ತೂಕ ಇಳಿಸಿಕೊಳ್ಳಲು ಅಂಜೂರ ಹಣ್ಣು ಸಹಾಯಕವೇ? ಈ ಹಣ್ಣಿನ ಸೇವನೆಯ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ

| Updated By: shruti hegde

Updated on: Sep 30, 2021 | 7:00 AM

ಅಂಜೂರ ಹಣ್ಣು ಅಧಿಕ ಪೊಟ್ಯಾಷಿಯಂ ಹೊಂದಿರುವುದರಿಂದ ರಕ್ತದೊತ್ತಡ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ. ಹೀಗಿರುವಾಗ ಅಂಜೂರ ಹಣ್ಣಿನಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ತೂಕ ಇಳಿಸಿಕೊಳ್ಳಲು ಅಂಜೂರ ಹಣ್ಣು ಸಹಾಯಕವೇ? ಈ ಹಣ್ಣಿನ ಸೇವನೆಯ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ
ಸಾಂದರ್ಭಿಕ ಚಿತ್ರ
Follow us on

ಅಂಜೂರ ಹಣ್ಣಿನ ಸೇವನೆಯಿಂದ ಅನೇಕ ಪೌಷ್ಟಿಕಾಂಶಗಳನ್ನು ಪಡೆದುಕೊಳ್ಳಬಹುದು. ಜತೆಗೆ ದೇಹದ ತೂಕ ಇಳಿಸಿಕೊಳ್ಳಲು ಇದು ಸಹಾಯಕವಾಗಿದೆ. ಅಂಜೂರ ಹಣ್ಣನ್ನು ತಾಜಾ ಅಥವಾ ಒಣಗಿಸಿ ಸೇವಿಸಬಹುದು. ಇದು ಉತ್ತಮ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಮೂಳೆಗಳನ್ನು ಬಲಪಡಿಸುತ್ತದೆ ಜತೆಗೆ ಅಧಿಕ ಪೊಟ್ಯಾಷಿಯಂ ಹೊಂದಿರುವುದರಿಂದ ರಕ್ತದೊತ್ತಡ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ. ಹೀಗಿರುವಾಗ ಅಂಜೂರ ಹಣ್ಣಿನಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ಫೈಬರ್ ಅಂಶವನ್ನು ಹೊಂದಿದೆ
ಅಂಜೂರ ಹಣ್ಣಿನಲ್ಲಿ ಸಾಕಷ್ಟು ಫೈಬರ್ ಅಂಶವಿರುತ್ತದೆ. ಹಾಗಾಗಿ ಜೀರ್ಣ ವ್ಯವಸ್ಥೆಯನ್ನು ಸುಧಾರಿಸಿಕೊಳ್ಳಲು ಸಹಾಯ ಮಾಡುತ್ತದೆ. ಜತೆಗೆ ಕರುಳಿನ ಆರೋಗ್ಯವನ್ನು ಸುಧಾರಿಸಿಕೊಳ್ಳಲು ಅಂಜೂರ ಹಣ್ಣನ್ನು ಸೇವಿಸಿ.

ಜೀರ್ಣಕ್ರಿಯೆಗೆ ಸಹಾಯಕ
ಅಂಜೂರವು ಫಿಸಿನ್ ಎಂಬ ಜೀರ್ಣಕಾರಿ ಕಿಣ್ವವನ್ನು ಹೊಂದಿದೆ. ಇತರ ಕಿಣ್ವಗಳ ಜೊತೆಯಲ್ಲಿ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಿಕೊಳ್ಳಲು ಸಹಾಯ ಮಾಡುತ್ತದೆ. ಆಹಾರವನ್ನು ತ್ವರಿತವಾಗಿ ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಜತೆಗೆ ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಸಹಾಯಕವಾಗಿದೆ.

ಕ್ಯಾಲೊರಿಗಳನ್ನು ಸುಡಲು ಸಹಾಯಕ
ಅಂಜೂರದಲ್ಲಿ ಒಮೆಗಾ 3 ಕೊಬ್ಬಿನಾಮ್ಲಗಳಿದ್ದು ಇದು ವ್ಯಾಯಾಮ ಮಾಡುವಾಗ ಸ್ನಾಯುಗಳಲ್ಲಿ ಹೆಚ್ಚಿನ ಕ್ಯಾಲೊರಿಗಳನ್ನು ಸುಡಲು ಸಹಾಯ ಮಾಡುತ್ತದೆ. ತೂಕ ಇಳಿಸಿಕೊಳ್ಳುವಲ್ಲಿ ಇದು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಇದು ಹೃದಯನಾಳದ ಖಾಯಿಲೆಗಳಿಂದ ಹೃದಯವನ್ನು ರಕ್ಷಿಸುತ್ತದೆ.

ಇದನ್ನೂ ಓದಿ:

Health Tips: ಆಫೀಸು, ಮನೆ ಈ ಎಲ್ಲವುಗಳ ಒತ್ತಡದಿಂದ ಬಳಲುತ್ತಿದ್ದೀರಾ?; ಹೊರಬರಲು ಇಲ್ಲಿವೆ ಸುಲಭ ವಿಧಾನಗಳು

Health Tips: ನಿಮ್ಮ ದೇಹದಲ್ಲಿ ಕ್ಯಾಲ್ಸಿಯಂ ಕೊರತೆ ನೀಗಿಸಲು ರಾಗಿಯಿಂದ ತಯಾರಿಸಿದ ಆಹಾರ ಪದಾರ್ಥಗಳು ಸಹಾಯಕ