Health Tips: ಹುಣಸೆ ಹಣ್ಣಿನ ಸೇವನೆಯ ಆರೋಗ್ಯ ಪ್ರಯೋಜನಗಳನ್ನು ತಿಳಿಯಿರಿ

ಹುಣಸೆ ಹಣ್ಣು: ಆಮ್ಲೀಯವಾಗಿದ್ದರೂ ಹುಣಸೆ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಇದು ಪಾಲಿಫಿನಾಲ್​ ಎಂಬ ಆ್ಯಂಟಿ ಆಕ್ಸಿಡೆಂಟ್​ಅನ್ನು ಹೊಂದಿರುತ್ತದೆ. ಇದು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡುತ್ತದೆ.

Health Tips: ಹುಣಸೆ ಹಣ್ಣಿನ ಸೇವನೆಯ ಆರೋಗ್ಯ ಪ್ರಯೋಜನಗಳನ್ನು ತಿಳಿಯಿರಿ
ಹುಣಸೆ ಹಣ್ಣು
Follow us
TV9 Web
| Updated By: ಆಯೇಷಾ ಬಾನು

Updated on: Jul 15, 2021 | 6:58 AM

ಹುಣಸೆ ಹಣ್ಣನ್ನು ಸಾಮಾನ್ಯವಾಗಿ ಅಡುಗೆಯಲ್ಲಿ ರುಚಿ ಹೆಚ್ಚಿಸಲು ಬಳಸುತ್ತೇವೆ. ಅದೊಂದೇ ಅಲ್ಲದೇ ಹುಣಸೆ ಹಣ್ಣಿನ ಚಟ್ಣಿ, ಸಾಂಬಾರ್​ ಮಾಡಿ ಸವಿಯಲೂಬಹುದು. ಜತೆಜತೆಗೆ ಆರೋಗ್ಯ ಪ್ರಯೋಜನಗಳೂ ಕೂಡಾ ಸಾಕಷ್ಟಿವೆ. ನಾವು ಪ್ರತಿ ನಿತ್ಯ ಸೇವಿಸುವ ಆಹಾರ ಪದಾರ್ಥಗಳಿಂದ ನಮ್ಮ ಆರೋಗ್ಯ ಸುಧಾರಣೆಯ ಬಗ್ಗೆ ನಾವು ತಿಳಿದುಕೊಳ್ಳಲೇ ಬೇಕು. ಹಾಗಾಗಿ ಹುಣಸೆ ಹಣ್ಣಿನಲ್ಲಿ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂಬುದನ್ನು ತಿಳಿಯಿರಿ.

ತೂಕ ನಷ್ಟಕ್ಕೆ ಸಹಾಯಕ ಹುಣಸೆ ಹಣ್ಣು ಫೈಬರ್​ ಸಂಯುಕ್ತದಿಂದ ಸಮೃದ್ಧವಾಗಿರುತ್ತದೆ. ಇದು ಕಡಿಮೆ ಕೊಬ್ಬಿನಾಂಶವನ್ನು ಹೊಂದಿದೆ. ತೂಕ ಕಡಿಮೆ ಮಾಡಿಕೊಳ್ಳಲು ಸಹಾಯಕವಾಗಿದೆ. ಜತೆಗೆ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದಲ್ಲಿ ಹೆಚ್ಚಿನ ಫೈಬರ್​ ಪ್ರಮಾಣವಿದ್ದು ನಿಮ್ಮ ಹಸಿವಿನ ನೋವನ್ನು ನಿವಾರಿಸಲು ಸಹಾಯ ಮಾಡುತ್ತದೆ.

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಹುಣಸೆ ಹಣ್ಣು ವಿಟಮಿನ್​ ಸಿ ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ಯಾವುದೇ ರೀತಿಯ ಬ್ಯಾಕ್ಟೀರಿಯಾಗಳನ್ನು ತಡೆಯಲು ಸಹಾಯಕವಾಗಿದೆ. ಇದು ಆ್ಯಂಟಿ- ಸಫ್ಟಿಕ್​ ಗುಣಗಳನ್ನು ಹೊಂದಿರುತ್ತದೆ. ಅಸ್ತಮಾ, ಕೆಮ್ಮು ಮತ್ತು ಶೀತ ಸಮಸ್ಯೆಯನ್ನು ತಡೆಯಲು ಸಹಾಯಕವಾಗಿದೆ.

ಹೃದಯಕ್ಕೆ ಒಳ್ಳೆಯದು ಹುಣಸೆ ಹಣ್ಣು ಹೃದಯಕ್ಕೆ ಒಳ್ಳೆಯದು. ಇದು ಕೊಲೆಸ್ಟ್ರಾಲ್​ ಮಟ್ಟವನ್ನು ಕಡಿಮೆ ಮಾಡುತ್ತದೆ. ಜತೆಗೆ ಉತ್ತಮ ಕೊಲೆಸ್ಟ್ರಾಲ್​ಅನ್ನು ಹೆಚ್ಚಿಸುತ್ತದೆ. ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ. ಹೃದ್ರೋಗ ಅಪಾಯವನ್ನು ತಡೆಗಟ್ಟುವ ಸಾಮರ್ಥ್ಯ ಹುಣಸೆ ಹಣ್ಣಿನಲ್ಲಿದೆ.

ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ ಆಮ್ಲೀಯವಾಗಿದ್ದರೂ ಹುಣಸೆ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಇದು ಪಾಲಿಫಿನಾಲ್​ ಎಂಬ ಆ್ಯಂಟಿ ಆಕ್ಸಿಡೆಂಟ್​ಅನ್ನು ಹೊಂದಿರುತ್ತದೆ. ಇದು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡುತ್ತದೆ. ಆಹಾರವು ಸರಿಯಾಗಿ ಜೀರ್ಣವಾಗುವಂತೆ ನೋಡಿಕೊಳ್ಳುತ್ತದೆ.

ಯಾವುದೇ ಆಹಾರ ಪದಾರ್ಥವನ್ನು ಅತಿಯಾಗಿ ಬಳಸುವುದು ಅನಾರೋಗ್ಯವನ್ನು ಉಂಟು ಮಾಡುತ್ತದೆ. ಗರ್ಭಿಣಿಯರು ಅಥವಾ ದೀರ್ಘಕಾಲದ ಖಾಯಿಲೆಗಳಿಂದ ಬಳಲುತ್ತಿರುವವರು ಹುಣಸೆ ಹಣ್ಣು ಸೇವನೆಯ ಬಗ್ಗೆ ಎಚ್ಚರಿಕೆಯಿಂದಿರಿ. ಪ್ರತಿಯೊಬ್ಬರೂ ಕೂಡಾ ಆರೋಗ್ಯದಲ್ಲಿ ಏನೇ ಏರು-ಪೇರು ಉಂಟಾದರೂ ಹತ್ತಿರದ ವೈದ್ಯರಲ್ಲಿ ಸಲಹೆ ಪಡೆಯಿರಿ. ನಿಮ್ಮ ಆರೋಗ್ಯದ ಕುರಿತಾಗಿ ಕಾಳಜಿ ಇರಲಿ.

ಇದನ್ನೂ ಓದಿ:

ಹುಣಸೆ ಬೀಜ: ನೀವು ಮೊಣಕಾಲು ನೋವು ಮತ್ತು ಕೀಲು ನೋವಿನಿಂದ ಬಳಲುತ್ತಿದ್ದೀರಾ?

ಹುಣಸೆ ಹಣ್ಣಿಗೆ ಬಂಪರ್ ಬೆಲೆ; ಕೊರೊನಾದಿಂದ ಕಂಗೆಟ್ಟ ರೈತರ ಮೊಗದಲ್ಲಿ ಮಂದಹಾಸ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ