AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiwi Side Effects: ಹೆಚ್ಚು ಕಿವಿ ಹಣ್ಣು ತಿನ್ನುತ್ತೀರಾ? ಹಾಗಾದರೆ ಈ ವಿಷಯವನ್ನು ತಿಳಿದುಕೊಳ್ಳಿ!

ಕಿವಿ ಹಣ್ಣಿನ ಈ ಗುಣಗಳು ನಿಮ್ಮನ್ನು ಅನೇಕ ರೋಗಗಳಿಂದ ದೂರವಿಡುತ್ತವೆ. ಆದರೆ ಕಿವಿಯ ಅತಿಯಾದ ಸೇವನೆಯು ಆರೋಗ್ಯಕ್ಕೂ ಹಾನಿ ಮಾಡುತ್ತದೆ ಎಂಬುದು ನಿಮಗೆ ಗೊತ್ತಿರಲಿ. 

Kiwi Side Effects: ಹೆಚ್ಚು ಕಿವಿ ಹಣ್ಣು ತಿನ್ನುತ್ತೀರಾ? ಹಾಗಾದರೆ ಈ ವಿಷಯವನ್ನು ತಿಳಿದುಕೊಳ್ಳಿ!
ಕಿವಿ ಹಣ್ಣು (ಸಂಗ್ರಹ ಚಿತ್ರ)
TV9 Web
| Edited By: |

Updated on: Sep 18, 2022 | 8:39 PM

Share

ಡೆಂಗ್ಯೂ ಜ್ವರ ಅಥವಾ ಬಿಳಿ ರಕ್ತ ಕಣಗಳು ಕಡಿಮೆಯಾದಾಗ ಕಿವಿ ಜ್ಯೂಸ್ ಅಥವಾ ಕಿವಿ ಹಣ್ಣನ್ನು ತಿನ್ನಲು ವೈದ್ಯರು ಸಾಮಾನ್ಯವಾಗಿ ಸಲಹೆ ನೀಡುತ್ತಾರೆ. ಇದಲ್ಲದೆ, ಅನೇಕ ರೀತಿಯ ವೈರಲ್ ಜ್ವರಕ್ಕೆ ಕಿವಿ ಹಣ್ಣು ತಿನ್ನುವುದು ಪ್ಲೇಟ್ಲೆಟ್ ಸಂಖ್ಯೆಯನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗುತ್ತದೆ. ಕಿವಿ ಹಣ್ಣಿನಲ್ಲಿ ಉರಿಯೂತ ನಿವಾರಕ, ಆ್ಯಂಟಿ ಆಕ್ಸಿಡೆಂಟ್, ಆ್ಯಂಟಿ ವೈರಲ್, ಸೋಂಕು ನಿವಾರಕ ಗುಣಗಳಂತಹ ಹಲವು ಗುಣಗಳಿವೆ. ಇದಲ್ಲದೆ, ಇದು ವಿಟಮಿನ್ ಸಿ, ವಿಟಮಿನ್ ಬಿ 6, ಫೈಬರ್, ಪೊಟ್ಯಾಸಿಯಮ್, ಕ್ಯಾಲ್ಸಿಯಂ, ಕಾರ್ಬೋಹೈಡ್ರೇಟ್‌ಗಳು, ರೈಬೋಫ್ಲಾವಿನ್, ಬೀಟಾ ಕ್ಯಾರೋಟಿನ್ ಮುಂತಾದ ವಿವಿಧ ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಕಿವಿ ಹಣ್ಣಿನ ಈ ಗುಣಗಳು ನಿಮ್ಮನ್ನು ಅನೇಕ ರೋಗಗಳಿಂದ ದೂರವಿಡುತ್ತವೆ. ಆದರೆ ಕಿವಿಯ ಅತಿಯಾದ ಸೇವನೆಯು ಆರೋಗ್ಯಕ್ಕೂ ಹಾನಿ ಮಾಡುತ್ತದೆ ಎಂಬುದು ನಿಮಗೆ ಗೊತ್ತಿರಲಿ.

ಕಿವಿ ಹಣ್ಣಿನ ಆರೋಗ್ಯ ಪ್ರಯೋಜನಗಳು:

ಅಲರ್ಜಿ ಸಮಸ್ಯೆ: ಕಿವಿ ಹಣ್ಣನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿದರೆ ಅಲರ್ಜಿ ತರಹದ ಸಮಸ್ಯೆಗಳು ಉಂಟಾಗಬಹುದು. ವಿಶೇಷವಾಗಿ ಇದರಿಂದ ಚರ್ಮದ ದದ್ದುಗಳು, ಊತಗಳು, ಬಾಯಿಯೊಳಗೆ ಕಿರಿಕಿರಿ ಮತ್ತು ಅಸ್ತಮಾದ ಸಾಧ್ಯತೆಗಳು ಹೆಚ್ಚಾಗುತ್ತವೆ.

ಓರಲ್ ಅಲರ್ಜಿ ಸಿಂಡ್ರೋಮ್: ಕಿವಿ ಹಣ್ಣಿನ ಹೆಚ್ಚಿನ ಸೇವನೆಯು ಮೌಖಿಕ ಅಲರ್ಜಿ ಸಿಂಡ್ರೋಮ್ ಅಪಾಯವನ್ನು ಹೆಚ್ಚಿಸುತ್ತದೆ. ಈ ಕಾರಣದಿಂದಾಗಿ, ತುಟಿಗಳು ಮತ್ತು ನಾಲಿಗೆಯ ಊತವು ಬಾಯಿಯೊಳಗಿನ ಹುಣ್ಣುಗಳಂತಹ ಸಮಸ್ಯೆಯಾಗಿ ಪ್ರಾರಂಭವಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಿ.

ಕಿಡ್ನಿ ಸಮಸ್ಯೆ: ಕಿಡ್ನಿ ರೋಗಿಗಳಿಗೆ ಕಿವಿ ಹಣ್ಣು ಸೇವನೆಯಿಂದ ದೂರವಿರಲು ಸಲಹೆ ನೀಡಲಾಗುತ್ತದೆ. ವಾಸ್ತವವಾಗಿ, ಕಿವಿಯಲ್ಲಿ ಪೊಟ್ಯಾಸಿಯಮ್ ಅಧಿಕವಾಗಿದೆ. ಇದು ಕಿಡ್ನಿ ಸಂಬಂಧಿ ಕಾಯಿಲೆಗಳಿಗೆ ಕಾರಣವಾಗುತ್ತದೆ. ಹಾಗಾಗಿ ಕಿವಿಯನ್ನು ಅತಿಯಾಗಿ ಸೇವಿಸುವುದನ್ನು ತಪ್ಪಿಸಿ.

ಅತಿಸಾರ: ಕಿವಿ ಹಣ್ಣಿನಲ್ಲಿ ನಾರಿನಂಶ ಹೇರಳವಾಗಿದ್ದು, ಇದರಿಂದ ನಿಮಗೆ ಅತಿಸಾರ ಸಮಸ್ಯೆಗಳು ಉಂಟಾಗಬಹುದು. ಇದಲ್ಲದೆ, ಕೆಲವರು ಹೊಟ್ಟೆ ನೋವು, ವಾಂತಿ ಮತ್ತು ವಾಕರಿಕೆ ಮುಂತಾದ ಸಮಸ್ಯೆಗಳನ್ನು ಅನುಭವಿಸುತ್ತಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ