Dance Benefits: ಪ್ರತಿನಿತ್ಯ ನೃತ್ಯ ಮಾಡುವುದರಿಂದ ಆರೋಗ್ಯ ಪ್ರಯೋಜನಗಳು ಎಷ್ಟಿವೆ ಗೊತ್ತಾ?

ನಿಮ್ಮ ಹೃದಯದ ಆರೋಗ್ಯವನ್ನು ಸುಧಾರಿಸಲು ನೃತ್ಯವು ಅತ್ಯುತ್ತಮ ಮಾರ್ಗವಾಗಿದೆ. ಇದು ನಿಮ್ಮ ಹೃದಯ ಬಡಿತವನ್ನು ಸ್ಥಿರವಾಗಿರಿಸುತ್ತದೆ. ಜತೆಗೆ ಹೃದಯದ ಅಪಾಯವನ್ನು ತಡೆಗಟ್ಟುತ್ತದೆ.

Dance Benefits: ಪ್ರತಿನಿತ್ಯ ನೃತ್ಯ ಮಾಡುವುದರಿಂದ ಆರೋಗ್ಯ ಪ್ರಯೋಜನಗಳು ಎಷ್ಟಿವೆ ಗೊತ್ತಾ?
ಸಾಂದರ್ಭಿಕ ಚಿತ್ರ
Follow us
TV9 Web
| Updated By: Skanda

Updated on: Jul 30, 2021 | 7:31 AM

ನೃತ್ಯ ಮಾಡುವ ಕಲೆ ಎಲ್ಲರಿಗೂ ಒಲಿದು ಬರುವುದಿಲ್ಲ. ಆದರೆ ಜನರೆದುರು ನೃತ್ಯ(Dance) ಮಾಡುವುದು ಒಂದು ಪ್ರತಿಭೆಯಾದರೆ ತಮ್ಮ ಪಾಡಿಗೆ ತಾವು ಒಂದು ನಿರ್ದಿಷ್ಟ ಸಮಯದವರೆಗೆ ನೃತ್ಯ ಮಾಡುವ ಅಭ್ಯಾಸ ಆರೋಗ್ಯವನ್ನು ಸುಧಾರಿಸುತ್ತದೆ. ಜತೆಗೆ ಮಾನಸಿಕ ನೆಮ್ಮದಿ(Mental Health), ರಕ್ತದೊತ್ತಡದ ಸಮಸ್ಯೆಗೆ ಪರಿಹಾರ ಹಾಗೂ ದಿನನಿತ್ಯ ಹೆಚ್ಚು ಚಟುವಟಿಕೆಯಿಂದ ಕೂಡಿರಲು ಸಹಾಯಕವಾಗಿದೆ. ಹಾಗಿರುವಾಗ ನೃತ್ಯ ಮಾಡುವುದರಿಂದ ಆರೋಗ್ಯ ಪ್ರಯೋಜನಗಳು (Health Tips) ಎಷ್ಟಿವೆ ತಿಳಿಯಿರಿ.

ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ ನಿಮ್ಮ ಹೃದಯದ ಆರೋಗ್ಯವನ್ನು ಸುಧಾರಿಸಲು ನೃತ್ಯವು ಅತ್ಯುತ್ತಮ ಮಾರ್ಗವಾಗಿದೆ. ಇದು ನಿಮ್ಮ ಹೃದಯ ಬಡಿತವನ್ನು ಸ್ಥಿರವಾಗಿರಿಸುತ್ತದೆ. ಜತೆಗೆ ಹೃದಯದ ಅಪಾಯವನ್ನು ತಡೆಗಟ್ಟುತ್ತದೆ. ಜತೆಗೆ ಶ್ವಾಸಕೋಶ ಸಂಬಂಧಿ ಕಾಯಿಲೆಗಳಿಂದ ರಕ್ಷಿಸುತ್ತದೆ. ಉಸಿರಾಟವನ್ನು ಸುಧಾರಿಸುತ್ತದೆ.

ಕೀಲು ನೋವಿನಿಂದ ಪರಿಹಾರ ಪ್ರತಿನಿತ್ಯ ನೃತ್ಯ ಮಾಡುವುದರಿಂದ ಸ್ನಾಯು ಬಲಗೊಳ್ಳುತ್ತದೆ. ಮೂಳೆಗಳು ಬಲಿಷ್ಠವಾಗುತ್ತವೆ. ಜತೆಗೆ ಸೊಂಟನೋವು, ಕಾಲುನೋವು, ಬೆನ್ನಿನ ಹುರಿ ಭಾಗ, ಕೀಲು ಮತ್ತು ಸಂಧಿ ನೋವುಗಳಿಂದ ಪರಿಹಾರ ಪಡೆಯಬಹುದು.

ಮೆದುಳಿಗೆ ಅತ್ಯುತ್ತಮ ವ್ಯಾಯಾಮ ನತ್ಯವು ನಿಮ್ಮ ಸ್ಮರಣ ಶಕ್ತಿಯನ್ನು ಹೆಚ್ಚಿಸುತ್ತದೆ. ನಿಮ್ಮ ಮಾನಸಿಕ ಅರೋಗ್ಯಕ್ಕೆ ಸಹಾಯಕವಾಗಿದೆ. ಜತೆಗೆ ದೇಹದ ಸುಸ್ತು, ಹೃದಯ, ರಕ್ತನಾಳ, ಮೈಕೈ ನೋವಿನಂತಹ ಸಮಸ್ಯೆಗಳು ಬಾರದಂತೆ ತಡೆಗಟ್ಟಲು ಉತ್ತಮ ವ್ಯಾಯಾಮ ನೃತ್ಯ.

ಒತ್ತಡವನ್ನು ಕಡಿಮೆ ಮಾಡುತ್ತದೆ ನಿಮ್ಮ ಮನಸ್ಸಿನಲ್ಲಿ ತಳಮಳ, ಆತಂಕ, ಗಾಬರಿಯ ಲಕ್ಷಣಗಳು ಕಂಡು ಬರುತ್ತಿದ್ದರೆ ನೃತ್ಯ ಮಾಡಬಹುದು. ಇದು ನಿಮ್ಮೆಲ್ಲಾ ಒತ್ತಡವನ್ನು ಸುಧಾರಿಸುವುದಲ್ಲದೇ ಮಾನಸಿಕವಾಗಿ ಸದೃಢರಾಗಿರುವಂತೆ ನೋಡಿಕೊಳ್ಳುತ್ತದೆ.

ತೂಕ ನಷ್ಟಕ್ಕೆ ಸಹಾಯಕ ದೇಹದಲ್ಲಿನ ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶ ಪಡಿಸುವುದರ ಜತೆಗೆ ದೇಹದಲ್ಲಿನ ಹೆಚ್ಚುವರಿ ಕೊಲೆಸ್ಟ್ರಾಲ್ಅನ್ನು ಕರಗಿಸಲು ಸಹಾಯಕವಾಗಿದೆ. ಜತೆಗೆ ನಿಮ್ಮ ಅರ್ಧದಷ್ಟು ಸಮಸ್ಯೆಗಳನ್ನು ದೂರಮಾಡುತ್ತದೆ. ಯಾವಾಗಲೂ ಸಂತೋಷದಿಂದಿರಲು ಸಹಾಯಕವಾಗಿದೆ.

ಇದನ್ನೂ ಓದಿ:

Health Tips: ಸ್ಟ್ರಾಬೆರಿ ವಿಶೇಷತೆ ಏನು? ಒಡೆದ ಹಿಮ್ಮಡಿಗೆ ಈ ಹಣ್ಣಿನ ರಸವನ್ನು ಹಾಕುವುದರಿಂದ ಚರ್ಮದ ಕಾಂತಿ ಹೆಚ್ಚಾಗುತ್ತದೆ

Health Tips: ಕಂಪನಿಗಳಲ್ಲಿ ನೈಟ್​ ಡ್ಯೂಟಿ ಮಾಡುತ್ತಿದ್ದೀರಾ? ಆರೋಗ್ಯ ಕಾಳಜಿಗೆ ಈ ಕೆಲವು ವಿಷಯಗಳನ್ನು ಮರೆಯದಿರಿ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್