Health Tips: ನಿಮ್ಮ ದೇಹದಲ್ಲಿ ಕ್ಯಾಲ್ಸಿಯಂ ಕೊರತೆ ನೀಗಿಸಲು ರಾಗಿಯಿಂದ ತಯಾರಿಸಿದ ಆಹಾರ ಪದಾರ್ಥಗಳು ಸಹಾಯಕ

ದೇಹದಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ನೀಗಿಸಲು ಹಾಲು ಮತ್ತು ಡೈರಿ ಉತ್ಪನ್ನಗಳನ್ನು ತೆಗೆದುಕೊಳ್ಳುವುದು ಸೂಕ್ತ. ಆದರೆ ಕೆಲವರಿಗೆ ಹಾಲು, ಮೊಸರು, ಬೆಣ್ಣೆ ಹೀಗೆ ಡೈರಿ ಉತ್ಪನ್ನಗಳು ಹೆಚ್ಚು ಇಷ್ಟವಾಗುವುದಿಲ್ಲ ಅಂಥವರು ರಾಗಿಯನ್ನು ನಿಮ್ಮ ಆಹಾರದಲ್ಲಿ ಸೇರಿಸುವುದು ಉತ್ತಮ.

Health Tips: ನಿಮ್ಮ ದೇಹದಲ್ಲಿ ಕ್ಯಾಲ್ಸಿಯಂ ಕೊರತೆ ನೀಗಿಸಲು ರಾಗಿಯಿಂದ ತಯಾರಿಸಿದ ಆಹಾರ ಪದಾರ್ಥಗಳು ಸಹಾಯಕ
ಸಾಂದರ್ಭಿಕ ಚಿತ್ರ
Follow us
| Updated By: preethi shettigar

Updated on: Sep 25, 2021 | 8:11 AM

ನಮ್ಮ ದೇಹದ ಆರೋಗ್ಯಕ್ಕೆ ಎಲ್ಲಾ ರೀತಿಯ ಪೋಷಕಾಂಶಗಳ ಅಗತ್ಯವಿದೆ. ಅದೇ ರೀತಿ ಕ್ಯಾಲ್ಸಿಯಂ ಅಂಶ ಕೂಡ ಅತ್ಯಗತ್ಯ. ದೇಹದಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ನೀಗಿಸಲು ಹಾಲು ಮತ್ತು ಡೈರಿ ಉತ್ಪನ್ನಗಳನ್ನು ತೆಗೆದುಕೊಳ್ಳುವುದು ಸೂಕ್ತ. ಆದರೆ ಕೆಲವರಿಗೆ ಹಾಲು, ಮೊಸರು, ಬೆಣ್ಣೆ ಹೀಗೆ ಡೈರಿ ಉತ್ಪನ್ನಗಳು ಹೆಚ್ಚು ಇಷ್ಟವಾಗುವುದಿಲ್ಲ ಅಂಥವರು ರಾಗಿಯನ್ನು ನಿಮ್ಮ ಆಹಾರದಲ್ಲಿ ಸೇರಿಸುವುದು ಉತ್ತಮ. ಇದು ನಿಮ್ಮ ದೇಹದಲ್ಲಿ ಕ್ಯಾಲ್ಸಿಯಂ ಕೊರತೆಯನ್ನು ನೀಗಿಸಲು ಸಹಾಯ ಮಾಡುತ್ತದೆ.

ರಾಗಿಯಲ್ಲಿ ಕ್ಯಾಲ್ಸಿಯಂ ಹೇರಳವಾಗಿ ಕಂಡು ಬರುತ್ತದೆ. ಪ್ರೋಟೀನ್, ವಿಟಾಮಿನ್, ಫೈಬರ್, ಕಾರ್ಬೋಹೈಡ್ರೇಟ್​ಗಳು ಮತ್ತು ಅನೇಕ ಪೋಷಕಾಂಶಗಳಿರುತ್ತದೆ. ಹಾಗಾಗಿ ಇದು ಆರೋಗ್ಯಕ್ಕೆ ಹಲವು ರೀತಿಯ ಪ್ರಯೋಜನಗಳನ್ನು ನೀಡುತ್ತದೆ. ರಾಗಿಯಲ್ಲಿ ಇತರ ಧಾನ್ಯಗಳಿಗಿಂತ ಹೆಚ್ಚಿನ ಕ್ಯಾಲ್ಸಿಯಂ ಇರುತ್ತದೆ. ಈ ಕಾರಣದಿಂದಾಗಿ ಇದು ಮೂಳೆಗಳಿಗೆ ತುಂಬಾ ಪ್ರಯೋಜನಕಾರಿ. ಇದನ್ನು ನಿಯಮಿತವಾಗಿ ಆಹಾರದಲ್ಲಿ ಸೇರಿಸಿ. ಇದು ಅಸ್ಟಿಯೊಪೊರೋಸಿಸ್ ಅಪಾಯವನ್ನು ತಡೆಗಟ್ಟುತ್ತದೆ. ಜತೆಗೆ ನಿಮ್ಮ ಹಲ್ಲುಗಳನ್ನು ಬಲಪಡಿಸುತ್ತದೆ.

ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಾಯಕ ನಿಮ್ಮ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವು ಹೆಚ್ಚಳವಾಗಿದ್ದರೆ, ರಾಗಿ ನಿಮಗೆ ಉಪಯುಕ್ತಕರವಾದ ಪದಾರ್ಥ. ಕೊಲೆಸ್ಟ್ರಾಲ್ ದೇಹದಲ್ಲಿ ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ. ರಾಗಿಯಲ್ಲಿ ಆಹಾರದ ಫೈಬರ್ ಮತ್ತು ಫೈಟಿಕ್ ಆ್ಯಸಿಡ್ ಇದ್ದು, ಇದು ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ಅನ್ನು ಹೊರಹಾಕಲು ಸಹಾಯ ಮಾಡುತ್ತದೆ.

ರಕ್ತ ಹೀನತೆಯನ್ನು ತಡೆಯುತ್ತದೆ ಹೆಚ್ಚಿನ ಜನರು ರಕ್ತ ಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ರಾಗಿಯಲ್ಲಿ ಬಹಳಷ್ಟು ಕಬ್ಬಿಣ ಅಂಶವಿದೆ ಹಾಗಾಗಿ ರಕ್ತ ಹೀನತೆ ಸಮಸ್ಯೆಯಿಂದ ಪರಿಹಾರ ಪಡೆದುಕೊಳ್ಳಬಹುದಾಗಿದೆ. ರಾಗಿಯು ಮಧುಮೇಹ ವಿರೋಧಿ ಗುಣಗಳನ್ನು ಹೊಂದಿದೆ. ಜತೆಗೆ ಒತ್ತಡವನ್ನು ಕಡಿಮೆ ಮಾಡಲು ಸಹಾಯಕವಾಗಿದೆ.

ರಾಗಿ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ. ಇದು ದೇಹದ ಒತ್ತಡವನ್ನು ಕಡಿಮೆ ಮಾಡಲು ಸಹಾಯವಾಗಿದೆ. ದೇಹಕ್ಕೆ ಬೇಕಾದ ಪೌಷ್ಟಿಕಾಂಶಗಳನ್ನು ಒದಗಿಸುವುದರಿಂದ ಆಯಾಸವನ್ನು ಕಡಿಮೆ ಮಾಡುತ್ತದೆ. ಹಾಗಾಗಿ ರಾಗಿ ಗಂಜಿ, ರಾಗಿ ಚಪಾತಿ ಹೀಗೆ ನಾನಾ ಅಡುಗೆಗಳನ್ನು ಮಾಡಿ ಸವಿಯುತ್ತಾ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಿ.

ಇದನ್ನೂ ಓದಿ:

Health Tips: ನಿಮ್ಮ ದೇಹದ ತೂಕ ಹೆಚ್ಚಳಕ್ಕೆ ಈ ಕೆಲವು ಅಂಶಗಳೇ ಕಾರಣ!

Health Tips: ಮರಸೇಬು ಹಣ್ಣಿನ ಆರೋಗ್ಯ ಪ್ರಯೋಜನಗಳ ಬಗ್ಗೆ ನೀವು ತಿಳಿಯಬೇಕು

(Know about ragi health benefits its fulfil calcium deficiency)

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು