AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ ಮಲ್ಟಿವಿಟಮಿನ್ ತೆಗೆದುಕೊಳ್ಳುವುದು ನಿಜವಾಗಿಯೂ ಒಳ್ಳೆಯದೇ? ಏನ್ ಹೇಳ್ತಾರೆ ವೈದ್ಯರು?

ಇತ್ತೀಚಿನ ದಿನಗಳಲ್ಲಿ ಕೆಲಸದ ಒತ್ತಡ, ಫಾಸ್ಟ್ ಫುಡ್ ಸೇವನೆ ಹೆಚ್ಚಾಗಿರುವುದರಿಂದ ಜನರ ಆಹಾರದಲ್ಲಿ ಅಗತ್ಯವಾದ ಪೋಷಕಾಂಶಗಳ ಕೊರತೆ ಕಾಣಿಸುತ್ತಿದೆ. ಇದರಿಂದ ಹಲವರು ವೈದ್ಯರ ಸಲಹೆ ಇಲ್ಲದೆ ಮಲ್ಟಿವಿಟಮಿನ್ ಸೇವಿಸಲು ಪ್ರಾರಂಭಿಸುತ್ತಾರೆ. ಕೆಲವರು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು, ದಣಿವು ಕಡಿಮೆ ಮಾಡಲು ಅಥವಾ ದೇಹಕ್ಕೆ ಶಕ್ತಿ ನೀಡಲು ಸಹ ಮಲ್ಟಿವಿಟಮಿನ್ ಬಳಸುತ್ತಾರೆ. ಆದರೆ ಈ ರೀತಿ ಪ್ರತಿದಿನ ಮಲ್ಟಿವಿಟಮಿನ್ ಸೇವಿಸುವುದು ಸರಿಯೇ ಅಥವಾ ಅದು ಆರೋಗ್ಯಕ್ಕೆ ಹಾನಿ ಉಂಟುಮಾಡಬಹುದೇ ಎಂಬುದನ್ನು ತಿಳಿದುಕೊಳ್ಳುವುದು ಅಗತ್ಯ. ಈ ಬಗ್ಗೆ ಸ್ಪಷ್ಟ ಮಾಹಿತಿ ಸ್ಟೋರಿಯಲ್ಲಿದೆ.

ಪ್ರತಿದಿನ ಮಲ್ಟಿವಿಟಮಿನ್ ತೆಗೆದುಕೊಳ್ಳುವುದು ನಿಜವಾಗಿಯೂ ಒಳ್ಳೆಯದೇ? ಏನ್ ಹೇಳ್ತಾರೆ ವೈದ್ಯರು?
Daily Multivitamin IntakeImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Mar 11, 2026 | 7:32 PM

Share

ಇಂದಿನ ವೇಗದ ಜೀವನಶೈಲಿಯಲ್ಲಿ ಹಲವರಿಗೆ ತಮ್ಮ ಆಹಾರ ಪದ್ಧತಿಗೆ ಗಮನ ನೀಡಲು ಸಾಧ್ಯವಾಗುವುದಿಲ್ಲ. ಈ ಕಾರಣದಿಂದ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಪೂರೈಸಲು ಹಲವರು ಮಲ್ಟಿವಿಟಮಿನ್‌ಗಳ (Multivitamin) ಮೇಲೆ ಅವಲಂಬಿತರಾಗುತ್ತಿದ್ದಾರೆ. ಮಲ್ಟಿವಿಟಮಿನ್‌ಗಳು ಎಂದರೆ ಹಲವು ವಿಧದ ವಿಟಮಿನ್ ಮತ್ತು ಖನಿಜಾಂಶಗಳನ್ನು ಒಳಗೊಂಡಿರುವ ಪೂರಕ ಆಹಾರಗಳು. ಉದಾಹರಣೆಗೆ ವಿಟಮಿನ್ A, B, C, D, E ಜೊತೆಗೆ ಐರನ್, ಕ್ಯಾಲ್ಸಿಯಂ, ಜಿಂಕ್ ಮುಂತಾದವುಗಳು ಒಂದೇ ಮಾತ್ರೆಯಲ್ಲಿ ಇವೆಲ್ಲವೂ ದೊರೆಯುತ್ತವೆ. ಇವು ದೇಹದಲ್ಲಿ ಪೋಷಕಾಂಶಗಳ ಕೊರತೆಯನ್ನು ತುಂಬಲು ಸಹಾಯ ಮಾಡುತ್ತದೆ. ಸಾಮಾನ್ಯವಾಗಿ ದೇಹದಲ್ಲಿ ಯಾವುದಾದರೂ ವಿಟಮಿನ್ ಅಥವಾ ಖನಿಜಾಂಶಗಳ ಕೊರತೆ ಕಂಡುಬಂದಾಗ ಅಥವಾ ವ್ಯಕ್ತಿಯ ಆಹಾರ ಸಮತೋಲನದಲ್ಲಿಲ್ಲದಿದ್ದರೆ ವೈದ್ಯರು ಮಲ್ಟಿವಿಟಮಿನ್ ತೆಗೆದುಕೊಳ್ಳುವಂತೆ ಸಲಹೆ ನೀಡುತ್ತಾರೆ. ಆದರೆ ಪ್ರತಿದಿನ ಮಲ್ಟಿವಿಟಮಿನ್ ತೆಗೆದುಕೊಳ್ಳುವುದು ಆರೋಗ್ಯಕ್ಕೆ ಒಳ್ಳೆಯದೆಯೇ ಅಥವಾ ಹಾನಿಕಾರಕವೇ ಎಂಬುದನ್ನು ತಿಳಿದುಕೊಳ್ಳುವುದು ಅಗತ್ಯ. ಈ ಬಗ್ಗೆ ಸ್ಪಷ್ಟ ಮಾಹಿತಿ ಸ್ಟೋರಿಯಲ್ಲಿದೆ.

ಪ್ರತಿದಿನ ಮಲ್ಟಿವಿಟಮಿನ್ ತೆಗೆದುಕೊಳ್ಳುವುದು ಸರಿಯೇ?

ಆರ್‌ಎಂಎಲ್ ಆಸ್ಪತ್ರೆಯ ಮೆಡಿಸಿನ್ ವಿಭಾಗದ ನಿರ್ದೇಶಕ ಪ್ರೊಫೆಸರ್ ಡಾ. ಸುಭಾಷ್ ಗಿರಿ ಹೇಳುವ ಪ್ರಕಾರ, ಪ್ರತಿಯೊಬ್ಬರೂ ಪ್ರತಿದಿನ ಮಲ್ಟಿವಿಟಮಿನ್ ತೆಗೆದುಕೊಳ್ಳುವುದು ಅಗತ್ಯವಿಲ್ಲ. ಸಮತೋಲನಯುತ ಮತ್ತು ಪೌಷ್ಟಿಕ ಆಹಾರ ಸೇವಿಸುತ್ತಿದ್ದರೆ ದೇಹಕ್ಕೆ ಬೇಕಾದ ವಿಟಮಿನ್ ಮತ್ತು ಖನಿಜಾಂಶಗಳು ಆಹಾರದಿಂದಲೇ ದೊರೆಯುತ್ತವೆ. ಹಣ್ಣುಗಳು, ತರಕಾರಿಗಳು, ಧಾನ್ಯಗಳು, ಬೇಳೆಗಳು ಮತ್ತು ಪ್ರೋಟೀನ್‌ಯುಕ್ತ ಆಹಾರಗಳನ್ನು ನಿಯಮಿತವಾಗಿ ಸೇವಿಸುವವರಲ್ಲಿ ಸಾಮಾನ್ಯವಾಗಿ ಪೋಷಕಾಂಶಗಳ ಕೊರತೆ ಕಾಣಿಸದು. ಕೆಲ ಸಂದರ್ಭಗಳಲ್ಲಿ ಮಾತ್ರ ಮಲ್ಟಿವಿಟಮಿನ್ ಅಗತ್ಯವಾಗಬಹುದು. ಉದಾಹರಣೆಗೆ ಸಮತೋಲಿತ ಆಹಾರ ಸೇವನೆ ಮಾಡದವರು, ವೃದ್ಧರು, ಗರ್ಭಿಣಿಯರು, ಮಗುವಿಗೆ ಹಾಲುಣಿಸುವ ಮಹಿಳೆಯರು ಅಥವಾ ಕೆಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ವೈದ್ಯರ ಸಲಹೆಯ ಮೇರೆಗೆ ಮಲ್ಟಿವಿಟಮಿನ್ ತೆಗೆದುಕೊಳ್ಳಬಹುದು.

ಇದನ್ನೂ ಓದಿ: ಸುಸ್ತಾಗುತ್ತೆ ಎಂದು ಮಲ್ಟಿವಿಟಮಿನ್‌ ಸೇವನೆ ಮಾಡುತ್ತೀರಾ? ಹಾಗಿದ್ರೆ ಈ ವಿಷಯಗಳನ್ನು ತಿಳಿದುಕೊಳ್ಳಿ

ವೈದ್ಯರು ಮತ್ತೊಂದು ಮಹತ್ವದ ವಿಷಯವನ್ನು ಕೂಡ ಹೇಳುತ್ತಾರೆ. ಕೆಲವು ವಿಟಮಿನ್‌ಗಳು ವಿಟಮಿನ್ A, D, E ಮತ್ತು K ದೇಹದಲ್ಲಿ ಸಂಗ್ರಹವಾಗುವ ಸ್ವಭಾವ ಹೊಂದಿವೆ. ಇವುಗಳನ್ನು ಅತಿಯಾದ ಪ್ರಮಾಣದಲ್ಲಿ ತೆಗೆದುಕೊಂಡರೆ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಬಹುದು. ಆದ್ದರಿಂದ ವೈದ್ಯರ ಸಲಹೆ ಇಲ್ಲದೆ ಮಲ್ಟಿವಿಟಮಿನ್ ಸೇವಿಸುವುದು ಸೂಕ್ತವಲ್ಲ. ತಜ್ಞರ ಪ್ರಕಾರ, ಮಲ್ಟಿವಿಟಮಿನ್‌ಗಳನ್ನು ಸಮತೋಲನಯುತ ಆಹಾರದ ಪರ್ಯಾಯವಾಗಿ ಪರಿಗಣಿಸಬಾರದು. ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಸಹಜವಾದ ಆಹಾರಗಳಿಂದ ಪಡೆಯುವುದೇ ಉತ್ತಮ. ಯಾವುದೇ ಪೂರಕ ಆಹಾರವನ್ನು ದೀರ್ಘಕಾಲ ಸೇವಿಸುವ ಮೊದಲು ವೈದ್ಯರ ಸಲಹೆ ಪಡೆಯುವುದು ಅಗತ್ಯ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ
ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ