ರಾಜ್ಯದಲ್ಲಿ ಸಾವಿರಕ್ಕಿಂತ ಕೆಳಗಿಳಿದ ಕೊರೊನಾ ಸೋಂಕಿತರ ಸಂಖ್ಯೆ!

ತಿಂಗಳುಗಳ ನಂತರ ಮೊದಲ ಬಾರಿಗೆ ರಾಜ್ಯದಲ್ಲಿ ಕೊರೊನಾ ಸೋಂಕು ಪೀಡಿತರ ಸಂಖ್ಯೆ 1,000 ಕ್ಕಿಂತ ಕೆಳಗಿಳಿದಿದೆ. ಬೆಂಗಳೂರಲ್ಲೂ ಸೋಂಕಿತರ ಸಂಖ್ಯೆ 500 ಕ್ಕಿಂತ ಕಡಿಮೆ ವರದಿಯಾಗಿದೆ. ನಡುಗುಟ್ಟುವ ಚಳಿಯ ಹೊರತಾಗಿಯೂ ಸಂಖ್ಯೆಗಳು ಇಳಿಮುಖಗೊಂಡಿರುವುದು ಸೋಜಿಗಪಡುವ ವಿಷಯವೇ.

ರಾಜ್ಯದಲ್ಲಿ ಸಾವಿರಕ್ಕಿಂತ ಕೆಳಗಿಳಿದ ಕೊರೊನಾ ಸೋಂಕಿತರ ಸಂಖ್ಯೆ!
ಸಾಂದರ್ಭಿಕ ಚಿತ್ರ
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 30, 2020 | 10:42 PM

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸೋಮವಾರ ಲಭ್ಯವಾಗಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿಂದು ಕೊರೊನಾ ಸೋಂಕಿನಿಂದ 13 ಜನ ಸಾವನ್ನಪ್ಪಿದ್ದಾರೆ ಮತ್ತು ಹೊಸದಾಗಿ 998 ಜನರಿಗೆ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಈವರೆಗೆ ಕೊವಿಡ್-19 ಮಹಾಮಾರಿಗೆ 11,778 ಜನ ಬಲಿಯಾಗಿದ್ದಾರೆ ಮತ್ತು ಸೋಂಕಿತರ ಸಂಖ್ಯೆ 8,84,897ಕ್ಕೇರಿದೆ.

ಸೋಂಕಿತರ ಪೈಕಿ 8,49,821 ಜನ ಗುಣಮುಖರಾಗಿದ್ದಾರೆ ಮತ್ತು ಮಿಕ್ಕಿದ 23,279 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿನಿಂದ 6 ಜನ ಮೃತಪಟ್ಟಿದ್ದಾರೆ ಮತ್ತು ಕಳೆದ 24 ಗಂಟೆಗಳಲ್ಲಿ ಹೊಸದಾಗಿ 444 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 4,137 ಜನ ಮರಣಿಸಿದ್ದಾರೆ ಮತ್ತು ಸೋಂಕು ಪೀಡಿತರ ಸಂಖ್ಯೆ 3,69,734 ತಲುಪಿದೆ.

ಸೋಂಕಿತರ ಪೈಕಿ 3,48,348 ಜನರು ಗುಣಮುಖರಾಗಿದ್ದಾರೆ ಮತ್ತು ಉಳಿದ 17,248 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆಯೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಲಭ್ಯವಾಗಿರುವ ಮಾಹಿತಿ ತಿಳಿಸುತ್ತದೆ.