AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿದ್ರಾಹೀನತೆ ಸಮಸ್ಯೆ ಇದ್ಯಾ? ಹಾಗಿದ್ರೆ ಪ್ರತಿದಿನ ಈ ಒಂದು ಹಣ್ಣನ್ನು ತಪ್ಪದೆ ತಿನ್ನಿ

ಕಿವಿ ಹಣ್ಣು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದರಲ್ಲಿ ವಿಟಮಿನ್ ಸಿ ಅಂಶ ಹೇರಳವಾಗಿದ್ದು ಇದು ದೇಹದಲ್ಲಿ ಬಿಳಿ ರಕ್ತ ಕಣಗಳ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಸೋಂಕು ಮತ್ತು ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಹಾಗಾಗಿ ಪ್ರತಿದಿನ ಒಂದು ಕಿವಿ ಹಣ್ಣನ್ನು ತಪ್ಪದೆ ತಿನ್ನುವುದರಿಂದ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳಿಂದ ರಕ್ಷಣೆ ಪಡೆಯಬಹುದು. ಆರೋಗ್ಯ ತಜ್ಞರು ಕೂಡ ಈ ಹಣ್ಣನ್ನು ತಿನ್ನಲು ಸಲಹೆ ನೀಡುತ್ತಾರೆ. ಹಾಗಾದರೆ ಈ ಹಣ್ಣಿನ ಸೇವನೆಯಿಂದ ಸಿಗುವ ಮತ್ತಷ್ಟು ಪ್ರಯೋಜನಗಳನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ನಿದ್ರಾಹೀನತೆ ಸಮಸ್ಯೆ ಇದ್ಯಾ? ಹಾಗಿದ್ರೆ ಪ್ರತಿದಿನ ಈ ಒಂದು ಹಣ್ಣನ್ನು ತಪ್ಪದೆ ತಿನ್ನಿ
Kiwi Fruit Benefits
ಪ್ರೀತಿ ಭಟ್​, ಗುಣವಂತೆ
|

Updated on: Aug 14, 2025 | 5:28 PM

Share

ಕಿವಿ ಹಣ್ಣಿನ (Kiwi Fruit) ಬಗ್ಗೆ ಯಾರಿಗೆ ತಾನೇ ತಿಳಿದಿಲ್ಲ ಹೇಳಿ? ಇದು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿಯಾಗಿರುವುದರಿಂದ ಇದನ್ನು ಯಥೇಚ್ಛವಾಗಿ ಸೇವನೆ ಮಾಡಲಾಗುತ್ತದೆ. ಈ ಹಣ್ಣು ತಿನ್ನುವಾಗ ಸ್ವಲ್ಪ ಹುಳಿ ಅಂಶ ನೀಡಿದರೂ ಕೂಡ ಜನ ಇದನ್ನು ಇಷ್ಟ ಪಟ್ಟು ಕೆಲವರು ಕಷ್ಟ ಪಟ್ಟು ತಿನ್ನುತ್ತಾರೆ. ಏಕೆಂದರೆ ಇದರಲ್ಲಿ ಅಷ್ಟು ಆರೋಗ್ಯ ಪ್ರಯೋಜನಗಳಿವೆ. ಹಾಗಾಗಿ ಈ ಹಣ್ಣಿಗೆ ಮಾರುಕಟ್ಟೆಯಲ್ಲಿ ಯಾವಾಗಲೂ ಬೇಡಿಕೆ ಇದ್ದೆ ಇರುತ್ತದೆ. ಪ್ರತಿದಿನ ಒಂದು ಕಿವಿ ತಿನ್ನುವುದರಿಂದ ಶೀತ ಮತ್ತು ಜ್ವರದಂತಹ ಸಮಸ್ಯೆಗಳಿಂದ ರಕ್ಷಣೆ ಸಿಗುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಇದನ್ನು ಸೇವನೆ ಮಾಡುವುದರಿಂದ ಯಾವ ರೀತಿಯ ಪ್ರಯೋಜನಗಳು ಸಿಗುತ್ತವೆ? ಯಾವ ರೀತಿಯ ಆರೋಗ್ಯ (Health) ಸಮಸ್ಯೆಗೆ ಒಳ್ಳೆಯದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಜೀರ್ಣಕ್ರಿಯೆಗೆ ಸಹಕಾರಿ

ನಾರಿನಂಶ ಹೆಚ್ಚಾಗಿರುವ ಕಿವಿ ಹಣ್ಣು ಜೀರ್ಣಾಂಗ ವ್ಯವಸ್ಥೆಗೆ ತುಂಬಾ ಪ್ರಯೋಜನಕಾರಿಯಾಗಿದೆ. ಕಿವಿಯಲ್ಲಿರುವ ಆಕ್ಟಿನಿಡಿನ್ ಕಿಣ್ವವು ಪ್ರೋಟೀನ್‌ಗಳನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಹಾಗಾಗಿ ಇದು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಹೃದಯದ ಆರೋಗ್ಯಕ್ಕೆ ಒಳ್ಳೆಯದು

ಕಿವಿ ಹಣ್ಣುಗಳಲ್ಲಿ ಪೊಟ್ಯಾಸಿಯಮ್ ಮತ್ತು ಫೈಬರ್ ಅಂಶ ಸಮೃದ್ಧವಾಗಿದೆ. ಇವು ಹೃದಯದ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿಯಾಗಿದೆ. ಮಾತ್ರವಲ್ಲ ಪೊಟ್ಯಾಸಿಯಮ್ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹಾಗಾಗಿ ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕೂಡ ಕಡಿಮೆ ಮಾಡುತ್ತದೆ. ಹೆಚ್ಚುವರಿಯಾಗಿ, ಕಿವಿ ಹಣ್ಣುಗಳಲ್ಲಿರುವ ಉತ್ಕರ್ಷಣ ನಿರೋಧಕಗಳು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಚರ್ಮದ ಆರೋಗ್ಯಕ್ಕೆ ಪ್ರಯೋಜನಕಾರಿ

ಕಿವಿ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ವಿಟಮಿನ್ ಇ ನಂತಹ ಉತ್ಕರ್ಷಣ ನಿರೋಧಕಗಳು ಅಧಿಕವಾಗಿವೆ. ಇವು ನಮ್ಮ ಚರ್ಮಕ್ಕೆ ಬಹಳ ಪ್ರಯೋಜನಕಾರಿಯಾಗಿದೆ. ಈ ಹಣ್ಣು ಚರ್ಮದಲ್ಲಿನ ಸುಕ್ಕುಗಳನ್ನು ಕಡಿಮೆ ಮಾಡಲು ಮತ್ತು ಚರ್ಮದ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಕಿವಿ ತಿನ್ನುವುದರಿಂದ ವಯಸ್ಸಾದ ಲಕ್ಷಣಗಳು ಕಡಿಮೆಯಾಗುತ್ತವೆ.

ನಿದ್ರಾಹೀನತೆಯ ಸಮಸ್ಯೆಗೆ ಮುಕ್ತಿ

ಕಿವಿಫ್ರೂಟ್ ಸಿರೊಟೋನಿನ್ ಅನ್ನು ಹೊಂದಿರುತ್ತದೆ. ಇದು ನಿದ್ರೆಯ ಗುಣಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಪ್ರತಿದಿನ ಮಲಗುವ ಮುನ್ನ ಕಿವಿ ಹಣ್ಣನ್ನು ತಿನ್ನುವುದರಿಂದ ನಿದ್ರೆ ಚೆನ್ನಾಗಿ ಬರುತ್ತದೆ ಎಂದು ಹೇಳಲಾಗುತ್ತದೆ. ನಿದ್ರಾಹೀನತೆಯಿಂದ ಬಳಲುತ್ತಿರುವವರು ರಾತ್ರಿ ಒಳ್ಳೆಯ ನಿದ್ರೆ ಮಾಡಲು ದಿನಕ್ಕೆ ಒಂದು ಕಿವಿ ಹಣ್ಣನ್ನು ತಿನ್ನಲು ಸೂಚಿಸಲಾಗುತ್ತದೆ.

ಇದನ್ನೂ ಓದಿ: ಬೊಜ್ಜಿನ ಸಮಸ್ಯೆಯಿಂದ ಮುಕ್ತಿ ಪಡೆಯಲು ಪ್ರತಿನಿತ್ಯ ಈ ಹಣ್ಣಿನ ಸೇವನೆ ಮಾಡಿ

ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು

ಕಿವಿ ಹಣ್ಣುಗಳಲ್ಲಿ ಲುಟೀನ್ ಮತ್ತು ಜಿಯಾಕ್ಸಾಂಥಿನ್ ನಂತಹ ಉತ್ಕರ್ಷಣ ನಿರೋಧಕಗಳು ಇರುತ್ತವೆ. ಇವು ಕಣ್ಣುಗಳ ಆರೋಗ್ಯಕ್ಕೆ ಪ್ರಯೋಜನಕಾರಿ. ಈ ಹಣ್ಣುಗಳು ಕಣ್ಣುಗಳನ್ನು ಹೊಳಪು ಮತ್ತು ವಯಸ್ಸಿಗೆ ಸಂಬಂಧಿಸಿದ ಕಣ್ಣಿನ ಸಮಸ್ಯೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್