AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP: ಬಿಬಿಎಂಪಿ ಕಾರ್ಯವೈಖರಿ ಬಗ್ಗೆ ಮತ್ತೆ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ

ಎರಡು ವರ್ಷ ರಾಜ್ಯಕ್ಕೆ ಕಷ್ಟವಿದ್ದಾಗ ಇವರ ಸೇವೆ ಪಡೆದು, ಈಗ ಎಕಾಏಕಿ ಬೇಡ ಎನ್ನುವುದು ಸರಿಯಲ್ಲ. ಆದಷ್ಟು ಇವರ ಸೇವೆಯನ್ನು ಮುಂದುವರೆಸಬೇಕು ಹಾಗೂ ಬಿಬಿಎಂಪಿ ವತಿಯಿಂದ ಬೆಂಗಳೂರಿನ ಎಲ್ಲ ವಾರ್ಡುಗಳಲ್ಲಿ ತೆರೆಯಲಿರುವ ನಮ್ಮ ಕ್ಲಿನಿಕ್ ಗಳಿಗೆ ಆದರೂ ಇವರ ಸೇವೆಯನ್ನು ಪಡೆದುಕೊಳ್ಳಬೇಕು - ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ

BBMP: ಬಿಬಿಎಂಪಿ ಕಾರ್ಯವೈಖರಿ ಬಗ್ಗೆ ಮತ್ತೆ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ
ಮತ್ತೆ ಬಿಬಿಎಂಪಿ ಕಾರ್ಯವೈಖರಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಹೆಚ್​ ಡಿ ಕುಮಾರಸ್ವಾಮಿ
TV9 Web
| Edited By: |

Updated on:Mar 22, 2022 | 7:26 PM

Share

ಬೆಂಗಳೂರು: ಬಿಬಿಎಂಪಿ ಕಾರ್ಯವೈಖರಿ ಬಗ್ಗೆ ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಇಂದು ಮತ್ತೊಮ್ಮೆ ಕಿಡಿಕಾರಿದ್ದಾರೆ. ಕೋವಿಡ್ 1, 2 ಮತ್ತು 3ನೇ ಅಲೆಯ ತುರ್ತು ಸಂದರ್ಭದಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಯುಷ್ ಮತ್ತು ದಂತ ವೈದ್ಯರನ್ನು ಬಿಬಿಎಂಪಿ ನೇಮಕ ಮಾಡಿಕೊಂಡಿತ್ತು. ಆದರೆ ಈಗ ಕೊರೊನಾ ಇಲ್ಲವಾಗಿದ್ದು, ಈ ವೈದ್ಯರ ಅಗತ್ಯ ಬಿಬಿಎಂಪಿ ಬೇಡವಾಗಿದೆ. ಹಾಗಾಗಿ ಅವರನ್ನೆಲ್ಲ ಸಾರಾಸಗಟಾಗಿ ಮನೆಗೆ ಹೋಗಿ ಎಂದಿದೆ. ಇದನ್ನು ಪ್ರಶ್ನಿಸಿ, ಹೀಗೆ ಮಾಡುವುದು ಯಾವ ನ್ಯಾಯ? ಎಂದು ಕುಮಾರಸ್ವಾಮಿ BBMP ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಶಾಲಾ ಬಾಲಕಿಯೊಬ್ಬಳು ಬಿಬಿಎಂಪಿ ಬೇಜವಾಬ್ದಾರಿತನದಿಂದಾಗಿ ಮೃತಪಟ್ಟ ಹಿನ್ನೆಲೆಯಲ್ಲಿ BBMP ಅಧಿಕಾರಿಗಳ ವಿರುದ್ಧ ಕೆಂಡಾಮಂಡಲರಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರು (JDS leader HD Kumaraswamy) ಟ್ವೀಟ್​ ಮಾಡಿ, ಮೊದಲು BBMP ಯನ್ನು ಸ್ವಚ್ಛಗೊಳಿಸಬೇಕು ಎಂದು ಗುಡುಗಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.

ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಟ್ವೀಟ್​ ಸಾರಾಂಶ ಹೀಗಿದೆ:

ಆಗತ್ಯ ಇದ್ದಾಗ ಕೆಲಸ ಮಾಡಿಸಿಕೊಂಡು, ಅಗತ್ಯ ಇಲ್ಲದಿದ್ದಾಗ ಮನೆಗೆ ಹೋಗಿ ಎನ್ನುವುದು ಯಾವ ನ್ಯಾಯ? ಕೋವಿಡ್ 1, 2 ಮತ್ತು 3ನೇ ಅಲೆಯ ತುರ್ತು ಸಂದರ್ಭದಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಯುಷ್, ದಂತ ವೈದ್ಯರನ್ನು ಬಿಬಿಎಂಪಿ ನೇಮಕ ಮಾಡಿಕೊಂಡಿತ್ತು.

ಆಗತ್ಯ ಇದ್ದಾಗ ಕೆಲಸ ಮಾಡಿಸಿಕೊಂಡು, ಅಗತ್ಯ ಇಲ್ಲದಿದ್ದಾಗ ಮನೆಗೆ ಹೋಗಿ ಎನ್ನುವುದು ಯಾವ ನ್ಯಾಯ? ಕೋವಿಡ್ 1, 2 ಮತ್ತು 3ನೇ ಅಲೆಯ ತುರ್ತು ಸಂದರ್ಭದಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಯುಷ್, ದಂತ ವೈದ್ಯರನ್ನು ಬಿಬಿಎಂಪಿ ನೇಮಕ ಮಾಡಿಕೊಂಡಿತ್ತು. 1/3 https://t.co/WiefhbpO9e

ಎರಡು ವರ್ಷ ರಾಜ್ಯಕ್ಕೆ ಕಷ್ಟವಿದ್ದಾಗ ಇವರ ಸೇವೆ ಪಡೆದು, ಈಗ ಎಕಾಏಕಿ ಬೇಡ ಎನ್ನುವುದು ಸರಿಯಲ್ಲ. ಆದಷ್ಟು ಇವರ ಸೇವೆಯನ್ನು ಮುಂದುವರೆಸಬೇಕು ಹಾಗೂ ಬಿಬಿಎಂಪಿ ವತಿಯಿಂದ ಬೆಂಗಳೂರಿನ ಎಲ್ಲ ವಾರ್ಡುಗಳಲ್ಲಿ ತೆರೆಯಲಿರುವ ನಮ್ಮ ಕ್ಲಿನಿಕ್ ಗಳಿಗೆ ಆದರೂ ಇವರ ಸೇವೆಯನ್ನು ಪಡೆದುಕೊಳ್ಳಬೇಕು. 2/3

ಉತ್ಸಾಹಿ ತರುಣರಾದ ಇವರೆಲ್ಲರೂ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವುದರಲ್ಲಿ ಸಂಶಯವಿಲ್ಲ. ಎರಡು ವರ್ಷಗಳ ತುರ್ತು ಸಂದರ್ಭದಲ್ಲಿ ಕೆಲಸ ಮಾಡಿದ ಅನುಭವ ಕೂಡ ಇವರಿಗಿದೆ. @CMofKarnataka ಅವರು ಇವರಿಗೆ ಅನುಕೂಲ ಮಾಡಿಕೊಡಬೇಕು. 3/3

Published On - 7:23 pm, Tue, 22 March 22

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ