AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drinking Water: ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸ ಇದೆಯೇ?

Health Tips: ಧೂಳು, ಹದಗೆಟ್ಟ ವಾತಾವಣದಿಂದ ಅದೆಷ್ಟೋ ಆರೋಗ್ಯ ಸಮಸ್ಯೆಗಳು ಕಾಡುತ್ತಿರಬಹುದು. ಹಾಗಿರುವ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರು ಕುಡಿಯುವ ಅಭ್ಯಾಸ ಒಳ್ಳೆಯದು.

Drinking Water: ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸ ಇದೆಯೇ?
ಸಂಗ್ರಹ ಚಿತ್ರ
TV9 Web
| Edited By: |

Updated on: Oct 06, 2021 | 8:57 AM

Share

ನೀರು ಕುಡಿಯುವುದು ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬ ವಿಷಯ ಗೊತ್ತೇ ಇದೆ. ಆದರೆ ಯಾವ ಹೊತ್ತಿನಲ್ಲಿ ನೀರು ಕುಡಿಯುವುದರಿಂದ ಹೆಚ್ಚಿನ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎಂಬುದು ಗೊತ್ತೇ? ಧೂಳು, ಹದಗೆಟ್ಟ ವಾತಾವಣದಿಂದ ಅದೆಷ್ಟೋ ಆರೋಗ್ಯ ಸಮಸ್ಯೆಗಳು ಕಾಡುತ್ತಿರಬಹುದು. ಹಾಗಿರುವ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರು ಕುಡಿಯುವ ಅಭ್ಯಾಸ ಒಳ್ಳೆಯದು. ಪ್ರತಿದಿನ ಬೆಳಿಗ್ಗೆ ಎದ್ದು ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆರೋಗ್ಯ ಪ್ರಯೋಜನಗಳು ಸಿಗುತ್ತವೆ. ಇದು ದೇಹದಲ್ಲಿರುವ ಎಲ್ಲಾ ವಿಷವನ್ನು ಸುಲಭದಲ್ಲಿ ಹೊರಹಾಕಲು ಸಹಾಯ ಮಾಡುತ್ತದೆ. ಜತೆಗೆ ದೇಹದಲ್ಲಿನ ರಕ್ತವನ್ನು ಶುದ್ಧೀರಕರಿಸುತ್ತದೆ.

ಇತ್ತೀಚಿನ ದಿನಗಳಲ್ಲಿ ಅಪೌಷ್ಠಿಕತೆ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಗಳು ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಕೆಲವರಿಗೆ ಮಲಬದ್ಧತೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿರಬಹುದು. ಇದಕ್ಕೆ ಉತ್ತಮ ಪರಿಹಾರವೆಂದರೆ ನೀರು ಸೇವನೆ. ಬೆಳಿಗ್ಗೆ ಎದ್ದಾಕ್ಷಣ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಮಲಬದ್ಧತೆ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ.

ನೀವು ತೂಕ ಇಳಿಸಿಕೊಳ್ಳುವ ಬಗ್ಗೆ ಯೋಚಿಸುತ್ತಿದ್ದರೆ ಬೆಳಿಗ್ಗೆ ಎದ್ದ ತಕ್ಷಣ ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದು ನಿಮ್ಮ ಚಯಾಪಚಯವನ್ನು ಸುಧಾರಿಸುತ್ತದೆ. ಜತೆಗೆ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಮುಂಜಾನೆ ಎದ್ದು ನೀರು ಕುಡಿದರೆ ಮೂತ್ರ ಪಿಂಡ ಸಂಬಂಧಿ ಖಾಯಿಲೆ, ಗಂಟಲು ನೋವಿನ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದು. ಮುಖ್ಯವಾಗಿ ಮಹಿಳೆಯರಿಗೆ ಮುಟ್ಟಿನ ಸಮಯದಲ್ಲಾಗುವ ಹೊಟ್ಟೆ ನೋವಿನ ಸಮಸ್ಯೆಗೆ ಉತ್ತಮ ಪರಿಹಾರ ಸಿಗುತ್ತದೆ. ಹಾಗಾಗಿ ಪ್ರತಿನಿತ್ಯ ಬೆಳಿಗ್ಗೆ ಎದ್ದ ತಕ್ಷಣ ನೀರು ಕುಡಿಯುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ.

ನೀವು ಬೆಳಿಗ್ಗೆ ಎದ್ದು ನೀರು ಕುಡಿದಾಗ ದೇಹದಲ್ಲಿ ಹೊಸ ಕೋಶಗಳು ರೂಪುಗೊಳ್ಳುತ್ತವೆ. ಜತೆಗೆ ಸ್ನಾಯುವನ್ನು ಬಲಪಡಿಸಿಕೊಳ್ಳಲು ಇದು ಸಹಾಯಕವಾಗಿದೆ. ಸಂಧಿವಾತ, ಕಾಲು ನೋವು, ಮೈ ಕೈ ನೋವಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಜತೆಗೆ ದಿನಪೂರ್ತಿ ಚಟುವಟಿಕೆಯಿಂದ ಕೂಡಿರಲು ಬೆಳಿಗ್ಗೆ ಎದ್ದ ತಕ್ಷಣ ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ.

ಇದನ್ನೂ ಓದಿ:

Health Tips: ಶೀತ, ಕೆಮ್ಮಿನ ಸಮಸ್ಯೆಗಳ ಪರಿಹಾರಕ್ಕಾಗಿ ಸಲಹೆಗಳು ಇಲ್ಲಿವೆ

Health Tips: ಶೀತ, ಕೆಮ್ಮಿನ ಸಮಸ್ಯೆಗಳ ಪರಿಹಾರಕ್ಕಾಗಿ ಸಲಹೆಗಳು ಇಲ್ಲಿವೆ

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ