AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women Health: ಹೆರಿಗೆಯ ನಂತರ ಲೈಂಗಿಕ ಜೀವನ ಎಷ್ಟು ಕಷ್ಟ? ನಟಿ ಕಲ್ಕಿ ಕೊಚ್ಲಿನ್ ಮುಕ್ತ ಮಾತು

ಕಲ್ಕಿ ಕೊಚ್ಲಿನ್ ಸಂದರ್ಶನವೊಂದರಲ್ಲಿ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ಹೆರಿಗೆ ತನ್ನ ವೈಯಕ್ತಿಕ ಜೀವನದ ಮೇಲೆ ಪರಿಣಾಮ ಬೀರಿತು, ಜೊತೆಗೆ ಹೆರಿಗೆಯ ನಂತರ ಲೈಂಗಿಕ ಜೀವನ ಎಷ್ಟು ಕಷ್ಟ ಎಂಬುದರ ಬಗ್ಗೆ ಹಿಂಜರಿಯದೆ ಮುಕ್ತವಾಗಿ ಮಾತನಾಡಿದ್ದಾರೆ.

Women Health: ಹೆರಿಗೆಯ ನಂತರ ಲೈಂಗಿಕ ಜೀವನ ಎಷ್ಟು ಕಷ್ಟ? ನಟಿ ಕಲ್ಕಿ ಕೊಚ್ಲಿನ್ ಮುಕ್ತ ಮಾತು
Kalki Koechlin
ಅಕ್ಷತಾ ವರ್ಕಾಡಿ
|

Updated on:Oct 22, 2024 | 5:39 PM

Share

ಇತ್ತೀಚಿನ ಸಂದರ್ಶನವೊಂದರಲ್ಲಿ, ಕಲ್ಕಿ ಕೊಚ್ಲಿನ್ ಹೆರಿಗೆಯ ನಂತರ ತನ್ನ ಲೈಂಗಿಕ ಜೀವನದಲ್ಲಿ ಆದ ಬದಲಾವಣೆಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ನನ್ನ ಮಗಳಿಗೆ ಜನ್ಮ ನೀಡಿದ ಸಮಯದಲ್ಲಿ ನನ್ನ ಖಾಸಗಿ ಅಂಗಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿದಂತೆ ಭಾಸವಾಗಿತ್ತು. ಸಹಜ ಸ್ಥಿತಿಗೆ ಮರಳಲು ನನಗೆ ಬಹಳ ಸಮಯ ಹಿಡಿಯಿತು, ನಾನು ನಿಧಾನವಾಗಿ ಲೈಂಗಿಕ ಜೀವನಕ್ಕೆ ಮರಳಿದಾಗ, ಅದು ನನಗೆ ತುಂಬಾ ನೋವಿನಿಂದ ಕೂಡಿತ್ತು. ಆ ಸಮಯದಲ್ಲಿ ನಾನು ನನ್ನ ಸಂಗಾತಿಯೊಂದಿಗೆ ಆತ್ಮೀಯವಾಗಿರಲು ಹೆದರುತ್ತಿದ್ದೆ. ನಾನು ಈ ಸಂಪೂರ್ಣ ಘಟನೆಯನ್ನು ನೆನಪಿಸಿಕೊಳ್ಳುತ್ತೇನೆ ಏಕೆಂದರೆ ಯಾವ ಹೆಣ್ಣು ಕೂಡ ಈ ಕುರಿತು ಮುಕ್ತವಾಗಿ ಮಾತನಾಡಲು ಹಿಂಜರಿಯುತ್ತಾರೆ. ಈ ಬಗ್ಗೆ ಅರಿವು ಮೂಡಿಸಲು ಮಾತನಾಡುತ್ತಿರುವೆ ಎಂದು ಹೇಳಿಕೊಂಡಿದ್ದಾರೆ.

ಹೆರಿಗೆಯ ನಂತರ ಪ್ರತೀ ಹೆಣ್ಣಿಗೂ ಮುಖ್ಯವಾಗಿ ತನ್ನ ಗಂಡನ ಬೆಂಬಲ ಅಗತ್ಯವಿರುತ್ತದೆ. ನನ್ನ ಮಗುವಿನ ಜನನದ ನಂತರ ನಾನು ಕೆಲವು ಸಮಸ್ಯೆಗಳನ್ನು ಎದುರಿಸಿದೆ. ಇದರಿಂದಾಗಿ ನಾನು ಮತ್ತೆ ಸ್ತ್ರೀರೋಗತಜ್ಞರ ಬಳಿಗೆ ಹೋಗಿ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಯಿತು. ಹೆರಿಗೆಯ ನಂತರ ಲೈಂಗಿಕ ಜೀವನವನ್ನು ಪುನರಾರಂಭಿಸುವುದು ಪ್ರತೀ ಮಹಿಳೆಗೆ ಸವಾಲಿನ ಕೆಲಸ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಿಳೆಗೆ ಈ ರೋಗಗಳಿದ್ದಾಗ ಗರ್ಭಧರಿಸಬಾರದು; ಇಲ್ಲಿದೆ ಡಾ. ಮಂಜು ವರ್ಮಾ ನೀಡಿರುವ ಸಲಹೆ

ಇದಲ್ಲದೇ ಸ್ತ್ರೀರೋಗ ತಜ್ಞ ಡಾ.ನ್ಯಾನ್ಸಿ ನಾಗ್‌ಪಾಲ್ ಹೇಳುವಂತೆ, ಹೆರಿಗೆಯ ನಂತರ ಮಹಿಳೆಯರು ಹೆಚ್ಚಾಗಿ ದೈಹಿಕ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಲೈಂಗಿಕ ಸಮಯದಲ್ಲಿ ನೋವು ಅಥವಾ ಅಸ್ವಸ್ಥತೆಯನ್ನು ಹೊಂದಿರುತ್ತಾರೆ. ಈ ಅವಧಿಯಲ್ಲಿ ಪಾಲುದಾರರ ಭಾವನಾತ್ಮಕ ಬೆಂಬಲ ಬಹಳ ಮುಖ್ಯ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:38 pm, Tue, 22 October 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!