AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tomato: ಮಧುಮೇಹಿಗಳು ಟೊಮೇಟೊ ತಿನ್ನಬಹುದೇ? ಗರ್ಭಿಣಿಯರೂ ಟೊಮೆಟೊಗಳನ್ನು ತಿನ್ನಬಹುದೇ?

ಕೆಲವರಿಗೆ ಟೊಮೆಟೊ ಅಲರ್ಜಿ. ಅಂತಹವರು ಯಾಮಾರಿ ಟೊಮ್ಯಾಟೊ ತಿಂದರೆ ಚರ್ಮದಲ್ಲಿ ದದ್ದುಗಳು ಬರುವುದಲ್ಲದೆ ಜೀರ್ಣಾಂಗವ್ಯೂಹದ ತೊಂದರೆಯೂ ಉಂಟಾಗುತ್ತದೆ. ಟೊಮೆಟೊದಲ್ಲಿ ಮ್ಯಾಲಿಕ್ ಮತ್ತು ಸಿಟ್ರಿಕ್ ಆಮ್ಲ ಅಧಿಕವಾಗಿದೆ. ಇದು ಹೊಟ್ಟೆ ನೋವಿಗೆ ಕಾರಣವಾಗುತ್ತದೆ. ಟೊಮೆಟೊಗಳ ಅತಿಯಾದ ಸೇವನೆಯು ಜಠರ ಗರುಳಿನ ಸಮಸ್ಯೆಗಳಿಗೆ ಕಾರಣವಾಗಬಹುದು.

Tomato: ಮಧುಮೇಹಿಗಳು ಟೊಮೇಟೊ ತಿನ್ನಬಹುದೇ? ಗರ್ಭಿಣಿಯರೂ ಟೊಮೆಟೊಗಳನ್ನು ತಿನ್ನಬಹುದೇ?
ಮಧುಮೇಹಿಗಳು ಟೊಮೆಟೊ ತಿನ್ನಬಹುದೇ?
ಸಾಧು ಶ್ರೀನಾಥ್​
|

Updated on: Sep 09, 2023 | 6:06 AM

Share

ಟೊಮೇಟೊ ಬೆಲೆ ಕಡಿಮೆಯಾಗುತ್ತಿರುವುದರಿಂದ ಪ್ರತಿ ಮನೆಯಲ್ಲೂ ಟೊಮೇಟೊ ಮತ್ತೆ ಕಾಣಿಸಿಕೊಂಡಿದೆ. ಟೊಮೇಟೊದಲ್ಲಿ ವಿಟಮಿನ್ ಸಿ, ಪೊಟ್ಯಾಸಿಯಮ್, ಫೋಲೇಟ್ ಮತ್ತು ವಿಟಮಿನ್ ಕೆ ಸಮೃದ್ಧವಾಗಿದೆ. ಅಲ್ಲದೆ ವಿಟಮಿನ್ ಇ ಇದ್ದು, ಥಯಾಮಿನ್, ನಿಯಾಸಿನ್, ವಿಟಮಿನ್ ಬಿ 6, ಮೆಗ್ನೀಸಿಯಮ್, ರಂಜಕ ಮತ್ತು ತಾಮ್ರದಿಂದಲೂ ಸಮೃದ್ಧವಾಗಿದೆ. ಮಳೆಗಾಲದಲ್ಲಿ ಟೊಮೇಟೊವನ್ನು ತಿನ್ನುವುದರಿಂದ ಅದರಲ್ಲಿರುವ ಪೋಷಕಾಂಶಗಳು ಸೋಂಕು ಮತ್ತು ರೋಗಗಳಿಂದ ರಕ್ಷಿಸುತ್ತದೆ. ಆದರೆ ರೈತರು ತರಕಾರಿ, ಟೊಮೇಟೊ ( Tomatoes) ಬೆಳೆಗೆ ಬಹಳಷ್ಟು ಕೀಟನಾಶಕ ಬಳಸುತ್ತಾರೆ. ಅದಕ್ಕಾಗಿ ಅವುಗಳನ್ನು ಸ್ವಚ್ಛವಾಗಿ ತೊಳೆದ ನಂತರ ಬಳಸಬೇಕು (Health).

ಸಾವಯವ ಟೊಮೆಟೊಗಳ ಬಳಕೆ ಇನ್ನೂ ಉತ್ತಮವಾಗಿದೆ. 100 ಗ್ರಾಂ ಟೊಮೆಟೊದಲ್ಲಿರುವ ಪೋಷಕಾಂಶಗಳು ಯಾವುವು? ಸುಮಾರು 22 ಕ್ಯಾಲೋರಿಗಳು, 4.8 ಗ್ರಾಂ ಕಾರ್ಬೋಹೈಡ್ರೇಟ್‌ಗಳು, 3.2 ಗ್ರಾಂ ಸಕ್ಕರೆ, 1.1 ಗ್ರಾಂ ಪ್ರೋಟೀನ್, 0.2 ಗ್ರಾಂ ಕೊಬ್ಬು, 1.5 ಗ್ರಾಮ್​ ಫೈಬರ್ ಅನ್ನು ಹೊಂದಿರುತ್ತದೆ.

ಟೊಮೆಟೊದ ಆರೋಗ್ಯ ಪ್ರಯೋಜನಗಳು:

ಆಹಾರದಲ್ಲಿ ಟೊಮೆಟೊವನ್ನು ಸೇವಿಸುವುದರಿಂದ ಹೃದಯದ ಆರೋಗ್ಯ ಸುಧಾರಿಸುತ್ತದೆ. ಎಲ್ಡಿಎಲ್ ಕೊಲೆಸ್ಟ್ರಾಲ್, ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ. ಟೊಮೆಟೊದಲ್ಲಿರುವ ಲೈಕೋಪೀನ್ ಎಂಬ ಪದಾರ್ಥ ಪ್ರಾಸ್ಟೇಟ್ ಕ್ಯಾನ್ಸರ್ ಅನ್ನು ತಡೆಯುತ್ತದೆ. ಅವುಗಳಲ್ಲಿರುವ ಫೈಬರ್ ಅಂಶವು ಜೀರ್ಣಕ್ರಿಯೆಯು ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ. ಟೊಮೆಟೊದಲ್ಲಿ ಬೀಟಾ-ಕ್ಯಾರೋಟಿನ್ ಮತ್ತು ಲುಟೀನ್ ಹೇರಳವಾಗಿರುವ ಕಾರಣ, ಇದು ಕಣ್ಣಿನ ಕಾಯಿಲೆಗಳಿಂದ ರಕ್ಷಣೆ ನೀಡುತ್ತದೆ ಮತ್ತು ಕಣ್ಣುಗಳಿಗೆ ಒಳ್ಳೆಯದು. ಇದಲ್ಲದೆ, ಟೊಮೆಟೊಗಳು ವಿಟಮಿನ್ಗಳು ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿವೆ. ಟೊಮೆಟೊದಲ್ಲಿರುವ ಲೈಕೋಪೀನ್ ಎಂಬ ಪದಾರ್ಥವು ಯುವಿ ನಂತಹ ಹಾನಿಕಾರಕ ಕಿರಣಗಳ ಪರಿಣಾಮಗಳಿಂದ ಚರ್ಮವನ್ನು ರಕ್ಷಿಸುತ್ತದೆ.

ಮಧುಮೇಹಿಗಳು ಟೊಮೆಟೊ ತಿನ್ನಬಹುದೇ?

ಟೊಮೆಟೊದಲ್ಲಿ ಗ್ಲೈಸೆಮಿಕ್ (Glycemic index) ಕಡಿಮೆ. ಇವನ್ನು ಮಧುಮೇಹಿಗಳು ಸೇವಿಸಬಹುದು. ಆದರೆ ಇವುಗಳನ್ನು ಸಮತೋಲಿತ ಆಹಾರದ ಭಾಗವಾಗಿ ಮಾತ್ರ ತೆಗೆದುಕೊಳ್ಳಬೇಕು. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಮಿತವಾಗಿ ಮೇಲ್ವಿಚಾರಣೆ ಮಾಡಲು ಮರೆಯಬೇಡಿ.

ಗರ್ಭಿಣಿಯರು ಟೊಮೆಟೊ ತಿನ್ನಬಹುದೇ?

ಟೊಮ್ಯಾಟೋ ಫೋಲೇಟ್ ಅನ್ನು ಹೊಂದಿರುತ್ತದೆ. ಭ್ರೂಣದ ನರ ಕೊಳವೆಯ ಬೆಳವಣಿಗೆಗೆ ಇದು ಅವಶ್ಯಕವಾಗಿದೆ. ಇವುಗಳಲ್ಲಿರುವ ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್ ತಾಯಿ ಮತ್ತು ಮಗುವಿಗೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತದೆ.

ಕೆಲವರಿಗೆ ಟೊಮೆಟೊ ಅಲರ್ಜಿ. ಅಂತಹವರು ಯಾಮಾರಿ ಟೊಮ್ಯಾಟೊ ತಿಂದರೆ ಚರ್ಮದಲ್ಲಿ ದದ್ದುಗಳು ಬರುವುದಲ್ಲದೆ ಜೀರ್ಣಾಂಗವ್ಯೂಹದ ತೊಂದರೆಯೂ ಉಂಟಾಗುತ್ತದೆ. ಟೊಮೆಟೊದಲ್ಲಿ ಮ್ಯಾಲಿಕ್ ಮತ್ತು ಸಿಟ್ರಿಕ್ ಆಮ್ಲ ಅಧಿಕವಾಗಿದೆ. ಇದು ಹೊಟ್ಟೆ ನೋವಿಗೆ ಕಾರಣವಾಗುತ್ತದೆ. ಟೊಮೆಟೊಗಳ ಅತಿಯಾದ ಸೇವನೆಯು ಜಠರ ಗರುಳಿನ ಸಮಸ್ಯೆಗಳಿಗೆ ಕಾರಣವಾಗಬಹುದು. ಆದರೆ ಕೆಲವರು ಟೊಮೆಟೊ ತಿಂದರೆ ತೂಕ ಹೆಚ್ಚುತ್ತದೆ ಎಂದು ಭಾವಿಸುತ್ತಾರೆ. ಆದರೆ ಅದು ನಿಜವಲ್ಲ.

ಟೊಮ್ಯಾಟೋ ಕಡಿಮೆ ಕ್ಯಾಲೋರಿ ಮತ್ತು ಕೊಬ್ಬನ್ನು ಹೊಂದಿರುತ್ತದೆ. ಹಸಿ ಟೊಮ್ಯಾಟೊ ಬೇಯಿಸಿದಕ್ಕಿಂತ ಉತ್ತಮ ಮತ್ತು ಅವುಗಳನ್ನು ಬೇಯಿಸದೆ ಹಸಿಯಾಗಿ ತಿನ್ನುವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಸಎನ್ಬಹುದು . ಟೊಮೆಟೊವನ್ನು ಬೇಯಿಸುವುದು ವಾಸ್ತವವಾಗಿ ಲೈಕೋಪೀನ್‌ನ ಲಭ್ಯತೆಯನ್ನು ಹೆಚ್ಚಿಸುತ್ತದೆ. ಟೊಮೇಟೊ ತಿನ್ನುವುದರಿಂದ ಕಿಡ್ನಿಯಲ್ಲಿ ಕಲ್ಲುಗಳು ಬರಬಹುದು ಎಂಬ ತಪ್ಪು ಕಲ್ಪನೆಯೂ ಅನೇಕರಲ್ಲಿದೆ. ಟೊಮೆಟೊದಲ್ಲಿ ಆಕ್ಸಲೇಟ್ ಅಧಿಕವಿದ್ದರೂ, ಹಿತಮಿತವಾಗಿ ತಿಂದರೆ ಯಾವುದೇ ರೋಗ ಬರುವುದಿಲ್ಲ ಎಂಬುದು ಆರೋಗ್ಯ ತಜ್ಞರ ಸಲಹೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್