ವ್ಯಾಯಾಮದ ಸಮಯದಲ್ಲಿ ನಿಮ್ಮ ಮಗುವಿಗೆ ಎದೆ ನೋವು ಕಾಣಿಸಿಕೊಳ್ಳುತ್ತಿದೆಯೇ? ಕಾರಣಗಳೇನು ತಿಳಿಯಿರಿ

ಮಕ್ಕಳು ವ್ಯಾಯಾಮ ಮಾಡುವ ಸಮಯದಲ್ಲಿ ಎದೆನೋವು ಕಾಣಿಸಿಕೊಳ್ಳುತ್ತಿದೆಯಾ? ಪೋಷಕರು ತಿಳಿದಿರಬೇಕಾದ ಕೆಲವೊಂದಿಷ್ಟು ಮಾಹಿತಿಯನ್ನು ತಜ್ಞರು ತಿಳಿಸಿದ್ದಾರೆ.

ವ್ಯಾಯಾಮದ ಸಮಯದಲ್ಲಿ ನಿಮ್ಮ ಮಗುವಿಗೆ ಎದೆ ನೋವು ಕಾಣಿಸಿಕೊಳ್ಳುತ್ತಿದೆಯೇ? ಕಾರಣಗಳೇನು ತಿಳಿಯಿರಿ
Exercise
Follow us
TV9 Web
| Updated By: shruti hegde

Updated on: Nov 26, 2021 | 7:47 AM

ನಿಮ್ಮ ಮಗು ಎಂದಾದರೂ ಎದೆ ನೋವು ಎಂದು ಹೇಳುತ್ತಿರುವುದನ್ನು ನೀವು ಗಮನಿಸಿದ್ದೀರಾ? ಮಕ್ಕಳಿಗೆ ಎದೆ ನೋವು ಕಾಣಿಸಿಕೊಂಡಾಗ ಅವರು ಅಳಲು ಪ್ರಾರಂಭಿಸುತ್ತಾರೆ. ಅಂತಹ ಸಮಯದ ಪೋಷಕರಲ್ಲಿ ಭಯವನ್ನು, ಆತಂಕವನ್ನು ಉಂಟು ಮಾಡುತ್ತದೆ. ಅಂತಹ ಸಮಯವನ್ನು ನಿಭಾಯಿಸಲು ಪೋಷಕರು ತಿಳಿದಿರಬೇಕಾದ ಒಂದಿಷ್ಟು ಮಾಹಿತಿಯನ್ನು ಮುಂಬೈನ ಏಷ್ಯನ್ ಹಾರ್ಟ್ ಇನ್ಸ್ಟಿಟ್ಯೂಟ್ ವೈಸ್ ಚೇರ್ಮನ್, ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ವೈದ್ಯರಾದ ಡಾ. ರಮಾಕಾಂತ ಪಾಂಡಾ ಅವರು ನೀಡಿರುವ ಸಲಹೆಗಳನ್ನು ಇಂಡಿಯಾ ಟೈಮ್ಸ್​ನಲ್ಲಿ ಉಲ್ಲೇಖಿಸಲಾಗಿದೆ.

ಬುಹುತೇಕ ಸಮಯದಲ್ಲಿ ಎದೆ ನೋವು ಸೌಮ್ಯವಾಗಿರುತ್ತದೆ. ಇದಕ್ಕೆ ಕಾರಣ ಚರ್ಮ, ಮೂಳೆಗಳು, ಆಹಾರ ಪೈಪ್, ಸ್ನಾಯು ಸೆಳೆತ, ಸಂಕುಚಿತ ನರಗಳು ಅಥವಾ ಶ್ವಾಸಕೋಶಗಳಿಗೆ ಸಂಬಂಧಿಸಿದ ಸಮಸ್ಯೆಗಳಾಗಿರಬಹುದು. ಇದರಿಂದ ಉಂಟಾಗುವ ಎದೆ ನೋವು ಕೆಲ ಸೆಕೆಂಡುಗಳಿರಬಹುದು. ಇದಕ್ಕೆ ಚಿಂತೆ ಮಾಡುವ ಅಗತ್ಯವಿಲ್ಲ. ಅದಾಗ್ಯೂ ಮಗು ದೈಹಿಕ ವ್ಯಾಯಾಮ ಮಾಡುವ ಸಮಯದಲ್ಲಿ ನೋವು ಕಾಣಿಸಿಕೊಂಡರೆ ಆ ನೋವು ಹೆಚ್ಚು ಕಾಲ ಇರುತ್ತದೆ. ದೇಹ ವಿಶ್ರಾಂತಿ ಪಡೆದ ಬಳಿಕ ನಿಧಾನವಾಗಿ ಎದೆ ನೋವು ಮರೆಯಾಗುತ್ತದೆ ಎಂದು ತಜ್ಞರು ಹೇಳಿದ್ದಾರೆ.

ಮಗು ಜೋರಾಗಿ ಅಳುವ ಸಂದರ್ಭದಲ್ಲಿಯೂ ಎದೆ ನೋವು ಕಾಣಿಸಿಕೊಳ್ಳಬಹುದು. ಏಕೆಂದರೆ ಅಳುವಾಗ ಹೃದಯ ಬಡಿತ ವೇಗಗೊಳ್ಳುತ್ತದೆ. ಪಂಪ್ ಮಾಡಲು ಹೆಚ್ಚಿನ ರಕ್ತದ ಅಗತ್ಯವಿರುತ್ತದೆ. ಅಂತಹ ಸಮಯದಲ್ಲಿ ಹೃದಯ ಸಂಬಂಧಿತ ಯಾವುದಾದರೂ ಸಮಸ್ಯೆಗಳಿದ್ದರೆ ಎದೆ ನೋವು ಕಾಣಿಸಿಕೊಳ್ಳುತ್ತದೆ.

ಮಕ್ಕಳಲ್ಲಿ ಹೃದಯ ಸಂಬಂಧಿತ ಎದೆ ನೋವು ಸಾಮಾನ್ಯವಲ್ಲದಿದ್ದರೂ ಸಮಯಕ್ಕೆ ಸರಿಯಾಗಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳದಿದ್ದರೆ ಅಪಾಯವಾಗಬಹುದು. ಸಮಯಕ್ಕೆ ಸರಿಯಾಗಿ ಎಚ್ಚೆತ್ತುಕೊಂಡು ಪೋಷಕರು ಮಕ್ಕಳನ್ನು ವೈದ್ಯರಲ್ಲಿ ಪರೀಕ್ಷಿಸುವುದು ಉತ್ತಮ.

ರೋಗ ಮತ್ತು ಚಿಕಿತ್ಸೆಯ ಬಗ್ಗೆ ಮಾತನಾಡುತ್ತಾ, ನೀವು ಆರೋಗ್ಯ ಸಮಸ್ಯೆಯ ಬಗ್ಗೆ ತಿಳಿದಿದ್ದರೆ ಹೃದಯದ ಅಸಹಜತೆ ಮತ್ತು ಸಮಸ್ಯೆಯ ಬಗ್ಗೆ ಗಮನವಹಿಸಿ ಅದಕ್ಕೆ ಸರಿಯಾದ ಚಿಕಿತ್ಸೆ ಮತ್ತು ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳೊಂದಿಗೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದು ವೈದ್ಯರು ಹೇಳಿದ್ದಾರೆ.

ವ್ಯಾಯಾಮದ ಸಮಯದಲ್ಲಿ ಮತ್ತು ಹೆಚ್ಚು ಒತ್ತಡದ ಸಂದರ್ಭದಲ್ಲಿ ಅಪಧಮನಿಯು ಹಿಗ್ಗಿದಾಗ ಎದೆ ನೋವಿನ ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆಗಳಿರುತ್ತದೆ. ಮಗು ವ್ಯಾಯಾಮ ಮಾಡುವಾಗ ಅಥವಾ ಮಗು ಜೋರಾಗಿ ಅಳುವ ಸಂದರ್ಭದಲ್ಲಿ ಹೆಚ್ಚಿನ ರಕ್ತವು ಹಾದುಹೋದಾಗ ಪರಿಧಮನಿಯು ಸಂಕುಚಿತಗೊಳ್ಳುತ್ತದೆ. ಈ ಸಂದರ್ಭದಲ್ಲಿಯೂ ಎದೆ ನೋವು ಕಾಣಿಸಿಕೊಳ್ಳುವ ಸಾಧ್ಯತೆಗಳಿರುತ್ತದೆ ಎಂದು ಹೇಳಿದ್ದಾರೆ.

ಆದ್ದರಿಂದ ದೈಹಿಕ ವ್ಯಾಯಾಮದ ಸಮಯದಲ್ಲಿ ಅಥವಾ ಮಗು ಜೋರಾಗಿ ಅಳುವ ಸಂದರ್ಭದಲ್ಲಿ ಎದೆ ನೋವು ಕಾಣಿಸಿಕೊಂಡರೆ ಆ ನೋವು ಹೆಚ್ಚು ಕಾಲ ಇದ್ದರೆ ವೈದ್ಯರನ್ನು ಭೇಟಿ ಮಾಡುವುದು ಒಳ್ಳೆಯದು. ವೈದ್ಯರು ಎಸ್​ಟಿ ಸ್ಕ್ಯಾನ್​ಗೆ ಸಲಹೆ ನೀಡಬಹುದು, ಇಲ್ಲವೇ ಎಸಿಜಿ ಮಾಡಬಹುದು ಎಂದು ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

Heart Attack: ಹೃದಯಾಘಾತದ ಸಾಮಾನ್ಯ ಲಕ್ಷಣಗಳಾವುವು? ತಿಳಿಯಲೇಬೇಕಾದ ಒಂದಿಷ್ಟು ಮಾಹಿತಿ ಇಲ್ಲಿದೆ

Women Health: ಗರ್ಭಿಣಿಯರಿಗೆ ಎದೆ ನೋವು ಏಕೆ ಕಾಣಿಸಿಕೊಳ್ಳುತ್ತದೆ? ಇದು ಹೆಚ್ಚು ಅಪಾಯವೇ?

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ