Sign In

By signing in or creating an account, you agree with Associated Broadcasting Company's Terms & Conditions and Privacy Policy.

Mental Health: ಮಾನಸಿಕ ಅಸಮತೋಲನ ನಿಮ್ಮ ಸಂಬಂಧವನ್ನು ಹಾಳು ಮಾಡುತ್ತಿದೆಯೇ?

Mental Health:ಯಾವುದೇ ವ್ಯಕ್ತಿಯ ಪೂರ್ಣ ಆರೋಗ್ಯಕ್ಕೆ, ಕೌಶಲ ಸಾಮರ್ಥ್ಯ ಸಾಧನೆಗಳಿಗೆ ಮನಸ್ಸೇ ಮೂಲ, ಮನಸು ನೆಮ್ಮದಿಯಿಂದ ಇದ್ದು, ಅದರ ಆರೋಗ್ಯ ಚೆನ್ನಾಗಿದ್ದಾರೆ ಆತ/ ಆಕೆ ಚೆನ್ನಾಗಿ ಆಲೋಚಿಸಬಲ್ಲ. ಚಿಂತನ-ಮಂಥನ ಮಾಡಬಲ್ಲ.

Mental Health: ಮಾನಸಿಕ ಅಸಮತೋಲನ ನಿಮ್ಮ ಸಂಬಂಧವನ್ನು ಹಾಳು ಮಾಡುತ್ತಿದೆಯೇ?
ಮಾನಸಿಕ ಆರೋಗ್ಯ
Follow us
TV9 Web
| Updated By: ನಯನಾ ರಾಜೀವ್

Updated on: Jun 02, 2022 | 10:12 AM

ಯಾವುದೇ ವ್ಯಕ್ತಿಯ ಪೂರ್ಣ ಆರೋಗ್ಯಕ್ಕೆ, ಕೌಶಲ್ಯ ಸಾಮರ್ಥ್ಯ ಸಾಧನೆಗಳಿಗೆ ಮನಸ್ಸೇ ಮೂಲ, ಮನಸ್ಸು ನೆಮ್ಮದಿಯಿಂದ ಇದ್ದು, ಅದರ ಆರೋಗ್ಯ ಚೆನ್ನಾಗಿದ್ದಾರೆ ಆತ/ ಆಕೆ ಚೆನ್ನಾಗಿ ಆಲೋಚಿಸಬಲ್ಲ. ಚಿಂತನ-ಮಂಥನ ಮಾಡಬಲ್ಲ. ವಸ್ತು, ವಿಷಯವನ್ನು ಅರ್ಥಮಾಡಿಕೊಳ್ಳಬಲ್ಲ. ಸಮಸ್ಯೆ ಸನ್ನಿವೇಶವನ್ನು ಸರಿಯಾಗಿ ವಿಶ್ಲೇಷಿಸಬಲ್ಲ ಆದರೆ ಮನಸ್ಸೇ ಕೈಕೊಟ್ಟಿತೆಂದರೆ ಎಲ್ಲಾ ತಲೆಕೆಳಗಾಗುತ್ತದೆ.

ಮಾನಸಿಕ ಆರೋಗ್ಯ (Mental Health)ಅಸಮತೋಲನವು ನಿಮ್ಮ ಸಂಬಂಧದ ಮೇಲೆ ಪರಿಣಾಮ ಬೀರಬಲ್ಲದು. ನೀವು ನಿಮ್ಮ ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡರೆ ನಿಮ್ಮ ಸಂಬಂಧವು ಹದಗೆಡಲಿದೆ.

ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲದಿದ್ದರೆ ನೀವು ಸಮಾಜದಲ್ಲಿ ಎಲ್ಲರೊಂದಿಗೆ ಬೆರೆಯಲು ಸಾಧ್ಯವಿಲ್ಲ, ಇದರಿಂದ ಇರುವ ಸಂಬಂಧಗಳು ಕೂಡ ಹಾಳಾಗಲಿದೆ. ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಮುಖ್ಯ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಒಂದೊಮ್ಮೆ ನೀವು ಖಿನ್ನತೆಯಿಂದ ಬಳಲುತ್ತಿದ್ದರೆ ವೈದ್ಯರನ್ನು ಸಂಪರ್ಕಿಸುವುದು ಒಳಿತು.

ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಸೂಕ್ತ ಪರಿಹಾರ-ನಿರ್ಧಾರಗಳನ್ನು ಕೈಗೊಳ್ಳಬಲ್ಲ. ಏಕಾಗ್ರತೆಯಿಂದ ಚೆನ್ನಾಗಿ ಕೆಲಸ-ಕರ್ತವ್ಯಗಳನ್ನು ನಿರ್ವಹಿಸಬಲ್ಲ. ಸನ್ನಿವೇಶ-ಸಂದರ್ಭಕ್ಕೆ ತಕ್ಕಂತೆ ಭಾವನೆಗಳನ್ನು ಹಿತ-ಮಿತವಾಗಿ ಪ್ರಕಟಿಸಬಲ್ಲ.

ತನ್ನ ಮತ್ತು ತನ್ನವರ ಬೇಕು ಬೇಡಗಳನ್ನು ಪೂರೈಸಬಲ್ಲ. ಕುಟುಂಬದವರೊಂದಿಗೆ-ಇತರರೊಂದಿಗೆ ಒಳ್ಳೆಯ ಸ್ನೇಹ ಸಂಬಂಧವನ್ನು ಇಟ್ಟುಕೊಳ್ಳಬಲ್ಲ. ಅಪಾಯ ಕಷ್ಟ ನಷ್ಟ ಸೋಲು ನಿರಾಶೆಗಳನ್ನು ಧೈರ್ಯವಾಗಿ ಎದುರಿಸಬಲ್ಲ.

ಮಾನಸಿಕ ಆರೋಗ್ಯ ಉತ್ತಮವಾಗಿರಲು ಏನು ಮಾಡಬೇಕು

  • ಪ್ರೀತಿಯಲ್ಲಿ ಷರತ್ತು ಬೇಡ: ಮನೆಯವರೊಡನೆ, ನೆರೆಹೊರೆ, ಬಂಧು-ಮಿತ್ರರು, ಸಹಪಾಠಿ- ಸಹೋದ್ಯೋಗಿಗಳೊಡನೆ ಪ್ರೀತಿ-ಸ್ನೇಹ ವಿಶ್ವಾಸದಿಂದಿರಿ. ಅನಗತ್ಯವಾಗಿ, ಬಹಿರಂಗವಾಗಿ ಟೀಕಿಸಬೇಡಿ. ನಿಮ್ಮ ಅನುಭವ-ಅನಿಸಿಕೆ ಭಾವನೆಗಳನ್ನು ಆತ್ಮೀಯರಲ್ಲಿ ಹಂಚಿಕೊಳ್ಳಿ.
  • ಉದ್ಯೋಗ ತೃಪ್ತಿ ಇರಲಿ: ಆಯ್ದುಕೊಂಡ ಉದ್ಯೋಗವನ್ನು ಪ್ರೀತಿಯಿಂದ ಮಾಡಿ. ಉದ್ಯೋಗ ಸ್ಥಳದಲ್ಲಿ ಎಲ್ಲರೊಡನೆ ಹೊಂದಿಕೊಳ್ಳಿ. ಕಿರಿಕಿರಿ ಮಾಡುವವರಿಂದ ದೂರವಿರಿ. ಯಾವುದೇ ಉದ್ಯೋಗ ನಾವು ಸಮಾಜಕ್ಕೆ ಮಾಡುವ ಸೇವೆ ಎಂದು ಭಾವಿಸಿ.
  • ವಾಸ್ತವಿಕ ಪ್ರಜ್ಞೆ ನಿಮ್ಮದಾಗಿರಲಿ: ನಿಮ್ಮ ಬಲಾಬಲಗಳ ಅರಿವಿರಲಿ. ಕಲ್ಪನಾ ಲೋಕದಲ್ಲಿಯೇ ವಿಹರಿಸಬೇಡಿ, ಸಂಪನ್ಮೂಲಗಳ ಇತಿಮಿತಿಯ ಅರಿವಿರಲಿ.
  • ಶಿಸ್ತಿನ ಆಹಾರ ಸೇವನೆ: ಬೆಳಗಿನ ಉಪಹಾರ ಮಧ್ಯಾಹ್ನ ರಾತ್ರಿಯ ಊಟದ ಸಮಯವನ್ನು ನಿಗದಿ ಮಾಡಿಕೊಳ್ಳಿ. ಮನೆಯಲ್ಲೇ ತಯಾರಿಸಿ ಸೇವಿಸಿದರೆ ಒಳಿತು. ಮಾಂಸ ಕಡಿಮೆ ತಿನ್ನಲಿ ಜಂಕ್-ಫುಡ್ಸ್ ಬೇಡ. ಹೊರಗಡೆ ಆಹಾರ ಸೇವನೆ ತಗ್ಗಿಸಿ. ಮನೆ ಊಟಕ್ಕೆ ಬಲವಿರಲಿ. ಬಾಯಿರುಚಿಗಿಂತ, ಪೌಷ್ಟಿಕಾಂಶಗಳಿಗೆ ಗಮನಕೊಡಿ.
  • ನಿದ್ರೆ: ನಿದ್ದೆಗೆಡಬೇಡಿ, ಬೇಗ ಮಲಗಿ ಬೇಗ ಏಳಿ. ಆರೇಳು ಗಂಟೆಗಳ ಭಂಗವಿಲ್ಲದ ನಿದ್ರೆಮಾಡಿ. ಮಲಗುವ ಸ್ಥಳ ಸ್ವಚ್ಛ ವಾಗಿರಲಿ ಒಳ್ಳೆಯ ಗಾಳಿ ಬರುವಂತೆ ನೋಡಿಕೊಳ್ಳಿ.
  • ಆಸೆಗಳಿಗೆ ಕೊಂಚ ಕಡಿವಾಣ ಹಾಕಿ: ನಿಮ್ಮ ಇತಿ ಮಿತಿಯಲ್ಲಿ ಆಸೆಗಳಿರಲಿ. ಲಭ್ಯವಿರುವುದರಲ್ಲಿ ತೃಪ್ತಿ ಇರಲಿ ಸರಳ ಜೀವನದಿಂದ ನೆಮ್ಮದಿ.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಆರೋಗ್ಯ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ