AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Organ Donations: ಅಂಗಾಂಗ ದಾನದಲ್ಲಿ ಕರ್ನಾಟಕಕ್ಕೆ 2ನೇ ಸ್ಧಾನ

ತೆಲಂಗಾಣ ನಂತರ ದಕ್ಷಿಣದ ರಾಜ್ಯಗಳಲ್ಲಿ ಅಂಗಾಂಗ ದಾನದಲ್ಲಿ ಎರಡನೇ ಸ್ಥಾನವನ್ನು ಕರ್ನಾಟಕ ಪಡೆದುಕೊಂಡಿದೆ ಎಂಬುದು ಹೆಮ್ಮೆಯ ವಿಷಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ ಸುಧಾಕರ್ ಹೇಳಿದ್ದಾರೆ.

Organ Donations: ಅಂಗಾಂಗ ದಾನದಲ್ಲಿ ಕರ್ನಾಟಕಕ್ಕೆ 2ನೇ ಸ್ಧಾನ
ಸಾಂದರ್ಭಿಕ ಚಿತ್ರImage Credit source: iStock
TV9 Web
| Edited By: |

Updated on:Dec 17, 2022 | 4:00 PM

Share

2022 ಡಿಸೆಂಬರ್ 14 ವರೆಗಿನ ದಾಖಲೆ ಸಂಖ್ಯೆಯ ಆಧಾರದ ಮೇಲೆ 143 ಅಂಗಾಂಗ ದಾನ(Organ Donations)ಗಳೊಂದಿಗೆ ಕರ್ನಾಟಕವು ಎರಡನೇ ಸ್ಥಾನದಲ್ಲಿದೆ. ಅಂಗಾಂದ ದಾನದಂತಹ ಮಹತ್ವದ ಕಾರ್ಯದಿಂದಾಗಿ ಕರ್ನಾಟಕದಾದ್ಯಂತ ಸುಮಾರು 397 ಜನರಿಗೆ  ಅಂಗಾಂಗಗವನ್ನು ನೀಡಿ ಅವರಿಗೆ ಹೊಸ ಜೀವನವನ್ನು ನಡೆಸುತ್ತಿರುವುದು ನಿಜಕ್ಕೂ ರಾಜ್ಯಕ್ಕೆ ಹೆಮ್ಮೆಯ ವಿಷಯ. ತೆಲಂಗಾಣ ನಂತರ ದಕ್ಷಿಣದ ರಾಜ್ಯಗಳಲ್ಲಿ ಅಂಗಾಂಗ ದಾನದಲ್ಲಿ ಎರಡನೇ ಸ್ಥಾನವನ್ನು ಕರ್ನಾಟಕ ಪಡೆದುಕೊಂಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ ಸುಧಾಕರ್ ಹೇಳಿದ್ದಾರೆ.

ಹಿಂದಿನ ವರ್ಷ ಕರ್ನಾಟಕದಲ್ಲಿ 70 ಅಂಗಾಂಗ ದಾನಗಳು ದಾಖಲಿಸಿಲಾಗಿತ್ತು. ನಂತರದ ದಿನಗಳಲ್ಲಿ ಅಂಗಾಂಗ ದಾನಗಳ ಕುರಿತು ಮೂಡಿಸಿದ ಜಾಗೃತಿಯಿಂದಾಗಿ ದೊಡ್ಡ ಪ್ರಮಾಣದ ಅಂಗಾಂಗ ದಾನಗಳಿಗೆ ಕಾರಣವಾಗಿದೆ ಎಂದು ಕರ್ನಾಟಕದ ರಾಜ್ಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆಯ ಕಾರ್ಯದರ್ಶಿ ಡಾ ಕಿರಣ್ ಕುಮಾರ್ ಡೆಕ್ಕನ್ ಹೆರಾಲ್ಡ್ ಜೊತೆಗೆ ಹಂಚಿಕೊಂಡಿದ್ದಾರೆ. ವಿಶೇಷವಾಗಿ ದಕ್ಷಿಣ ಕನ್ನಡದಲ್ಲಿ 2021ಕ್ಕೆ ಹೋಲಿಸಿದ್ದರೆ, 2022 ರಲ್ಲಿ ನಾಲ್ಕರಿಂದ ಅಂಗಾಂಗ ದಾನಗಳ ಸಂಖ್ಯೆ 15 ಕ್ಕೆ ಏರಿಕೆ ಕಂಡಿದೆ. ಇದರಲ್ಲಿ 95 ಪ್ರತಿಶತದಷ್ಟು ಮೆದುಳು ನಿಷ್ಕ್ರಿಯಗೊಂಡ ರೋಗಿಗಳ ಕುಟುಂಬದ ಸದಸ್ಯರು ಅಂಗಾಂಗ ದಾನದಂತಹ ಮಹತ್ತರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇದರಿಂದಾಗಿ 72 ಜನರ ಜೀವಗಳನ್ನು ಉಳಿಸಲಾಯಿತು. ಕೆಲವು ವಾರಗಳ ಹಿಂದೆಯಷ್ಟೇ ಮಂಜೇಶ್ವರ ಕೇರಳದಲ್ಲಿ ಅಪಘಾತಕ್ಕೀಡಾದ ಘಟನೆಯ ಕುರಿತು ಡಾ ಕಿರಣ್ ಕುಮಾರ್ ನೆನಪಿಸಿಕೊಂಡಿದ್ದಾರೆ.

ಕೋಡಿಕಲ್‌ನ ನಿವಾಸಿಯೊಬ್ಬರು , ಐದು ವರ್ಷಗಳಿಂದ ಡಯಾಲಿಸಿಸ್‌ಗೆ ಒಳಗಾಗಿದ್ದರು. ಕಸಿ ಮಾಡಿದ ನಂತರ ಸಾಮಾನ್ಯ ಜೀವನವನ್ನು ನಡೆಸುತ್ತಿರುವುದರಿಂದ ಮೂತ್ರಪಿಂಡವನ್ನು ದಾನ ಮಾಡಿದ ದಾನಿಯ ಕುಟುಂಬವನ್ನು ನೆನಪಿಸಿಕೊಳ್ಳುತ್ತಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ: ನಮ್ಮ ಕ್ಲಿನಿಕ್ ಎಂದರೇನು? ಕರ್ನಾಟಕದಾದ್ಯಂತ ಇಂದಿನಿಂದ ಅಸ್ತಿತ್ವಕ್ಕೆ ಬರಲಿರುವ ಹೊಸ ಆರೋಗ್ಯ ಕೇಂದ್ರಗಳ ಬಗ್ಗೆ ಇಲ್ಲಿದೆ ಮಾಹಿತಿ

ಅನೇಕರಿಗೆ ಜೀವನದ ಈ ಉಡುಗೊರೆಯನ್ನು ಒದಗಿಸಿದ್ದಕ್ಕಾಗಿ ನಾನು ಪ್ರತಿ ದಾನಿ ಕುಟುಂಬಕ್ಕೆ ಧನ್ಯವಾದ ಹೇಳಲು ಬಯಸುತ್ತೇನೆ. ಸಂಕಷ್ಟದ ಪರಿಸ್ಥಿತಿಯ ನಡುವೆಯೂ ಈ ಕುಟುಂಬಗಳು ಮತ್ತೊಂದು ಜೀವ ಉಳಿಸಲು ಮುಂದಾಗಿರುವುದು ಶ್ಲಾಘನೀಯ ಎಂದು ಡಾ.ಸುಧಾಕರ್ ಹೇಳಿದರು.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Published On - 3:50 pm, Sat, 17 December 22

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ