AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಲ್ಲದ ಅನ್ನವನ್ನು ಎಂದಾದರೂ ತಿಂದಿದ್ದೀರಾ? ಇಲ್ಲ ಎಂದರೆ ನಿಮಗೆ ಈ ಕಾಯಿಲೆ ಬರುವುದು ಫಿಕ್ಸ್

ಬಹಳಷ್ಟು ಜನರು ಸಿಹಿತಿಂಡಿಗಳನ್ನು ತಿನ್ನಲು ಇಷ್ಟಪಡುತ್ತಾರೆ. ಈ ರೀತಿ ತಿನ್ನುವುದು ಒಳ್ಳೆಯದಲ್ಲ. ಆದರೆ, ಸಿಹಿತಿಂಡಿಗಳನ್ನು ಇಷ್ಟಪಡುವವರು ಬೆಲ್ಲದ ಅನ್ನವನ್ನು ನಿಯಮಿತವಾಗಿ ಸೇವಿಸಿದರೆ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು ಎಂದು ಪೌಷ್ಟಿಕತಜ್ಞರು ಹೇಳುತ್ತಾರೆ. ದಿನದ ಊಟದ ನಂತರ ಒಂದು ಸಣ್ಣ ತುಂಡು ಬೆಲ್ಲವನ್ನು ಬಾಯಿಗೆ ಹಾಕಿದರೆ, ಜೀರ್ಣಕಾರಿ ಸಮಸ್ಯೆಗಳ ಜೊತೆಗೆ. ಇದು ದೇಹದಲ್ಲಿನ ಅನೇಕ ರೋಗಗಳನ್ನು ನಿವಾರಿಸುತ್ತದೆ ಎಂದು ಹೇಳಲಾಗುತ್ತದೆ. ಪ್ರತಿದಿನ ಒಂದು ಕಪ್ ಬೆಲ್ಲದ ಅನ್ನವನ್ನು ತಿನ್ನುವುದರಿಂದ ಆಗುವ ಪ್ರಯೋಜನಗಳು ಇಲ್ಲಿವೆ.

ಬೆಲ್ಲದ ಅನ್ನವನ್ನು ಎಂದಾದರೂ ತಿಂದಿದ್ದೀರಾ? ಇಲ್ಲ ಎಂದರೆ ನಿಮಗೆ ಈ ಕಾಯಿಲೆ ಬರುವುದು ಫಿಕ್ಸ್
ಸಾಂದರ್ಭಿಕ ಚಿತ್ರImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 10, 2025 | 7:08 PM

Share

ಸಿಹಿತಿಂಡಿ (sweet) ತಿನ್ನುವುದಕ್ಕೆ ಯಾರಿಗೆ ತಾನೇ ಇಷ್ಟವಿರಲ್ಲ ಹೇಳಿ? ಆದರೆ ಹೊರಗೆ ಸಿಗುವ ಸಿಹಿ ತಿಂಡಿಗಳನ್ನು ಪದೇ ಪದೇ ಸೇವನೆ ಮಾಡುವುದು ನಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಸಿಹಿತಿಂಡಿಗಳನ್ನು ಇಷ್ಟಪಡುವವರು ಪಂಜಾಬ್‌ನ ಅತ್ಯಂತ ಜನಪ್ರಿಯ ಖಾದ್ಯವಾದ ಬೆಲ್ಲದ ಅನ್ನ (Jaggery Rice) ಸೇವನೆ ಮಾಡಬಹುದು. ಇದು ಸಿಹಿ ತಿನ್ನಬೇಕು ಎಂಬ ನಿಮ್ಮ ಆಸೆಯನ್ನು ಪೂರೈಸುವುದರ ಜೊತೆಗೆ ಅದ್ಭುತ ಆರೋಗ್ಯ (Health) ಪ್ರಯೋಜನಗಳನ್ನು ಕೂಡ ನೀಡುತ್ತದೆ ಎಂದು ಪೌಷ್ಟಿಕತಜ್ಞರು ಹೇಳುತ್ತಾರೆ. ಪ್ರತಿದಿನ ಊಟವಾದ ನಂತರ ಒಂದು ಸಣ್ಣ ತುಂಡು ಬೆಲ್ಲವನ್ನು ಬಾಯಿಗೆ ಹಾಕಿದರೆ, ಜೀರ್ಣಕಾರಿ ಸಮಸ್ಯೆಗಳ ಜೊತೆಗೆ ಇದು ದೇಹದಲ್ಲಿನ ಅನೇಕ ರೋಗಗಳನ್ನು ನಿವಾರಿಸುತ್ತದೆ ಎಂದು ಹೇಳಲಾಗುತ್ತದೆ. ಅಷ್ಟು ಶಕ್ತಿ ಬೆಲ್ಲಕ್ಕಿದೆ. ಇಂತಹ ಬೆಲ್ಲ ಉಪಯೋಗಿಸಿ ಮಾಡುವ ಬೆಲ್ಲದ ಅನ್ನವನ್ನು ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು ತಿಳಿದುಕೊಳ್ಳಿ.

ಸಾಮಾನ್ಯವಾಗಿ ಬೆಲ್ಲದ ಅನ್ನವನ್ನು ಜಗ್ಗರಿ ರೈಸ್, ಚಾವಲ್ ಬಾತ್, ಗುರ್ ವೇಲ್ ಚಾವಲ್ ಎಂದು ಕರೆಯಲಾಗುತ್ತದೆ. ಈ ರೀತಿ ಬೆಲ್ಲ ಮತ್ತು ಅನ್ನದ ಮಿಶ್ರಣ ಅದರ ಜೊತೆಗೆ ನಿಮಗಿಷ್ಟವಾದಲ್ಲಿ ಡ್ರೈ ಫ್ರೂಟ್ಸ್ ಮತ್ತು ಏಲಕ್ಕಿ ಪುಡಿಯನ್ನು, ಸ್ವಲ್ಪ ಉಪ್ಪನ್ನು ಸೇರಿಸಿಕೊಳ್ಳಬಹುದು. ಇದನ್ನು ಸಿಂಪಲ್ಲಾಗಿ ಮತ್ತು ಸರಳವಾಗಿ ಮಾಡಿಕೊಳ್ಳಬಹುದಾದ ಸಿಹಿ ತಿಂಡಿಯಾದ್ದರಿಂದ ಧಿಡೀರ್ ಆಗಿ ಮಾಡಬಹುದು. ಅದಲ್ಲದೆ ಇದು ಬಾಯಿಗೆ ರುಚಿ ನೀಡುವುದು ಮಾತ್ರವಲ್ಲ, ದೇಹಕ್ಕೆ ಅಗತ್ಯವಾದ ಸಾಕಷ್ಟು ಪೋಷಕಾಂಶಗಳನ್ನು ನೀಡುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಜೊತೆಗೆ ತೂಕ ಕಡಿಮೆ ಮಾಡಿ, ಮಲಬದ್ಧತೆಯ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ. ಹಾಗಾಗಿ ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ದೇಹದಿಂದ ತ್ಯಾಜ್ಯವನ್ನು ಹೊರಹಾಕುತ್ತದೆ.

ಬೆಲ್ಲದ ಅನ್ನ ಆರೋಗ್ಯಕ್ಕೆ ಹೇಗೆ ಪ್ರಯೋಜನಕಾರಿ?

  • ನಾವು ಸೇವನೆ ಮಾಡುವ ಬೆಲ್ಲದ ಅನ್ನದಲ್ಲಿ ನಮ್ಮ ದೇಹಕ್ಕೆ ಬೇಕಾಗುವ ಕಬ್ಬಿಣದ ಅಂಶ ಸಾಕಷ್ಟು ಪ್ರಮಾಣದಲ್ಲಿ ಸಿಗುತ್ತದೆ. ಇದು ಕ್ಯಾಲ್ಸಿಯಂ ಮತ್ತು ಇತರ ಪೋಷಕಾಂಶಗಳನ್ನು ಹೊಂದಿರುವುದರಿಂದ ಮೂಳೆಗೆ ಸಂಬಂಧಿಸಿದ ಸಮಸ್ಯೆಗಳು ಬರುವುದಿಲ್ಲ. ಅಲ್ಲದೆ, ಈ ಬೆಲ್ಲದ ಅಕ್ಕಿಯನ್ನು ತಿನ್ನುವುದು ಹಿಮೋಗ್ಲೋಬಿನ್ ಉತ್ಪಾದನೆಗೂ ಕೂಡ ಸಹಾಯ ಮಾಡುತ್ತದೆ.
  • ಬೆಲ್ಲದ ಅನ್ನ ಸೇವನೆ ಮಾಡುವುದರಿಂದ, ಅದರಲ್ಲಿರುವ ಪೊಟ್ಯಾಸಿಯಮ್ ಅಂಶ ದೇಹಕ್ಕೆ ಸಿಗುತ್ತದೆ. ಜೊತೆಗೆ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಆಯಾಸವನ್ನು ಕಡಿಮೆ ಆಗುತ್ತದೆ. ತ್ವರಿತ ಶಕ್ತಿಯನ್ನು ನೀಡುತ್ತದೆ. ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಕೂಡ ಹೆಚ್ಚಿಸುತ್ತದೆ.
  • ಸಂಧಿವಾತ ಮತ್ತು ಕೀಲು ನೋವಿನಿಂದ ಬಳಲುತ್ತಿರುವವರು, ಬೆಲ್ಲದ ಅನ್ನವನ್ನು ನಿಯಮಿತವಾಗಿ ಸೇವನೆ ಮಾಡಬೇಕು. ಇದರಲ್ಲಿ ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ ಸಮೃದ್ಧವಾಗಿರುವುದರಿಂದ ಇದು ಮೂಳೆಗಳನ್ನು ಬಲಪಡಿಸುತ್ತದೆ ಮತ್ತು ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
  • ಅಲ್ಲದೆ, ಬೆಲ್ಲದ ಅನ್ನ ಸೇವನೆ ಮಾಡುವುದರಿಂದ ದೇಹಕ್ಕೆ ಅಗತ್ಯವಿರುವ ರಂಜಕ ಶಕ್ತಿ ಸಿಗುತ್ತದೆ. ಜೊತೆಗೆ ಇದರಲ್ಲಿರುವ ಮ್ಯಾಂಗನೀಸ್, ಸತು ಮತ್ತು ತಾಮ್ರದ ಅಂಶ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಂದ ಪರಿಹಾರ ಪಡೆಯಲು ಸಹಾಯ ಮಾಡುತ್ತದೆ. ಆದರೆ ಈ ಬೆಲ್ಲದ ಅನ್ನವನ್ನು ಸೇವನೆ ಮಾಡುವವರು ಇದನ್ನು ಅತಿಯಾಗಿ ತಿನ್ನಬಾರದು. ಅದರಲ್ಲಿಯೂ ಮಧುಮೇಹ ಇರುವವರು ಬೆಲ್ಲದ ಅನ್ನ ಸೇವನೆ ಮಾಡದಿರುವುದು ತುಂಬಾ ಒಳ್ಳೆಯದು.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಇದನ್ನೂ ಓದಿ
Image
ಪ್ರತಿದಿನ ನೀವು ಮಾಡುವ ಈ ತಪ್ಪುಗಳೇ ರಾತ್ರಿ ನಿದ್ರೆಯನ್ನು ಹಾಳುಮಾಡುತ್ತೆ
Image
ಮಹಿಳೆಯರೇ ಈ ರೀತಿ ಲಕ್ಷಣ ಕಂಡು ಬಂದಾಗ ನಿರ್ಲಕ್ಷಿಸಬೇಡಿ
Image
ಗರ್ಭಾವಸ್ಥೆಯಲ್ಲಿ ಮಲಬದ್ಧತೆ ಕಂಡು ಬಂದರೆ ನಿರ್ಲಕ್ಷ್ಯ ಮಾಡಬೇಡಿ
Image
ಕಣ್ಣುಗಳಲ್ಲಿ ಕಂಡುಬರುವ ತುರಿಕೆ ಈ ರೋಗದ ಮುನ್ಸೂಚನೆ

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?