AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Morning Workout Tips: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ವ್ಯಾಯಾಮ ಮಾಡುವ ಬದಲು ಈ ರೀತಿ ಮಾಡಿ

ಮನುಷ್ಯ ಆರೋಗ್ಯವಾಗಿರುವುದು ಬಹಳ ಮುಖ್ಯ. ಹಾಗಾಗಿ ಬೆಳಿಗ್ಗೆ ವ್ಯಾಯಾಮ ಮಾಡಿದರೆ, ತೂಕವೂ ವೇಗವಾಗಿ ಕಡಿಮೆಯಾಗುತ್ತದೆ. ಆದರೆ ಕೆಲವರಿಗೆ ಖಾಲಿ ಹೊಟ್ಟೆಯಲ್ಲಿ ವ್ಯಾಯಾಮ ಮಾಡುವುದು ಒಳ್ಳೆಯದೇ? ಏನಾದರೂ ತಿಂದು ವ್ಯಾಯಾಮ ಮಾಡಬಹುದೇ? ಯಾವ ರೀತಿಯ ಆಹಾರ ಸೇವನೆ ಮಾಡಬೇಕು? ಹೀಗೆ ನಾನಾ ರೀತಿಯ ಪ್ರಶ್ನೆಗಳಿರುತ್ತವೆ. ಇಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.

Morning Workout Tips: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ವ್ಯಾಯಾಮ ಮಾಡುವ ಬದಲು ಈ ರೀತಿ ಮಾಡಿ
Morning Workout Tip
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jan 11, 2025 | 8:04 AM

Share

ಹೆಚ್ಚಿನ ಜನರು ಬೆಳಿಗ್ಗೆ ಸಮಯದಲ್ಲಿ ವ್ಯಾಯಾಮ ಮಾಡಲು ಇಷ್ಟ ಪಡುತ್ತಾರೆ. ತೂಕ ಕಡಿಮೆ ಮಾಡಿಕೊಂಡು ಆರೋಗ್ಯ ಕಾಪಾಡಿಕೊಳ್ಳುವುದು ಹಲವರ ಮನದಿಂಗಿತವಾಗಿರುತ್ತದೆ. ಆದರೆ ಸರಿಯಾದ ಮಾರ್ಗದರ್ಶನವಿಲ್ಲದೆ ನಾನಾ ರೀತಿಯ ಸಮಸ್ಯೆಗೆ ಸಿಲುಕುತ್ತಾರೆ. ತೂಕ ಇಳಿಸಿಕೊಳ್ಳಲು ಬಯಸುತ್ತಿರುವವರು ವಿವಿಧ ರೀತಿಯ ವ್ಯಾಯಾಮಗಳನ್ನು ಈಗಾಗಲೇ ಮಾಡುತ್ತಿದ್ದರೆ, ದೇಹವನ್ನು ಚೆನ್ನಾಗಿ ಇಟ್ಟುಕೊಳ್ಳಲು ಜಿಮ್ ಗೆ ಹೋಗುತ್ತಿದ್ದರೆ ಇಂತಹ ಅಭ್ಯಾಸ ಒಳ್ಳೆಯದು. ಈಗಿನ ಜೀವನಶೈಲಿಯಲ್ಲಿ ಆರೋಗ್ಯವಾಗಿರುವುದು ಬಹಳ ಮುಖ್ಯ. ಹಾಗಾಗಿ ಬೆಳಿಗ್ಗೆ ವ್ಯಾಯಾಮ ಮಾಡಿದರೆ, ತೂಕವೂ ವೇಗವಾಗಿ ಕಡಿಮೆಯಾಗುತ್ತದೆ. ಆದರೆ ಕೆಲವರಿಗೆ ಖಾಲಿ ಹೊಟ್ಟೆಯಲ್ಲಿ ವ್ಯಾಯಾಮ ಮಾಡುವುದು ಒಳ್ಳೆಯದೇ? ಏನಾದರೂ ತಿಂದು ವ್ಯಾಯಾಮ ಮಾಡಬಹುದೇ? ಯಾವ ರೀತಿಯ ಆಹಾರ ಸೇವನೆ ಮಾಡಬೇಕು? ಹೀಗೆ ನಾನಾ ರೀತಿಯ ಪ್ರಶ್ನೆಗಳಿರುತ್ತವೆ. ಇಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.

ಸಾಮಾನ್ಯವಾಗಿ ದಿನನಿತ್ಯ ವ್ಯಾಯಾಮ ಮಾಡುವವರು ಖಾಲಿ ಹೊಟ್ಟೆಯಲ್ಲಿ ವರ್ಕೌಟ್ ಮಾಡುವುದು ಬಹಳ ಆರಾಮದಾಯಕವೆಂದು ಭಾವಿಸುತ್ತಾರೆ. ಆದರೆ ಕೆಲವರಿಗೆ ಇದು ಸಮಸ್ಯೆಯೂ ಆಗಬಹುದು. ಏಕೆಂದರೆ ಎಲ್ಲರ ದೇಹ ಮತ್ತು ಆಹಾರ ಪದ್ಧತಿ ಒಂದೇ ಆಗಿರುವುದಿಲ್ಲ. ಹಾಗಾಗಿ ಖಾಲಿ ಹೊಟ್ಟೆಯಲ್ಲಿ ವ್ಯಾಯಾಮ ಮಾಡುವುದು ಸೂಕ್ತವಲ್ಲ. ಇದು ನಾನಾ ರೀತಿಯ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗಬಹುದು. ತೂಕ ಇಳಿಸಿಕೊಳ್ಳುವ ನಿಮ್ಮ ಪ್ರಯಾಣದಲ್ಲಿ, ದೇಹದಲ್ಲಿ ಸಂಗ್ರಹವಾದ ಕೊಬ್ಬನ್ನು ತ್ವರಿತವಾಗಿ ಕಡಿಮೆ ಮಾಡುವುದು ಒಳ್ಳೆಯದು. ಆದರೆ ನೀವು ಖಾಲಿ ಹೊಟ್ಟೆಯಲ್ಲಿ ವ್ಯಾಯಾಮ ಮಾಡಿದರೆ, ಗ್ಲೈಕೋಜೆನ್ ನಷ್ಟ ಹೆಚ್ಚಾಗಿರುತ್ತದೆ. ಇದು ನಿಮ್ಮ ದೇಹವನ್ನು ದುರ್ಬಲಗೊಳಿಸಬಹುದು. ಇಂತಹ ಸಂದರ್ಭಗಳಲ್ಲಿ ವ್ಯಾಯಾಮ ಮಾಡುವುದು ಕೂಡ ಕಷ್ಟವಾಗುತ್ತದೆ. ಆದ್ದರಿಂದ ಬೆಳಿಗ್ಗೆ ಸ್ವಲ್ಪ ಆಹಾರ ಸೇವನೆ ಮಾಡಿ ಆ ಬಳಿಕ ವ್ಯಾಯಾಮ ಮಾಡುವುದರಿಂದ ಸಾಕಷ್ಟು ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಆದರೆ ಬೆಳಿಗ್ಗಿನ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು ಎನ್ನುವುದು ಬಹಳ ಮುಖ್ಯವಾಗುತ್ತದೆ.

ಇದನ್ನೂ ಓದಿ: ಪಪ್ಪಾಯಿ, ಬಾಳೆಹಣ್ಣನ್ನು ಒಟ್ಟಿಗೆ ಸೇವಿಸಿದರೆ ಏನಾಗುತ್ತದೆ ಎಂಬುದು ತಿಳಿದಿದೆಯೇ?

ಯಾವ ರೀತಿಯ ಆಹಾರ ಸೇವನೆ ಒಳ್ಳೆಯದು?

ವ್ಯಾಯಾಮ ಆರಂಭ ಮಾಡುವ ಸ್ವಲ್ಪ ಮೊದಲು ನೀವು ಬಾಳೆಹಣ್ಣುಗಳನ್ನು ಸೇವನೆ ಮಾಡಬಹುದು. ಏಕೆಂದರೆ ಈ ಹಣ್ಣನ್ನು ತಿನ್ನುವುದರಿಂದ ಶರೀರಕ್ಕೆ ಶಕ್ತಿ ದೊರಕುತ್ತದೆ. ಇದರಲ್ಲಿ ಇರುವ ಕಾರ್ಬೋಹೈಡ್ರೇಟ್, ಪೊಟಾಷಿಯಮ್ ಅಂಶ ನರಗಳನ್ನು ಚುರುಕಾಗಿ ಇಡುತ್ತದೆ. ಹಾಗಾಗಿ ಬಾಳೆಹಣ್ಣು ಅಥವಾ ಸೇಬು ತಿಂದು ವ್ಯಾಯಾಮ ಮಾಡಬಹುದು. ಸೇಬುಗಳಲ್ಲಿಯೂ ಫೈಬರ್ ಅಂಶ ಸಾಕಷ್ಟು ಪ್ರಮಾಣದಲ್ಲಿದ್ದು, ಬಹಳ ಸಮಯದ ವರೆಗೆ ಹೊಟ್ಟೆ ತುಂಬಿದ ಭಾವನೆಯನ್ನು ನೀಡುತ್ತದೆ. ಪರಿಣಾಮವಾಗಿ ತೂಕ ಕಡಿಮೆಯಾಗುತ್ತದೆ. ಆದರೆ ಹೊಟ್ಟೆ ತುಂಬಾ ತಿಂದರೆ ವ್ಯಾಯಾಮ ಮಾಡುವುದು ಕಷ್ಟವಾಗುತ್ತದೆ. ಆದ್ದರಿಂದ ನಿಮ್ಮ ಆಹಾರ ಸರಳವಾಗಿರುವಂತೆ ನೋಡಿಕೊಳ್ಳಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್