AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಭಾಗಗಳಲ್ಲಿ ನೋವು ಕಂಡುಬಂದರೆ ನಿರ್ಲಕ್ಷಿಸಬೇಡಿ ಇದು ಥೈರಾಯ್ಡ್ ಲಕ್ಷಣವಾಗಿರಬಹುದು!

ನಿಮಗೆ ತಿಳಿದಿರಬಹುದು, ಕುತ್ತಿಗೆಯಲ್ಲಿರುವ ಚಿಟ್ಟೆಯ ಆಕಾರದ ಗ್ರಂಥಿಯನ್ನು ನಾವು ಥೈರಾಯ್ಡ್ ಗ್ರಂಥಿ ಎಂದು ಕರೆಯುತ್ತೇವೆ. ಇದರಲ್ಲಿ ಅಸಮತೋಲನ ಉಂಟಾದಾಗ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳು ಕಂಡುಬರಬಹುದು. ಆದರೆ ಈ ರೀತಿಯಾಗುವ ಮೊದಲು ದೇಹ ನಿಮಗೆ ಕೆಲವು ಲಕ್ಷಣಗಳ ಮೂಲಕ ಎಚ್ಚರಿಸುತ್ತದೆ. ಅವುಗಳನ್ನು ನಿರ್ಲಕ್ಷ್ಯ ಮಾಡದೆಯೇ ಸರಿಯಾಗಿ ಗುರುತಿಸುವುದು ಬಹಳ ಅನಿವಾರ್ಯವಾಗುತ್ತದೆ. ಸಾಮಾನ್ಯವಾಗಿ ಥೈರಾಯ್ಡ್ ಗ್ರಂಥಿಯಲ್ಲಿ ಅಸಮತೋಲನವಾದಾಗ ದೇಹದ ವಿವಿಧ ಭಾಗಗಳಲ್ಲಿ ನೋವು ಕಂಡುಬರುತ್ತದೆ. ಹಾಗಾದರೆ ದೇಹದ ಯಾವ ಭಾಗಗಳಲ್ಲಿ ನೋವು ಕಂಡುಬರುತ್ತದೆ, ಥೈರಾಯ್ಡ್ ನಿಂದ ಯಾವ ರೀತಿಯ ಸಮಸ್ಯೆಗಳು ಉಂಟಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಈ ಭಾಗಗಳಲ್ಲಿ ನೋವು ಕಂಡುಬಂದರೆ ನಿರ್ಲಕ್ಷಿಸಬೇಡಿ ಇದು ಥೈರಾಯ್ಡ್ ಲಕ್ಷಣವಾಗಿರಬಹುದು!
ಥೈರಾಯ್ಡ್ ಬರುವ ಮುಂಚೆ ಕಂಡುಬರುವ ಲಕ್ಷಣಗಳು
ಪ್ರೀತಿ ಭಟ್​, ಗುಣವಂತೆ
|

Updated on:Nov 26, 2025 | 5:40 PM

Share

ಇತ್ತೀಚಿನ ದಿನಗಳಲ್ಲಿ ಅನೇಕರು ಥೈರಾಯ್ಡ್ (Thyroid) ಸಮಸ್ಯೆಯಿಂದ ಬಳಲುತ್ತಿದ್ದಾರೆ. ನಿಮಗೆ ತಿಳಿದಿರಬಹುದು, ಕುತ್ತಿಗೆಯಲ್ಲಿರುವ ಚಿಟ್ಟೆಯ ಆಕಾರದ ಗ್ರಂಥಿಯನ್ನು ನಾವು ಥೈರಾಯ್ಡ್ ಗ್ರಂಥಿ ಎಂದು ಕರೆಯುತ್ತೇವೆ. ಇದು ದೇಹದ ಉಷ್ಣತೆ, ಹೃದಯ ಬಡಿತ ಮತ್ತು ಮೆದುಳಿನ ಬೆಳವಣಿಗೆಯನ್ನು ನಿಯಂತ್ರಿಸಲು ಸಹಾಯ ಮಾಡುವ ಹಾರ್ಮೋನುಗಳನ್ನು ಉತ್ಪಾದಿಸುತ್ತದೆ. ಆದರೆ ಥೈರಾಯ್ಡ್ ಗ್ರಂಥಿಯಲ್ಲಿನ ಅಸಮತೋಲನವು ಕೆಲವು ಸಮಸ್ಯೆಗಳಿಗೆ ಕಾರಣವಾಗುತ್ತದೆ. ಸಾಮಾನ್ಯವಾಗಿ ಈ ಸಮಸ್ಯೆ ಕಂಡುಬರುವ ಮೊದಲು ದೇಹದ ವಿವಿಧ ಭಾಗಗಳಲ್ಲಿ ನೋವು ಕಂಡುಬರುತ್ತದೆ. ಏಕೆಂದರೆ ಥೈರಾಯ್ಡ್ ಹಾರ್ಮೋನುಗಳಲ್ಲಿನ ಅಸಮತೋಲನ ಉಂಟಾದಾಗ ಮೂಳೆಗಳನ್ನು ದುರ್ಬಲಗೊಳಿಸುತ್ತದೆ. ಇದರಿಂದಾಗಿ ಅಲ್ಲಲ್ಲಿ ನೋವು ಕಂಡುಬರುವುದಕ್ಕೆ ಕಾರಣವಾಗುತ್ತದೆ. ಹಾಗಾದರೆ ಥೈರಾಯ್ಡ್ ನಿಂದ ಯಾವ ರೀತಿಯ ಸಮಸ್ಯೆಗಳು ಉಂಟಾಗುತ್ತದೆ, ಅದರ ಜೊತೆಗೆ ದೇಹದ ಯಾವ ಭಾಗಗಳಲ್ಲಿ ನೋವು ಕಂಡುಬರುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಕುತ್ತಿಗೆ ನೋವು: ಇದು ಥೈರಾಯ್ಡ್ ಸಮಸ್ಯೆಯ ಮೊದಲ ಲಕ್ಷಣ. ಕೆಲವರಲ್ಲಿ ಕುತ್ತಿಗೆಯಲ್ಲಿ ಊತವನ್ನೂ ಉಂಟುಮಾಡಬಹುದು. ನಿಮಗೂ ಕೂಡ ಈ ರೀತಿ ಆಗುತ್ತಿದ್ದರೆ ಅದನ್ನು ನಿರ್ಲಕ್ಷಿಸಬೇಡಿ. ಆದಷ್ಟು ಬೇಗ ವೈದ್ಯರನ್ನು ಸಂಪರ್ಕಿಸಿ.

ದವಡೆ ನೋವು: ಥೈರಾಯ್ಡ್ ಹಾರ್ಮೋನುಗಳು ಅಸಮತೋಲನಗೊಂಡಾಗಲೂ ದವಡೆ ನೋವು ಉಂಟಾಗಬಹುದು. ದೀರ್ಘಕಾಲದಿಂದ ದವಡೆಯಲ್ಲಿ ನೋವು ಕಂಡುಬರುತ್ತಿದ್ದರೆ ಅದನ್ನು ನಿರ್ಲಕ್ಷಿಸಬೇಡಿ.

ಕಿವಿ ನೋವು: ಥೈರಾಯ್ಡ್ ಹಾರ್ಮೋನ್ ಗಳಲ್ಲಿ ಅಸಮತೋಲನ ಉಂಟಾದಾಗ ಕಿವಿ ನೋವು ಕೂಡ ಕಂಡುಬರಬಹುದು. ಹಾಗಾಗಿ ಕಿವಿ ನೋವು ಬಂದಾಗ ಅದನ್ನು ಹಗುರವಾಗಿ ಪರಿಗಣಿಸಬೇಡಿ, ಏಕೆಂದರೆ ಇದು ಥೈರಾಯ್ಡ್ ಕಾಯಿಲೆಯ ಸಂಕೇತವಾಗಿರಬಹುದು.

ಇದನ್ನೂ ಓದಿ: ದೈನಂದಿನ ನಿಮ್ಮ ಈ 5 ಅಭ್ಯಾಸಗಳೇ ಮೂಳೆ ವೀಕ್ ಆಗುವುದಕ್ಕೆ ಕಾರಣ

ಸ್ನಾಯು ನೋವು: ಸಾಮಾನ್ಯವಾಗಿ ಥೈರಾಯ್ಡ್ ಗ್ರಂಥಿಯು ದೊಡ್ಡದಾಗುತ್ತಿದ್ದಂತೆ, ಸ್ನಾಯು ನೋವು ಹೆಚ್ಚಾಗುತ್ತದೆ. ನಿಮಗೂ ಈ ರೀತಿಯಾಗುತ್ತಿದ್ದರೆ ತಕ್ಷಣ ವೈದ್ಯರನ್ನು ಭೇಟಿಮಾಡಿ.

ಕೀಲು ನೋವು: ಥೈರಾಯ್ಡ್ ಗ್ರಂಥಿಯು ದೊಡ್ಡದಾದಾಗ, ಕೀಲುಗಳಲ್ಲಿ ನೋವು ಕಂಡುಬರುತ್ತದೆ. ಅದರಲ್ಲಿಯೂ ಮೊಣಕಾಲುಗಳಲ್ಲಿ ನೋವು ಕಂಡುಬರುತ್ತದೆ. ಇಂತಹ ಪರಿಸ್ಥಿತಿಯನ್ನು ನಿರ್ಲಕ್ಷ್ಯ ಮಾಡದೆಯೇ ವೈದ್ಯರನ್ನು ಸಂಪರ್ಕ ಮಾಡುವುವು ಬಹಳ ಒಳ್ಳೆಯದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:40 pm, Wed, 26 November 25

ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು