AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜು ವಿದ್ಯಾರ್ಥಿಗಳಲ್ಲಿ 7 ಸಾವಿರ ಹೆಚ್‌ಐವಿ ಸೋಂಕು ವದಂತಿ ಸುಳ್ಳು: ಸ್ಪಷ್ಟನೆ ನೀಡಿದ ಆರೋಗ್ಯ ಇಲಾಖೆ

ರಾಜ್ಯದಲ್ಲಿ ಹೆಚ್‌ಐವಿ (HIV) ಸೋಂಕಿನ ಬಗ್ಗೆ ಹರಡಿದ್ದ ವದಂತಿಗಳನ್ನು ಆರೋಗ್ಯ ಇಲಾಖೆ ತಳ್ಳಿಹಾಕಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕಡ್ಡಾಯ ಪರೀಕ್ಷೆ ಇಲ್ಲ, 7,000 ಸೋಂಕಿತರ ಸುದ್ದಿ ಸುಳ್ಳು ಎಂದು ಸಚಿವ ಯುಟಿ ಖಾದರ್ ಸ್ಪಷ್ಟಪಡಿಸಿದ್ದಾರೆ. ಗರ್ಭಿಣಿಯರು ಮತ್ತು ರಕ್ತದಾನಿಗಳಿಗೆ ಮಾತ್ರ ಪರೀಕ್ಷೆ. 56,000 ಸೋಂಕಿತರು ಚಿಕಿತ್ಸೆಯಿಂದ ಹೊರಗುಳಿದಿದ್ದು, ಅವರನ್ನು ಪತ್ತೆಹಚ್ಚುವ ಪ್ರಯತ್ನ ನಡೆಯುತ್ತಿದೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬಾರದು.

ಕಾಲೇಜು ವಿದ್ಯಾರ್ಥಿಗಳಲ್ಲಿ 7 ಸಾವಿರ ಹೆಚ್‌ಐವಿ ಸೋಂಕು ವದಂತಿ ಸುಳ್ಳು: ಸ್ಪಷ್ಟನೆ ನೀಡಿದ ಆರೋಗ್ಯ ಇಲಾಖೆ
ಸಾಂದರ್ಭಿಕ ಚಿತ್ರ
ವಿನಯ್​ ಕಾಶಪ್ಪನವರ್​
| Edited By: |

Updated on: Aug 01, 2026 | 6:06 PM

Share

ಬೆಂಗಳೂರು, ಆ.1: ರಾಜ್ಯದಲ್ಲಿ ಹೆಚ್‌ಐವಿ (HIV) ಸೋಂಕಿನ ಸ್ಥಿತಿಗತಿ ಹಾಗೂ ಇತ್ತೀಚೆಗೆ ಹರಿದಾಡುತ್ತಿದ್ದ ವಿವಿಧ ವದಂತಿಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಅಧಿಕೃತ ವಿವರಣೆ ಹಾಗೂ ಸ್ಪಷ್ಟನೆ ನೀಡಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಭಾರಿ ಪ್ರಮಾಣದಲ್ಲಿ ಸೋಂಕು ಹರಡಿದೆ ಹಾಗೂ ಕಡ್ಡಾಯ ಪರೀಕ್ಷೆ ಮಾಡಲಾಗುತ್ತಿದೆ ಎಂಬ ಸುದ್ದಿಗಳು ಸಂಪೂರ್ಣ ಸುಳ್ಳು ಎಂದು ಆರೋಗ್ಯ ಸಚಿವ ಯುಟಿ ಖಾದರ್​ ಅವರು ಸ್ಪಷ್ಟಪಡಿಸಿದೆ.

ರಾಜ್ಯದ ಕಾಲೇಜು ವಿದ್ಯಾರ್ಥಿಗಳಲ್ಲಿ 7,000 ಜನರಿಗೆ ಹೆಚ್‌ಐವಿ ಸೋಂಕು ತಗಲಿದೆ ಎಂದು ಹರಡುತ್ತಿರುವ ಸುದ್ದಿ ಸುಳ್ಳು. ಶಾಲಾ-ಕಾಲೇಜುಗಳಲ್ಲಿ ಹೆಚ್‌ಐವಿ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಬೇಕು ಎಂಬ ನಿಯಮವಿಲ್ಲ. ಶಾಲಾ-ಕಾಲೇಜುಗಳಲ್ಲಿ ಕೇವಲ ಜಾಗೃತಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಮಾತ್ರ ಹಮ್ಮಿಕೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಯಾವುದೇ ಸಾಮಾನ್ಯ ವ್ಯಕ್ತಿಗೆ ಹೆಚ್‌ಐವಿ ಪರೀಕ್ಷೆಯನ್ನು ಕಡ್ಡಾಯಗೊಳಿಸಿಲ್ಲ.

ಪ್ರಸ್ತುತ ಮುಖ್ಯವಾಗಿ ಎರಡು ಸಂದರ್ಭಗಳಲ್ಲಿ ಮಾತ್ರ ಹೆಚ್‌ಐವಿ ಪರೀಕ್ಷೆ ನಡೆಸಲಾಗುತ್ತಿದೆ. ಒಂದು ಗರ್ಭಿಣಿಯರ ಹೆರಿಗೆ ಸಮಯದಲ್ಲಿ, ಇನ್ನೊಂದು ರಕ್ತದಾನ ಮಾಡುವ ಸಮಯದಲ್ಲಿ ಎಂದು ಹೇಳಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಒಟ್ಟು 5,53,453 ಜನರನ್ನು ಪರೀಕ್ಷೆಗೊಳಪಡಿಸಿದ್ದು, ಅದರಲ್ಲಿ 3,091 ಸೋಂಕಿತರು ಪತ್ತೆಯಾಗಿದ್ದಾರೆ.

ಈ ಪೈಕಿ 2,81,742 ಗರ್ಭಿಣಿಯರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 111 ಗರ್ಭಿಣಿಯರಲ್ಲಿ ಹೆಚ್‌ಐವಿ ಪಾಸಿಟಿವ್ ಕಂಡುಬಂದಿದೆ. ರಾಜ್ಯದಲ್ಲಿ 2004 ರಿಂದ ಇಲ್ಲಿಯವರೆಗೆ 39,028 ಸೋಂಕಿತರು ನೋಂದಾಯಿತರಾಗಿದ್ದಾರೆ. 18 ರಿಂದ 35 ವರ್ಷದೊಳಗಿನವರು ಹೆಚ್ಚಿನ ಸಂಖ್ಯೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಹೆರಿಗೆಯಾದ ನಂತರ ಹಾಲುಣಿಸುವ ತಾಯಿ ಪೊರಕೆ ಏಕೆ ಮುಟ್ಟಬಾರದು? ಇಲ್ಲಿದೆ ಸಂಪ್ರದಾಯದ ಹಿಂದಿನ ರಹಸ್ಯ!

ಸುಮಾರು 56,000 ಸೋಂಕಿತರು ಸದ್ಯ ತಪಾಸಣೆ ಮತ್ತು ನಿರಂತರ ಚಿಕಿತ್ಸಾ ವ್ಯಾಪ್ತಿಯಿಂದ ಹೊರಗುಳಿದಿರುವುದು ಕಂಡುಬಂದಿದ್ದು, ಅವರನ್ನು ಪತ್ತೆಹಚ್ಚಿ ಚಿಕಿತ್ಸೆಗೆ ತರುವ ಪ್ರಯತ್ನ ನಡೆಯುತ್ತಿದೆ. ರಾಜ್ಯದಲ್ಲಿ ಹೆಚ್‌ಐವಿ ಸೋಂಕಿತರ ಪ್ರಮಾಣ ಸಂಪೂರ್ಣ ನಿಯಂತ್ರಣದಲ್ಲಿದ್ದು, ಸಾರ್ವಜನಿಕರು ಯಾವುದೇ ಅನಗತ್ಯ ವದಂತಿಗಳಿಗೆ ಕಿವಿಗೊಡಬಾರದು ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಮೈಸೂರಿನಲ್ಲಿ ಟಿಟಿ ವಾಹನದ ಮೇಲೆ ಬಿದ್ದ ದೀಪಾಲಂಕಾರದ ಕಟೌಟ್
ಮೈಸೂರಿನಲ್ಲಿ ಟಿಟಿ ವಾಹನದ ಮೇಲೆ ಬಿದ್ದ ದೀಪಾಲಂಕಾರದ ಕಟೌಟ್