AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡ್ನಿ ವೈಫಲ್ಯಕ್ಕೆ ಟ್ರಾನ್ಸ್‌ಪ್ಲಾಂಟ್ ಯಾವಾಗ ಅಗತ್ಯ ಎಂಬುದನ್ನು ಡಾ. ರವಿಶಂಕರ್ ಅವರಿಂದ ತಿಳಿದುಕೊಳ್ಳಿ

ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಲ್ಲಿ ಡಯಾಲಿಸಿಸ್ ಅನಿವಾರ್ಯವಾದರೂ, ಅದು ಜೀವನದ ಅಂತ್ಯವಲ್ಲ. ದೇಹದ ಸಮತೋಲನ ಕಾಪಾಡಿ ಹೊಸ ಆಶೆಯನ್ನು ನೀಡುವ ಚಿಕಿತ್ಸೆಯಾಗಿದೆ. ಕಿಡ್ನಿ ಸರಿಯಾಗಿ ಕಾರ್ಯನಿರ್ವಹಿಸದ ಸಂದರ್ಭದಲ್ಲಿ ಡಯಾಲಿಸಿಸ್ ದೇಹದಲ್ಲಿನ ವಿಷಕಾರಿ ಅಂಶಗಳನ್ನು ಹೊರಹಾಕಿ ಆರೋಗ್ಯವನ್ನು ಕಾಪಾಡಲು ಪ್ರಮುಖ ಪಾತ್ರ ವಹಿಸುತ್ತದೆ. ಆದರೆ ಹಲವು ರೋಗಿಗಳಲ್ಲಿ ದೀರ್ಘಕಾಲದ ಪರಿಹಾರಕ್ಕಾಗಿ ಕಿಡ್ನಿ ಕಸಿ ಉತ್ತಮ ಆಯ್ಕೆಯಾಗಿರುತ್ತದೆ. ಹಾಗಾದರೆ ಜೀವಂತ ದಾನಿಗಳಿಂದ ಕಿಡ್ನಿ ಕಸಿ ಏಕೆ ಮುಖ್ಯವಾಗುತ್ತದೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಕಿಡ್ನಿ ವೈಫಲ್ಯಕ್ಕೆ ಟ್ರಾನ್ಸ್‌ಪ್ಲಾಂಟ್ ಯಾವಾಗ ಅಗತ್ಯ ಎಂಬುದನ್ನು ಡಾ. ರವಿಶಂಕರ್ ಅವರಿಂದ ತಿಳಿದುಕೊಳ್ಳಿ
Kidney Transplant Vs Dialysis
ಪ್ರೀತಿ ಭಟ್​, ಗುಣವಂತೆ
|

Updated on:May 20, 2026 | 8:01 PM

Share

ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವ ಅನೇಕರಿಗೆ ಡಯಾಲಿಸಿಸ್ ಅನಿವಾರ್ಯವಾಗುತ್ತದೆ. ಇದು ಹಾನಿಗೊಳಗಾದ ಕಿಡ್ನಿ (Kidney) ಮಾಡಲಾಗದ ಕೆಲಸವನ್ನು ಮಾಡುತ್ತದೆ. ದೇಹದಲ್ಲಿನ ವಿಷಕಾರಿ ಅಂಶಗಳನ್ನು ಹೊರಹಾಕಲು ಮತ್ತು ದ್ರವಗಳ ಸಮತೋಲನ, ಹಾಗೂ ಆರೋಗ್ಯವನ್ನು ಕಾಪಾಡಲು ಇದು ಸಹಕಾರಿ. ಆದರೆ, ಡಯಾಲಿಸಿಸ್ ಕೇವಲ ಚಿಕಿತ್ಸೆಯಲ್ಲ, ಇದು ವ್ಯಕ್ತಿಯ ವೃತ್ತಿ, ಸಂಬಂಧಗಳು ಮತ್ತು ವೈಯಕ್ತಿಕ ಸ್ವಾತಂತ್ರ್ಯವನ್ನೇ ಬದಲಾಯಿಸುತ್ತದೆ. ವೈದ್ಯರ ಪ್ರಕಾರ, ಡಯಾಲಿಸಿಸ್ ಅಂತಿಮ ಹಂತ ಎಂದು ಪರಿಗಣಿಸುವುದು ಸರಿಯಲ್ಲ, ಬದಲಿಗೆ ರೋಗಿಗಳಿಗೆ ಹೊಸ ಜೀವನದ ದಾರಿ ಎಂದು ಪರಿಗಣಿಸಬೇಕು. ಆದರೆ ಹಲವು ರೋಗಿಗಳಲ್ಲಿ ದೀರ್ಘಕಾಲದ ಪರಿಹಾರಕ್ಕಾಗಿ ಕಿಡ್ನಿ ಕಸಿ ಉತ್ತಮ ಆಯ್ಕೆಯಾಗಿರುತ್ತದೆ. ಹಾಗಾದರೆ ಜೀವಂತ ದಾನಿಗಳಿಂದ ಕಿಡ್ನಿ ಕಸಿ ಏಕೆ ಮುಖ್ಯವಾಗುತ್ತದೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಎಚ್ಚರಿಕೆಯ ಲಕ್ಷಣಗಳು:

  • ನಿರಂತರ ಆಯಾಸ ಮತ್ತು ಸುಸ್ತು.
  • ಮುಖ ಮತ್ತು ಪಾದಗಳಲ್ಲಿ ಊತ.
  • ಹಸಿವು ಕಡಿಮೆಯಾಗುವುದು ಮತ್ತು ವಾಕರಿಕೆ.
  • ರಕ್ತದೊತ್ತಡ ನಿಯಂತ್ರಣಕ್ಕೆ ಬಾರದಿರುವುದು.
  • ಮೂತ್ರ ವಿಸರ್ಜನೆಯ ಕ್ರಮದಲ್ಲಿ ಬದಲಾವಣೆ.

ಸೂಚನೆ ನೀಡದೇ ಆವರಿಸುತ್ತದೆ ಕಿಡ್ನಿ ಸಮಸ್ಯೆ;

ಕನಕಪುರ ರೋಡ್ ಮಣಿಪಾಲ್ ಆಸ್ಪತ್ರೆಯ ಯುರಾಲಜಿ, ಆಂಡ್ರಾಲಜಿ, ರೋಬೋಟಿಕ್ ಮತ್ತು ರೀನಲ್ ಟ್ರಾನ್ಸ್‌ಪ್ಲಾಂಟ್ ಸರ್ಜರಿಯ ಕನ್ಸಲ್ಟಂಟ್ ಡಾ. ರವಿಶಂಕರ್ ಜೆ.ಸಿ. ಅವರು ತಿಳಿಸಿರುವ ಮಾಹಿತಿ ಅನುಸಾರ, ಮೂತ್ರಪಿಂಡದ ಹಾನಿಯು ಸಾಮಾನ್ಯವಾಗಿ ಸೂಚನೇ ನೀಡದೇ ಆವರಿಸುತ್ತದೆ. ವಿಶೇಷವಾಗಿ ದೀರ್ಘಕಾಲದ ಮಧುಮೇಹ ಮತ್ತು ರಕ್ತದೊತ್ತಡ ಸಮಸ್ಯೆ ಇರುವವರಲ್ಲಿ. ರೋಗ ಲಕ್ಷಣಗಳು ಗೋಚರಗವಾಗುವ ಹಂತದಲ್ಲಿ, ಮೂತ್ರಪಿಂಡದ ಕಾರ್ಯದಲ್ಲಿ ಸಾಕಷ್ಟು ಸಮಸ್ಯೆ ಎದುರಾಗಿರುತ್ತದೆ. ಈ ರೀತಿ ಮೂತ್ರಪಿಂಡದ ವೈಫಲ್ಯವು ತೀವ್ರ ಹಂತಕ್ಕೆ ತಲುಪಿದಾಗ ಡಯಾಲಿಸಿಸ್ ಅನಿವಾರ್ಯವಾಗುತ್ತದೆ. ಆದರೆ ಹಲವು ರೋಗಿಗಳಲ್ಲಿ ದೀರ್ಘಕಾಲದ ಪರಿಹಾರಕ್ಕಾಗಿ ಕಿಡ್ನಿ ಕಸಿ ಉತ್ತಮ ಆಯ್ಕೆಯಾಗಿರುತ್ತದೆ. ಇದಕ್ಕೊಂದು ಉದಾಹರಣೆಯೆಂದರೆ ಒಬ್ಬ 54 ವರ್ಷದ ವ್ಯಕ್ತಿಗೆ ಮಧುಮೇಹ ಮತ್ತು ರಕ್ತದೊತ್ತಡದಿಂದಾಗಿ ಮೂತ್ರಪಿಂಡದ ವೈಫಲ್ಯ ಉಂಟಾಗಿತ್ತು. ಆರು ತಿಂಗಳ ಕಾಲ ಡಯಾಲಿಸಿಸ್ ಪಡೆಯುತ್ತಿದ್ದರು. ಈ ಹಂತದಲ್ಲಿ, ಅವರ ಕುಟುಂಬವು ಶಾಶ್ವತ ಪರಿಹಾರಕ್ಕಾಗಿ ಕಿಡ್ನಿ ಕಸಿಯ ಬಗ್ಗೆ ಯೋಚಿಸಿತು. ವ್ಯಕ್ತಿಯ ಪತ್ನಿ ತಮ್ಮ ಒಂದು ಕಿಡ್ನಿಯನ್ನು ದಾನ ಮಾಡಲು ಮುಂದೆ ಬಂದರು. ವೈದ್ಯಕೀಯ ತಪಾಸಣೆ ಮತ್ತು ನೈತಿಕ ಅನುಮತಿಗಳ ನಂತರ, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆಯಿತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಪ್ಪಿತಪ್ಪಿಯೂ ಈ ಆಹಾರಗಳ ಸೇವನೆ ಮಾಡಬೇಡಿ ಇದು ಕಿಡ್ನಿ ಸ್ಟೋನ್ ಆಗಲು ಕಾರಣವಾಗುತ್ತೆ ಎಚ್ಚರ!

ಜೀವಂತ ದಾನಿಗಳಿಂದ ಕಿಡ್ನಿ ಕಸಿ ಏಕೆ ಮುಖ್ಯ?

ಡಾ. ರವಿಶಂಕರ್ ಜೆ.ಸಿ. ಅವರ ಪ್ರಕಾರ, ಯಶಸ್ವಿ ಕಿಡ್ನಿ ಕಸಿಯು ರೋಗಿಗೆ ಸ್ವಾತಂತ್ರ್ಯ ಮತ್ತು ಗುಣಮಟ್ಟದ ಜೀವನವನ್ನು ಮರಳಿ ನೀಡುತ್ತದೆ. ಜೀವಂತ ದಾನಿಗಳಿಂದ ಕಿಡ್ನಿ ಪಡೆದಾಗ ಚಿಕಿತ್ಸೆಯು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ ಮತ್ತು ಯಶಸ್ಸಿನ ಪ್ರಮಾಣವೂ ಹೆಚ್ಚಿರುತ್ತದೆ.

ಕಿಡ್ನಿ ಕಸಿಯ ಪ್ರಯೋಜನಗಳು:

  • ಡಯಾಲಿಸಿಸ್‌ನಿಂದ ಮುಕ್ತಿ
  • ಉತ್ತಮ ಗುಣಮಟ್ಟದ ಜೀವನಶೈಲಿ
  • ಹಸಿವು ಮತ್ತು ಶಕ್ತಿಯ ಮಟ್ಟದಲ್ಲಿ ಸುಧಾರಣೆ
  • ವೃತ್ತಿ ಜೀವನಕ್ಕೆ ಶೀಘ್ರವಾಗಿ ಮರಳುವ ಅವಕಾಶ
  • ದೀರ್ಘಕಾಲದ ಉತ್ತಮ ಆರೋಗ್ಯ ಫಲಿತಾಂಶಗಳು

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:43 pm, Wed, 20 May 26

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ