AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ಕರೆ ಸೇವನೆಯನ್ನು ಕಡಿಮೆ ಮಾಡಿದರೆ ಆರೋಗ್ಯದಲ್ಲಿ ಬದಲಾವಣೆ ಆಗುತ್ತದೆಯೇ? ಯಾವ ಆಹಾರಗಳಲ್ಲಿ ಸಕ್ಕರೆ ಅಂಶ ಹೆಚ್ಚಿರುತ್ತದೆ?

ಇತ್ತೀಚಿನ ದಿನಗಳಲ್ಲಿ, ಜನರ ದೈನಂದಿನ ಆಹಾರದಲ್ಲಿ ಸಕ್ಕರೆಯ ಸೇವನೆ ತುಂಬಾ ಹೆಚ್ಚಾಗಿದೆ. ಅದರಲ್ಲಿಯೂ ಕಣ್ಣಿಗೆ ಕಾಣದ ಸಕ್ಕರೆ ಅಂಶಗಳು ಕೆಲವು ಆಹಾರಗಳಿಂದ ದೇಹಕ್ಕೆ ಸೇರಿಕೊಳ್ಳುತ್ತದೆ ಇದು ಹೆಚ್ಚಿನ ಸಮಯದಲ್ಲಿ ಅರಿವಿಗೆ ಬರುವುದೇ ಇಲ್ಲ. ಈ ರೀತಿ ದೀರ್ಘಕಾಲದವರೆಗೆ ಹೆಚ್ಚು ಸಕ್ಕರೆ ಸೇವಿಸುವುದರಿಂದ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಹಾಗಾಗಿ ಇಂತಹ ಸಮಸ್ಯೆಗಳನ್ನು ತಪ್ಪಿಸಲು ಮತ್ತು ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಳ್ಳಲು ಡಬ್ಲ್ಯೂಎಚ್ಓ ನೀಡಿರುವ ಮಾರ್ಗಸೂಚಿಯನ್ನು ಅನುಸರಿಸಿ ನೋಡಿ.

ಸಕ್ಕರೆ ಸೇವನೆಯನ್ನು ಕಡಿಮೆ ಮಾಡಿದರೆ ಆರೋಗ್ಯದಲ್ಲಿ ಬದಲಾವಣೆ ಆಗುತ್ತದೆಯೇ? ಯಾವ ಆಹಾರಗಳಲ್ಲಿ ಸಕ್ಕರೆ ಅಂಶ ಹೆಚ್ಚಿರುತ್ತದೆ?
ಆರೋಗ್ಯಕರ ಜೀವನಕ್ಕೆ ಸಕ್ಕರೆ ನಿಯಂತ್ರಣImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jul 04, 2026 | 5:36 PM

Share

ಮುಖ್ಯಾಂಶಗಳು

  • ಆರೋಗ್ಯಕರ ಜೀವನಕ್ಕೆ ಸಕ್ಕರೆ ನಿಯಂತ್ರಣ ಏಕೆ ಮುಖ್ಯ?
  • ಸಕ್ಕರೆ ಕಡಿಮೆ ಮಾಡಿ, ಆರೋಗ್ಯ ಹೆಚ್ಚಿಸಿ: ಡಬ್ಲ್ಯೂಎಚ್ಓ ಪ್ರಮುಖ ಸಲಹೆಗಳು
  • ಸಕ್ಕರೆ ಕಡಿಮೆ ಮಾಡಿದರೆ ದೇಹಕ್ಕೆ ಏನೆಲ್ಲ ಲಾಭವಾಗುತ್ತದೆ?

ಇತ್ತೀಚಿನ ದಿನಗಳಲ್ಲಿ ಚಹಾ, ಕಾಫಿ, ಸಿಹಿತಿಂಡಿ, ತಂಪು ಪಾನೀಯಗಳು, ಪ್ಯಾಕೇಜ್ಡ್ ಜ್ಯೂಸ್ ಹಾಗೂ ಪ್ರೊಸೆಸ್ಡ್ ಆಹಾರಗಳ ಮೂಲಕ ಅಗತ್ಯಕ್ಕಿಂತ ಹೆಚ್ಚು ಸಕ್ಕರೆ ಸೇವಿಸುವವರ ಸಂಖ್ಯೆ ಹೆಚ್ಚಾಗಿದೆ. ಅಧಿಕ ಸಕ್ಕರೆ ಸೇವನೆಯು ದೀರ್ಘಾವಧಿಯಲ್ಲಿ ದೇಹದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ವಿಶ್ವ ಆರೋಗ್ಯ ಸಂಸ್ಥೆ (WHO) ಸಕ್ಕರೆ ಸೇವನೆ ಮಾಡುವುದಕ್ಕೆ ಒಂದು ಮಿತಿಯನ್ನು ನಿಗದಿ ಪಡಿಸಿಕೊಳ್ಳಬೇಕು ಎಂದು ಹೇಳಿದೆ. ಹಾಗಾದರೆ ಪ್ರತಿನಿತ್ಯ ಎಷ್ಟು ಪ್ರಮಾಣದಲ್ಲಿ ಸಕ್ಕರೆ ಸೇವನೆ ಮಾಡಬಹುದು ಮತ್ತು ಸಕ್ಕರೆ ಸೇವನೆಯನ್ನು ಕಡಿಮೆ ಮಾಡಿದರೆ ಯಾವ ರೀತಿಯ ಪ್ರಯೋಜನವಾಗುತ್ತದೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಡಬ್ಲ್ಯೂಎಚ್ಓ ನೀಡಿರುವ ಸಲಹೆಗಳು;

ಸಾಮಾನ್ಯವಾಗಿ ಡಬ್ಲ್ಯೂಎಚ್ಓ (WHO) ಪ್ರಕಾರ, ದಿನದ ಒಟ್ಟು ಕ್ಯಾಲೊರಿಗಳಲ್ಲಿ 10% ಕ್ಕಿಂತ ಕಡಿಮೆ ಮಾತ್ರ ಹೆಚ್ಚುವರಿ ಸಕ್ಕರೆಯಿಂದ ಬರಬೇಕು. ಉತ್ತಮ ಆರೋಗ್ಯಕ್ಕಾಗಿ ಇದನ್ನು 5% (ಸುಮಾರು 25 ಗ್ರಾಂ ಅಥವಾ 6 ಟೀ ಚಮಚ) ಒಳಗೆ ಮಿತಿಗೊಳಿಸುವುದು ಸೂಕ್ತ. ಈ ಪ್ರಮಾಣವು ಸಿಹಿ ಪಾನೀಯಗಳು, ಸಿಹಿತಿಂಡಿಗಳು ಮತ್ತು ಪ್ರೊಸೆಸ್ಡ್ ಆಹಾರಗಳಲ್ಲಿ ಇರುವ ಹೆಚ್ಚುವರಿ ಸಕ್ಕರೆಗೆ ಅನ್ವಯಿಸುತ್ತದೆ. ಹಣ್ಣು ಮತ್ತು ಹಾಲಿನಲ್ಲಿರುವ ನೈಸರ್ಗಿಕ ಸಕ್ಕರೆ ಇದಕ್ಕೆ ಅನ್ವಯವಾಗಿಲ್ಲ.

ಇದನ್ನೂ ಓದಿ: ಮೈಗ್ರೇನ್ ಮತ್ತು ರಕ್ತಹೀನತೆಗೆ ಸಂಬಂಧವಿದೆಯೇ? ಅಧ್ಯಯನದ ತಿಳಿದುಬಂದ ಅಚ್ಚರಿ ಮಾಹಿತಿ ಇಲ್ಲಿದೆ

ಸಕ್ಕರೆ ಸೇವನೆಯನ್ನು ಕಡಿಮೆ ಮಾಡಿದರೆ ಏನು ಪ್ರಯೋಜನ?

ಸಾಮಾನ್ಯವಾಗಿ ಸಕ್ಕರೆ ಸೇವನೆ ಕಡಿಮೆ ಮಾಡಿದರೆ ತೂಕ ನಿಯಂತ್ರಣಕ್ಕೆ ಸಹಕಾರಿಯಾಗುತ್ತದೆ. ರಕ್ತದಲ್ಲಿನ ಸಕ್ಕರೆಯ ಮಟ್ಟ ಸಮತೋಲನದಲ್ಲಿದ್ದು, ಮಧುಮೇಹದ ಅಪಾಯ ಕಡಿಮೆಯಾಗಬಹುದು. ಹೃದಯದ ಆರೋಗ್ಯ ಸುಧಾರಿಸುವುದರ ಜೊತೆಗೆ ಹಲ್ಲುಗಳಲ್ಲಿ ಕ್ಯಾವಿಟಿ ಉಂಟಾಗುವ ಸಾಧ್ಯತೆಯೂ ಕಡಿಮೆಯಾಗುತ್ತದೆ. ದಿನವಿಡೀ ಶಕ್ತಿ ಸ್ಥಿರವಾಗಿದ್ದು, ಚರ್ಮದ ಆರೋಗ್ಯ ಮತ್ತು ನಿದ್ರೆಯ ಗುಣಮಟ್ಟವೂ ಚೆನ್ನಾಗಿರುತ್ತದೆ.

ಯಾವ ಆಹಾರಗಳಲ್ಲಿ ಹೆಚ್ಚು ಸಕ್ಕರೆ ಅಡಗಿದೆ?

ಕೋಲ್ಡ್ ಡ್ರಿಂಕ್ಸ್, ಪ್ಯಾಕೇಜ್ಡ್ ಜ್ಯೂಸ್, ಎನರ್ಜಿ ಡ್ರಿಂಕ್ಸ್, ಬಿಸ್ಕತ್, ಕೇಕ್, ಚಾಕೊಲೇಟ್, ಸಿಹಿತಿಂಡಿಗಳು, ಫ್ಲೇವರ್ಡ್ ಮೊಸರು, ಬ್ರೇಕ್‌ಫಾಸ್ಟ್ ಸೀರಿಯಲ್ಸ್, ಕೆಚಪ್, ಸಾಸ್ ಹಾಗೂ ರೆಡಿ-ಟು-ಈಟ್ ಆಹಾರಗಳಲ್ಲಿ ಸಕ್ಕರೆ ಪ್ರಮಾಣ ಹೆಚ್ಚಿರುತ್ತದೆ. ಆರೋಗ್ಯ ಕಾಪಾಡಿಕೊಳ್ಳಲು ಆಹಾರ ಖರೀದಿಸುವಾಗ ಪ್ಯಾಕೆಟ್‌ನ ಲೇಬಲ್ ಓದುವ ಅಭ್ಯಾಸ ಬೆಳೆಸಿಕೊಳ್ಳಿ. ಕಡಿಮೆ ಸಕ್ಕರೆ ಇರುವ ಆಹಾರಗಳನ್ನು ಆಯ್ಕೆ ಮಾಡಿ ಹಾಗೂ ಸಮತೋಲನ ಆಹಾರ ಪದ್ಧತಿ ಅನುಸರಿಸುವುದರಿಂದ ದೀರ್ಘಾವಧಿಯಲ್ಲಿ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ