Jaggery tea for weight loss: ಬೆಲ್ಲದ ಚಹಾ ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ತೂಕ ಇಳಿಸಿಕೊಳ್ಳಲು ಹೇಗೆ ಸಹಕಾರಿ?

ನೀವು ತೂಕ ಇಳಿಸಿಕೊಳ್ಳಲು ನೂರಾರು ಮಾರ್ಗಗಳನ್ನು ಹುಡುಕುತ್ತಿದ್ದೀರಾ? ಹಾಗಾದರೆ ಮನೆಯಲ್ಲಿಯೇ ಇರುವ ಬೆಲ್ಲದ ಸಹಾಯದಿಂದ ತೂಕ ಇಳಿಸಿಕೊಳ್ಳಬಹುದು. ಹೇಗೆ ಗೊತ್ತಾ? ಇಲ್ಲಿದೆ ಬೆಲ್ಲದ ಚಹಾ ಮಾಡುವ ವಿಧಾನ. ಇದನ್ನು ತಯಾರಿಸುವುದು ಸುಲಭ ಮತ್ತು ಹೆಚ್ಚುವರಿ ಕಿಲೋಗಳನ್ನು ಯಾವುದೇ ರೀತಿಯ ಕಷ್ಟವಿಲ್ಲದೇ ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

Jaggery tea for weight loss: ಬೆಲ್ಲದ ಚಹಾ ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ತೂಕ ಇಳಿಸಿಕೊಳ್ಳಲು ಹೇಗೆ ಸಹಕಾರಿ?
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ

Updated on: Aug 30, 2023 | 6:50 AM

ತೂಕ ಇಳಿಸಿಕೊಳ್ಳಲು ಹಲವಾರು ಆಹಾರ ಆಯ್ಕೆಗಳು ಇರುವುದರಿಂದ, ನಿಮಗೆ ಯಾವುದು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಗೊಂದಲವಾಗಿರುತ್ತದೆ. ಕೆಲವೊಮ್ಮೆ ನಮ್ಮ ಅಡುಗೆ ಮನೆಯಲ್ಲಿರುವ ಒಂದು ಪದಾರ್ಥ ನಿಮ್ಮ ಆಹಾರವನ್ನು ತೂಕ ಇಳಿಸಿಕೊಳ್ಳಲು ನಿಮಗೆ ನೆರವಾಗಬಹುದು. ಯಾವುದು ಆ ವಸ್ತು? ಬೇರೆ ಯಾವುದು ಅಲ್ಲ ನೀವು ದಿನನಿತ್ಯ ಬಳಸುವ ಬೆಲ್ಲ. ಇದು ತೂಕ ಇಳಿಸಿಕೊಳ್ಳಲು ನಿಮಗೆ ಯಾವ ರೀತಿಯಲ್ಲಿ ಸಹಾಯ ಮಾಡುತ್ತದೆ ಎಂಬುದನ್ನು ತಿಳಿದುಕೊಳ್ಳಬೇಕಾ? ಹಾಗಾದರೆ ಬೆಲ್ಲದ ಚಹಾವನ್ನು ಪ್ರಯತ್ನಿಸಿ! ಹಲವಾರು ಪೋಷಕಾಂಶಗಳನ್ನು ಒಳಗೊಂಡಿರುವ ಬೆಲ್ಲವು ನೈಸರ್ಗಿಕ ಸಿಹಿಕಾರಕವಾಗಿದ್ದು, ಹಾಲು ಮತ್ತು ಸಕ್ಕರೆ ಚಹಾ ಕುಡಿಯುವುದಕ್ಕಿಂತ ಬೆಲ್ಲದ ಚಹಾ ನಿಮಗೆ ಹೆಚ್ಚು ಪ್ರಯೋಜನಕಾರಿ ಎಂದು ಅಧ್ಯಯನಗಳು ಸಹ ಕಂಡುಕೊಂಡಿವೆ. ಹೊಟ್ಟೆಯ ಸುತ್ತಲಿನ ಕೊಬ್ಬನ್ನು ಕಡಿಮೆ ಮಾಡಿಕೊಳ್ಳಲು ಇದು ನಿಮಗೆ ಸಹಾಯ ಮಾಡುತ್ತದೆ ಎಂದು ಸಾಬೀತಾಗಿದೆ.

ತೂಕ ಇಳಿಸಿಕೊಳ್ಳಲು ಬೆಲ್ಲದ ಚಹಾವು ಯಾವುದೇ ರೂಪದಲ್ಲಿ ವ್ಯಾಯಾಮಕ್ಕೆ ಬದಲಿಯಲ್ಲವಾದರೂ, ನೀವು ಹೆಚ್ಚುವರಿ ಕಿಲೋಗಳನ್ನು ಕಳೆದುಕೊಳ್ಳಲು ಪ್ರಯತ್ನಿಸುತ್ತಿದ್ದರೆ ಅದನ್ನು ನಿಮ್ಮ ಆಹಾರದಲ್ಲಿ ಸೇರಿಸಬಹುದು. ನಿಮ್ಮ ಚಯಾಪಚಯವನ್ನು ಹೆಚ್ಚಿಸುವುದರಿಂದ ಹಿಡಿದು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡುವವರೆಗೆ, ಇದು ನಿಮ್ಮ ತೂಕ ಇಳಿಸುವ ಆಹಾರಕ್ಕೆ ಪರಿಪೂರ್ಣ ಸೇರ್ಪಡೆಯಾಗಿದೆ.

ಬೆಲ್ಲದ ಚಹಾದ ಪ್ರಯೋಜನಗಳೇನು?

ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ:

ಬೆಲ್ಲವು ಆಹಾರವನ್ನು ತ್ವರಿತವಾಗಿ ಜೀರ್ಣಿಸಿಕೊಳ್ಳಲು ಸಹಾಯ ಮಾಡುವ ಮೂಲಕ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಉತ್ತಮ ಜೀರ್ಣಕ್ರಿಯೆಯು ಕೊಬ್ಬಿನ ರೂಪದಲ್ಲಿ ಹೊಟ್ಟೆಯಲ್ಲಿ ಸಂಗ್ರಹವಾಗದೆ ಆಹಾರವು ಸರಿಯಾಗಿ ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಬೆಲ್ಲದ ಸಕ್ಕರೆ ಅಂಶವು ಕೊಬ್ಬು ಸಂಗ್ರಹಕ್ಕೆ ಕಾರಣವಾಗಬಹುದು ಎಂದು ಅನೇಕರು ನಂಬುತ್ತಾರೆ. ಇದಕ್ಕೆ ವಿರುದ್ಧವಾಗಿ, ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ, ನಿಮ್ಮ ಚಯಾಪಚಯವನ್ನು ಹೆಚ್ಚಿಸುತ್ತದೆ ಮತ್ತು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.

ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ:

ಚಯಾಪಚಯವು ನಿಮ್ಮ ದೇಹವು ಆಹಾರವನ್ನು ಶಕ್ತಿಯಾಗಿ ಪರಿವರ್ತಿಸಲು ಅನುವು ಮಾಡಿಕೊಡುವ ಪ್ರತಿಕ್ರಿಯೆಯಾಗಿದೆ. ಬಲವಾದ ಚಯಾಪಚಯವು ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಬೆಲ್ಲವು ಪೊಟ್ಯಾಸಿಯಮ್ ನಂತಹ ಗುಣಲಕ್ಷಣಗಳನ್ನು ಹೊಂದಿದೆ ಎಂದು ಅಧ್ಯಯನಗಳು ತೋರಿಸಿವೆ, ಇದು ಎಲೆಕ್ಟ್ರೋಲೈಟ್ ಸಮತೋಲನವನ್ನು ಕಾಪಾಡಿಕೊಳ್ಳಲು, ಸ್ನಾಯುಗಳನ್ನು ಗಟ್ಟಿಗೊಳಿಸಲು ಮತ್ತು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ತೂಕ ಇಳಿಸಿಕೊಳ್ಳಲು ಪರಿಣಾಮಕಾರಿ ಮಾರ್ಗ ಎಂದು ತಜ್ಞರು ಸಾಬೀತುಪಡಿಸಿದ್ದಾರೆ.

ರಕ್ತಹೀನತೆಯನ್ನು ತಡೆಯಲು ಸಹಾಯ ಮಾಡುತ್ತದೆ:

ನಿಮ್ಮ ದೇಹದಲ್ಲಿರುವ ಕಡಿಮೆ ಕಬ್ಬಿಣದ ಮಟ್ಟವು ರಕ್ತಹೀನತೆಗೆ ಕಾರಣವಾಗಬಹುದು, ಇದು ತೂಕ ಹೆಚ್ಚಾಗಲು ಕಾರಣವಾಗಬಹುದು. ಬೆಲ್ಲವು ನಿಮ್ಮ ದೇಹದ ಮೇಲೆ ಸಕಾರಾತ್ಮಕ ಪರಿಣಾಮಗಳನ್ನು ಬೀರುತ್ತದೆ ಮತ್ತು ರಕ್ತಹೀನತೆಯಂತಹ ರೋಗಗಳ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ಅಧ್ಯಯನಗಳು ಕಂಡುಕೊಂಡಿವೆ. ನ್ಯಾಷನಲ್ ಸೆಂಟರ್ ಫಾರ್ ಬಯೋಟೆಕ್ನಾಲಜಿಕಲ್ ಇನ್ಫರ್ಮೇಷನ್ ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಬೆಲ್ಲವು ರಕ್ತಹೀನತೆಯ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ ಎಂದು ತಿಳಿಸಿದೆ.

ಇದನ್ನೂ ಓದಿ: ಅರಿಶಿನವು ನೀವು ಅಂದುಕೊಂಡಷ್ಟು ಆರೋಗ್ಯಕರವಲ್ಲ! ಇದರ ದುಷ್ಪರಿಣಾಮಗಳ ಬಗ್ಗೆ ತಜ್ಞರು ನೀಡಿರುವ ಮಾಹಿತಿ ಇಲ್ಲಿದೆ

ಬೆಲ್ಲದ ಚಹಾ ಕುಡಿಯುವುದರಿಂದ ಆಗುವ ಇತರ ಪ್ರಯೋಜನಗಳೇನು?

ಬೆಲ್ಲದ ಚಹಾ ಕುಡಿಯುವುದರಿಂದ ಆಗುವ ಪ್ರಯೋಜನಗಳು ತೂಕ ನಷ್ಟಕ್ಕೆ ಮಾತ್ರ ಸೀಮಿತವಾಗಿಲ್ಲ. ಅವುಗಳು ವಿಟಮಿನ್ ಎ, ಮತ್ತು ಬಿ, ಕ್ಯಾಲ್ಸಿಯಂ, ಮೆಗ್ನೀಸಿಯಮ್, ರಂಜಕ, ಪೊಟ್ಯಾಸಿಯಮ್ ಮತ್ತು ಹೆಚ್ಚಿನವುಗಳಂತಹ ಅನೇಕ ರೀತಿಯ ಸೂಕ್ಷ್ಮ ಪೋಷಕಾಂಶಗಳನ್ನು ಹೊಂದಿರುತ್ತವೆ, ಇದು ನಿಮ್ಮ ರಕ್ತ ಮತ್ತು ಒಟ್ಟಾರೆ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.

ಬೆಲ್ಲದ ಚಹಾವನ್ನು ಹೇಗೆ ತಯಾರಿಸುವುದು? ಪಾಕವಿಧಾನ ಇಲ್ಲಿದೆ

ಬೆಲ್ಲದ ಚಹಾವು ಪೋಷಕಾಂಶಗಳ ಶಕ್ತಿ ಕೇಂದ್ರವಾಗಿದೆ, ಇದು ತೂಕ ಇಳಿಸಿಕೊಳ್ಳಲು ಸಹಾಯ ಮಾಡುವುದರ ಜೊತೆಗೆ ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.

ಬೇಕಾಗುವ ಸಾಮಾಗ್ರಿಗಳು:

  • 2 ಕಪ್ ನೀರು
  • 2- 3 ಚಮಚ ಬೆಲ್ಲ
  • 1 ಟೀ ಸ್ಪೂನ್ ಚಹಾಹುಡಿ
  • 1 ಇಂಚು ತುರಿದ ಶುಂಠಿ
  • 2- 3 ಏಲಕ್ಕಿ
  • 1 ಸಣ್ಣ ತುಂಡು ದಾಲ್ಚಿನ್ನಿ
  • ಒಂದು ಚಿಟಿಕೆ ಕರಿಮೆಣಸು

ತಯಾರಿಸುವ ವಿಧಾನ:

ಒಂದು ಪಾತ್ರೆಯಲ್ಲಿ ನೀರನ್ನು ಹಾಕಿ ಅದಕ್ಕೆ ಶುಂಠಿ, ಏಲಕ್ಕಿ, ತುಳಸಿ ಎಲೆಗಳು, ಶುಂಠಿ ಮತ್ತು ದಾಲ್ಚಿನ್ನಿಯಂತಹ ಎಲ್ಲಾ ಮಸಾಲೆಗಳನ್ನು ಸೇರಿಸಿ. ಚಹಾವನ್ನು ಐದು ನಿಮಿಷಗಳ ಕಾಲ ಕುದಿಸಿ ಮತ್ತು ಚಹಾಕ್ಕೆ ಕರಿಮೆಣಸಿನ ಪುಡಿಯನ್ನು ಸೇರಿಸಿ. ಇದು ಕುದಿಯಲು ಬಂದ ನಂತರ, ನಿಮ್ಮ ರುಚಿಗೆ ಅನುಗುಣವಾಗಿ ಚಹಾ ಪುಡಿ ಮತ್ತು ಬೆಲ್ಲವನ್ನು ಸೇರಿಸಿ. ಗ್ಯಾಸ್ ಆಫ್ ಮಾಡಿ ಮತ್ತು ಕುದಿಸಿದ ನಂತರ ಚಹಾವನ್ನು ಒಂದು ಕಪ್ ಗೆ ಸೋಸಿಕೊಂಡರೆ ನಿಮ್ಮ ಬೆಲ್ಲದ ಚಹಾ ಕುಡಿಯಲು ಸಿದ್ಧವಾಗುತ್ತದೆ. ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ನೀವು ಬೆಲ್ಲದ ಚಹಾದೊಂದಿಗೆ ನಿಮ್ಮ ದಿನವನ್ನು ಪ್ರಾರಂಭಿಸಬಹುದು ಅಥವಾ ಊಟ ಮಾಡಿ ಅರ್ಧ ಗಂಟೆಯ ನಂತರ ಕುಡಿಯಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್