AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kidney Health: ಅತಿಯಾದ ಸಕ್ಕರೆ, ಉಪ್ಪು ಸೇವನೆಯಿಂದ ಕಿಡ್ನಿ ಮೇಲಾಗುವ ಪರಿಣಾಮವೇನು?

ಕಿಡ್ನಿಯ ಆರೋಗ್ಯಕ್ಕೆ ನಾವು ಸೇವಿಸುವ ಆಹಾರವೂ ಕಾರಣವಾಗುತ್ತದೆ. ಹೀಗಾಗಿ, ಕಿಡ್ನಿಯ ಆರೋಗ್ಯವನ್ನು ಹೆಚ್ಚಿಸುವ ಆಹಾರಗಳನ್ನು ಆಯ್ಕೆ ಮಾಡಿಕೊಳ್ಳುವುದು ಬಹಳ ಮುಖ್ಯ. ಅತಿಯಾಗಿ ಸಕ್ಕರೆ ಮತ್ತು ಉಪ್ಪು ಸೇವನೆ ಮಾಡುವುದರಿಂದ ಕಿಡ್ನಿಯ ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬ ಕುರಿತು ಮಾಹಿತಿ ಇಲ್ಲಿದೆ.

Kidney Health: ಅತಿಯಾದ ಸಕ್ಕರೆ, ಉಪ್ಪು ಸೇವನೆಯಿಂದ ಕಿಡ್ನಿ ಮೇಲಾಗುವ ಪರಿಣಾಮವೇನು?
ಕಿಡ್ನಿಯ ಆರೋಗ್ಯImage Credit source: istock
ಸುಷ್ಮಾ ಚಕ್ರೆ
|

Updated on: Apr 20, 2024 | 5:14 PM

Share

ನಾವು ಏನು ಕುಡಿಯುತ್ತೇವೆ, ಏನು ತಿನ್ನುತ್ತೇವೆ ಎಲ್ಲವೂ ನಮ್ಮ ದೇಹದ ಮೇಲೆ ಪರಿಣಾಮ ಬೀರುತ್ತದೆ. ನಾವು ಕೆಲವೊಮ್ಮೆ ಅದನ್ನು ಗ್ರಹಿಸಲು ವಿಫಲರಾಗುತ್ತೇವೆ. ನಮ್ಮ ದೇಹದಲ್ಲಿನ ಹುರುಳಿ ಆಕಾರದ ಚೀಲಗಳಾದ ಮೂತ್ರಪಿಂಡಗಳು (Kidney) ನಾವು ಸೇವಿಸುವ ಆಹಾರದಿಂದ ಪ್ರಭಾವಿತವಾಗಿರುವ ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ನಾವು ಸೇವಿಸುವ ಆಹಾರ ಮೂತ್ರಪಿಂಡಗಳ ಅತ್ಯುತ್ತಮ ಕಾರ್ಯನಿರ್ವಹಣೆಯನ್ನು ಕಾಪಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಇದು ನಮ್ಮ ದೇಹದಲ್ಲಿನ ಎಲ್ಲಾ ಖನಿಜಗಳನ್ನು ಸಮತೋಲನಗೊಳಿಸಲು ರಕ್ತದೊತ್ತಡವನ್ನು (Blood Pressure Control) ನಿಯಂತ್ರಿಸಲು ಸಹಾಯ ಮಾಡುತ್ತದೆ.

ಹೆಚ್ಚು ಉಪ್ಪು ಮತ್ತು ಸಕ್ಕರೆ ಮೂತ್ರಪಿಂಡಗಳಿಗೆ ಏಕೆ ಹಾನಿಕಾರಕ?:

ಹೆಚ್ಚು ಉಪ್ಪು, ಸಕ್ಕರೆ ಮತ್ತು ಮಾಂಸವನ್ನು ಸೇವಿಸುವುದರಿಂದ ಮೂತ್ರಪಿಂಡಗಳ ಮೇಲೆ ಹೆಚ್ಚುವರಿ ಒತ್ತಡವನ್ನು ಉಂಟುಮಾಡಬಹುದು. ಇದು ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಂತಹ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇದು ದೀರ್ಘಕಾಲದ ಕಿಡ್ನಿ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ. ಇದರ ಬದಲು ಹಣ್ಣುಗಳು, ತರಕಾರಿಗಳು, ಧಾನ್ಯಗಳಂತಹ ಸಸ್ಯ ಆಧಾರಿತ ಆಹಾರವನ್ನು ತಿನ್ನುವುದರಿಂದ ನಮ್ಮ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸುತ್ತದೆ ಮತ್ತು ಮೂತ್ರಪಿಂಡಗಳ ಮೇಲಿನ ಹೆಚ್ಚುವರಿ ಹೊರೆಯನ್ನು ಕಡಿಮೆ ಮಾಡುತ್ತದೆ. ಈ ರೀತಿಯ ಆಹಾರವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ, ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ ಮತ್ತು ನಮ್ಮ ಮೂತ್ರಪಿಂಡಗಳು ಒತ್ತಡವಿಲ್ಲದೆ ಕಾರ್ಯನಿರ್ವಹಿಸುವಂತೆ ಮಾಡುತ್ತದೆ.

ಇದನ್ನೂ ಓದಿ: Smoking Effect: ಧೂಮಪಾನದಿಂದ ನಿಮ್ಮ ಕಿಡ್ನಿಯ ಮೇಲಾಗುವ ಪರಿಣಾಮಗಳೇನು?

ನಮ್ಮ ಮೂತ್ರಪಿಂಡಗಳನ್ನು ಆರೋಗ್ಯಕರವಾಗಿಡಲು ಸೋಡಿಯಂ, ಸಕ್ಕರೆ ಮತ್ತು ಪ್ರೊಟೀನ್ ಅನ್ನು ಮಿತವಾಗಿ ಸೇವನೆ ಮಾಡುವುದು ಮುಖ್ಯ. ವಿಶೇಷವಾಗಿ ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿರುವವರಿಗೆ ಪೊಟ್ಯಾಸಿಯಮ್ ಮತ್ತು ರಂಜಕದ ಸಮತೋಲನವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ.

ಸಂಸ್ಕರಿಸಿದ ಆಹಾರಗಳ ಬದಲಿಗೆ ನೈಸರ್ಗಿಕ ಆಹಾರವನ್ನು ಸೇವಿಸುವುದರಿಂದ ನಮ್ಮ ಮೂತ್ರಪಿಂಡಗಳು ಆರೋಗ್ಯಕರವಾಗಿರಲು ಸಹಾಯ ಮಾಡುತ್ತದೆ. ನಾವು ಸೇವಿಸುವ ಆಹಾರದಲ್ಲಿ ಹೆಚ್ಚು ಉಪ್ಪು ಅಥವಾ ಸಕ್ಕರೆ ಅಡಗಿದೆಯೇ ಎಂದು ನೋಡಲು ಯಾವಾಗಲೂ ಆಹಾರ ಉತ್ಪನ್ನಗಳ ಮೇಲೆ ಪೌಷ್ಟಿಕಾಂಶದ ಲೇಬಲ್ ಅನ್ನು ಪರಿಶೀಲಿಸಬೇಕು. ಅಲ್ಲದೆ, ಸಾಕಷ್ಟು ನೀರು ಸೇವಿಸುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಇದು ನಮ್ಮ ದೇಹದಿಂದ ವಿಷವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ ಮತ್ತು ನಮ್ಮ ಮೂತ್ರಪಿಂಡಗಳು ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಮಾಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ