AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಹಲಸಿನ ಹಣ್ಣಿನ ಸೇವನೆಯ ಆರೋಗ್ಯ ಪ್ರಯೋಜನಗಳು ಬಹಳಷ್ಟಿವೆ; ಈ ಕೆಲವು ಸಲಹೆಗಳು ನಿಮಗಾಗಿ

ಹಲಸಿನ ಹಣ್ಣು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ಇದರಲ್ಲಿ ವಿಟಮಿನ್ ಎ ಮತ್ತು ಸಿ ಸಮೃದ್ಧವಾಗಿದೆ. ಇಂತಹ ಪ್ರಮುಖ ವಿಟಮಿನ್​ಗಳು ದೇಹದಲ್ಲಿರುವ ಕೆಟ್ಟ ಬ್ಯಾಕ್ಟೀಯಾಗಳನ್ನು ನಾಶ ಪಡಿಸುತ್ತವೆ.

Health Tips: ಹಲಸಿನ ಹಣ್ಣಿನ ಸೇವನೆಯ ಆರೋಗ್ಯ ಪ್ರಯೋಜನಗಳು ಬಹಳಷ್ಟಿವೆ; ಈ ಕೆಲವು ಸಲಹೆಗಳು ನಿಮಗಾಗಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 21, 2021 | 8:53 AM

Share

ನೈಸರ್ಗಿಕವಾಗಿ ಸಿಗುವ ಹಣ್ಣುಗಳು ಹೆಚ್ಚು ರುಚಿಯೂ ಹೌದು, ಜತೆಗೆ ಆರೋಗ್ಯ ಪ್ರಯೋಜನಗಳೂ ಸಹ ಸಾಕಷ್ಟು ಸಿಗುತ್ತವೆ. ಹಲಸಿನ ಹಣ್ಣಿನಿಂದ ತಯಾರಿಸುವ ಖಾದ್ಯಗಳು ಒಂದೇ ಎರಡೇ! ನಾನಾ ವಿಧದ ರುಚಿಕರವಾದ ಸಿಹಿ ಮಾಡಿ ಸವಿಯುತ್ತಾರೆ. ಹಲಸಿನ ಹಣ್ನು ಸೇವನೆಯಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದು ನಿಮಗೆ ಗೊತ್ತೇ? ನೀವು ತಿಳಿದುಕೊಳ್ಳಬೇಕಾದ ಕೆಲವೊಂದಿಷ್ಟು ಮಾಹಿತಿ ಇಲ್ಲಿದೆ.

ಹಲಸಿನ ಹಣ್ಣು ಕ್ಯಾನ್ಸರ್​ಅನ್ನು ತಡೆಯುತ್ತದೆ ಹಲಸಿನ ಹಣ್ಣುಗಳಲ್ಲಿ ಫ್ಲೇವನಾಯ್ಡಗಳು, ಫೈಟೊನ್ಯೂಟ್ರಿಯಂಟ್​ಗಳು ಮತ್ತು ಉತ್ಕರ್ಷಣ ನಿರೋಧಕಗಳು ಇರುತ್ತದೆ. ಇದು ದೇಹದಲ್ಲಿ ಉತ್ಪತ್ತಿಯಾಗುವ ಆಮೂಲಾಗ್ರಗಳನ್ನು ನಾಶ ಪಡಿಸಲು ಸಹಾಯಕವಾಗಿದೆ. ಹಾಗಾಗಿ ಕ್ಯಾನ್ಸರ್ ಸಮಸ್ಯೆಯನ್ನು ತಡೆಯಲು ಇದು ಹೆಚ್ಚು ಸಹಾಯಕಾರಿಯಾಗಿದೆ.

ರೋಗ ನಿರೋಧಕವನ್ನು ಹೆಚ್ಚಿಸುತ್ತದೆ ಹಲಸಿನ ಹಣ್ಣು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ಇದರಲ್ಲಿ ವಿಟಮಿನ್ ಎ ಮತ್ತು ಸಿ ಸಮೃದ್ಧವಾಗಿದೆ. ಇಂತಹ ಪ್ರಮುಖ ವಿಟಮಿನ್​ಗಳು ದೇಹದಲ್ಲಿರುವ ಕೆಟ್ಟ ಬ್ಯಾಕ್ಟೀಯಾಗಳನ್ನು ನಾಶ ಪಡಿಸುತ್ತವೆ. ಜತೆಗೆ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ.

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಹಲಸಿನ ಹಣ್ಣಿನಲ್ಲಿ ಫೈಬರ್ ಇರುವುದು ಹಲವು ರೀತಿಯಲ್ಲಿ ಪ್ರಯೋಜನಕಾರಿ. ಕರುಳಿನ ಚಲನೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಜತೆಗೆ ಕಾರ್ಸಿನೋಜೆಕ್ ರಾಸಾಯನಿಕಗಳನ್ನು ತೆಗೆದುಹಾಕುತ್ತದೆ. ಈ ರಾಸಾಯನಿಕಗಳು ದೊಡ್ಡ ಕರುಳಿನಲ್ಲಿ ಕಂಡು ಬರುತ್ತದೆ, ಇದನ್ನು ತೆಗೆದು ಹಾಕುವ ಮೂಲಕ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

ಆರೋಗ್ಯಕರ ಚರ್ಮ ಹಲಸಿನ ಹಣ್ಣಿನಲ್ಲಿ ವಿಟಮಿನ್ ಸಿ ಯಂತಹ ಶಕ್ತಿಯುವ ಪದಾರ್ಥಗಳು ತುಂಬಿರುತ್ತವೆ. ಇದು ಚರ್ಮದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಸೂರ್ಯನ ಶಾಖದಿಂದ ಹಾನಿಗೊಳಗಾದ ಚರ್ಮ ಮತ್ತು ಸುಕ್ಕುಗಳಿಂದ ಪರಿಹಾರ ಸಿಗುತ್ತದೆ ಮತ್ತು ಚರ್ಮವನ್ನು ಹೆಚ್ಚು ಪೋಷಿಸುತ್ತದೆ.

ಇದನ್ನೂ ಓದಿ:

Health Tips: ಆಹಾರದಲ್ಲಿನ ಈ ಕೆಲವು ಮಸಾಲೆ ಪದಾರ್ಥಗಳು ನಿಮ್ಮ ದೇಹದಲ್ಲಿ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಿಸುತ್ತದೆ

Health Tips: ನಿಮ್ಮ ಪಾದಗಳು ಆರೋಗ್ಯವಾಗಿರಲು ಈ ಕೆಲವು ಸಲಹೆಗಳು ನಿಮಗಾಗಿ

(Know about health benefits of jackfruits check in Kannada)

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ