್ಷಣ ಬಿಪಿ ಪರೀಕ್ಷೆ ಮಾಡಿಸಬೇಕು?

  • ಪದೇಪದೇ ತಲೆನೋವು
  • ತಲೆಸುತ್ತು
  • ದೃಷ್ಟಿ ಮಸುಕಾಗುವುದು
  • ಎದೆನೋವು
  • ಉಸಿರಾಟದ ತೊಂದರೆ
  • ಅತಿಯಾದ ದಣಿವು
  • ಗಮನ ಕೇಂದ್ರೀಕರಿಸಲು ಕಷ್ಟವಾಗುವುದು ಇದಲ್ಲದೆ, ಕುಟುಂಬದಲ್ಲಿ ಹೈ ಬಿಪಿ ಇತಿಹಾಸ ಇರುವವರು, ಮಧುಮೇಹ, ಸ್ಥೂಲಕಾಯ ಅಥವಾ ಹೃದಯ ಸಂಬಂಧಿತ ಸಮಸ್ಯೆಗಳಿರುವವರು ನಿಯಮಿತವಾಗಿ ಬಿಪಿ ಪರೀಕ್ಷೆ ಮಾಡಿಸಿಕೊಳ್ಳಬೇಕು.

ಇದನ್ನೂ ಓದಿ: ಹೈಬಿಪಿ ಇರುವವರಿಗೆ ತಲೆಯ ಹಿಂಭಾಗದಲ್ಲಿ ನೋವು ಕಂಡುಬರುತ್ತದೆಯೇ?

ಹೈ ಬಿಪಿಯನ್ನು ನಿಯಂತ್ರಣದಲ್ಲಿ ಇಡುವುದು ಹೇಗೆ?

  • ಆರೋಗ್ಯಕರ ಜೀವನಶೈಲಿಯನ್ನು ರೂಡಿಸಿಕೊಳ್ಳಿ
  • ಸಮತೋಲಿತ ಆಹಾರ ಸೇವಿಸಿ
  • ಆಹಾರದಲ್ಲಿ ಉಪ್ಪಿನ ಪ್ರಮಾಣವನ್ನು ಕಡಿಮೆ ಮಾಡಿ
  • ಪ್ರತಿದಿನ ವ್ಯಾಯಾಮ ಮಾಡಿ
  • ಸಾಕಷ್ಟು ನಿದ್ರೆ ಪಡೆಯಿರಿ
  • ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ
  • ಧೂಮಪಾನ ಮತ್ತು ಮದ್ಯಪಾನದಿಂದ ದೂರವಿರಿ
  • ವೈದ್ಯರು ಸೂಚಿಸಿದ ಔಷಧಿಗಳನ್ನು ನಿಯಮಿತವಾಗಿ ತೆಗೆದುಕೊಳ್ಳಿ

ಹೈ ಬ್ಲಡ್ ಪ್ರೆಶರ್ ಅನ್ನು “ಸೈಲೆಂಟ್ ಕಿಲ್ಲರ್” ಎಂದು ಕರೆಯಲಾಗುತ್ತದೆ. ಏಕೆಂದರೆ ಆರಂಭಿಕ ಹಂತದಲ್ಲಿ ಸ್ಪಷ್ಟ ಲಕ್ಷಣಗಳು ಕಾಣಿಸದೇ ಇರಬಹುದು. ಆದ್ದರಿಂದ ಪದೇಪದೇ ತಲೆನೋವು ಕಾಣಿಸಿಕೊಂಡರೆ ಅದನ್ನು ಸಾಮಾನ್ಯ ಸಮಸ್ಯೆ ಎಂದು ಕಡೆಗಣಿಸದೆ, ಅಗತ್ಯ ಪರೀಕ್ಷೆಗಳನ್ನು ಮಾಡಿಸಿಕೊಳ್ಳುವುದು ಉತ್ತಮ. ಸಮಯಕ್ಕೆ ಸರಿಯಾಗಿ ಪತ್ತೆಹಚ್ಚಿ ಚಿಕಿತ್ಸೆ ಪಡೆದರೆ ಹೃದಯ, ಕಿಡ್ನಿ ಮತ್ತು ಮೆದುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ