AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Benefits Of Pomegranate: ಪ್ರತಿನಿತ್ಯ ಒಂದು ದಾಳಿಂಬೆ ಹಣ್ಣು ಸೇವಿಸಿ; ರೋಗಗಳಿಂದ ದೂರವಿರಿ

Health Tips: ದಾಳಿಂಬೆ ಹಣ್ಣನ್ನು ನಿಯಮಿತವಾಗಿ ಸೇವಿಸುವ ಮೂಲಕ ದೇಹದಲ್ಲಿ ರಕ್ತಹೀನತೆ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ. ಜತೆಗೆ ದೇಹದಲ್ಲಿನ ಹೆಚ್ಚುವರಿ ಬೊಜ್ಜು ನಿವಾರಣೆಗೆ ಇದು ಸಹಾಯ ಮಾಡುತ್ತದೆ.

Benefits Of Pomegranate: ಪ್ರತಿನಿತ್ಯ ಒಂದು ದಾಳಿಂಬೆ ಹಣ್ಣು ಸೇವಿಸಿ; ರೋಗಗಳಿಂದ ದೂರವಿರಿ
ಸಂಗ್ರಹ ಚಿತ್ರ
TV9 Web
| Edited By: |

Updated on: Oct 19, 2021 | 8:43 AM

Share

ದೇಹಕ್ಕೆ ಪೌಷ್ಟಿಕಾಂಶಯುಕ್ತ ಹಣ್ಣುಗಳ ಸೇವನೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಹಾಗಿರುವಾಗ ದಾಳಿಂಬೆ ಹಣ್ಣು ಸೇವನೆಯಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿದುಕೊಳ್ಳಿ. ಇದು ನಿಮ್ಮ ದೇಹವನ್ನು ಸದೃಢವಾಗಿಡುವುದರ ಜತೆಗೆ ಅನೇಕ ಆರೋಗ್ಯ ಸಮಸ್ಯೆಗಳಿಂದ ಪರಿಹಾರ ಕಂಡುಕೊಳ್ಳಲು ಸಹಾಯಕವಾಗಿದೆ. ಪ್ರತಿನಿತ್ಯ ಒಂದು ದಾಳಿಂಬೆ ಹಣ್ಣನ್ನು ಸೇವಿಸುವ ಮೂಲಕ ಆರೋಗ್ಯ ಪ್ರಯೋಜನಗಳನ್ನು ಪಡೆಯಿರಿ.

ದಾಳಿಂಬೆ ಹಣ್ಣನ್ನು ನಿಯಮಿತವಾಗಿ ಸೇವಿಸುವ ಮೂಲಕ ದೇಹದಲ್ಲಿ ರಕ್ತಹೀನತೆ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ. ಜತೆಗೆ ದೇಹದಲ್ಲಿನ ಹೆಚ್ಚುವರಿ ಬೊಜ್ಜು ನಿವಾರಣೆಗೆ ಇದು ಸಹಾಯ ಮಾಡುತ್ತದೆ. ದಾಳಿಂಬೆಯಲ್ಲಿ ನಾರಿನಾಂಶ ಹೆಚ್ಚಿರುತ್ತದೆ. ಜತೆಗೆ ಕಡಿಮೆ ಪ್ರಮಾಣದ ಕ್ಯಾಲೊರಿ ಹೊಂದಿರುತ್ತದೆ. ಇದರಿಂದ ದೇಹದ ತೂಕ ಇಳಿಸಿಕೊಳ್ಳಲು ಸಹಾಯಕ.

ದಾಳಿಂಬೆಯಲ್ಲಿ ಹೆಚ್ಚಿನ ಫೈಬರ್ ಇರುತ್ತದೆ ಜತೆಗೆ, ದಾಳಿಂಬೆಯಲ್ಲಿ ನೀರಿನಾಂಶ ಹೆಚ್ಚಿರುವುದರಿಂದ ದೇಹದಲ್ಲಿ ನೀರಿನ ಕೊರತೆ ಹೋಗಲಾಡಿಸಲು ಸಹಾಯಕವಾಗಿದೆ. ಅದಕ್ಕಾಗಿಯೇ ಪ್ರತಿನಿತ್ಯ ಒಂದು ದಾಳಿಂಬೆ ಹಣ್ಣನ್ನು ಸವಿಯುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಇದು ನಿಮ್ಮ ಆರೋಗ್ಯ ಸುಧಾರಣೆಗೆ ಸಹಾಯಕವಾಗಿದೆ.

ದಾಳಿಂಬೆ ಸೇವನೆಯು ನಿಮ್ಮ ಚರ್ಮದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದರಿಂದ ಮುಖದ ಕಾಂತಿ ಹೆಚ್ಚಿಸಿಕೊಳ್ಳಬಹುದಾಗಿದೆ. ದಾಳಿಂಬೆ, ಚರ್ಮದಲ್ಲಿನ ಕಪ್ಪು ಕಲೆ, ಮುಖದಲ್ಲಿ ಎಣ್ಣೆಯಾಂಶವನ್ನು ಹೋಗಲಾಡಿಸಲು ಸಹಾಯಕವಾಗಿದೆ. ನೀವು ಚರ್ಮದ ಸಮಸ್ಯೆಗಳನ್ನು ಹೊಂದಿದ್ದರೆ ದಾಳಿಂಬೆ ಹಣ್ಣು ಸೇವನೆಯನ್ನು ರೂಢಿಯಲ್ಲಿಟ್ಟುಕೊಳ್ಳಿ. ಇದರಿಂದ ಬಹುಬೇಗ ಪರಿಹಾರ ಕಂಡುಕೊಳ್ಳಬಹುದು. ದಾಳಿಂಬೆಯು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿರುತ್ತದೆ. ಬಾಯಿಯಲ್ಲಿ ಸೋಂಕು ಮತ್ತು ಉರಿಯೂತದ ಅಪಾಯವನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ:

Health Tips: ನಿಮ್ಮ ಈ ಕೆಲವು ಅಭ್ಯಾಸಗಳು ಮೂತ್ರಪಿಂಡಕ್ಕೆ ಹಾನಿಕಾರಕ!

Health Tips: ನಿಮ್ಮ ಹಲ್ಲುಗಳನ್ನು ಬಿಳುಪಾಗಿಸಲು ಇಲ್ಲಿವೆ ಸಲಹೆಗಳು​

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ