Collagen Rich Foods: ದೇಹದಲ್ಲಿ ಕಾಲಜನ್ ಅಂಶ ಕಡಿಮೆಯಾಗಬಾರದೆಂದರೆ ಈ ಕೆಲವು ಆಹಾರಗಳನ್ನು ಸೇವಿಸುವುದು ಅವಶ್ಯಕ

ಕಾಲಜನ್ ಚರ್ಮದ ಸಮಸ್ಯೆಗಳನ್ನು ಗುಣಪಡಿಸುವುದರ ಜೊತೆಗೆ, ವಯಸ್ಸಾಗುವಿಕೆಯ ಪ್ರಕ್ರಿಯೆಯನ್ನು ನಿಧಾನಗೊಳಿಸಲು ತುಂಬಾ ಪ್ರಯೋಜನಕಾರಿಯಾಗಿದೆ. ದೇಹದಲ್ಲಿ ಕಾಲಜನ್ ಕೊರತೆಯಿಂದ ಮೂಳೆಗಳು ದುರ್ಬಲವಾಗುತ್ತವೆ ಮತ್ತು ಚರ್ಮವು ನಿರ್ಜೀವವಾಗುತ್ತದೆ. ಹಾಗಾಗಿ ದೇಹದಲ್ಲಿ ಕಾಲಜನ್ ಮಟ್ಟವನ್ನು ಹೆಚ್ಚಿಸಲು ನೀವು ಇಂದಿನಿಂದಲೇ ಈ ಕೆಲವು ಆಹಾರಗಳನ್ನು ತಿನ್ನಲು ಪ್ರಾರಂಭಿಸಿ.

Collagen Rich Foods: ದೇಹದಲ್ಲಿ ಕಾಲಜನ್ ಅಂಶ ಕಡಿಮೆಯಾಗಬಾರದೆಂದರೆ ಈ ಕೆಲವು ಆಹಾರಗಳನ್ನು ಸೇವಿಸುವುದು ಅವಶ್ಯಕ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: Aug 24, 2023 | 6:20 AM

ಕಾಲಜನ್ ದೇಹದಲ್ಲಿ ಕಂಡುಬರುವ ಒಂದು ಬಗೆಯ ಪ್ರೋಟೀನ್ ಆಗಿದ್ದು, ಇದು ದೇಹವನ್ನು ಆರೋಗ್ಯಕರವಾಗಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದು ಸ್ನಾಯುರಜ್ಜುಗಳು, ಕೀಲುಗಳು ಮತ್ತು ಅಸ್ಥಿರಜ್ಜು ಮುಂತಾದ ದೇಹದ ಭಾಗಗಳಲ್ಲಿ ಕಂಡುಬರುತ್ತದೆ. ಚರ್ಮವನ್ನು ಸುಂದರವಾಗಿರಿಸುವಲ್ಲಿ ಮತ್ತು ಸ್ನಾಯುಗಳನ್ನು ಬಲವಾಗಿರಿಸುವಲ್ಲಿ ಕಾಲಜನ್ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿ ಇದರ ಕೊರತೆಯಿಂದಾಗಿ ಮೂಳೆಗಳು ದುರ್ಬಲಗೊಳ್ಳುತ್ತದೆ. ಮಾತ್ರವಲ್ಲದೆ ಇದರ ಕೊರತೆಯ ಅಡ್ಡಪರಿಣಾಮವು ಚರ್ಮದಲ್ಲಿ ಗೋಚರಿಸುತ್ತದೆ. ಈ ಕಾರಣದಿಂದ ಚರ್ಮದ ಮೇಲೆ ಸುಕ್ಕುಗಳು ಮತ್ತು ಮೊಡವೆಗಳ ಸಮಸ್ಯೆಗಳು ಹೆಚ್ಚಾಗಲು ಪ್ರಾರಂಭಿಸುತ್ತದೆ. ನೀವು ದೀರ್ಘ ಕಾಲದವರೆಗೆ ಚರ್ಮವನ್ನು ಆರೋಗ್ಯಕರವಾಗಿ ಮತ್ತು ಮುಖದ ಮೇಲೆ ಕಾಣಿಸುವ ವಯಸ್ಸಾಗುವಿಕೆಯ ಲಕ್ಷಣವನ್ನು ಕಡಿಮೆ ಮಾಡಲು ಬಯಸಿದರೆ ಈ ಕೆಲವೊಂದು ಆಹಾರಗಳನ್ನು ಸೇವನೆ ಮಾಡಬೇಕು. ಅವುಗಳು ಯಾವುವು ಎಂಬ ಮಾಹಿತಿ ಇಲ್ಲಿದೆ.

ದೇಹದಲ್ಲಿ ಕಾಲಜನ್ ಅಂಶ ಕಡಿಮೆಯಾದರೆ ಈ ಆಹಾರಗಳನ್ನು ಸೇವಿಸಿ:

ಸಿಟ್ರಸ್ ಹಣ್ಣುಗಳು:

ದೇಹದಲ್ಲಿ ಕಾಲಜನ್ ಪ್ರಮಾಣವನ್ನು ಹೆಚ್ಚಿಸಲು ವಿಟಮಿನ್ ಸಿ ಪೋಷಕಾಂಶದಿಂದ ಸಮೃದ್ಧವಾಗಿರುವ ಸಿಟ್ರಸ್ ಹಣ್ಣುಗಳನ್ನು ಸೇವಿಸಿ. ನೀವು ಕಿತ್ತಳೆ, ನಿಂಬೆ, ಕಿವಿ, ಅನಾನಸ್ ಮುಂತಾದ ಹಣ್ಣುಗಳನ್ನು ಸೇವನೆ ಮಾಡಿ. ಈ ಹಣ್ಣುಗಳಲ್ಲಿ ಕಂಡುಬರುವ ಉತ್ಕರ್ಷಣ ನಿರೋಧಕ ಅಂಶಗಳು ದೇಹದಲ್ಲಿ ಕಾಲಜನ್ ಮಟ್ಟವನ್ನು ಹೆಚ್ಚಿಸುತ್ತದೆ.

ನುಗ್ಗೆ:

ನುಗ್ಗೆ ಸೊಪ್ಪು ವಿಟಮಿನ್ ಸಿ ಅಂಶದಿಂದ ಸಮೃದ್ಧವಾಗಿರುವ ಆಹಾರವಾಗಿದೆ. ನುಗ್ಗೆ ಸೊಪ್ಪಿನಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದೆ, ಇದು ಚರ್ಮಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಮತ್ತು ಸೂರ್ಯನ ಅಪಾಯಕಾರಿ ಯು.ವಿ ಕಿರಣಗಳಿಂದ ಚರ್ಮದ ಹಾನಿಯನ್ನು ಕಡಿಮೆ ಮಾಡುತ್ತದೆ. ಅಲ್ಲದೆ ನುಗ್ಗೆಯಲ್ಲಿ ಕ್ಲೋರೊಫಿಲ್ ಅಂಶವಿದೆ. ಇದು ದೇಹದಲ್ಲಿ ಕಾಲಜನ್ ಪ್ರಮಾಣವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಹೆಚ್ಚುತ್ತಿರುವ ಗುದ ಕ್ಯಾನ್ಸರ್, ಇದು ಮಾರಣಾಂತಿಕವೇ? ಲಕ್ಷಣಗಳು, ರೋಗ ಪತ್ತೆ, ಚಿಕಿತ್ಸೆ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ಟೊಮೆಟೊ:

ಟೊಮೆಟೊದಲ್ಲಿ ವಿಟಮಿನ್ ಸಿ ಪೋಷಕಾಂಶವಿದ್ದು, ಇದು ಚರ್ಮವನ್ನು ಆರೋಗ್ಯಕರವಾಗಿರಿಸುತ್ತದೆ. ಟೊಮೆಟೊದಲ್ಲಿ ಕಂಡುಬರುವ ಲೈಕೋಪೀನ್ ಅಂಶವು ಚರ್ಮವನ್ನು ಸೂರ್ಯನ ಹಾನಿಕಾರಕ ಯು.ವಿ ಕಿರಣಗಳಿಂದ ರಕ್ಷಿಸುತ್ತದೆ. ಅಲ್ಲದೆ ಟೊಮೆಟೊ ತಿನ್ನುವುದರಿಂದ ಪಿಗ್ಮೆಂಟೇಶನ್, ಸುಕ್ಕುಗಳು ಕಡಿಮೆಯಾಗುತ್ತವೆ. ಮಾತ್ರವಲ್ಲದೆ ಟೊಮೆಟೊ ಕಾಲಜನ್ ನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಮತ್ತು ಹಾನಿಗೊಳಗಾದ ಚರ್ಮವನ್ನು ಸರಿಪಡಿಸುತ್ತದೆ. ನೀವು ಟೊಮೆಟೊವನ್ನು ಚರ್ಮಕ್ಕೂ ಅನ್ವಯಿಸಬಹುದು.

ಹಸಿರು ಎಲೆ ತರಕಾರಿಗಳು:

ಹಸಿರು ಎಲೆ ತರಕಾರಿಗಳು ನಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಪಾಲಕ್, ಎಲೆಕೋಸು ಮುಂತಾದ ಹಸಿರು ಎಲೆತರಕಾರಿಗಳು ಉತ್ಕರ್ಷಣ ನಿರೋಧಕ ಅಂಶಗಳಿಂದ ಸಮೃದ್ಧವಾಗಿದೆ. ಈ ತರಕಾರಿಗಳನ್ನು ತಿನ್ನುವುದರಿಂದ ದೇಹದಲ್ಲಿ ಕಾಲಜಿನ್ ಅಂಶವನ್ನು ಹೆಚ್ಚಿಸಬಹುದು.

ಇಷ್ಟು ಮಾತ್ರವಲ್ಲದೆ ಮೀನು, ಬೆಳ್ಳುಳ್ಳಿ, ಅವಕಾಡೊ, ಬೆರ್ರಿ ಹಣ್ಣುಗಳು, ಮೊಟ್ಟೆಗಳನ್ನು ತಿನ್ನುವುದರಿಂದಲೂ ದೇಹದಲ್ಲಿ ಕಾಲಜನ್ ಮಟ್ಟವನ್ನು ಹೆಚ್ಚಿಸಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!