Health Tips: ಸೀತಾಫಲ ಹಣ್ಣು ಆರೋಗ್ಯಕ್ಕೆ ಎಷ್ಟು ಉತ್ತಮ ಗೊತ್ತೇ?

ಸೀತಾಫಲ ಹಣ್ಣು ಆರೋಗ್ಯಕ್ಕೆ ಎಷ್ಟು ಉತ್ತಮ? ತಿನ್ನಲೂ ಸಿಹಿಯಾಗಿರುವ ಜೊತೆಗೆ ಮಕ್ಕಳಿಂದ ವಯಸ್ಕರವರೆಗೆ ಇಷ್ಟವಾಗುವ ಸೀತಾಫಲ ಹಣ್ಣಿನಲ್ಲಿ ಆರೋಗ್ಯ ಪ್ರಯೋಜನಗಳೆಷ್ಟಿವೆ ಎಂಬುದನ್ನು ತಿಳಿದುಕೊಳ್ಳಿ.

Health Tips: ಸೀತಾಫಲ ಹಣ್ಣು ಆರೋಗ್ಯಕ್ಕೆ ಎಷ್ಟು ಉತ್ತಮ ಗೊತ್ತೇ?
ಸಂಗ್ರಹ ಚಿತ್ರ
Follow us
| Updated By: shruti hegde

Updated on: Nov 05, 2021 | 9:04 AM

ನಮ್ಮ ಸುತ್ತ ಮುತ್ತ ಬೆಳೆಯುವ ಹಣ್ಣಿನಿಂದ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹಾಗಿರುವಾಗ ಸೀತಾಫಲ ಹಣ್ಣು ಆರೋಗ್ಯಕ್ಕೆ ಎಷ್ಟು ಉತ್ತಮ? ತಿನ್ನಲೂ ಸಿಹಿಯಾಗಿರುವ ಜೊತೆಗೆ ಮಕ್ಕಳಿಂದ ವಯಸ್ಕರವರೆಗೆ ಇಷ್ಟವಾಗುವ ಸೀತಾಫಲ ಹಣ್ಣಿನಲ್ಲಿ ಆರೋಗ್ಯ ಪ್ರಯೋಜನಗಳೆಷ್ಟಿವೆ ಎಂಬುದನ್ನು ತಿಳಿದುಕೊಳ್ಳಿ. ಮನೆಯಲ್ಲೇ ಬೆಳೆದ ಸೀತಾಫಲ ಹಣ್ಣು ಸೇವಿಸುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಿ.

ಸೀತಾಫಲ ಹಣ್ಣು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ವಿಟಮಿನ್ ಸಿ ಯಂತಹ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಇದು ನಿಮ್ಮ ದೇಹದಲ್ಲಿ ಸ್ವತಂತ್ರ ರಾಡಿಕಲ್ ವಿರುದ್ದ ಹೋರಾಡಲು ಸಹಾಯ ಮಾಡುತ್ತದೆ. ಇದರಲ್ಲಿ ಪೊಟ್ಯಾಶಿಯಮ್ ಮತ್ತು ಮೆಗ್ನೀಶಿಯಮ್ ಕೂಡಾ ಅಧಿಕವಾಗಿದ್ದು ಹೃದಯ ಆರೋಗ್ಯವನ್ನು ಸುಧಾರಿಸುತ್ತದೆ.

ಸೀತಾಫಲದ ಆರೋಗ್ಯ ಪ್ರಯೋಜನಗಳು ಸೀತಾಫಲದಲ್ಲಿ ವಿಟಮಿನ್ ಎ ಅಂಶವಿರುತ್ತದೆ. ಇದು ನಿಮ್ಮ ತ್ವಚೆ ಮತ್ತು ಕೂದಲನ್ನು ಆರೋಗ್ಯವಾಗಿರಿಸುತ್ತದೆ. ಈ ಹಣ್ಣು ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು. ಇದರಿಂದ ಅಜೀರ್ಣ ಸಮಸ್ಯೆ ನಿವಾರಣೆಯಾಗುತ್ತದೆ. ಈ ಹಣ್ಣನ್ನು ಸೇವಿಸುವುದರಿಂದ ಕಬ್ಬಿಣಾಂಶವನ್ನು ಪಡೆದುಕೊಳ್ಳಬಹುದು. ಇದು ಮಲಬದ್ಧತೆ ಸಮಸ್ಯೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ಅತಿಸಾರ, ಬೇಧಿ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ.

ಸೀತಾಫಲದಲ್ಲಿ ಮೆಗ್ನೀಶಿಯಮ್ ಅಂಶವಿದೆ. ಇದು ದೌರ್ಬಲ್ಯದಿಂದ ಆರೋಗ್ಯವನ್ನು ಸುಧಾರಿಸುತ್ತದೆ. ರಕ್ತಹೀನತೆಯಿಂದ ಬಳಲುತ್ತಿರುವವರಿಗೂ ಇದು ಪ್ರಯೋಜನಕಾರಿಯಾಗಿದೆ. ಈ ಹಣ್ಣಿನಲ್ಲಿ ವಿಟಮಿನ್ ಬಿ6 ಅಂಶವಿದೆ. ಈ ಹಣ್ಣಿನಿಂದ ಸಿಗುವ ಸಾಕಷ್ಟು ಪೋಷಕಾಂಶಗಳಿಂದ ಮಾನಸಿಕ ಸ್ಥಿತಿಯನ್ನು ಸುಧಾರಿಸಿಕೊಳ್ಳಬಹುದು. ಜೊತೆಗೆ ಖಿನ್ನತೆಯ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಸೀತಾಫಲವು ಕ್ಯಾಟೆಚಿನ್​ಗಳು, ಎಪಿಕಾಟಿನ್​ಗಳು ಮತ್ತು ಎಪಿಗಲ್ಲೊಕಾಟೆಚಿನ್​ಗಳಂಥಹ ಅಂಶಗಳನ್ನು ಒಳಗೊಂಡಿದೆ. ಇವುಗಳಲ್ಲಿ ಕೆಲವು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುವ ಸಾಮರ್ಥ್ಯ ಹೊಂದಿವೆ. ವಿಟಮಿನ್ ಸಿ ಯಿಂದ ಸಮೃದ್ಧವಾಗಿರುವ ಈ ಹಣ್ಣು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಸೀತಾಫಲವು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ:

Fruits: ವಿವಿಧ ಬಗೆಯ ಹಣ್ಣುಗಳ ಸೇವನೆ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಕಾರಿ ಗೊತ್ತಾ?

Anjeer Benefits: ಅಂಜೂರ ಹಣ್ಣು ಸೇವನೆ ಅಧಿಕ ರಕ್ತದೊತ್ತಡ ಸಮಸ್ಯೆ ನಿಯಂತ್ರಣಕ್ಕೆ ಸಹಾಯಕ

ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ