ಫ್ರಿಡ್ಜ್ ನಲ್ಲಿ ನಿಂಬೆಹಣ್ಣಿನ ತುಂಡನ್ನು ಇಟ್ಟರೆ ಏನಾಗುತ್ತೆ ತಿಳಿದಿದೆಯೇ?

ಸಾಮಾನ್ಯವಾಗಿ ಎಲ್ಲರ ಮನೆಗಳಲ್ಲಿಯೂ ಹೆಚ್ಚಿನ ಅಥವಾ ಉಳಿದ ಆಹಾರ ಪದಾರ್ಥಗಳನ್ನು ಫ್ರಿಡ್ಜ್ ನಲ್ಲಿ ಇಡಲಾಗುತ್ತದೆ. ಆದರೆ ಕೆಲವೊಮ್ಮೆ ರೆಫ್ರಿಜರೇಟರ್ ನಲ್ಲಿ ಇರಿಸಿದ ನಂತರವೂ ಕೆಲವು ಆಹಾರ ಪದಾರ್ಥಗಳು ಬೇಗನೆ ಹಾಳಾಗುತ್ತವೆ. ಇದನ್ನು ತಡೆಯಲು ನಿಂಬೆಯನ್ನು ಬಳಸಬಹುದು. ಇದು ದೀರ್ಘಕಾಲದ ವರೆಗೆ ಆಹಾರಗಳನ್ನು ತಾಜಾವಾಗಿಡಲು ಸಹಕಾರಿಯಾಗಿದೆ. ಅದಲ್ಲದೆ, ಫ್ರಿಡ್ಜ್ ನಲ್ಲಿರುವ ಗಾಳಿಯನ್ನು ನೈಸರ್ಗಿಕವಾಗಿ ಸ್ವಚ್ಛವಾಗಿಡಲು ಇದು ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ.

ಫ್ರಿಡ್ಜ್ ನಲ್ಲಿ ನಿಂಬೆಹಣ್ಣಿನ ತುಂಡನ್ನು ಇಟ್ಟರೆ ಏನಾಗುತ್ತೆ ತಿಳಿದಿದೆಯೇ?
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 09, 2025 | 11:36 AM

ನೀವು ನಿಂಬೆಹಣ್ಣನ್ನು ಸೇವನೆ ಮಾಡಲು ನಾನಾ ರೀತಿಯಲ್ಲಿ ಬಳಸಿಕೊಳ್ಳುವುದು ಮಾತ್ರವಲ್ಲ, ಸ್ವಚ್ಛಗೊಳಿಸಲು ಮತ್ತು ಇತರ ಅನೇಕ ವಿಷಯಗಳಿಗೂ ಬಳಸಬಹುದು. ನಿಂಬೆಯ ಪರಿಮಳ ಸಾಮಾನ್ಯವಾಗಿ ಎಲ್ಲರಿಗೂ ಇಷ್ಟವಾಗುತ್ತದೆ. ಸೌಂದರ್ಯದಿಂದ ಹಿಡಿದು ಆರೋಗ್ಯದ ವರೆಗೆ, ನಿಂಬೆ ಎಲ್ಲಾ ಕ್ಷೇತ್ರಗಳಲ್ಲಿಯೂ ಬಹಳ ಉಪಯುಕ್ತ ಎಂದು ತಜ್ಞರು ಹೇಳುತ್ತಾರೆ. ಇದೆಲ್ಲದರ ಜೊತೆಗೆ ನಿಂಬೆಹಣ್ಣನ್ನು ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟರೆ ಅನೇಕ ರೀತಿಯ ಪ್ರಯೋಜನಗಳಿವೆ ಎಂಬುದು ನಿಮಗೆ ತಿಳಿದಿದೆಯೇ? ಹೌದು, ಇದು ಸತ್ಯ. ಸಾಮಾನ್ಯವಾಗಿ ನಾವು ಎಲ್ಲಾ ಆಹಾರ ಪದಾರ್ಥಗಳನ್ನು ಫ್ರಿಡ್ಜ್ ನಲ್ಲಿ ಸಂಗ್ರಹಿಸಿಡುತ್ತೇವೆ. ಇದರ ಜೊತೆ ಜೊತೆಗೆ ಶುಚಿತ್ವದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಬಹಳ ಮುಖ್ಯ. ಇದಕ್ಕೆ ನಿಂಬೆ ಬಹಳ ಉಪಯುಕ್ತವಾಗಿದೆ. ಏಕೆಂದರೆ ಇದರಲ್ಲಿ ಬ್ಯಾಕ್ಟೀರಿಯಾ ವಿರೋಧಿ ಗುಣಗಳಿವೆ. ಇದು ಫ್ರಿಡ್ಜ್ ನಿಂದ ಬ್ಯಾಕ್ಟೀರಿಯಾವನ್ನು ನಿವಾರಣೆ ಮಾಡುತ್ತದೆ, ಸೋಂಕುಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಇದಲ್ಲದೆ, ಫ್ರಿಡ್ಜ್ ನಲ್ಲಿರುವ ಗಾಳಿಯನ್ನು ನೈಸರ್ಗಿಕವಾಗಿ ಸ್ವಚ್ಛವಾಗಿಡಲು ಇದು ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಇದರಿಂದ ಯಾವ ರೀತಿಯ ಪ್ರಯೋಜನಗಳಿವೆ? ಇದರಿಂದ ಆರೋಗ್ಯಕ್ಕೆ ಯಾವ ರೀತಿಯ ಲಾಭಗಳಿವೆ? ಇಲ್ಲಿದೆ ಮಾಹಿತಿ.

ಫ್ರಿಡ್ಜ್ ನಲ್ಲಿ ಯಾವುದೇ ರೀತಿಯ ದುರ್ವಾಸನೆ ಇರುವುದಿಲ್ಲ;

ಸಾಮಾನ್ಯವಾಗಿ ಫ್ರಿಡ್ಜ್ ಶುಚಿತ್ವದ ವಿಷಯದಲ್ಲಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೂ, ಕೆಲವೊಮ್ಮೆ ದುರ್ವಾಸನೆಯ ಸಮಸ್ಯೆ ಕಾಡುತ್ತದೆ. ಹೆಚ್ಚಿನ ಸಮಯದಲ್ಲಿ ಈ ವಾಸನೆ ರೆಫ್ರಿಜರೇಟರ್‌ ನಲ್ಲಿ ಇರಿಸಲಾದ ಆಹಾರ ಪದಾರ್ಥಗಳಲ್ಲಿಯೂ ಕಂಡುಬರುತ್ತದೆ. ಇಂತಹ ಸಂದರ್ಭಗಳಲ್ಲಿ ಈ ವಾಸನೆಯ ಸಮಸ್ಯೆಯನ್ನು ನಿವಾರಿಸಲು ಸುಲಭವಾದ ಮಾರ್ಗವೆಂದರೆ ನಿಂಬೆಯನ್ನು ಎರಡು ತುಂಡುಗಳಾಗಿ ಕತ್ತರಿಸಿ ರೆಫ್ರಿಜರೇಟರ್‌ ನಲ್ಲಿ ಇಡುವುದು. ಈ ರೀತಿ ಮಾಡುವುದರಿಂದ ನಿಂಬೆಯಲ್ಲಿರುವ ಸಿಟ್ರಿಕ್ ಆಮ್ಲವು ಫ್ರಿಡ್ಜ್ ನಲ್ಲಿರುವ ಕೆಟ್ಟ ವಾಸನೆಯನ್ನು ತೆಗೆದುಹಾಕುತ್ತದೆ. ಇದು ಗಾಳಿಯನ್ನು ನೈಸರ್ಗಿಕವಾಗಿ ತಾಜಾ ಮತ್ತು ಪರಿಮಳಯುಕ್ತವಾಗಿರಿಸುತ್ತದೆ.

ಆಹಾರವನ್ನು ದೀರ್ಘಕಾಲದ ವರೆಗೆ ತಾಜಾವಾಗಿರಿಸುತ್ತದೆ:

ಹೆಚ್ಚಿನ ಆಹಾರ ಪದಾರ್ಥಗಳನ್ನು ಫ್ರಿಡ್ಜ್ ನಲ್ಲಿ ಇಡಲಾಗುತ್ತದೆ. ಆದರೆ ರೆಫ್ರಿಜರೇಟರ್ ನಲ್ಲಿ ಇರಿಸಿದ ನಂತರವೂ ಕೆಲವು ಪದಾರ್ಥಗಳು ಬೇಗನೆ ಹಾಳಾಗುತ್ತವೆ. ಅಂತಹ ಸಮಯದಲ್ಲಿ ನಿಂಬೆಯನ್ನು ದೀರ್ಘಕಾಲದ ವರೆಗೆ ತಾಜಾವಾಗಿಡಲು ಬಳಸಬಹುದು. ನಿಂಬೆಯಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಅವು ಆಹಾರ ಪದಾರ್ಥಗಳನ್ನು ದೀರ್ಘಕಾಲದ ವರೆಗೆ ಕೊಳೆಯದಂತೆ ರಕ್ಷಿಸುತ್ತವೆ ಮತ್ತು ಅವುಗಳನ್ನು ತಾಜಾವಾಗಿರಿಸುತ್ತವೆ. ಆದರೆ ರೆಫ್ರಿಜರೇಟರ್‌ ನಲ್ಲಿ ಇಡಲು ಯಾವಾಗಲೂ ತಾಜಾ, ಸ್ವಚ್ಛವಾದ ನಿಂಬೆಯನ್ನು ಮಾತ್ರ ಬಳಸಿ.

ಇದನ್ನೂ ಓದಿ: ಚಳಿಗಾಲದಲ್ಲಿ ತಣ್ಣೀರಿನ ಸ್ನಾನ ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸಬಹುದು ಹುಷಾರ್!

ಫ್ರಿಡ್ಜ್ ಗಾಳಿಯನ್ನು ನೈಸರ್ಗಿಕವಾಗಿ ಸ್ವಚ್ಛಮಾಡುತ್ತದೆ

ನಿಂಬೆ ತುಂಡುಗಳನ್ನು ಫ್ರಿಡ್ಜ್ ನಲ್ಲಿ ಇಡುವ ಒಂದು ಪ್ರಯೋಜನವೆಂದರೆ ಅದು ನೈಸರ್ಗಿಕವಾಗಿ ಫ್ರಿಡ್ಜ್ ನಲ್ಲಿರುವ ಗಾಳಿಯನ್ನು ಶುದ್ಧೀಕರಿಸುತ್ತದೆ. ಏಕೆಂದರೆ ಇದು ಆಂಟಿ- ಆಕ್ಸಿಡೆಂಟ್ಗಳು ಮತ್ತು ಸಿಟ್ರಿಕ್ ಆಮ್ಲವನ್ನು ಹೊಂದಿರುತ್ತದೆ. ಈ ಅಂಶಗಳು ಫ್ರಿಡ್ಜ್ ನಲ್ಲಿರುವ ಗಾಳಿಯನ್ನು ತಾಜಾವಾಗಿರಿಸುತ್ತದೆ. ಇದಲ್ಲದೆ, ಇದು ಆಹಾರವನ್ನು ಸೋಂಕಿನಿಂದ ರಕ್ಷಿಸುತ್ತದೆ. ಇದಲ್ಲದೆ, ನಿಂಬೆಯ ತುಂಡನ್ನು ಇಡುವುದು ಸೋಂಕು ಹರಡುವ ಅಪಾಯವನ್ನು ಕೂಡ ಕಡಿಮೆ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ