Kiwi Fruit: ಮಧುಮೇಹ ರೋಗಿಗಳಿಗೆ ಈ ಹಣ್ಣು ವರದಾನ! ಇಲ್ಲಿದೆ ಉಪಯುಕ್ತ ಮಾಹಿತಿ

ಕೇವಲ ಒಂದು ಕಿವಿ ಹಣ್ಣು ಸೇವನೆಯಿಂದ ಪ್ರತಿದಿನ 117 ಪ್ರತಿಶತ ವಿಟಮಿನ್ ಸಿ ಮತ್ತು 21 ಪ್ರತಿಶತ ಆಹಾರದ ಫೈಬರ್​ನ್ನು ಒದಗಿಸುತ್ತದೆ. ಅದೂ ಅಲ್ಲದೆ ಈ ಹಣ್ಣನ್ನು ತಿನ್ನುವುದರಿಂದ ಹಲವಾರು ರೀತಿಯ ಪೋಷಕಾಂಶಗಳು ದೊರೆಯುತ್ತವೆ.  

Kiwi Fruit: ಮಧುಮೇಹ ರೋಗಿಗಳಿಗೆ ಈ ಹಣ್ಣು ವರದಾನ! ಇಲ್ಲಿದೆ ಉಪಯುಕ್ತ ಮಾಹಿತಿ
ಕಿವಿ ಹಣ್ಣು (ಸಂಗ್ರಹ ಚಿತ್ರ)
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Aug 15, 2022 | 7:00 AM

ಬಿಡುವಿಲ್ಲದ ಜೀವನದಲ್ಲಿ ಮಧುಮೇಹವು ಸಾಮಾನ್ಯ ಕಾಯಿಲೆಯಾಗಿದೆ. ನೀವು ಮಧುಮೇಹ ಹೊಂದಿದ್ದರೆ, ನಿಮ್ಮ ಜೀವನಶೈಲಿಯನ್ನು ಬದಲಾಯಿಸಿಕೊಳ್ಳಬೇಕು. ಇಲ್ಲದಿದ್ದರೆ ಅದು ದೇಹದ ಪ್ರತಿಯೊಂದು ಅಂಗವನ್ನೂ ನಾಶಪಡಿಸಬಹುದು. ನಿಮ್ಮ ಆಹಾರ ಪದ್ಧತಿಯನ್ನು ಸುಧಾರಿಸುವುದರೊಂದಿಗೆ, ಮಾನಸಿಕ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು. ಆದರೆ ಕಿವಿ ಹಣ್ಣು (Kiwi Fruit) ಮಧುಮೇಹಿಗಳಿಗೆ ಉತ್ತಮ ಎಂದು ಹೇಳಲಾಗುತ್ತಿದೆ. ಕಿವಿ ಹಣ್ಣಿನಲ್ಲಿ ವಿಟಮಿನ್-ಸಿ ಸಮೃದ್ಧವಾಗಿದೆ. ಈ ಹಣ್ಣಿನಲ್ಲಿ ಕಿತ್ತಳೆ ಮತ್ತು ನಿಂಬೆಹಣ್ಣುಗಳಿಗಿಂತ ಎರಡು ಪಟ್ಟು ಹೆಚ್ಚು ವಿಟಮಿನ್ ಸಿ ಇದೆ. ಕೇವಲ ಒಂದು ಕಿವಿ ಹಣ್ಣು ಸೇವನೆಯಿಂದ ಪ್ರತಿದಿನ 117 ಪ್ರತಿಶತ ವಿಟಮಿನ್ ಸಿ ಮತ್ತು 21 ಪ್ರತಿಶತ ಆಹಾರದ ಫೈಬರ್​ನ್ನು ಒದಗಿಸುತ್ತದೆ. ಅದೂ ಅಲ್ಲದೆ ಈ ಹಣ್ಣನ್ನು ತಿನ್ನುವುದರಿಂದ ಹಲವಾರು ರೀತಿಯ ಪೋಷಕಾಂಶಗಳು ದೊರೆಯುತ್ತವೆ.

ಇದನ್ನೂ ಓದಿ: Soda Side Effects: ಈ ಅಡ್ಡಪರಿಣಾಮಗಳನ್ನು ತಿಳಿದರೆ ನೀವು ಸೋಡಾವನ್ನು ಎಂದೂ ಕುಡಿಯುವುದಿಲ್ಲ

ರೋಗನಿರೋಧಕ ಶಕ್ತಿ:

ಕಿವಿ ಹಣ್ಣಿನಲ್ಲಿ ವಿಟಮಿನ್-ಸಿ ಹೇರಳವಾಗಿದ್ದು, ರೋಗ ನಿರೋಧಕಗಳು ಸಹ ಇವೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ, ದೇಹಕ್ಕೆ ಅನೇಕ ರೋಗಗಳ ವಿರುದ್ಧ ಹೋರಾಡುವ ಶಕ್ತಿಯನ್ನು ನೀಡುತ್ತದೆ. ಇದನ್ನು ಪ್ರತಿನಿತ್ಯ ಸೇವಿಸುವುದರಿಂದ ಅಸ್ತಮಾದಂತಹ ಕಾಯಿಲೆಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಉಪಶಮನ ಪಡೆಯಬಹುದು.

ಹೃದಯಕ್ಕೆ ಒಳ್ಳೆಯದು:

ಕಿವಿಯಲ್ಲಿ ವಿಟಮಿನ್ ಇ ಮತ್ತು ಪೊಟ್ಯಾಸಿಯಮ್ ಕೂಡ ಹೇರಳವಾಗಿದೆ. ಇದು ಅಪಧಮನಿಗಳನ್ನು ಆರೋಗ್ಯಕರವಾಗಿರಿಸುವುದು ಮಾತ್ರವಲ್ಲದೆ ನಿಮ್ಮ ಹೃದಯವನ್ನು ಸ್ಟ್ರಾಂಗ್​ ಆಗಿಸುತ್ತದೆ. ಇದಲ್ಲದೆ, ವಿಟಮಿನ್ ಇ ಚರ್ಮಕ್ಕೆ ತುಂಬಾ ಉಪಯುಕ್ತವಾಗಿದೆ. ಪ್ರತಿನಿತ್ಯ ಇದನ್ನು ತಿನ್ನುವುದರಿಂದ ಹಲವಾರು ಪ್ರಯೋಜನಗಳನ್ನು ಪಡೆಯಬಹುದು.

ಮಧುಮೇಹವನ್ನು ನಿಯಂತ್ರಿಸುತ್ತದೆ:

ಮಧುಮೇಹ ರೋಗಿಗಳಿಗೆ ಕಿವಿ ತುಂಬಾ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ. ಈ ಹಣ್ಣು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದೆ. ಇದರಿಂದಾಗಿ ರಕ್ತದಲ್ಲಿನ ಸಕ್ಕರೆಯ ಪ್ರಮಾಣ ನಿಯಂತ್ರಣದಲ್ಲಿದೆ. ಕಿವಿ ತಿನ್ನುವುದರಿಂದ, ಸಿರೊಟೋನಿನ್-ವರ್ಧಿಸುವ ರಾಸಾಯನಿಕಗಳು ಸಕ್ರಿಯಗೊಳ್ಳುತ್ತವೆ. ಇದು ಉತ್ತಮ ನಿದ್ರೆಗೆ ಕಾರಣವಾಗುತ್ತದೆ. ಮಧುಮೇಹ ರೋಗಿಗಳು ಪ್ರತಿದಿನ ಕಿವಿ ತಿನ್ನಬೇಕು.

ಇದನ್ನೂ ಓದಿ: Monsoon Health: ಮಳೆಯಲ್ಲಿ ನೆಂದು ನೀವು ಪೂರ್ತಿ ಒದ್ದೆಯಾಗಿದ್ದರೆ ತಕ್ಷಣ ಚಹಾ ಕುಡಿಯಬೇಡಿ

ಕಿವಿ ಹಣ್ಣು ಆರೋಗ್ಯದ ನಿಧಿ:

ಕಿವಿ ಹಣ್ಣು ಆರೋಗ್ಯ ಸಂಪತ್ತು ಎಂದು ಪರಿಗಣಿಸಲಾಗಿದೆ. ಈ ಹಣ್ಣು ಅನೇಕ ಪೋಷಕಾಂಶಗಳನ್ನು ಒಳಗೊಂಡಿದೆ. ಲುಟೀನ್, ಝೀಕ್ಸಾಂಥಿನ್, ಫೈಟೊಕೆಮಿಕಲ್ಸ್ ಹಾಗೆ. ಇವು ದೇಹದಲ್ಲಿ ಕಬ್ಬಿಣದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ರಕ್ತಹೀನತೆಯಿಂದ ಬಳಲುತ್ತಿರುವವರಿಗೆ ಪ್ರಯೋಜನವಾಗಲಿದೆ. ಪ್ರತಿದಿನ ಕಿವಿಯನ್ನು ತಿನ್ನುವುದರಿಂದ ಅನೇಕ ಪ್ರಯೋಜನಗಳಿವೆ. ಇದು ಕಣ್ಣಿಗೆ ಬಹಳ ಮುಖ್ಯವಾದ ಹಣ್ಣು ಎಂದು ಪರಿಗಣಿಸಲಾಗಿದೆ. ಹಲವಾರು ಅದ್ಭುತ ಪ್ರಯೋಜನಗಳನ್ನು ಹೊಂದಿರುವ ಈ ಹಣ್ಣನ್ನು ಪ್ರತಿದಿನ ಸೇವಿಸುವುದರಿಂದ ನಿಮ್ಮ ಆರೋಗ್ಯಯನ್ನು ಕಾಪಾಡಿಕೊಳ್ಳಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ