ಯಾವುದೇ ವ್ಯಕ್ತಿಯ ಪೂರ್ಣ ಆರೋಗ್ಯಕ್ಕೆ, ಕೌಶಲ್ಯ ಸಾಮರ್ಥ್ಯ ಸಾಧನೆಗಳಿಗೆ ಮನಸ್ಸೇ ಮೂಲ, ಮನಸ್ಸು ನೆಮ್ಮದಿಯಿಂದ ಇದ್ದು, ಅದರ ಆರೋಗ್ಯ ಚೆನ್ನಾಗಿದ್ದಾರೆ ಆತ/ ಆಕೆ ಚೆನ್ನಾಗಿ ಆಲೋಚಿಸಬಲ್ಲ. ಚಿಂತನ-ಮಂಥನ ಮಾಡಬಲ್ಲ. ವಸ್ತು, ವಿಷಯವನ್ನು ಅರ್ಥಮಾಡಿಕೊಳ್ಳಬಲ್ಲ. ಸಮಸ್ಯೆ ಸನ್ನಿವೇಶವನ್ನು ಸರಿಯಾಗಿ ವಿಶ್ಲೇಷಿಸಬಲ್ಲ ಆದರೆ ಮನಸ್ಸೇ ಕೈಕೊಟ್ಟಿತೆಂದರೆ ಎಲ್ಲಾ ತಲೆಕೆಳಗಾಗುತ್ತದೆ.
ಮಾನಸಿಕ ಆರೋಗ್ಯ (Mental Health)ಅಸಮತೋಲನವು ನಿಮ್ಮ ಸಂಬಂಧದ ಮೇಲೆ ಪರಿಣಾಮ ಬೀರಬಲ್ಲದು. ನೀವು ನಿಮ್ಮ ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡರೆ ನಿಮ್ಮ ಸಂಬಂಧವು ಹದಗೆಡಲಿದೆ.
ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲದಿದ್ದರೆ ನೀವು ಸಮಾಜದಲ್ಲಿ ಎಲ್ಲರೊಂದಿಗೆ ಬೆರೆಯಲು ಸಾಧ್ಯವಿಲ್ಲ, ಇದರಿಂದ ಇರುವ ಸಂಬಂಧಗಳು ಕೂಡ ಹಾಳಾಗಲಿದೆ. ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಮುಖ್ಯ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಒಂದೊಮ್ಮೆ ನೀವು ಖಿನ್ನತೆಯಿಂದ ಬಳಲುತ್ತಿದ್ದರೆ ವೈದ್ಯರನ್ನು ಸಂಪರ್ಕಿಸುವುದು ಒಳಿತು.
ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಸೂಕ್ತ ಪರಿಹಾರ-ನಿರ್ಧಾರಗಳನ್ನು ಕೈಗೊಳ್ಳಬಲ್ಲ. ಏಕಾಗ್ರತೆಯಿಂದ ಚೆನ್ನಾಗಿ ಕೆಲಸ-ಕರ್ತವ್ಯಗಳನ್ನು ನಿರ್ವಹಿಸಬಲ್ಲ. ಸನ್ನಿವೇಶ-ಸಂದರ್ಭಕ್ಕೆ ತಕ್ಕಂತೆ ಭಾವನೆಗಳನ್ನು ಹಿತ-ಮಿತವಾಗಿ ಪ್ರಕಟಿಸಬಲ್ಲ.
ತನ್ನ ಮತ್ತು ತನ್ನವರ ಬೇಕು ಬೇಡಗಳನ್ನು ಪೂರೈಸಬಲ್ಲ. ಕುಟುಂಬದವರೊಂದಿಗೆ-ಇತರರೊಂದಿಗೆ ಒಳ್ಳೆಯ ಸ್ನೇಹ ಸಂಬಂಧವನ್ನು ಇಟ್ಟುಕೊಳ್ಳಬಲ್ಲ. ಅಪಾಯ ಕಷ್ಟ ನಷ್ಟ ಸೋಲು ನಿರಾಶೆಗಳನ್ನು ಧೈರ್ಯವಾಗಿ ಎದುರಿಸಬಲ್ಲ.
ಮಾನಸಿಕ ಆರೋಗ್ಯ ಉತ್ತಮವಾಗಿರಲು ಏನು ಮಾಡಬೇಕು
ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.
ಆರೋಗ್ಯ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ