AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಚಹಾ ಸೇವನೆಯ ಆರೋಗ್ಯ ಪ್ರಯೋಜಗಳನ್ನು ತಿಳಿಯಿರಿ

ಅತಿಯಾಗಿ ಸೇವಿಸಿದರೆ ಅಮೃತವೂ ವಿಷ ಎಂಬಂತೆ ನಿಯಮಿತವಾಗಿ ಚಹಾ ಸೇವಿಸಿ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಿ.

Health Tips: ಚಹಾ ಸೇವನೆಯ ಆರೋಗ್ಯ ಪ್ರಯೋಜಗಳನ್ನು ತಿಳಿಯಿರಿ
ಸಾಂದರ್ಭಿಕ ಚಿತ್ರ
TV9 Web
| Updated By: preethi shettigar|

Updated on: Sep 06, 2021 | 8:39 AM

Share

ಸಾಮಾನ್ಯವಾಗಿ ಹೆಚ್ಚಿನವರಿಗೆ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಚಹಬೇಕು. ಚಹಾ ಸೇವನೆಯಿಂದ ಆರೋಗ್ಯ ಪ್ರಯೋಜನಗಳೂ ಸಹ ಇವೆ. ಚಹಾ ಸೇವನೆಯಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂಬುದನ್ನು ತಿಳಿದುಕೊಳ್ಳಿ. ಬಿಸಿ ಬಿಸಿ ಚಹಾ ಸೇವಿಸುತ್ತಿದ್ದರೆ ಶೀತ, ಜ್ವರದಂತಹ ಸಣ್ಣ ಪುಟ್ಟ ಸಮಸ್ಯೆಗಳು ಬಹುಬೇಗ ಕಡಿಮೆಯಾಗುತ್ತದೆ. ಆದರೆ ದಿನಕ್ಕೆ ಎಷ್ಟು ಚಹ ಸೇವಿಸಬೇಕು? ಎಂಬುದು ಮುಖ್ಯ. ಅತಿಯಾಗಿ ಸೇವಿಸಿದರೆ ಅಮೃತವೂ ವಿಷ ಎಂಬಂತೆ ನಿಯಮಿತವಾಗಿ ಸೇವಿಸಿ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಿ.

ಹೆಚ್ಚಿನವರು ಆಹಾರದ ಮುಂಚೆಯೇ ಚಹ ಸೇವಿಸುತ್ತಾರೆ. ಆದರೆ ಆಹಾರದ ನಂತರ ಚಹ ಸೇವಿಸುವುದು ಒಳ್ಳೆಯದು ಎನ್ನುತ್ತಾರೆ ತಜ್ಞರು. ಉಪಹಾರದ 20 ನಿಮಿಷಗಳ ಬಳಿಕ ಚಹಾ ಸೇವನೆಯ ಅಭ್ಯಾಸವನ್ನು ಮಾಡಿಕೊಳ್ಳಬಹುದು. ಇದರಿಂದ ಆರೋಗ್ಯ ಪ್ರಯೋಜನ ಸಿಗುತ್ತದೆ.

ಚಹಾದ ಇನ್ನೊಂದು ಕುತೂಹಲಕಾರಿ ವಿಷಯವೇನೆಂದರೆ ಹೆಚ್ಚು ನೀರಿನಿಂದ ಕೂಡಿರುವುದರಿಂದ ಹೈಡ್ರೇಟ್ ಮಾಡುತ್ತದೆ. ನೀರಿನ ಅಂಶ ದೇಹಕ್ಕೆ ಹೋಗುವುದರಿಂದ ಆರೊಗ್ಯ ಪ್ರಯೋಜನಗಳನ್ನು ನೀಡುತ್ತದೆ. ಇದು ಹೃದಯನಾಳದ ಖಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಜತೆಗೆ ಟೈಪ್ 2 ಮಧುಮೇಹ, ಕ್ಯಾನ್ಸರ್ ಅಪಾಯವನ್ನು ತಡೆಗಟ್ಟಲು ಇದು ಸಹಾಯಕವಾಗಿದೆ.

ದಿನದಲ್ಲಿ ಹೆಚ್ಚು ಅಂದರೆ 2 ರಿಂದ 3 ಕಪ್ ಟೀ ಕುಡಿಯುವ ಅಭ್ಯಾಸ ಒಳ್ಳೆಯದು. ಅದಕ್ಕೂ ಹೆಚ್ಚಿನ ಕೆಫೀನ್ ಅಂಶ ದೇಹಕ್ಕೆ ಹೋಗುವುದು ಆರೋಗ್ಯ ಸಮಸ್ಯೆಗಳನ್ನು ತಂದೊಡ್ಡಬಹುದು ಎಂದು ತಜ್ಞರು ಹೇಳುತ್ತಾರೆ. ನೈಸರ್ಗಿಕ ಸಸ್ಯ ಸಂಯುಕ್ತಗಳಿಂದ ತಯಾರಾಗಿರುವುದರಿಂದ ಹೃದಯವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ನಿಯಮಿತವಾಗಿ ಚಹಾ ಸೇವಿಸುವ ಜನರು ಹೃದಯ ಸಂಬಂಧಿ ಖಾಯಿಲೆಗಳಿಗೆ ತುತ್ತಾಗುವುದು ಕಡಿಮೆ.

ಇದನ್ನೂ ಓದಿ:

Health Tips: ಉತ್ತಮ ಆರೋಗ್ಯಕ್ಕಾಗಿ ಈ ಸಲಹೆಗಳು; ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸುಲಭ ಮಾರ್ಗಗಳು

Health Tips: ಮನೆಯ ಹಿತ್ತಲಲ್ಲಿ ಬೆಳೆಯುವ ಈ ಸಸ್ಯಗಳಲ್ಲಿ ಅಡಗಿದೆ ಅನೇಕ ಆರೋಗ್ಯಕರ ಗುಣ

(Know About tea health tips check in kannada)

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ