ಈ ಹಣ್ಣನ್ನು ದಿನಕ್ಕೊಂದು ತಿನ್ನಿ ಕ್ಯಾನ್ಸರ್ ನಿಂದ ದೂರವಿರಿ
ಕಿವಿ ಹಣ್ಣುಗಳು ಪೋಷಕಾಂಶಗಳ ಗಣಿಯಾಗಿದೆ. ನಿಯಮಿತವಾಗಿ ಈ ಹಣ್ಣನ್ನು ತಿನ್ನುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಜೊತೆಗೆ ಇದು ಚರ್ಮವನ್ನು ಆರೋಗ್ಯಕರವಾಗಿರಿಸುತ್ತದೆ. ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ. ಇದು ತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ. ಇದೆಲ್ಲದರ ಜೊತೆಗೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿವೆ. ಹೀಗಾಗಿ ಕಿವಿ ಹಣ್ಣನ್ನು ದೈನಂದಿನ ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ಸಾಕಷ್ಟು ಲಾಭಗಳನ್ನು ಪಡೆದುಕೊಳ್ಳಬಹುದು.

ಕಿವಿ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಒಂದೇ ಮಾತಿನಲ್ಲಿ ಹೇಳುವುದಾದರೆ ಇದು ಪೋಷಕಾಂಶಗಳ ಗಣಿಯಾಗಿದೆ. ಕಿವಿ ಹಣ್ಣಿನಲ್ಲಿ ವಿಟಮಿನ್ ಸಿ, ವಿಟಮಿನ್ ಕೆ, ವಿಟಮಿನ್ ಇ, ಫೋಲೇಟ್, ಪೊಟ್ಯಾಸಿಯಮ್, ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ನಿಯಮಿತವಾಗಿ ಈ ಹಣ್ಣನ್ನು ತಿನ್ನುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಜೊತೆಗೆ ಇದು ಚರ್ಮವನ್ನು ಆರೋಗ್ಯಕರವಾಗಿರಿಸುತ್ತದೆ. ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ. ಇದು ತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ. ಇದೆಲ್ಲದರ ಜೊತೆಗೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿವೆ. ಹೀಗಾಗಿ ಕಿವಿ ಹಣ್ಣನ್ನು ದೈನಂದಿನ ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ಸಾಕಷ್ಟು ಲಾಭಗಳನ್ನು ಪಡೆದುಕೊಳ್ಳಬಹುದು.
ಹೃದಯದ ಆರೋಗ್ಯಕ್ಕೆ ಒಳ್ಳೆಯದು
ನಿಮಗೆ ತಿಳಿದಿರಬಹುದು, ಕಿವಿ ಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಹಾಗಾಗಿ ಇದು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು, ಸೋಂಕುಗಳ ವಿರುದ್ಧ ಹೋರಾಡಲು ಮತ್ತು ದೇಹದ ಜೀವಕೋಶಗಳನ್ನು ಹಾನಿಯಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಅದಲ್ಲದೆ ಕಿವಿ ಹಣ್ಣುಗಳಲ್ಲಿ ಪೊಟ್ಯಾಸಿಯಮ್ ಇರುತ್ತದೆ. ಇದು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಈ ಹಣ್ಣುಗಳಲ್ಲಿರುವ ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳು ಹೃದಯದ ಆರೋಗ್ಯಕ್ಕೂ ಒಳ್ಳೆಯದು.
ಕಿವಿ ಹಣ್ಣುಗಳಲ್ಲಿ ಫೈಬರ್ ಸಮೃದ್ಧವಾಗಿದ್ದು ಇದು ಮಲಬದ್ಧತೆಯನ್ನು ತಡೆಗಟ್ಟಲು ಸಹಾಯ ಮಾಡುತ್ತದೆ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಜೊತೆಗೆ ಈ ಹಣ್ಣಿನಲ್ಲಿ ಆಕ್ಟಿನಿಡಿನ್ ಎಂಬ ಕಿಣ್ವವಿದೆ, ಇದು ಪ್ರೋಟೀನ್ ಗಳನ್ನು ವಿಭಜಿಸಲು ಸಹಾಯ ಮಾಡುತ್ತದೆ, ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ. ಕಿವಿ ಹಣ್ಣಿನಲ್ಲಿರುವ ನರಸಂವಾಹಕ ಸೆರೊಟೋನಿನ್ ನಿದ್ರೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಕೆಲವು ಅಧ್ಯಯನಗಳ ಪ್ರಕಾರ, ಕಿವಿ ಹಣ್ಣನ್ನು ತಿನ್ನುವುದರಿಂದ ನಿದ್ರೆಯ ಗುಣಮಟ್ಟ ಸುಧಾರಿಸುತ್ತದೆ ಜೊತೆಗೆ ನಿದ್ರೆ ಸರಿಯಾಗಿ ಬರುವುದಿಲ್ಲ ಎನ್ನುವವರಿಗೆ ಒಳ್ಳೆಯ ಮದ್ದಾಗಿದೆ.
ಅಸ್ತಮಾ ರೋಗಕ್ಕೆ ಕಿವಿ ಹಣ್ಣಿನಲ್ಲಿದೆ ಮದ್ದು
ಕಿವಿ ಹಣ್ಣಿನಲ್ಲಿರುವ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಅಸ್ತಮಾ ರೋಗಲಕ್ಷಣಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕೆಲವು ಅಧ್ಯಯನಗಳ ಪ್ರಕಾರ, ಕಿವಿ ಹಣ್ಣನ್ನು ತಿನ್ನುವುದರಿಂದ ಉಸಿರಾಟದ ತೊಂದರೆ ಮತ್ತು ಕೆಮ್ಮು ಕಡಿಮೆಯಾಗುತ್ತದೆ. ಅದಲ್ಲದೆ ಕಿವಿ ಹಣ್ಣುಗಳು ಉತ್ಕರ್ಷಣ ನಿರೋಧಕಗಳು ಮತ್ತು ಇತರ ಫೈಟೊಕೆಮಿಕಲ್ಗಳನ್ನು ಹೊಂದಿರುತ್ತವೆ. ಅವು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ಪ್ರತಿಬಂಧಿಸಲು ಸಹಾಯ ಮಾಡುತ್ತವೆ. ಕೆಲವು ಅಧ್ಯಯನಗಳ ಪ್ರಕಾರ, ಕಿವಿ ಹಣ್ಣನ್ನು ತಿನ್ನುವುದರಿಂದ ಕೆಲವು ರೀತಿಯ ಕ್ಯಾನ್ಸರ್ ಬರುವ ಅಪಾಯವನ್ನು ಕಡಿಮೆ ಮಾಡಬಹುದು.
ತೂಕ ಕಡಿಮೆ ಮಾಡಿಕೊಳ್ಳಲು ಬಯಸುವವರಿಗೆ ಒಳ್ಳೆಯದು
ಕಿವಿ ಹಣ್ಣಿನಲ್ಲಿ ಕಡಿಮೆ ಕ್ಯಾಲೊರಿ ಮತ್ತು ಫೈಬರ್ ಅಧಿಕವಾಗಿರುತ್ತದೆ. ತೂಕ ಇಳಿಸಿಕೊಳ್ಳಲು ಅಥವಾ ತೂಕವನ್ನು ಒಂದೇ ರೀತಿಯಲ್ಲಿ ಕಾಪಾಡಿಕೊಳ್ಳಲು ಪ್ರಯತ್ನಿಸುತ್ತಿರುವವರಿಗೆ ಇದು ಉತ್ತಮ ಆಹಾರವಾಗಿದೆ. ಫೈಬರ್ ನಿಮ್ಮನ್ನು ದೀರ್ಘಕಾಲದ ವರೆಗೆ ಹೊಟ್ಟೆ ತುಂಬಿರುವಂತೆ ಮಾಡುತ್ತದೆ. ಅದಲ್ಲದೆ ಇದು ಅತಿಯಾಗಿ ತಿನ್ನುವುದನ್ನು ಕೂಡ ತಡೆಯಲು ಸಹಾಯ ಮಾಡುತ್ತದೆ. ಈ ಹಣ್ಣುಗಳು ಕಡಿಮೆ ಗ್ಲೈಸೆಮಿಕ್ ಸೂಚ್ಯಂಕವನ್ನು ಹೊಂದಿವೆ. ಇದರರ್ಥ ಅವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ತ್ವರಿತವಾಗಿ ಹೆಚ್ಚಿಸುವುದಿಲ್ಲ. ಮಧುಮೇಹ ಇರುವವರಿಗೆ ಅಥವಾ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಬಯಸುವವರಿಗೆ ಇದು ಉತ್ತಮ ಆಹಾರವಾಗಿದೆ.
ಇದನ್ನೂ ಓದಿ: ಖಾಲಿ ಹೊಟ್ಟೆಯಲ್ಲಿ ಒಂದು ಚಮಚ ತೆಂಗಿನ ಎಣ್ಣೆ ಕುಡಿದರೆ ಏನಾಗುತ್ತೆ ನೋಡಿ
ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು
ಕಿವಿ ಹಣ್ಣುಗಳಲ್ಲಿ ಲ್ಯೂಟಿನ್ ಮತ್ತು ಜಿಯಾಕ್ಸಾಂಥಿನ್ ನಂತಹ ಉತ್ಕರ್ಷಣ ನಿರೋಧಕಗಳಿವೆ, ಇದು ಕಣ್ಣಿನ ಆರೋಗ್ಯಕ್ಕೆ ಬಹಳ ಒಳ್ಳೆಯದು. ವಯಸ್ಸಿಗೆ ಸಂಬಂಧಿಸಿದ ಕ್ಷೀಣತೆ, ಕಣ್ಣಿನ ಪೊರೆ ಮುಂತಾದ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡಲು ಇವು ಸಹಾಯ ಮಾಡುತ್ತವೆ. ಕಿವಿ ಹಣ್ಣಿನಲ್ಲಿರುವ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಚರ್ಮವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ