
ಸಿಹಿತಿಂಡಿ (sweet) ತಿನ್ನುವುದಕ್ಕೆ ಯಾರಿಗೆ ತಾನೇ ಇಷ್ಟವಿರಲ್ಲ ಹೇಳಿ? ಆದರೆ ಹೊರಗೆ ಸಿಗುವ ಸಿಹಿ ತಿಂಡಿಗಳನ್ನು ಪದೇ ಪದೇ ಸೇವನೆ ಮಾಡುವುದು ನಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಸಿಹಿತಿಂಡಿಗಳನ್ನು ಇಷ್ಟಪಡುವವರು ಪಂಜಾಬ್‌ನ ಅತ್ಯಂತ ಜನಪ್ರಿಯ ಖಾದ್ಯವಾದ ಬೆಲ್ಲದ ಅನ್ನ (Jaggery Rice) ಸೇವನೆ ಮಾಡಬಹುದು. ಇದು ಸಿಹಿ ತಿನ್ನಬೇಕು ಎಂಬ ನಿಮ್ಮ ಆಸೆಯನ್ನು ಪೂರೈಸುವುದರ ಜೊತೆಗೆ ಅದ್ಭುತ ಆರೋಗ್ಯ (Health) ಪ್ರಯೋಜನಗಳನ್ನು ಕೂಡ ನೀಡುತ್ತದೆ ಎಂದು ಪೌಷ್ಟಿಕತಜ್ಞರು ಹೇಳುತ್ತಾರೆ. ಪ್ರತಿದಿನ ಊಟವಾದ ನಂತರ ಒಂದು ಸಣ್ಣ ತುಂಡು ಬೆಲ್ಲವನ್ನು ಬಾಯಿಗೆ ಹಾಕಿದರೆ, ಜೀರ್ಣಕಾರಿ ಸಮಸ್ಯೆಗಳ ಜೊತೆಗೆ ಇದು ದೇಹದಲ್ಲಿನ ಅನೇಕ ರೋಗಗಳನ್ನು ನಿವಾರಿಸುತ್ತದೆ ಎಂದು ಹೇಳಲಾಗುತ್ತದೆ. ಅಷ್ಟು ಶಕ್ತಿ ಬೆಲ್ಲಕ್ಕಿದೆ. ಇಂತಹ ಬೆಲ್ಲ ಉಪಯೋಗಿಸಿ ಮಾಡುವ ಬೆಲ್ಲದ ಅನ್ನವನ್ನು ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು ತಿಳಿದುಕೊಳ್ಳಿ.
ಸಾಮಾನ್ಯವಾಗಿ ಬೆಲ್ಲದ ಅನ್ನವನ್ನು ಜಗ್ಗರಿ ರೈಸ್, ಚಾವಲ್ ಬಾತ್, ಗುರ್ ವೇಲ್ ಚಾವಲ್ ಎಂದು ಕರೆಯಲಾಗುತ್ತದೆ. ಈ ರೀತಿ ಬೆಲ್ಲ ಮತ್ತು ಅನ್ನದ ಮಿಶ್ರಣ ಅದರ ಜೊತೆಗೆ ನಿಮಗಿಷ್ಟವಾದಲ್ಲಿ ಡ್ರೈ ಫ್ರೂಟ್ಸ್ ಮತ್ತು ಏಲಕ್ಕಿ ಪುಡಿಯನ್ನು, ಸ್ವಲ್ಪ ಉಪ್ಪನ್ನು ಸೇರಿಸಿಕೊಳ್ಳಬಹುದು. ಇದನ್ನು ಸಿಂಪಲ್ಲಾಗಿ ಮತ್ತು ಸರಳವಾಗಿ ಮಾಡಿಕೊಳ್ಳಬಹುದಾದ ಸಿಹಿ ತಿಂಡಿಯಾದ್ದರಿಂದ ಧಿಡೀರ್ ಆಗಿ ಮಾಡಬಹುದು. ಅದಲ್ಲದೆ ಇದು ಬಾಯಿಗೆ ರುಚಿ ನೀಡುವುದು ಮಾತ್ರವಲ್ಲ, ದೇಹಕ್ಕೆ ಅಗತ್ಯವಾದ ಸಾಕಷ್ಟು ಪೋಷಕಾಂಶಗಳನ್ನು ನೀಡುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಜೊತೆಗೆ ತೂಕ ಕಡಿಮೆ ಮಾಡಿ, ಮಲಬದ್ಧತೆಯ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ. ಹಾಗಾಗಿ ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ದೇಹದಿಂದ ತ್ಯಾಜ್ಯವನ್ನು ಹೊರಹಾಕುತ್ತದೆ.
ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ