ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಈ ಕೆಲವು ಅಂಶಗಳು ಗಮನದಲ್ಲಿರಲಿ

ರಕ್ತಹೀನೆತೆ ಸಮಸ್ಯೆಯಿಂದ ಬಳಲುತ್ತಿರುವವರು ಯಾವ ರೀತಿಯ ಆಹಾರವನ್ನು ಸೇವಿಸಬೇಕು ಎಂಬ ಮಾಹಿತಿ ಈ ಕೆಳಗಿನಂತಿದೆ.

ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಈ ಕೆಲವು ಅಂಶಗಳು ಗಮನದಲ್ಲಿರಲಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on: Sep 03, 2021 | 8:29 AM

ಕೆಲವರು ದೀರ್ಘಕಾಲದವರೆಗೆ ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಾರೆ. ಮಾನಸಿಕ ಕಿರಿಕಿರಿ, ತಲೆನೋವು ಮತ್ತು ಆಯಾಸದಂತಹ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಾರೆ. ಇದು ರಕ್ತಹೀನತೆ ಸಮಸ್ಯೆ ಲಕ್ಷಣವಾಗಿರಬಹುದು. ದೇಹದಲ್ಲಿ ಸಾಕಷ್ಟು ರಕ್ತವಿಲ್ಲದಿದ್ದರೆ ಇಂತಹ ಸಮಸ್ಯೆಗಳು ಎದುರಾಗುತ್ತವೆ. ಹಾಗಿರುವಾಗ ರಕ್ತಹೀನೆತೆ ಸಮಸ್ಯೆಯಿಂದ ಬಳಲುತ್ತಿರುವವರು ಯಾವ ರೀತಿಯ ಆಹಾರವನ್ನು ಸೇವಿಸಬೇಕು ಎಂಬ ಮಾಹಿತಿ ಈ ಕೆಳಗಿನಂತಿದೆ.

ಪ್ರಸ್ತುತ ಸಮಯದಲ್ಲಿ ಮಕ್ಕಳಲ್ಲಿಯೇ ರಕ್ತಹೀನತೆ ಸಮಸ್ಯೆ ಕಂಡು ಬರುತ್ತಿರುವುದು ಹೆಚ್ಚುತ್ತಿದೆ. ಚಿಕ್ಕ ವಯಸ್ಸಿನಲ್ಲಿರುವಾಗಲೇ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವುದು ಕಂಡು ಬರುತ್ತಿದೆ. ಪೌಷ್ಟಿಕ ಆಹಾರ ಇಲ್ಲದಿರುವುದು, ಜೀವನ ಶೈಲಿಯ ಬದಲಾವಣೆಗಳಿಂದ ದೇಹ ದುರ್ಬಲವಾಗುತ್ತಿದೆ. ಆರೋಗ್ಯಕರ ಆಹಾರ, ಪೌಷ್ಟಿಕಯುಕ್ತ ತರಕಾರಿಗಳು, ಹಣ್ಣುಗಳ ಸೇವನೆ ಮಾಡದಿರುವುದಿಂದ ರಕ್ತಹೀನತೆ ಸಮಸ್ಯೆ ಜನರನ್ನು ಬಾಧಿಸುತ್ತಿದೆ. ಹೀಗಿರುವಾಗ ಆರೋಗ್ಯದ ಕುರಿತಾಗಿ ಜನರು ಹೆಚ್ಚು ಲಕ್ಷವಹಿಸಲೇಬೇಕು.

ಯಾವುದೇ ಆರೋಗ್ಯ ಸಮಸ್ಯೆ ಕಂಡು ಬಂದಲ್ಲಿ ನಿರ್ಲಕ್ಷ್ಯ ಬೇಡ. ಕೆಲವು ಸಣ್ಣ ಸಮಸ್ಯೆಯೆಂದು ನಿರ್ಲಕ್ಷ್ಯ ತೋರಿದರೆ ಮುಂದೊಂದು ದಿನ ದೊಡ್ಡ ಸಮಸ್ಯೆಯನ್ನು ತಂದೊಡ್ಡಬಹುದು. ಹಾಗಾಗಿ ಆರೋಗ್ಯದ ಕುರಿತಾಗಿ ಹೆಚ್ಚು ಗಮನವಿರಲಿ. ಇದರಿಂದ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳುವುದರ ಜತೆಗೆ ಕಾಳಜಿಯಿಂದ ನೋಡಿಕೊಳ್ಳಬಹುದು.

ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿರುವ ಜನರು ಸಿಟ್ರಸ್ ಹಣ್ಣುಗಳನ್ನು ಹೆಚ್ಚು ಸೇವಿಸಬೇಕು. ಕಿತ್ತಳೆ ಮತ್ತು ಬೀನ್ಸ್ ನಿಮ್ಮ ದೈನಂದಿನ ಆಹಾರದ ಭಾಗವಾಗಿರಲಿ. ವಿಟಮಿನ್ ಸಿ ಇರುವ ಆಹಾರವನ್ನು ಸೇವಿಸುವುದರಿಂದ ದೇಹದಲ್ಲಿ ಕಬ್ಬಿಣ ಹೆಚ್ಚಾಗುತ್ತದೆ.

ಹಸಿರು ತರಕಾರಿಗಳನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತಹೀನತೆಯ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಅವುಗಳಲ್ಲಿ ಕಬ್ಬಣವು ದೇಹಕ್ಕೆ ತುಂಬಾ ಒಳ್ಳೆಯದು.

ಅಗಸೆ ಬೀಜಗಳು, ಕುಂಬಳಕಾಯಿ ಬೀಜಗಳು, ಗೋಡಂಬಿ, ಪಿಸ್ತಾ, ಧಾನ್ಯಗಳನ್ನು ನಿಯಮಿತವಾಗಿ ಸೇವಿಸಬೇಕು

ನಿಮಗೆ ಅಗತ್ಯವಿರುವ ಕಬ್ಬಿಣದ ಅಂಶವನ್ನು ಪಡೆಯಲು ಬಿಟ್ರೂಟ್​ನಂತಹ ಕೆಂಪು ತರಕಾರಿಗಳನ್ನು ಸೇವಿಸಿ. ಇದು ದೇಹದಲ್ಲಿ ರಕ್ತದ ಉತ್ಪತ್ತಿಗೆ ಸಹಾಯಕವಾಗಿದೆ

ಇದನ್ನೂ ಓದಿ:

Health Tips: ಅಂಜೂರ ಹಣ್ಣು ಮತ್ತು ಹಾಲು ಸೇವನೆಯ ಆರೋಗ್ಯ ಪ್ರಯೋಜನಗಳು

Health Tips: ಬೆಳಿಗ್ಗೆ ಎದ್ದ ತಕ್ಷಣ ಈ ರೀತಿ ಮಾಡುವುದರಿಂದ ಅನೇಕ ಆರೋಗ್ಯಕರ ಪ್ರಯೋಜನಗಳಿವೆ

(Know about remedies for anemia problem check in kannada)

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್